Breaking News

ಬೆಂಗಳೂರು

ಸಾರಿಗೆ ನೌಕರರ ಆರೋಗ್ಯ ಸರ್ಕಾರದ ಜವಾಬ್ದಾರಿಯಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಗದುರಹಿತ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಕಲ್ಪಿಸಬೇಕೆಂಬ ಸಾರಿಗೆ ನಿಗಮದ ನೌಕರರ ಬಹು ವರ್ಷಗಳ ಬೇಡಿಕೆ ಈಡೇರಿದ್ದು, ಸಿಬ್ಬಂದಿಗೂ ಸಂತೃಪ್ತಿ ತಂದಿದೆ. ಸಾರಿಗೆ ನಿಗಮಗಳ ಆದಾಯ ಹೆಚ್ಚಿಸಲು ದುಡಿಯುತ್ತಿರುವ ನೌಕರರ ಆರೋಗ್ಯ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಕೆಎಸ್‌ಆರ್‌ಟಿಸಿ ನೌಕರರ ಆರೋಗ್ಯ ಯೋಜನೆಗೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಅವರು, ನಗದುರಹಿತ ವೈದ್ಯಕೀಯ ಚಿಕಿತ್ಸೆ ಒದಗಿಸಲು 275 ಆಸ್ಪತ್ರೆಗಳ ಜತೆಗೆ ಒಪ್ಪಂದ ಮಾಡಿಕೊಂಡಿದ್ದು, …

Read More »

ಪೊಲೀಸ್ ಇಲಾಖೆಗೆ ನಕಲಿ ದಾಖಲೆ ನೀಡಿದ ಪ್ರಕರಣ: ಪಿಎಸ್ಐ ಅಮಾನತುಗೊಳಿಸಿ ಆದೇಶ

ಬೆಂಗಳೂರು: ಪೊಲೀಸ್ ಇಲಾಖೆಗೆ ನಕಲಿ ದಾಖಲೆಗಳು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಡರಹಳ್ಳಿ ಠಾಣೆ ಸಬ್​ಇನ್ಸ್​​ಪೆಕ್ಟರ್​ ಕಾಶಿಲಿಂಗೇಗೌಡರನ್ನು ಅಮಾನತು ಮಾಡಿ, ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್​ ಆದೇಶ ಹೊರಡಿಸಿದ್ದಾರೆ. ನಕಲಿ ದಾಖಲೆ ನೀಡಿದ ಸಂಬಂಧ ವಿಧಾನಸೌಧ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ಸಬ್​ಇನ್ಸ್​​ಪೆಕ್ಟರ್​ ಕಾಶಿಲಿಂಗೇಗೌಡ ಜಾಮೀನು‌ ಪಡೆದುಕೊಂಡಿದ್ದರು. ನಂತರ ಪೊಲೀಸ್ ಠಾಣೆಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ ಇದೀಗ ಪಿಎಸ್​ಐ ಅಮಾನತು ಮಾಡಲಾಗಿದೆ. ನಕಲಿ ಜನ್ಮ ದಿನಾಂಕ ಹೊಂದಿರುವ ದಾಖಲೆಯನ್ನು …

Read More »

2025-26 ಬಜೆಟ್ ಮಂಡನೆಗೆ ದಿನಗಣನೆ ಆರಂಭ: ಬಜೆಟ್ ಗಾತ್ರ 4 ಲಕ್ಷ ಕೋಟಿ ರೂಪಾಯಿಗೆ ನಿರೀಕ್ಷೆ

ಬೆಂಗಳೂರು: 2025-26 ನೇ ಸಾಲಿನ ಬಜೆಟ್‌ ಅನ್ನು ಹಣಕಾಸು ಇಲಾಖೆಯ ಜವಾಬ್ದಾರಿಯನ್ನೂ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್‌ 14 ರಂದು ಮಂಡಿಸಲಿದ್ದು, ಇದು ಸಿದ್ದರಾಮಯ್ಯ ಅವರ 16ನೇ ದಾಖಲೆಯ ಬಜೆಟ್‌ ಮಂಡನೆಯಾಗಿರಲಿದೆ. ರಾಜ್ಯದಲ್ಲಿ ಜುಲೈ 2023ರಲ್ಲಿ 14ನೇ ಬಜೆಟ್‌ ಮಂಡಿಸಿದಾಗಲೇ ಅತಿ ಹೆಚ್ಚು ಬಜೆಟ್‌ ಮಂಡಿಸಿದ ದಾಖಲೆ ಸಿದ್ದರಾಮಯ್ಯ ಅವರ ಹೆಸರಿನಲ್ಲಿದೆ. 2024-25ನೇ ಸಾಲಿನ ಬಜೆಟ್‌ ಅನ್ನು ಫೆಬ್ರವರಿ ತಿಂಗಳಲ್ಲಿ ಮಂಡಿಸಿದ್ದರು. ಇದು ಅವರ 15ನೇ ಬಜೆಟ್‌ ಆಗಿತ್ತು. …

Read More »

ನನಗೆ ಜೀವ ಬೆದರಿಕೆ ಇದ್ದು ರಕ್ಷಣೆಗಾಗಿ ಸಿಆರ್‌ಪಿಎಫ್ ಭದ್ರತೆ ಒದಗಿಸಿ: ಸಿ.ಟಿ.ರವಿ

ಬೆಂಗಳೂರು: ತಮ್ಮ ಮೇಲೆ ಪೊಲೀಸ್‌ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿರುವ ಮೇಲ್ಮನೆ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಈಗ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೂ ದೂರು ನೀಡಿದ್ದಾರೆ. ಈ ಕುರಿತು ಆಯೋಗಕ್ಕೆ 14 ಪುಟಗಳ ಪತ್ರ ಬರೆದಿರುವ ಅವರು, 3 ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದು, ಈ ಪೈಕಿ ನಾಲ್ಕು ಬೇಡಿಕೆಗಳನ್ನು ತತ್‌ಕ್ಷಣ ಈಡೇರಿಸಬೇಕೆಂದು ಆಗ್ರಹಿಸಿದ್ದಾರೆ. ಜತೆಗೆ ನಕಲಿ ಎನ್‌ಕೌಂಟರ್‌ ಮಾಡಿ ನನ್ನ ತವರೂರಿಗೆ ಶವ ಕಳುಹಿಸಲು ಯೋಜಿಸಿದ್ದರು, ಬೆಳಗಾವಿಯ …

Read More »

ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಸಂಸದ ಚಾಮರಾಜ್ ಒಡೆಯರ್: ಮೈಸೂರು ಹಾಗೂ ಕೊಡಗು ಅಭಿವೃದ್ದಿಯ ಬಗ್ಗೆ ಚರ್ಚೆ

ಬೆಂಗಳೂರು : ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನವರನ್ನು ಸಂಸದ ಯದುವೀರ್ ಕೃಷ್ಣ ಚಾಮರಾಜ ಒಡೆಯರ್ ಅವರು ಭೇಟಿಯಾಗಿದ್ದು, ಹೂಗುಚ್ಛ ನೀಡಿ ಗೌರವಿಸಲಾಯಿತು. ಈ ವೇಳೆ ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಅವರು ಉಪಸ್ಥಿತರಿದ್ದರು. ಬಳಿಕ ಮೈಸೂರು ಹಾಗೂ ಕೊಡಗು ಅಭಿವೃದ್ದಿಯ ಬಗ್ಗೆ ಕೆಲ ಕಾಲ ಮಾತನಾಡಿದ್ದಾರೆ. ಕಳೆದ ಎರಡ್ಮೂರು …

Read More »

ಸಾರಿಗೆ ಸಿಬ್ಬಂದಿಗೆ ನಗದು ರಹಿತ ಆರೋಗ್ಯ ಸವಲತ್ತು ಯೋಜನೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಮ್ಮ ಸಾರಿಗೆ ನೌಕರರು ಮತ್ತು ಕುಟುಂಬದವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯದಿಂದ ಕಾಣಬಾರದು. ಚಿಕಿತ್ಸೆ ನೀಡುವಲ್ಲಿ ಉದಾಸೀನ ಮಾಡಕೂಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಸ್ಪಷ್ಟ ಸೂಚನೆ ನೀಡಿದರು. ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಮತ್ತು ಸಿಬ್ಬಂದಿಗೆ ನಗದು ರಹಿತ ಆರೋಗ್ಯ ಸವಲತ್ತು ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು. ಸಾರಿಗೆ ನೌಕರರು ತಮ್ಮ ದುಡಿಮೆಯ ಮೂಲಕ ಸಂಸ್ಥೆಯ ಮತ್ತು ನಿಗಮದ ಆದಾಯ ಹೆಚ್ಚಿಸುತ್ತಿದ್ದಾರೆ. ಇವರ ಆರೋಗ್ಯ …

Read More »

ರಾಜ್ಯಕ್ಕೆ ಕಾಲಿಟ್ಟ ಹೆಚ್ಎಂಪಿವಿ ವೈರಸ್: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತುರ್ತು ಸಭೆ

ಬೆಂಗಳೂರು : ಕರ್ನಾಟಕಕ್ಕೂ HMPV ವೈರಸ್ ಕಾಲಿಟ್ಟಿದೆ ಎನ್ನಲಾಗಿದ್ದು, ಬೆಂಗಳೂರಲ್ಲಿ 8 ತಿಂಗಳ ಮಗುವಿನಲ್ಲಿ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಚಿವ ದಿನೇಶ್ ಗುಂಡೂರಾವ್ ತುರ್ತು ಸಭೆ ಕರೆದಿದ್ದಾರೆ. ಇಂದು ಸಚಿವರು ಸಭೆ ಕರೆದಿದ್ದು, ವೈರಸ್ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಲಿದ್ದಾರೆ. ವೈರಸ್ ಬಗ್ಗೆ ಜಾಗೃತಿ ವಹಿಸಲು ಮಾರ್ಗಸೂಚಿ ಹೊರಡಿಸುವ ಸಾಧ್ಯತೆಯಿದೆ. ಮಗುವಿಗೆ ಜ್ವರ ಬಂದ ಹಿನ್ನೆಲೆ …

Read More »

ಮೊಗವೀರ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಶಿಫಾರಸು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರವರ್ಗ-1ರಲ್ಲಿರುವ ಮೊಗವೀರ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಇಲ್ಲಿನ ಅರಮನೆ ಮೈದಾನದಲ್ಲಿ ಭಾನುವಾರ‌ ಬೆಂಗಳೂರಿನ ಮೊಗವೀರ ಸಂಘ ಆಯೋಜಿಸಿದ್ದ ‘ಬೃಹತ್ ಮೊಗವೀರ ಸಮಾವೇಶ- ಸುವರ್ಣ ಪಥ’ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಮೊಗವೀರ ಅಥವಾ ಕೋಲಿ ಸಮಾಜ, ಗೊಲ್ಲರನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಬೇಕು ಎಂದು ಕುಲಾಶಾಸ್ತ್ರ ಅಧ್ಯಯನ ಮಾಡಿಸಿದ್ದೆ. ಕೇಂದ್ರಕ್ಕೆ ಶಿಫಾರಸು ಮಾಡಿದ್ದೆ. ಆದರೆ ಕೇಂದ್ರ …

Read More »

ಇದೇ 7 ರಿಂದ ಆಶಾ ಕಾರ್ಯಕರ್ತೆಯರ ಮುಷ್ಕರ: ರಜೆ ನೀಡದಿರಲು ಸೂಚನೆ

ಬೆಂಗಳೂರು: ‘ಆಶಾ’ ಕಾರ್ಯಕರ್ತೆಯರು ಇದೇ 7ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿರುವುದರಿಂದ ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯು ತನ್ನ ಅಧಿಕಾರಿಗಳಿಗೆ ಸೂಚಿಸಿದೆ. ಈ ಬಗ್ಗೆ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಕಾನೂನುಬಾಹಿರವಾಗಿ ಆಶಾ ಕಾರ್ಯಕರ್ತೆಯರು ಹೋರಾಟದಲ್ಲಿ ಭಾಗವಹಿಸದಂತೆ ಜಿಲ್ಲಾಡಳಿತ ಮನವೊಲಿಸಬೇಕು. 7 ರಿಂದ ಕರ್ತವ್ಯಕ್ಕೆ ಗೈರಾಗುವ ಆಶಾ ಕಾರ್ಯಕರ್ತೆಯರ ಮಾಹಿತಿಯನ್ನು ಪಡೆಯಬೇಕು. ಸೇವೆ ಒದಗಿಸಲು ತೊಡಕಾದ ಸ್ಥಳಗಳಲ್ಲಿ ಈಗಾಗಲೇ ಇಲಾಖೆಯಿಂದ ನೀಡಿರುವ ಮಾನದಂಡದಂತೆ …

Read More »

ಮೂವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ

ಬೆಂಗಳೂರು: ಮೂವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಹಾಗೂ ಓರ್ವ ಐಎಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. ಹೆಚ್ಚುವರಿ ಹೊಣೆಗಾರಿಕೆ: ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಏಕ್‍ರೂಪ್ ಕೌರ್ ಅವರಿಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಕೆಪಿಎಸ್‌ಸಿ ಕಾರ್ಯದರ್ಶಿ ರಮಣ್‍ದೀಪ್ ಚೌಧರಿ …

Read More »