Breaking News

ಬೆಂಗಳೂರು

ರಾಜ್ಯ ಸರ್ಕಾರದಿಂದ 65 ಮಂದಿ ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ

ಬೆಂಗಳೂರು : ರಾಜ್ಯ ಸರಕಾರವು ಹೊಸ ವರ್ಷದ ಹಿನ್ನೆಲೆಯಲ್ಲಿ 65 ಮಂದಿ ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಮಂಗಳವಾರ ಆದೇಶ ಹೊರಡಿಸಿದೆ. ಬಡ್ತಿ ಪಡೆದ ಅಧಿಕಾರಿಗಳು : ಬಿಎಂಆರ್‍ಸಿಎಲ್ ವ್ಯವಸ್ಥಾಪಕ ನಿರ್ದೇಶಕ-ಮಹೇಶ್ವರ ರಾವ್ ಎಂ., ಭಾರತ ಸರಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ-ಅನಿಲ್ ಕುಮಾರ್ ಟಿ.ಕೆ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ-ಪಂಕಜ್ ಕುಮಾರ್ ಪಾಂಡೆ, ಕೇರಳ ರಾಜ್ಯದ ವಾಣಿಜ್ಯ ಇಲಾಖೆಯ ಎಸ್‍ಇಝೆಡ್ ಅಭಿವೃದ್ಧಿ ಆಯುಕ್ತೆ-ಹೇಮಲತಾ ಪಿ., ಏಷಿಯನ್ ಅಭಿವೃದ್ಧಿ ಬ್ಯಾಂಕ್‍ನ ಹಿರಿಯ …

Read More »

ರಾಜ್ಯ ಸರ್ಕಾರಿ ನೌಕರರಿಗೆ ಜ.4 ರಂದು ಸಾಂದರ್ಭಿಕ ರಜೆ ಮಂಜೂರು

ಬೆಂಗಳೂರು: ಹೊಸ ವರ್ಷದ ಆರಂಭದಲ್ಲೇ ರಾಜ್ಯ ಸರ್ಕಾರ ಮಹತ್ವದ ಆದೇಶವನ್ನ ಹೊರಡಿಸಿದೆ. ವಿಶ್ವ ಬ್ರೈಲ್ ದಿನಾಚರಣೆಯಂದು ದೃಷ್ಟಿದೋಷವುಳ್ಳ ವಿಕಲಚೇತನರ ಸರ್ಕಾರಿ ನೌಕರರಿಗೆ ದಿನಾಂಕ 04-01-2025ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶಿಸಿದೆ. ಹೌದು, ಸಾಂದರ್ಭಿಕ ರಜೆ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ನಿರ್ದೇಶಕರು, ವಿಕಲಚೇತನರ ಮತ್ತು ಹಿರಿಯ ನಾಗರಿಕರ …

Read More »

ಹೊಸ ವರ್ಷಾಚರಣೆ: ವಿದೇಶ ಪ್ರವಾಸಕ್ಕೆ ತೆರಳಿದ ಡಿಸಿಎಂ ಡಿಕೆಶಿ

ಬೆಂಗಳೂರು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಹೊಸ ವರ್ಷವನ್ನು ಬರ ಮಾಡಿಕೊಳ್ಳಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಹೊಸ ವರ್ಷದ ಸಂಭ್ರಮಾಚರಣೆಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತ ವಿದೇಶ ಪ್ರವಾಸಕ್ಕೆ ತೆರಳಿದ್ದು, ವಿದೇಶದಲ್ಲಿ ಈ ಬಾರಿ ನ್ಯೂ ಇಯರ್ ಸೆಲೆಬ್ರೇಟ್ ಮಾಡಲಿದ್ದಾರೆ. ಇಂದು ಮುಂಜಾನೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ನಾಲ್ಕು ದಿನಗಳಕಾಲ ಡಿಸಿಎಂ ವಿದೇಶದಲ್ಲಿರಲಿದ್ದಾರೆ. ಕೆನಡಾ, ಟರ್ಕಿ …

Read More »

ಕರ್ನಾಟಕ ಪರೀಕ್ಷಾ ಪ್ರಾಧಿಕಾರ: 6,052 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2024ನೇ ಸಾಲಿನಲ್ಲಿ ಎರಡು ಪಿಎಸ್‌ಐ, ಕೆ-ಸೆಟ್‌ ಸೇರಿದಂತೆ ಒಟ್ಟು 17 ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ, 6,052 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿದೆ. ಪ್ರಾಧಿಕಾರವು ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪರೀಕ್ಷೆ, ಸೀಟು ಹಂಚಿಕೆ, ಪ್ರವೇಶ ಪ್ರಕ್ರಿಯೆ ಇತ್ಯಾದಿಗಳನ್ನು ನಿರ್ವಹಿಸುತ್ತಿದೆ. ಇದರ ಜೊತೆಗೆ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿ ಪರೀಕ್ಷೆಗಳನ್ನೂ ನಿಭಾಯಿಸುತ್ತಿದೆ. ಕಳೆದ ಒಂದು ವರ್ಷದಲ್ಲಿ 20 ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು …

Read More »

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಮನೆ ಮುಂದೆ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಬೀದರ್‌ ಜಿಲ್ಲೆಯ ಭಾಲ್ಕಿಯ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಪಕ್ಷದ ನಾಯಕರು, ಕಾರ್ಯಕರ್ತರು ಇಂದು (ಮಂಗಳವಾರ) ಪ್ರತಿಭಟನೆ ನಡೆಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಮನೆ ಮುಂದೆ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಪೋಸ್ಟರ್ ಅಂಟಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಾಯಕ ಸಿ.ಟಿ.ರವಿ ಸೇರಿ ಇತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ …

Read More »

ಮುಡಾ ಹಗರಣದ ಬಿಸಿ ತಣ್ಣಗಾಗುತ್ತಿದ್ದಂತೆ ಸಂಪುಟ ಪುನರ್ ರಚನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು

ಬೆಂಗಳೂರು: ಮುಡಾ ಹಗರಣದ ಬಿಸಿ ತಣ್ಣಗಾಗುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತೆ ಸಂಪುಟ ಪುನರ್ ರಚನೆಗೆ ಸಜ್ಜಾಗುತ್ತಿದ್ದಾರೆ ಎನ್ನುವ ಸುದ್ದಿಗಳು ಹರಿದಾಡಲಾರಂಭಿಸಿದೆ. ಮೇಜರ್ ಸರ್ಜರಿ ಮಾಡದಿದ್ದರೂ, ಕೆಲವೊಂದು ಹಾಲೀ ಸಚಿವರು ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಮುಡಾ ಹಗರಣ ಸಾಕಷ್ಟು ರಾಜ್ಯದಲ್ಲಿ ಸದ್ದು ಮಾಡುತ್ತಿದ್ದ ವೇಳೆ, ಹಲವು ರಾಜ್ಯ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತಿ ಕೆಪಿಸಿಸಿ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರನ್ನು ಭೇಟಿಯಾಗಿದ್ದರು. ಆದರೆ, ಸದ್ಯ ಮುಖ್ಯಮಂತ್ರಿಗಳ ಮುಡಾ ಗೊಂದಲ …

Read More »

ಬಸ್ ಗಳಲ್ಲಿ ವಿಕಲಚೇತನರಿಗಾಗಿ ಲೌಡ್ ಸ್ಪೀಕರ್ ವ್ಯವಸ್ಥೆ ಕಲ್ಪಿಸಲು ಸಾರಿಗೆ ಸಂಸ್ಥೆಗಳಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ವಿಕಲಚೇತನರ ಅನುಕೂಲಕ್ಕಾಗಿ ಬಸ್‌ಗಳಲ್ಲಿ ಆಡಿಯೋ ಅನೌನ್ಸ್‌ಮೆಂಟ್ ಸಿಸ್ಟಂ (ಎಎಎಸ್) ಕಾರ್ಯನಿರ್ವಹಿಸುವಂತೆ ರಾಜ್ಯ ಸಾರಿಗೆ ಸಂಸ್ಥೆಗಳಿಗೆ ನಿರ್ದೇಶನ ನೀಡಿರುವ ಹೈಕೋರ್ಟ್, ವಿವಿಧ ಬಸ್ ನಿಲ್ದಾಣಗಳಲ್ಲಿ ವಿಶೇಷ ಚೇತನರು ಬಸ್ ಹತ್ತುವಾಗ ಮತ್ತು ಇಳಿಯುವಾಗ ಅವರಿಗೆ ಮಾರ್ಗದರ್ಶನ ನೀಡಲು ಲೌಡ್ ಸ್ಪೀಕರ್ ವ್ಯವಸ್ಥೆ ಅಳವಡಿಸಬೇಕು ಎಂದು ಹೇಳಿದೆ. ಈ ನಿಟ್ಟಿನಲ್ಲಿ ಸುಧಾರಿತ ತಾಂತ್ರಿಕ ಉಪಕರಣಗಳು ಮತ್ತು ಸೌಲಭ್ಯಗಳನ್ನು ಪರಿಚಯಿಸಲು ಮತ್ತು ಯೋಜನೆಯು ನಿರಂತರವಾಗಿ ಕಾರ್ಯನಿರ್ವಹಿಸಲು ಸ್ಥಳೀಯ ಅಧಿಕಾರಿಗಳು ಸಾಕಷ್ಟು ಹಣವನ್ನು ಬಜೆಟ್ …

Read More »

ಗ್ರಾಮೀಣ ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ಆರಂಭ

ಬೆಂಗಳೂರು: ಗ್ರಾಮೀಣ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಶ್ರಮಿಸುತ್ತಿದ್ದು, ಅದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನವನ್ನು ಆರಂಭಿಸಿದೆ. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ʼಮಕ್ಕಳ ವಿಶೇಷ ಗ್ರಾಮಸಭೆʼ, ಮಕ್ಕಳ ಜನನ ನೋಂದಣಿ, ಪೌಷ್ಟಿಕತೆಯ ಕುರಿತು ಜಾಗೃತಿ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಅಭಿಯಾನಗಳು, ಮಕ್ಕಳ ಕ್ರೀಡಾಕೂಟಗಳು, ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ. ಜೊತೆಗೆ ಮಕ್ಕಳ ಬೇಡಿಕೆ / ಪ್ರಶ್ನೆ / …

Read More »

ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ನಿಗದಿ: ಮಾ.14 ರಂದು ಸಿಎಂ ಸಿದ್ದರಾಮಯ್ಯರಿಂದ ದಾಖಲೆಯ ಬಜೆಟ್ ಮಂಡನೆ

ಬೆಂಗಳೂರು : ರಾಜ್ಯ ಬಜೆಟ್ ಮಂಡಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16 ನೇ ಬಜೆಟ್ ಮಂಡಿಸಲಿದ್ದಾರೆ. ಹೌದು, ರಾಜ್ಯ ಸರ್ಕಾರದ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮಾರ್ಚ್ 10ರಿಂದ ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 14 ರಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ. ಜಂಟಿ ಅಧಿವೇಶನದ ಮುಂದುವರೆದ ಭಾಗವಾಗಿ ಬಜೆಟ್ ಅಧಿವೇಶನ …

Read More »

ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವ ಅಗತ್ಯ ಇಲ್ಲ: ಸಚಿವ ಪರಮೇಶ್ವರ್

ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಬಿಜೆಪಿಯವರು ಮಾಡಿರುವ ಆರೋಪ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಮೇಲೆ ಅನವಶ್ಯಕವಾಗಿ ಆಪಾದನೆ ಮಾಡುವುದು ಯಾವುದೇ ಸರ್ಕಾರಕ್ಕೂ ಸರಿ ಇರುವುದಿಲ್ಲ. ಡೆತ್‌ನೋಟ್‌ನಲ್ಲಿ ಅವರ ಹೆಸರು ಕೂಡ ಇಲ್ಲ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ. ಸಚಿವರ ಹೆಸರನ್ನು ತಂದು, ಸರ್ಕಾರಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಸತ್ಯಾಸತ್ಯತೆ …

Read More »