Breaking News

ಬೆಂಗಳೂರು

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಿನಿ ಏರ್‌ಪೋರ್ಟ್ ನಿರ್ಮಿಸುವ ಯೋಜನೆಗೆ ಸರ್ಕಾರ ನಿರ್ಧಾರ

ಬೆಂಗಳೂರು: ಕರ್ನಾಟಕದಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಸಜ್ಜಾಗಿರುವ ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ‘ಮಿನಿ ಏರ್‌ಪೋರ್ಟ್’ ನಿರ್ಮಿಸುವ ಯೋಜನೆಗೆ ಕೈ ಹಾಕಿದೆ. ಆರಂಭಿಕ ಹಂತದಲ್ಲಿ ರಾಜ್ಯದ ಮೂರು ಜಿಲ್ಲೆಗಳಲ್ಲಿ ಜಾಗ ಅಂತಿಮ ಮಾಡಿರುವ ಸರ್ಕಾರ ಡಿಪಿಆರ್ ಸಿದ್ಧಪಡಿಸುವಲ್ಲಿ ನಿರತವಾಗಿದೆ. ಭವಿಷ್ಯದಲ್ಲಿ ಇದರಿಂದ ಪ್ರವಾಸೋದ್ಯಮಕ್ಕೆ ಭಾರೀ ಉತ್ತೇಜನ ಸಿಗುವ ವಿಶ್ವಾಸ ಇದೆ. ಪ್ರವಾಸೋದ್ಯಮ ಬೆಂಬಲಿಸುವುದು ಮಾತ್ರವಲ್ಲದೇ ಕೈಗಾರಿಕೆ ಅಭಿವೃದ್ಧಿ, ನೈಸರ್ಗಿಕ ವಿಕೋಪಗಳು ಎದುರಾದ ಸಂದರ್ಭದಲ್ಲಿ ತ್ವರಿತಗತಿಯಲ್ಲಿ …

Read More »

ಸಿಎಂ ಸಿದ್ದರಾಮಯ್ಯರಿಂದ ಮಾರ್ಚ್ 14 ರಂದು ರಾಜ್ಯ ಬಜೆಟ್‌ ಮಂಡನೆ ಸಾಧ್ಯತೆ

ಬೆಂಗಳೂರು: ಸಿದ್ದರಾಮಯ್ಯ 16ನೇ ಬಜೆಟ್ ಮಂಡಿಸಲು ಸಿದ್ಧತೆ ಕೈಗೊಂಡಿದ್ದಾರೆ. ಮಾರ್ಚ್ 10 ರಿಂದ 4 ದಿನಗಳ ಕಾಲ ವಿಧಾನ ಮಂಡಲ ಜಂಟಿ ಅಧಿವೇಶನ ಕರೆಯಲು ಉದ್ದೇಶಿಸಲಾಗಿದೆ. ಮಾರ್ಚ್ 14 ರಂದು ರಾಜ್ಯ ಬಜೆಟ್ ಮಂಡಿಸುವ ಸಾಧ್ಯತೆ ಇದೆ. ಈ ಹಿಂದೆ ರಾಮಕೃಷ್ಣ ಹೆಗಡೆ 13 ಬಾರಿ ಬಜೆಟ್ ಮಂಡಿಸಿದ್ದು ದಾಖಲೆಯಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ 16ನೇ ಬಾರಿಗೆ ಬಜೆಟ್ ಮಂಡಿಸಲಿದ್ದು, ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆ ಮುಂದುವರೆಸಲಿದ್ದಾರೆ. 2025 …

Read More »

ಸಿಎಂ ಸಿದ್ದರಾಮಯ್ಯರಿಂದ ಕೊಪ್ಪಳ ವಿವಿ ಕುಲಪತಿ ಬಿ.ಕೆ.ರವಿ ಕೃತಿಯ ಆವೃತ್ತಿ ಬಿಡುಗಡೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ ಬಿ.ಕೆ.ರವಿ ಅವರಆಧುನಿಕ ಮಾಧ್ಯಮ, ಚುನಾವಣೆಗಳು ಮತ್ತು ಪ್ರಜಾಪ್ರಭುತ್ವ ಕೃತಿಯ ಅಂತಾರಾಷ್ಟ್ರೀಯ ಆವೃತ್ತಿಯನ್ನು ಕಾವೇರಿ ನಿವಾಸದಲ್ಲಿ ಬಿಡುಗಡೆ ಮಾಡಿದರು. ಸ್ವಾತಂತ್ರ್ಯ ಸಂದರ್ಭದಿಂದ ಈ ಕ್ಷಣದವರೆಗೆ ದೇಶದಲ್ಲಿ ನಡೆದ ಚುನಾವಣೆಗಳು, ಚುನಾವಣಾ ರಾಜಕಾರಣ ಕುರಿತಂತೆ ಮಾಧ್ಯಮಗಳು ಕಾಲ ಕಾಲಕ್ಕೆ ಬದಲಾಗಿರುವುದು, ಚುನಾವಣಾ ಸ್ವರೂಪದಲ್ಲಿ ಆದ ಮಾರ್ಪಾಡುಗಳು, ಇವೆಲ್ಲದರಿಂದ ದೇಶದ ಪ್ರಜಾಪ್ರಭುತ್ವದ ಮೇಲೆ ಆಗಿರುವ ಪರಿಣಾಮಗಳ ವಿಶ್ಲೇಷಣಾತ್ಮಕ ಕೃತಿ ಇದಾಗಿದೆ. ರಾಜಕೀಯ ಸಂವಹನ ಕ್ಷೇತ್ರದ …

Read More »

ಜಮ್ಮುವಿನಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮ: ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಜಮ್ಮು-ಕಾಶ್ಮೀರದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಜಮ್ಮು ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು. ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ …

Read More »

ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ದಾರರಿಗೆ ಸಿಹಿಸುದ್ದಿ

ಬೆಂಗಳೂರು: ಪ್ರಮುಖ ದಾಖಲೆಗಳಲ್ಲಿ ರೇಷನ್‌ ಕಾರ್ಡ್‌ ಕೂಡ ಒಂದಾಗಿದೆ. ಅದರಲ್ಲೂ ಬಿಪಿಎಲ್‌ ಕಾರ್ಡ್‌ದಾರರು ಸರ್ಕಾರದ ಹೆಚ್ಚಿನ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಇದೀಗ ಸರ್ಕಾರ ಬಿಪಿಎಲ್ ಕಾರ್ಡ್‌ದಾರರಿಗೆ ಸಿಹಿ ಸುದ್ದಿ ನೀಡಿದೆ. ಹೌದು, ಬಿಪಿಎಲ್‌ ಕಾರ್ಡ್‌ದಾರರು ಪಡಿತರ ಪಡೆಯುವುದಕ್ಕೆ ಕುಟುಂಬದ ಎಲ್ಲರ ವೇತನ ಪ್ರಮಾಣ ಪತ್ರ ನೀಡುವುದು ಕಡ್ಡಾಯ ಎಂದು ಹೇಳಲಾಗುತ್ತಿತ್ತು. ಆದರೇ ಎಲ್ಲರ ವೇತನ ಪ್ರಮಾಣಪತ್ರ ನೀಡುವುದು ಕಡ್ಡಾಯವಲ್ಲ ಎಂಬುದಾಗಿ ಆಹಾರ ಇಲಾಖೆ ಸಚಿವ ಕೆ.ಹೆಚ್‌ ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ …

Read More »

ಜಮ್ಮು ಕಾಶ್ಮೀರದ ಪೂಂಛ್ ಬಳಿ ರಸ್ತೆ ಅಪಘಾತ: ಕರ್ನಾಟಕದ ಮೂವರು ಯೋಧರು ಹುತಾತ್ಮ

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಒಟ್ಟು ಐವರು ಯೋಧರು ಹುತಾತ್ಮರಾಗಿದ್ದು ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಘಟನೆಯಲ್ಲಿ ಐವರು ಯೋಧರು ಗಾಯಗೊಂಡಿದ್ದು ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್‌ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ …

Read More »

ಸಿ.ಟಿ.ರವಿ ರಾಹುಲ್ ಗಾಂಧಿಗೆ ಡ್ರಗ್ ಅಡಿಕ್ಟ್ ಎಂದ ವಿಚಾರ: ಅಸಮಾಧಾನಗೊಂಡ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ಸಿಟಿ ರವಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ವಾಕ್ಸಮರದ ವಿಚಾರ ಹೈಕಮಾಂಡ್ ಗೆ ತಲುಪಿದೆ. ರಾಹುಲ್ ಗಾಂಧಿ ಡ್ರಗ್ ಅಡಿಕ್ಸ್ ಎಂದ ವಿಚಾರವನ್ನು ಹೈಕಮಾಂಡ್ ಗೆ ತಲುಪಿಸಲಾಗಿದೆ. ಮೊನ್ನೆಯಷ್ಟೇ ಬೆಳಗಾವಿ ಅಧಿವೇಶನದಲ್ಲಿ ಸಿಟಿ ರವಿಯವರು ರಾಹುಲ್ ಗಾಂಧಿಯವರನ್ನು ಡ್ರಗ್ ಅಡಿಕ್ಟ್ ಎಂದಿದ್ದು ಲಕ್ಷ್ಮೀ ಹೆಬ್ಬಾಳ್ಕರ್ ರನ್ಜು ಕೆರಳಿಸಿತ್ತು. ಇದಕ್ಕಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಕೊಲೆಗಾರ ಎಂದು ಸಿಟಿ ರವಿ ಹೇಳಿದ್ದರು. ಈ ವಿಚಾರವಾಗಿ ನಡೆದ ಗಲಾಟೆಗಳ …

Read More »

ಅಂದಾಜು 42 ಸಾವಿರ ಕೋಟಿ ರೂ. ಸಾಲದ ಸುಳಿಗೆ ಸಿಲುಕಿದ ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು

ಬೆಂಗಳೂರು: ಸಾಲ ಮಾಡಿಯಾದರೂ ತುಪ್ಪ ತಿನ್ನಲು ರಾಜ್ಯದ ವಿದ್ಯುತ್‌ ಸರಬರಾಜು ಕಂಪೆನಿ (ಎಸ್ಕಾಂ)ಗಳು ಪಣತೊಟ್ಟಂತಿವೆ. ಅದರ ಫ‌ಲವಾಗಿ ಅಂದಾಜು 42 ಸಾವಿರ ಕೋಟಿ ರೂ. ಸಾಲದ ಸುಳಿಗೆ ಸಿಲುಕಿದ್ದು, ಆ ಹೊರೆಯನ್ನು ಪರೋಕ್ಷವಾಗಿ ದರ ಪರಿಷ್ಕರಣೆ ಮತ್ತಿತರ ರೂಪದಲ್ಲಿ ಗ್ರಾಹಕರು ಹೊರುವಂತಾಗಿದೆ. ಸ್ವತಃ ಇಂಧನ ಸಚಿವರು ಈಚೆಗೆ ವಿಧಾನಸಭೆಯಲ್ಲಿ ಇಲಾಖೆಯ ಹಣಕಾಸಿನ ಸ್ಥಿತಿಗತಿ ಕುರಿತು ಲಿಖಿತವಾಗಿ ಮಾಹಿತಿ ನೀಡಿದ್ದಾರೆ. ಅದರಂತೆ ಎಸ್ಕಾಂಗಳು ಸರಿಸುಮಾರು 42 ಸಾವಿರ ಕೋಟಿ ರೂ. ಸಾಲದ …

Read More »

ಬೆಂಬಲ ಬೆಲೆ ಯೋಜನೆಯಡಿ ತೊಗರಿ ಮತ್ತು ಕಡಲೆ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು: ರಾಜ್ಯ ಸರ್ಕಾರದ ಮನವಿ ಮೇರೆಗೆ ತೊಗರಿ ಮತ್ತು ಕಡಲೆಯನ್ನು ಬೆಂಬಲ ಬೆಲೆ ಯೋಜನೆ ಅಡಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಪ್ರತಿ ಕ್ವಿಂಟಾಲ್ ತೊಗರಿಗೆ 7750 ರೂಪಾಯಿ, ಕಡಲೆಗೆ 5,650 ರೂ.ದರ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಕಲಬುರಗಿ, ಯಾದಗಿರಿ, ಬೀದರ್, ವಿಜಯಪುರ, ಕೊಪ್ಪಳ, ಬೆಳಗಾವಿ, ಬಳ್ಳಾರಿ, ವಿಜಯನಗರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ತೊಗರಿ ಖರೀದಿ ಕೇಂದ್ರ …

Read More »

ಗೃಹ ಇಲಾಖೆಯಲ್ಲಿ ನನ್ನ ಬಿಟ್ಟು ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್

ಬೆಂಗಳೂರು: ಗೃಹ ಇಲಾಖೆಯಲ್ಲಿ ನನ್ನ ಬಿಟ್ಟು ಯಾರ ಹಸ್ತಕ್ಷೇಪವೂ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ. ರವಿ ವಿಡಿಯೋವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ಪರಿಶೀಲನೆ ನಡೆಸುತ್ತೇವೆ. ಮಹಜರು ನಡೆಸಲು ಅನುಮತಿ ನೀಡುವಂತೆ ಪೊಲೀಸರು ಕೇಳಿದ್ದಾರೆ. ಸಭಾಪತಿಗಳು ಅನುಮತಿ ನೀಡಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೋ ಇಲ್ಲವೋ ಎಂಬುವುದು ಕುಮಾರಸ್ವಾಮಿಗೆ ಗೊತ್ತಿದೆ. ಯಾರೂ ನನ್ನ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ. ಅಧಿಕಾರಿಗಳು ಏನು‌ ಮಾಡಬೇಕು …

Read More »