Breaking News

ಬೆಂಗಳೂರು

ಎಐಸಿಸಿ ನೂತನ ಕಟ್ಟಡ ಉದ್ಘಾಟನೆ: ದೆಹಲಿಗೆ ತೆರಳಲಿರುವ ಸಿದ್ಧರಾಮಯ್ಯ, ಡಿ.ಕೆ.ಶಿವಕುಮಾರ್

ಬೆಂಗಳೂರು: ಎಐಸಿಸಿ ನೂತನ ಕಟ್ಟಡದ ಉದ್ಘಾಟನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜನವರಿ 15 ರಂದು ದೆಹಲಿಗೆ ತೆರಳಲಿದ್ದಾರೆ. ಅವರು ಹಿಂದಿನ ರಾತ್ರಿ ರಾಷ್ಟ್ರ ರಾಜಧಾನಿಯನ್ನು ತಲುಪುವ ಸಾಧ್ಯತೆಯಿದೆ. ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಅವರೊಂದಿಗೆ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ. ಜನವರಿ 13 ರಂದು, ಕಾಂಗ್ರೆಸ್ ಬೆಂಗಳೂರಿನಲ್ಲಿ ಸಭೆಗಳನ್ನು ಆಯೋಜಿಸಿದೆ, ಅಲ್ಲಿ ಸುರ್ಜೆವಾಲಾ …

Read More »

ಇಂದಿರಾ ಕ್ಯಾಂಟೀನ್‌ ಗಳನ್ನು ಮಹಿಳಾ ಸ್ವಸಹಾಯ ಸಂಘಗಳ ಮೂಲಕ ನಡೆಸುವ ಕುರಿತು ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಆರಂಭಿಸಲಾಗಿರುವ ‘ಅಕ್ಕ ಕಾಫಿ’ ಘಟಕಗಳ ಮಾದರಿಯಲ್ಲಿ ಇಂದಿರಾ ಕ್ಯಾಂಟೀನ್‍ಗಳನ್ನು ಮಹಿಳಾ ಸ್ವಸಹಾಯ ಸಂಘಗಳ ಮೂಲಕ ನಡೆಸುವ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯನ್ನು ಅವರು ನಡೆಸಿದರು. ಆರ್ಥಿಕ ಚಟುವಟಿಕೆಗಳಲ್ಲಿ ಗ್ರಾಮೀಣ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಗ್ರಾಮ ಪಂಚಾಯತ್ ಮಟ್ಟದಲ್ಲಿ ಗ್ರಾಮೀಣ ಮಹಿಳೆಯರಿಗೆ ಕೌಶಲ್ಯ …

Read More »

ಮಾಸಿಕ 15 ಸಾವಿರ ರೂ. ಗೌರವಧನ ನೀಡುವವರೆಗೆ ಹೋರಾಟ: ಆಶಾ ಕಾರ್ಯಕರ್ತೆಯರ ಸಂಘ

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವ ಭರವಸೆ ನೀಡಿಲ್ಲ. ಹೀಗಾಗಿ ಮಾಸಿಕ 15 ಸಾವಿರ ರೂ. ಗೌರವಧನದ ನೀಡುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ತಿಳಿಸಿದೆ. ಇಲ್ಲಿನ ಫ್ರೀಡಂ ಪಾರ್ಕಿನ ಹೋರಾಟದ ವೇದಿಕೆಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಸಂಘದ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ ಮಾತನಾಡಿ, ಆಶಾ ಕಾರ್ಯಕರ್ತೆಯರು ಹೋರಾಟ ನಡೆಸುತ್ತಿದ್ದ ಸ್ಥಳಕ್ಕೆ …

Read More »

ಯುವನಿಧಿ ಯೋಜನೆಯಡಿ ಯುವಕರಿಗೆ ಆದ್ಯತೆಯ ಮೇರೆಗೆ ಕೌಶಲ್ಯ ತರಬೇತಿ ನೀಡಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ಯುವ ನಿಧಿ ಯೋಜನೆಯಡಿಯಲ್ಲಿ ನೋಂದಣಿಗೊಂಜ ಯುವಕರಿಗೆ ಆದ್ಯತೆಯ ಮೇಲೆ ಕೌಶಲ್ಯ ತರಬೇತಿಯನ್ನು ನೀಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ಗುರುವಾರ ನಡೆದ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಯುವ ನಿಧಿ ಯೋಜನೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದ್ದು, ಇದರ ಅಡಿಯಲ್ಲಿ …

Read More »

ತುರ್ತು ವೈದ್ಯಕೀಯ ಸೇವೆಗೆ 587 ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಸ್ಪತ್ರೆಗಳಲ್ಲಿ ತುರ್ತು ವೈದ್ಯಕೀಯ ಸೇವೆಯನ್ನು ಉತ್ತಮ ರೀತಿಯಲ್ಲಿ ಒದಗಿಸಲು ಮಹತ್ವದ ಕ್ರಮ ವಹಿಸಲಾಗಿದೆ. ಕೂಡಲೇ 587 ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಕೂಡಲೇ ನೇಮಕಾತಿ ಮಾಡಿಕೊಳ್ಳುವಂತೆ ಆದೇಶಿಸಿದೆ. ಇಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು,ಆಯುಕ್ತರ ಏಕ ಕಡತ ಸಂಖ್ಯೆ: 1634358 ರಲ್ಲಿ ಸ್ವೀಕರಿಸಿರುವ ಪ್ರಸ್ತಾವನೆಯಲ್ಲಿ ಪ್ರಸ್ತುತ ತುರ್ತು ಚಿಕಿತ್ಸಾ ವೈಧ್ಯಾಧಿಕಾರಿಗಳ 706 ಹುದ್ದೆಗಳು ಮಂಜೂರಾಗಿದ್ದು, ಅದರಲ್ಲಿ …

Read More »

ಆಶಾ ಕಾರ್ಯಕರ್ತೆಯರಿಗೆ 9,500 ರೂ.ಗಳನ್ನು ಮುಂಗಡವಾಗಿ ನೀಡಲು ಸರ್ಕಾರ ಸಿದ್ಧ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ನೀಡುತ್ತಿರುವ 8 ಸಾವಿರ ರೂ. ಖಚಿತ ಗೌರವಧನ ಬದಲಾಗಿ 9,500 ರೂಪಾಯಿಗಳನ್ನು ಮುಂಗಡವಾಗಿ ನೀಡಲು ಸರಕಾರ ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬುಧವಾರ ಇಲ್ಲಿನ ಫ್ರೀಡಂ ಪಾರ್ಕ್‍ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಮುಷ್ಕರ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕು. ಹೆಚ್ಚಿನ ಪ್ರೋತ್ಸಾಹಧನ ಕೇಂದ್ರ ಸರಕಾರದ …

Read More »

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧಕರ ಕೊರತೆ: ಹುದ್ದೆಗಳನ್ನು ಭರ್ತಿ ಮಾಡುವಂತೆ ಸಿಎಂ ಸೂಚನೆ

ಬೆಂಗಳೂರು: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಭಾರೀ ಪ್ರಮಾಣದಲ್ಲಿ ಬೋಧಕ ಹುದ್ದೆಗಳು ಖಾಲಿ ಇರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆದ್ಯತೆಯ ಮೇಲೆ ಹುದ್ದೆ ಭರ್ತಿ ಮಾಡುವಂತೆ ಉನ್ನತ ಶಿಕ್ಷಣ ಇಲಾಖೆ ಮತ್ತು ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ. ಬುಧವಾರ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಕರೆದಿದ್ದ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರೀಶೀಲನೆ ಸಭೆಯಲ್ಲಿ ಮುಖ್ಯಮಂತ್ರಿಗಳು ಸರಕಾರಿ ವಿ.ವಿ. ಮತ್ತು ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬೋಧಕ ಹುದ್ದೆಗಳನ್ನು …

Read More »

ಕಾಲೇಜುಗಳಲ್ಲಿ ಖಾಲಿ ಇರುವ 1,033 ಹುದ್ದೆಗಳ ಭರ್ತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಾಲೇಜುಗಳಲ್ಲಿ ಒಟ್ಟು 1033 ಹುದ್ದೆಗಳು ಖಾಲಿಯಿವೆ. ಇದನ್ನು ಭರ್ತಿ ಮಾಡುವ ಕುರಿತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ವಿಶ್ವವಿದ್ಯಾಲಯಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ತುಂಬುವುದು ಹಾಗೂ ತಕ್ಷಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಅನುಷ್ಠಾನದ ಕುರಿತು ಚರ್ಚೆ ನಡೆಸಿದರು. ಉನ್ನತ ಶಿಕ್ಷಣಕ್ಕೆ ಪ್ರಸಕ್ತ ಆಯವ್ಯಯದಲ್ಲಿ 5862 ಕೋಟಿ ರೂ. ಒದಗಿಸಲಾಗಿದ್ದು, ಇದುವರೆಗೆ …

Read More »

ತಾಯಂದಿರ ಮರಣ ತಡೆಗೆ ಶೀಘ್ರದಲ್ಲೇ ಕೇಂದ್ರೀಕೃತ ಅಭಿಯಾನ ಪ್ರಾರಂಭ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಾಯಂದಿರ ಮರಣ ತಡೆಗೆ ತಮ್ಮ ಸರ್ಕಾರ ಶೀಘ್ರದಲ್ಲೇ ಕೇಂದ್ರೀಕೃತ ಅಭಿಯಾನವನ್ನು ಪ್ರಾರಂಭಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಆರೋಗ್ಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಷ್ಟ್ರಕ್ಕೆ ಹೋಲಿಸಿದರೆ ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣ ಕಡಿಮೆ ಇದೆ. 2018-20ರ ಅವಧಿಯಲ್ಲಿ ಮರಣ ಪ್ರಮಾಣ ಲಕ್ಷಕ್ಕೆ 69 ಇತ್ತು. ಈಗಲೂ ದೇಶದ ಅನುಪಾತ 97 ಇದೆ. 2022-24ರ ಅವಧಿಯಲ್ಲಿ ರಾಜ್ಯದಲ್ಲಿ ಮರಣ ಪ್ರಮಾಣ 55ಕ್ಕೆ ಇಳಿದಿದೆ ಎಂದು ಹೇಳಿದರು. …

Read More »

ಕೆಪಿಸಿಸಿ ಅಧ್ಯಕ್ಷ ಸ್ಥಾನ ಸೇರಿದಂತೆ ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ: ಡಿ.ಕೆ.ಸುರೇಶ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸೇರಿದಂತೆ ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ. ಜನ ಕೊಟ್ಟ ತೀರ್ಪನ್ನು ಗೌರವಯುತವಾಗಿ ಸ್ವೀಕರಿಸಿದ್ದೇನೆ. ಈಗಾಗಲೇ ಸಿಎಂ ಸ್ಥಾನದಲ್ಲಿ ಒಬ್ಬರು ಕೂತಿದ್ದಾರೆ. ಪಕ್ಷದ ಅದ್ಯಕ್ಷ ಸ್ಥಾನದಲ್ಲಿ ಮತ್ತೊಬ್ಬರು ಕೂತಿದ್ದಾರೆ. ಆ ಸ್ಥಾನಗಳು ಖಾಲಿಯಾಗುವ ಸಂದರ್ಭದಲ್ಲಿ ಪಕ್ಷ ಅದರ ಬಗ್ಗೆ ಚರ್ಚೆ ಮಾಡಲಿದೆ’ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು-ನೀವು ಇಲ್ಲಿ ಕೂತು ಚರ್ಚೆ ಮಾಡಿದರೆ ಅರ್ಥವಿಲ್ಲ. ಏನೇ …

Read More »