BigTv News
December 30, 2024
Breaking News, ಬೆಂಗಳೂರು
ಬೆಂಗಳೂರು: ಜನವರಿ 2 ರಂದುರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿ ಮಾಡಿದ್ದು, ಈ ವೇಳೆ ಹಲವು ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳುವುದರ ಬಗ್ಗೆ ತೀರ್ಮಾನ ಮಾಡಲಾಗುವುದು ಎನ್ನಲಾಗಿದೆ. ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಜಂಟಿ ಕಾರ್ಯದರ್ಶಿ ಇವರು ಸುತ್ತೋಲೆ ಹೊರಡಿಸಿದ್ದು, ದಿನಾಂಕ: 02.01.2025, ಗುರುವಾರ ಬೆಳಿಗ್ಗೆ 11:00 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 1ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ …
Read More »
BigTv News
December 30, 2024
Breaking News, ಬೆಂಗಳೂರು
ಬೆಂಗಳೂರು : ಬೆಂಗಳೂರಿನಲ್ಲಿ ಕೆಎಸ್ ಡಿ ಎಲ್(KSDL) ಅಧಿಕಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಡೆತ್ ನೋಟ್ ಬರೆದಿಟ್ಟು ಕೆಎಸ್ ಡಿ ಎಲ್ ಅಧಿಕಾರಿ ಅಮೃತ್ (40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. KSDL’ ನ ಮೆಟಿರಿಯಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿ ಅಮೃತ್ ಕೈಯಲ್ಲೇ ಡೆತ್ ನೋಟ್ ಹಿಡಿದುಕೊಂಡು ನೇಣಿಗೆ ಶರಣಾಗಿದ್ದಾರೆ. ಡಿ.28 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ …
Read More »
BigTv News
December 30, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ಪಾವತಿಸಬೇಕಾಗಿರುವ ಹಾಲಿನ ಪ್ರೋತ್ಸಾಹ ಧನದ ಬಾಕಿ ಮೊತ್ತ ಸುಮಾರು ₹622.54 ಕೋಟಿಗೆ ಏರಿದೆ. ಕಳೆದ ಜೂನ್‌ನಿಂದ ಪ್ರೋತ್ಸಾಹ ಧನ ಬಿಡುಗಡೆ ಆಗಿಲ್ಲ. ರಾಜ್ಯದಲ್ಲಿ ದೊಡ್ಡ ಸಂಖ್ಯೆಯ ರೈತರು ಹಾಲು ಉತ್ಪಾದನೆಯನ್ನು ಉಪ ಕಸುಬನ್ನಾಗಿಸಿಕೊಂಡಿದ್ದಾರೆ. ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಸಂಕಷ್ಟಕ್ಕೊಳಗಾಗಿರುವ ರೈತರು ಪ್ರೋತ್ಸಾಹ ಧನ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಇದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿದ ಪೂರಕ ಅಂದಾಜು ಎರಡನೇ ಕಂತಿನಲ್ಲಿ 2024ರ ಆಗಸ್ಟ್‌ನಿಂದ 2025ರ …
Read More »
BigTv News
December 30, 2024
Breaking News, ಬೆಂಗಳೂರು
ಬೆಂಗಳೂರು : 2024-25ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ಸಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ಹೊಸ ಸದಸ್ಯರ ನೋಂದಣಿಗೆ ಡಿಸೆಂಬರ್ 31 ರವರೆಗೆ ಅವಕಾಶ ನೀಡಲಾಗಿದೆ. ಸರ್ಕಾರದ ಆದೇಶದಲ್ಲಿ 2023-24ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಸಹಕಾರ ಇಲಾಖೆಯಿಂದ ಜಾರಿಗೊಳಿಸಲು ಹಾಗೂ ಸದಸ್ಯರನ್ನು ನೋಂದಾಯಿಸಲು ಮಾರ್ಗಸೂಚಿಗಳೊಂದಿಗೆ ಆದೇಶ ಹೊರಡಿಸಲಾಗಿತ್ತು. ಸಹಕಾರ ಸಂಘಗಳ ನಿಬಂಧಕರ ಪ್ರಸ್ತಾವನೆಯಲ್ಲಿ …
Read More »
BigTv News
December 30, 2024
Breaking News, ಬೆಂಗಳೂರು
ಬೆಂಗಳೂರು: ಹೊಸ ವರ್ಷ ಸ್ವಾಗತಕ್ಕೆ ಸಿಲಿಕಾನ್ ಸಿಟಿ ಸಜ್ಜಾಗುತ್ತಿದ್ದು, ಭದ್ರತಾ ದೃಷ್ಟಿಯಿಂದ ಪೊಲೀಸರು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್‌ಸ್ಟ್ರೀಟ್ ಮುಂತಾದ ರಸ್ತೆಗಳಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಸಹ ಅದ್ಧೂರಿ ವರ್ಷಾಚರಣೆ ಸಂಭ್ರಮ ನಡೆಯಲಿದ್ದು, ಸಾರ್ವಜನಿಕರ ಭದ್ರತಾ ದೃಷ್ಟಿಯಿಂದ ಸಿ.ಸಿ.ಕ್ಯಾಮೆರಾಗಳ ಅಳವಡಿಕೆ, ವಾಚ್ ಟವರ್, ವುಮೆನ್ಸ್ ಸೇಫ್ಟಿಲ್ಯಾಂಡ್, ಹೆಲ್ತ್ ಸೆಂಟರ್ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ನಗರದ ಪ್ರಮುಖ ಆಕರ್ಷಣೆ ಸ್ಥಳಗಳಾದ ಬ್ರಿಗೇಡ್ ರಸ್ತೆ, ಚರ್ಚ್ …
Read More »
BigTv News
December 30, 2024
Breaking News, ಬೆಂಗಳೂರು
ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ(ನರೇಗಾ) ಯೋಜನೆಯಡಿ ರಾಜ್ಯದಲ್ಲಿ 2024ನೇ ಸಾಲಿನಲ್ಲಿ ಕೈಗೊಂಡಿದ್ದ 1,218 ಸಮುದಾಯ ಕಾಮಗಾರಿಯಲ್ಲಿ ಲೋಪದೋಷ ಇರುವುದನ್ನು ಜಿಲ್ಲಾ ಮಟ್ಟದ ಓಂಬುಡ್ಸ್‌ಮನ್‌ಗಳು ಪತ್ತೆ ಹಚ್ಚಿ 2.34 ಲಕ್ಷ ದಂಡ ವಿಧಿಸಿದ್ದಾರೆ. ನರೇಗಾದಡಿ ನಿರ್ವಹಿಸುವ ಸಮುದಾಯ ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡುತ್ತಿಲ್ಲ ಎಂದು ಸಾರ್ವಜನಿಕರಿಂದ ಆಯಾ ಜಿಲ್ಲೆಗಳ ಓಂಬುಡ್ಸ್ ಮನ್‌ಗಳಿಗೆ ಸಲ್ಲಿಕೆಯಾದ ದೂರುಗಳನ್ನು ಆಧರಿಸಿ ಪರಿಶೀಲನೆ ನಡೆಸಿದಾಗ ಎನ್ ಎಂಎಂಎಸ್ (ನ್ಯಾಷನಲ್ ಮೊಬೈಲ್ ಮಾನಿಟ ರಿಂಗ್ ಸಿಸ್ಟಂ) …
Read More »
BigTv News
December 30, 2024
Breaking News, ಬೆಂಗಳೂರು
ಬೆಂಗಳೂರು: ಕೆಪಿಎಸ್‌ಸಿ (ಕರ್ನಾಟಕ ಲೋಕಸೇವಾ ಆಯೋಗ) ನಡೆಸುತ್ತಿರುವ ಪ್ರತಿಯೊಂದು ಪರೀಕ್ಷೆಗಳಲ್ಲೂ ಗೊಂದಲಗಳು, ಲೋಪಗಳು, ಭಾಷಾಂತರ ದೋಷಗಳ ಮೂಲಕ ಕೆಪಿಎಸ್‌ಸಿ ನ್ಯೂನತೆಗಳು ಬಯಲಾಗುತ್ತಲೇ ಇವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಡಿಸೆಂಬರ್ 29ರಂದು ನಡೆದ ಕೆಎಎಸ್ ಪೂರ್ವಭಾವಿ ಮರುಪರೀಕ್ಷೆಯ ಪ್ರವೇಶಪತ್ರ ಬಿಡುಗಡೆ ಮಾಡಿದ್ದ ಕೆಪಿಎಸ್‌ಸಿ ಕನ್ನಡ ಭಾಷೆಯಲ್ಲಿರುವ ಯಾವುದೇ ಪ್ರಶ್ನೆಗಳ ಭಾಷಾಂತರದಲ್ಲಿ ಏನಾದರೂ ಗೊಂದಲವಾದಲ್ಲಿ …
Read More »
BigTv News
December 30, 2024
Breaking News, ಬೆಂಗಳೂರು
ಬೆಂಗಳೂರು: ಕೆ. ಸುಧಾಕರ್ ರಾವ್ ನೇತೃತ್ವದ 7ನೇ ವೇತನ ಆಯೋಗದ ವರದಿ ಜಾರಿ ಬಳಿಕ ಕರ್ನಾಟಕದ ಸರ್ಕಾರಿ ನೌಕರರ ಮತ್ತೊಂದು ಪ್ರಮುಖ ಬೇಡಿಕೆ ಹಳೇ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿ. ಸದ್ಯ ಇರುವ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಗೊಳಿಸಿ ಎಂದು ಸರ್ಕಾರಿ ನೌಕರರು ಬೇಡಿಕೆ ಇಡುತ್ತಲೇ ಇದ್ದಾರೆ. ಸರ್ಕಾರ ಈ ಕುರಿತು ವರದಿ ನೀಡಲು ಸಮಿತಿಯೊಂದನ್ನು ರಚನೆ ಮಾಡಿದೆ. 2025ರಲ್ಲಿ ನೌಕರರ ಈ ಬೇಡಿಕೆ ಈಡೇರುವ ವಿಶ್ವಾಸವಿದೆ. …
Read More »
BigTv News
December 29, 2024
Breaking News, ಬೆಂಗಳೂರು
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಸೇರಿದಂತೆ ನಾಲ್ಕೂ ನಿಗಮಗಳ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಳ ಮಾಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಶಿಫಾರಸ್ಸು ಮಾಡಿದೆ. ಸಾರಿಗೆ ನಿಗಮಗಳು 2020ರಿಂದ ಪ್ರಯಾಣ ದರ ಪರಿಷ್ಕರಣೆ ಮಾಡದಿರುವ ಕಾರಣಕ್ಕೆ ನಷ್ಟಕ್ಕೆ ಸಿಲುಕಿವೆ. ವಾರ್ಷಿಕ 3,650ಕೋಟಿ ರೂ.ಹೊರೆಯಾಗುತ್ತಿದ್ದು, ಪ್ರಯಾಣ ದರ ಪರಿಷ್ಕರಣೆಯಿಂದ ನಷ್ಟದ ಪ್ರಮಾಣ 1,800ಕೋಟಿ ರೂ.ಗೆ …
Read More »
BigTv News
December 29, 2024
Breaking News, ಬೆಂಗಳೂರು
ಬೆಂಗಳೂರು: ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಇಲ್ಲಿದೆ. ಮುಂದಿನ ನಾಲ್ಕು ತಿಂಗಳಲ್ಲಿ ರೈಲ್ವೆ ಇಲಾಖೆಯಲ್ಲಿ 60,000 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸಿದ್ದ ‘ಹೆಸರಾಯಿತು ಕರ್ನಾಟಕ-50ರ ಸಂಭ್ರಮ’ ಮತ್ತು ಪ್ರತಿಜ್ಞಾ ಸ್ವೀಕಾರ ಸಮಾವೇಶದಲ್ಲಿ ಅವರು ಮಾತನಾಡಿದರು. ಈ ಮೊದಲು ಹಿಂದಿ, ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ರೈಲ್ವೆ ಇಲಾಖೆ ಪರೀಕ್ಷೆ ನಡೆಯುತ್ತಿದ್ದವು. ನಾನು …
Read More »