Breaking News

ಬೆಂಗಳೂರು

ರಾಜ್ಯ ಸರ್ಕಾರವು ಸಂತ ಸೇವಾಲಾಲ್ ಪ್ರಶಸ್ತಿ ಸ್ಥಾಪಿಸಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರವು ‘ಸಂತ ಸೇವಾಲಾಲ್ ಪ್ರಶಸ್ತಿ’ ಸ್ಥಾಪಿಸಿ ಆದೇಶ ಹೊರಡಿಸಿದೆ. ಈ ಪ್ರಶಸ್ತಿಯು ₹1 ಲಕ್ಷ ನಗದು ಒಳಗೊಂಡಿದೆ. ಬಂಜಾರಾ ಸಮುದಾಯದಲ್ಲಿ ವಿಶೇಷ ಸಾಧನೆ ಮಾಡಿದ ಹಿರಿಯ ಸಾಧಕರೊಬ್ಬರಿಗೆ ಈ ‍ಪ್ರಶಸ್ತಿ ನೀಡಿ, ಗೌರವಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಹಿಂದೆ ಪ್ರಶಸ್ತಿ ಸ್ಥಾಪಿಸುವಂತೆ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಎ.ಆರ್. ಗೋವಿಂದ ಸ್ವಾಮಿ ಅವರು ಸರ್ಕಾರಕ್ಕೆ ಮನವಿ ಮಾಡಿದ್ದರು.

Read More »

ಮಂಜೂರಾದ ಅನುದಾನವನ್ನು ಖರ್ಚು ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಮುಖ್ಯ ಕಾರ್ಯದರ್ಶಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ವಿವಿಧ ನಿಗಮಗಳಿಗೆ ಮಂಜೂರಾದ ಹಣವನ್ನು ಖರ್ಚು ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ ಎರಡೂವರೆ ಗಂಟೆ ಕಾಲ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲಿಸಿದ ಮುಖ್ಯಮಂತ್ರಿಗಳು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಸರಕಾರ ನಿಗಮಗಳಿಗೆ 446 ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದು, ಅದರಲ್ಲಿ ಕೇವಲ 260 ಕೋಟಿ …

Read More »

ವಿವಿಧ ಬೇಡಿಕೆ ಈಡೇರಿಸಲು ಆಗ್ರಹ: ಆಶಾ ಕಾರ್ಯಕರ್ತೆಯರಿಂದ ಅನಿರ್ದಿಷ್ಟಾವಧಿ ಮುಷ್ಕರ

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾವಿರಾರು ಆಶಾ (ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತರು) ಕಾರ್ಯಕರ್ತೆಯರು ಮಂಗಳವಾರದಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆಗೆ ಮುಖ್ಯವಾಗಿರುವ ಈ ಕಾರ್ಯಕರ್ತರು, ಹೆಚ್ಚುತ್ತಿರುವ ಜೀವನ ವೆಚ್ಚವನ್ನು ಪೂರೈಸಲು ಹೆಚ್ಚುವರಿ 2,000 ರೂ.ಗಳ ಜೊತೆಗೆ ರೂ 15,000 ನಿಗದಿತ ಮಾಸಿಕ ಗೌರವಧನವನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ. ಬೇಡಿಕೆಗಳನ್ನು ಸರಕಾರ ಈಡೇರಿಸುವವರೆಗೆ ಪ್ರತಿಭಟನೆ ಹಿಂಪಡೆಯುವ …

Read More »

ಎಂ ಎಸ್ ಐ ಎಲ್ ಆಕರ್ಷಕ ಟೂರ್ ಪ್ಯಾಕೇಜ್ ಗೆ ಸಚಿವ ಎಂ.ಬಿ.ಪಾಟೀಲ್ ಚಾಲನೆ

ಬೆಂಗಳೂರು: ಮಧ್ಯಮ ಮತ್ತು ಕೆಳಮಧ್ಯಮ ವರ್ಗದವರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ಸರಕಾರಿ ನೌಕರರನ್ನು ಗಮನದಲ್ಲಿಟ್ಟುಕೊಂಡು ಸರಕಾರಿ ಸ್ವಾಮ್ಯದ ಎಂಎಸ್‌ ಐಎಲ್‌ ಸಂಸ್ಥೆ ರೂಪಿಸಿರುವ ನಾನಾ ತರಹದ ಆಕರ್ಷಕ ಟೂರ್‌ ಪ್ಯಾಕೇಜುಗಳಿಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಇಂದು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಅವರು ಸಂಸ್ಥೆಯ ಡೈರಿ, ಕ್ಯಾಲೆಂಡರ್‌ ಮತ್ತು ಬಾಂಡ್ ಜೆರಾಕ್ಸ್ ಪೇಪರ್ ಕೂಡ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ …

Read More »

ಭೂ ಸುರಕ್ಷಾ ಯೋಜನೆ 209 ತಾಲೂಕುಗಳಿಗೆ ವಿಸ್ತರಣೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ರಾಜ್ಯದ 31 ತಾಲೂಕುಗಳಲ್ಲಿ ಭೂ ದಾಖಲೆಗಳನ್ನು ಗಣಕೀಕರಣಗೊಳಿಸುವ ‘ಭೂ ಸುರಕ್ಷಾ’ ಯಶಸ್ಸು ಕಂಡಿರುವ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುತ್ತದೆ. 2ನೇ ಹಂತದಲ್ಲಿ 209 ತಾಲೂಕುಗಳಲ್ಲಿ ಗಣಕೀಕರಣ ನಡೆಸುವ ಉದ್ದೇಶ ಹೊಂದಿದ್ದು, ಕಂದಾಯ ಸಚಿವ ಕೃಷ್ಣ ಬೈರೇಗೌಡ ಗುಡಿಬಂಡೆಯಲ್ಲಿ ಇಂದು ಚಾಲನೆ ನೀಡಲಿದ್ದಾರೆ. ಆ ಮೂಲಕ 2ನೇ ಹಂತದ ಭೂ ದಾಖಲೆಗಳ ಗಣಕೀಕರಣಕ್ಕೆ ಚಾಲನೆ ದೊರೆಯಲಿದೆ. ಈ ತಾಲೂಕುಗಳಿಗೆ ಉಳಿದ 209 ಕಚೇರಿಗಳಲ್ಲಿ ಗಣಕೀಕರಣಕ್ಕೆ ತಲಾ 6 ಡೆಸ್ಕ್ …

Read More »

5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧಾರ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು : ರಾಜ್ಯ ಸರ್ಕಾರವು ಎಸ್ಕಾಂ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಎಸ್ಕಾಂ ಸಿಬ್ಬಂದಿಗಳಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಕಲ್ಪಿಸುವ ಸೌಲಭ್ಯ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಎಂಜಿನಿಯರ್ ಗಳ ಸಂಘದ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಕಂಪನಿ (ಸೆಸ್ಕ್) ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ …

Read More »

ಎಸ್ ಸಿ, ಎಸ್ ಟಿ ಶಾಸಕರಿಗೆ ಸಚಿವ ಜಿ.ಪರಮೇಶ್ವರ್ ರಿಂದ ಔತಣಕೂಟ

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಜನವರಿ 2 ರಂದು ವಿದೇಶದಲ್ಲಿದ್ದಾಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಆಯೋಜಿಸಿದ್ದ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಬುಧವಾರ ಹೋಟೆಲ್‌ನಲ್ಲಿ ಎಸ್‌ಸಿ/ಎಸ್‌ಟಿ ಶಾಸಕರಿಗೆ ಔತಣಕೂಟ ಏರ್ಪಡಿಸಲಿದ್ದಾರೆ. ಡಿ.ಕೆ ಶಿವಕುಮಾರ್ ಅವರನ್ನು ರಾಜಕೀಯವಾಗಿ ಎದುರಿಸಲು ಜಾರಕಿಹೊಳಿ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಹಕಾರ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ …

Read More »

ಅರಣ್ಯ ಅಪರಾಧ ತಡೆಗೆ ಗರುಡಾಕ್ಷಿ ಆನ್ಲೈನ್ ಎಫ್‌ಐಆರ್ ವ್ಯವಸ್ಥೆಗೆ ಸಚಿವ ಈಶ್ವರ್ ಖಂಡ್ರೆ ಚಾಲನೆ

ಬೆಂಗಳೂರು : ಅರಣ್ಯ ಅಪರಾಧ ತಡೆಗೆ ರಾಜ್ಯ ಸರ್ಕಾರ ಇದೀಗ ಮಹತ್ವದ ಅಕ್ರಮ ಕೈಗೊಂಡಿದ್ದು, ಅರಣ್ಯ ಅಪರಾಧ ತಡೆಗೆ ಆನ್ಲೈನ್ ಎಫ್‌ಐಆರ್ ವ್ಯವಸ್ಥೆಗೆ ಚಾಲನೆ ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ಅವರು ಇಂದು ಚಾಲನೆ ನೀಡಿದರು. ವಿಧಾನಸೌಧದಲ್ಲಿಂದು ಅರಣ್ಯ ಇಲಾಖೆ Wild Life Trust of India (WTI) ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ಗರುಡಾಕ್ಷಿ ಆನ್‌ಲೈನ್‌ / ಡಿಜಿಟಲ್ FIR ವ್ಯವಸ್ಥೆಗೆ ಚಾಲನೆ ನೀಡಿ ಮಾತನಾಡಿದ ಅವರು, ಇಂದಿನ ಆಧುನಿಕ …

Read More »

2025-26ನೇ ಸಾಲಿನ ಬಜೆಟ್‌ ಕುರಿತು ಇಂದು ಪೂರ್ವಭಾವಿ ಸಭೆ ನಡೆಸಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾರ್ಚ್‌ ಎರಡು ಅಥವಾ ಮೂರನೇ ವಾರದಲ್ಲಿ 2025-26ನೇ ಸಾಲಿನ ಬಜೆಟ್‌ ಮಂಡನೆ ಮಾಡಲು ಉದ್ದೇಶಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನಿಂದ ಪೂರ್ವಭಾವಿ ಸಭೆಗಳನ್ನು ನಡೆಸಲಿದ್ದಾರೆ. ಹೊಸ ವರ್ಷದ ಮೊದಲ ದಿನ ತಮ್ಮನ್ನು ಭೇಟಿಯಾದ ಉನ್ನತಾಧಿಕಾರಿಗಳ ಜತೆಗೆ ಸಮಾಲೋಚನೆ ನಡೆಸಿದ್ದ ಅವರು ಮಾರ್ಚ್‌ನಲ್ಲಿ ಬಜೆಟ್‌ ಮಂಡನೆ ಸುಳಿವು ನೀಡಿದ್ದರು. ಅಲ್ಲದೆ ಜ. 2ರ ಗುರುವಾರವೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಶಾಲಾ ಶಿಕ್ಷಣ …

Read More »

ಕಂದಾಯ ಜಮೀನಿನಲ್ಲಿ ಲೇಔಟ್ ನಿರ್ಮಾಣಕ್ಕೆ ಅವಕಾಶ ನೀಡಬಾರದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇನ್ನು ಮುಂದೆ ಕಂದಾಯ ಜಮೀನಿನಲ್ಲಿ ಲೇಔಟ್‌ ನಿರ್ಮಾಣಕ್ಕೆ ಅವಕಾಶ ನೀಡಬಾರದು. ಇದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಇರುವ ಅಂತಹ ಲೇಔಟ್‌ಗಳ ಕುರಿತು ಸೂಕ್ತ ಕ್ರಮ‌ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ನಿವೇಶನಗಳಲ್ಲಿರುವ ರಸ್ತೆಗಳನ್ನು ಸಾರ್ವಜನಿಕ ರಸ್ತೆಗಳಾಗಿ ಪರಿಗಣಿಸುವ ಕುರಿತು ಕ್ರಮ ಪರಿಶೀಲಿಸಬೇಕು. ನಗರ …

Read More »