Breaking News

ಬೆಂಗಳೂರು

ಬೆಂಗಳೂರು: ಪತ್ನಿ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ!!!

ಪತ್ನಿ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಲಾರಿ ಮಾಲೀಕ 45 ವರ್ಷದ ಸ್ವಾಮಿ ಮೃತ ಪತಿ. ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತನ ಸಂಬಂಧಿ ನಾಗರಾಜ್ ಎಂಬುವವರು ಮಾಧ್ಯಮದವರೊಂದಿಗೆ ಮಾತನಾಡಿದ್ದು, ಮೃತ ಸ್ವಾಮಿ ಒಳ್ಳೆಯ ಮನುಷ್ಯ. ಮದುವೆ, ಮನೆ, ಮಕ್ಕಳು ಅಂತ ಇದ್ದವರು. ಆತನ ಪತ್ನಿ ಕಳೆದ ಎರಡು ವರ್ಷಗಳ ಹಿಂದೆ ಗುತ್ತಿಗೆ ಮೇಲೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ …

Read More »

ಪ್ರೀತಿಸಿದ ಶಿಕ್ಷಕಿ ಕೈಕೊಟ್ಟಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ!!

ಪ್ರೀತಿಸಿದ ಶಿಕ್ಷಕಿ ಕೈಕೊಟ್ಟ ಕಾರಣ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಾಕಳಿ ಗ್ರಾಮದಲ್ಲಿ ನಡೆದಿದೆ. ಅಕ್ರಮ ಪ್ರೇಮ ಸಂಬಂಧದ ಸಂಕಷ್ಟದ ಮಧ್ಯೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೊಡ್ಡ ಚರ್ಚೆಗೆ ಕಾರಣವಾಗಿದೆ.ಆನಂದ ಆತ್ಮಹತ್ಯೆಗೂ ಮೊದಲು ಡೆತ್ ನೋಟ್ ಬರೆದು, ವಾಟ್ಸಪ್ ಸ್ಟೇಟಸ್‌ನಲ್ಲೂ ಹೇಮಲತಾಳ ಕಿರುಕುಳದ ಬಗ್ಗೆ ಮಾಹಿತಿ ಹಾಕಿದ್ದಾನೆ. ಮಾಕಳಿಯ ಟ್ಯೂಷನ್ ಸೆಂಟರ್‌ನಲ್ಲಿ ಪ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ …

Read More »

ಯುವತಿಗೆ ಕಿರುಕುಳ ನೀಡಿದ ಕಾಮುಕನಿಗೆ ಎಸ್ಕೇಪ್‌ ಆಗಲು ಸಹಕರಿಸಿದ್ದ ಪ್ರೇಯಸಿ ವಿಚಾರಣೆ!!

ಯುವತಿಗೆ ಕಿರುಕುಳ ನೀಡಿ ಪರಾರಿಯಾಗಿದ್ದ ಸಂತೋಷ್‌ ಬಳಿಕ 4 ದಿನ ಎಂದಿನಂತೆ ಕಾರು ಶೋ ರೂಮ್‌ನಲ್ಲಿ ಕೆಲಸ ಮಾಡಿದ್ದ. ಆರೋಪಿ ದುಷ್ಕೃತ್ಯದ ಸಿಸಿಟಿವಿ ದೃಶ್ಯಾವಳಿ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಇದನ್ನು ಗಮನಿಸಿದ್ದ ಪ್ರೇಯಸಿ, ಪ್ರಿಯಕರ ಸಂತೋಷ್‌ಗೆ ಮಾಹಿತಿ ನೀಡಿ ಪೊಲೀಸರು ನಿನ್ನನ್ನು ಬಂಧಿಸಬಹುದು. ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಳು. ಹೀಗಾಗಿ ಆರೋಪಿ ಸಂತೋಷ್‌ ಕೆಲಸಕ್ಕೆ ಗೈರಾಗಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.ಸಂತೋಷ್‌ ಹೊಸ ಸಿಮ್‌ ಬಳಸಿ ಬೆಂಗಳೂರಿನ ತಿಲಕನಗರದ ಗುಲ್ಬರ್ಗಾ ಕಾಲೋನಿಯಲ್ಲಿರುವ ತಾಯಿಗೆ ಕರೆ ಮಾಡಿ …

Read More »

ಬೆಂಗಳೂರು :ಅಶ್ಲೀಲ ಫೋಟೋ ತೋರಿಸಿ ಮಹಿಳಾ ಟೆಕ್ಕಿಗೆ ದುಷ್ಕರ್ಮಿಗಳ ಬೆದರಿಕೆ, ಹಣಕ್ಕೆ ಬೇಡಿಕೆ!!

ಇ-ಮೇಲ್‌ ಹ್ಯಾಕ್‌ ಮಾಡಿರುವ ದುಷ್ಕರ್ಮಿಗಳು, ಗೂಗಲ್‌ ಲಿಂಕ್‌ ಬಳಸಿಕೊಂಡು ದೂರುದಾರೆಯ ವೈಯಕ್ತಿಕ ಫೋಟೋಗಳನ್ನು ತೆಗೆದುಕೊಂಡು ಅಶ್ಲೀಲವಾಗಿ ಮಾರ್ಫ್‌ ಮಾಡಿ ವಿಡಿಯೋ ಸೃಷ್ಟಿಸಿದ್ದಾರೆ. ಬಳಿಕ ಆ ವಿಡಿಯೋ ಹಾಗೂ ಫೋಟೊಗಳನ್ನು ದೂರುದಾರೆಯ ಅಕ್ಕನ ಗಂಡನಿಗೆ ಕಳುಹಿಸಿದ್ದಾರೆ. 2.50 ಲಕ್ಷ ರು. ಹಣಕ್ಕೆ ಬೇಡಿಕೆ ಇರಿಸಿದ್ದಾರೆ. ಒಂದು ವೇಳೆ ಹಣ ಕೊಡದಿದ್ದಲ್ಲಿ ಈ ವಿಡಿಯೋ ಹಾಗೂ ಫೋಟೋಗಳನ್ನು ಪೋರ್ನ್‌ ವೆಬ್‌ಸೈಟ್‌ಗೆ ಅಪ್ಲೌಡ್‌ ಮಾಡುವುದಾಗಿ ಸಂದೇಶ ಕಳುಹಿಸಿ ದೂರುದಾರೆಯನ್ನು ಬ್ಲ್ಯಾಕ್‌ ಮೇಲ್‌ ಮಾಡಿದ್ದಾರೆ.ಈ ಸಂಬಂಧ …

Read More »

ಟೆಕಿಗಳಿಗೆ ಡ್ರಗ್ಸ್ ಮಾರುತ್ತಿದ್ದ ಎಂಜಿನಿಯರ್ ಸೆರೆ: ₹6 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ!!

ಮಾದಕ ವಸ್ತು ಮಾರಾಟ ಜಾಲದ ಮೇಲೆ ಭರ್ಜರಿ ಕಾರ್ಯಾಚರಣೆ ನಡೆಸಿರುವ ಸಿಸಿಬಿ, ಸಿವಿಲ್ ಎಂಜಿನಿಯರ್ ಸೇರಿದಂತೆ ಇಬ್ಬರನ್ನು ಪ್ರತ್ಯೇಕವಾಗಿ ಬಂಧಿಸಿ ₹6 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದೆ.ಹಲವು ದಿನಗಳಿಂದ ಪ್ರತ್ಯೇಕವಾಗಿ ನಗರದಲ್ಲಿ ಡ್ರಗ್ಸ್ ದಂಧೆಯಲ್ಲಿ ಈ ಪೆಡ್ಲರ್‌ಗಳು ತೊಡಗಿದ್ದ ಬಗ್ಗೆ ಸಿಸಿಬಿಯ ಮಾದಕ ವಸ್ತು ನಿಗ್ರಹ ದಳಕ್ಕೆ ಖಚಿತ ಮಾಹಿತಿ ಸಿಕ್ಕಿತು. ಅಂತೆಯೇ ಡ್ರಗ್ಸ್ ಮಾರಾಟಕ್ಕೆ ಯತ್ನಿಸಿದ್ದಾಗ ಬೇಗೂರು ಕೆರೆ ಬಳಿ ಕ್ರಿಸ್ಟೋಫರ್‌ನನ್ನು ಇನ್‌ಸ್ಪೆಕ್ಟರ್‌ ಲಕ್ಷ್ಮೀನಾರಾಯಣ್ ಹಾಗೂ ಎಲೆಕ್ಟ್ರಾನಿಕ್ …

Read More »

ಕಾಮಗಾರಿ ವೇಳೆ ಭೀಕರ ದುರಂತ: ಆಟೋ ಚಾಲಕ ಸಾವು!!

ಯಲಹಂಕದ ಕೋಗಿಲು ಕ್ರಾಸ್ ಬಳಿ ನಡೆದ ಈ ಅಪಘಾತದಲ್ಲಿ ಆಟೋ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೃಹತ್ ವೈಯಾಡೆಕ್ಟ್ ಸಾಗಿಸುತ್ತಿದ್ದ ಲಾರಿ ತಿರುವು ಪಡೆಯುವ ವೇಳೆ ಅತಿಯಾದ ಓವರ್‌ಲೋಡ್ ಅಥವಾ ನಿರ್ಲಕ್ಷ್ಯದ ಕಾರಣದಿಂದಾಗಿ ವೈಯಾಡೆಕ್ಟ್ ನೆಲಕ್ಕುರುಳಿದಿದ್ದು, ಪಕ್ಕದಲ್ಲೇ ನಿಂತಿದ್ದ ಆಟೋ ಮೇಲೆ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.ಆಟೋ ಚಾಲಕ ಕಾಸಿಂ ಸಾಬ್ ಎಂಬುವವರು ಈ ದುರಂತದಲ್ಲಿ ಸಾವನ್ನಪ್ಪಿದ ದುರ್ದೈವಿ. ಘಟನೆ ಮಧ್ಯರಾತ್ರಿ ಸುಮಾರು 12 ಗಂಟೆ ಸುಮಾರಿಗೆ ನಡೆದಿದೆ.ಈ ಕುರಿತು …

Read More »

ಮಹಡಿಯಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ!!

ಯಶವಂತಪುರದ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ದಂತ ವೈದ್ಯಕೀಯ ಕೋರ್ಸ್ ಓದುತ್ತಿದ್ದ ಸೌಮ್ಯ, ತಮ್ಮ ತಂದೆ, ತಾಯಿ ಮತ್ತು ಸಹೋದರನ ಜತೆ ವಾಸವಾಗಿದ್ದರು. ಸೌಮ್ಯ ತಂದೆ ಗಣೇಶ್ ನಾರಾಯಣ್​ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದಾರೆ. ಮೂಲತಃ ಆಂಧ್ರದವರಾಗಿದ್ದು, ಮಗಳನ್ನು ಓದಿಸುವ ಉದ್ದೇಶಕ್ಕೆ ಕುಟುಂಬ ಸಮೇತ ಬೆಂಗಳೂರಿಗೆ ಬಂದು ನೆಲೆಸಿದ್ದರು.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಸೌಮ್ಯ ಎಂದು ಗುರುತಿಸಲಾಗಿದೆ.ಮೃತ ಸೌಮ್ಯ ಪರೀಕ್ಷಾ ಸಮಯದಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ. ಆತ್ಮಹತ್ಯೆಗೂ ಮುನ್ನ ಯಾವುದೇ ಡೆತ್​ …

Read More »

ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ!!

ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಮಧ್ಯರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 75 ವರ್ಷದ ಬ್ಯಾಂಕ್ ಜನಾರ್ಧನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಕುಟುಂಬಸ್ಥರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ.ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟರಾಗಿ ಗುರುತಿಸಿಕೊಂಡ ಇವರು, ದೊಡ್ಡಣ್ಣ, ಟೆನ್ನಿಸ್‌ ಕೃಷ್ಣ ಅವರ ಸಮಕಾಲೀನರು ಅವರೊಂದಿಗೆ ಮಾತ್ರವಲ್ಲದೆ, ತಮ್ಮ ನಂತರ ಬಂದ ಹಾಸ್ಯನಟರಾದ ಸಾಧುಕೋಕಿಲ, ಬುಲೆಟ್‌ ಪ್ರಕಾಶ್‌ ಸೇರಿದಂತೆ ಇನ್ನೂ ಹಲವರೊಂದಿಗೆ ನಟಿಸಿ ತಮ್ಮ ಛಾಪು ಮೂಡಿಸಿದ್ದರು. …

Read More »

ನಾಗಮಂಗಲ: ಕಸದ ತೊಟ್ಟಿಯಲ್ಲಿ ನವಜಾತ ಶಿಶು ಪತ್ತೆ!ಕಾರಣ ಹೆಣ್ಣು ಮಗು…

ಅಳುತ್ತಿರುವ ಶಬ್ದ ಕೇಳಿದ ಸ್ಥಳೀಯರು ಕಸದ ತೊಟ್ಟಿಯಲ್ಲಿ ನೋಡಿದಾಗ ನವಜಾತ ಶಿಶು ಪತ್ತೆಯಾಗಿದೆ. ಹೆಣ್ಣು ಎಂಬ ಕಾರಣಕ್ಕೆ ಜನಿಸಿದ ದಿನವೇ ಮಗುವನ್ನು ಪೋಷಕರು ಬಿಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ.ಶಿಶುವಿಗೆ ಚಿಕಿತ್ಸೆಯ ಅಗತ್ಯವಿದ್ದು, ಬಿ.ಜಿ.ನಗರದ ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಮೂರು ದಿನಗಳವರೆಗೆ ಚಿಕಿತ್ಸೆ ನೀಡಲಾಗುತ್ತದೆ. ನಂತರ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಗುವುದು’ ಎಂದು ಸಿಡಿಪಿಒ ಕೃಷ್ಣಮೂರ್ತಿ ತಿಳಿಸಿದರು.ಘಟನೆ ಸಂಬಂಧ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಬೆಳ್ಳೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Read More »

ಪತಿಯೊಬ್ಬ ಪತ್ನಿಯನ್ನು ಬೀದಿಯಲ್ಲೇ ಚಾಕುವಿನಿಂದ ಇರಿದು ಭೀಕರ ಕೊಲೆ!!!

ತಿರುಪಾಳ್ಯ ಮೂಲದ ಗಂಗಾ ಕೊಲೆಯಾದ ಪತ್ನಿ. ಮೋಹನ್ ರಾಜ್ ಕೊಲೆ ಮಾಡಿದ ಪತಿ. ದಂಪತಿಯ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದ್ದು, ಮಾತಿನ ಭರಾಟೆ ಜೋರಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಇರಿತಕ್ಕೊಳಗಾದ ಗಂಗಾಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿಲಾಗಿತ್ತು. ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಹೆಬ್ಬಗೋಡಿ ಪೊಲೀಸರು, ಪರಿಶೀಲನೆ ನಡೆಸಿ ಆರೋಪಿ ಮೋಹನ್ ರಾಜ್​ನನ್ನು ವಶಕ್ಕೆ ಪಡೆದಿದ್ದಾರೆ.

Read More »