Breaking News

ಬೆಂಗಳೂರು

ವಿವಿಧ ಸಚಿವಾಲಯಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳ ವೇತನ ಪರಿಷ್ಕರಣೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ವಿಧಾನಸಭೆ, ವಿಧಾನ ಪರಿಷತ್, ಸಂಸದರು, ರಾಜ್ಯಸಭಾ ಸದಸ್ಯರ ಆಪ್ತ ಸಿಬ್ಬಂದಿ ಸೇರಿದಂತೆ ವಿವಿಧ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯ ವೇತನ ಪರಿಷ್ಕರಿಸಿ ರಾಜ್ಯ ಸರಕಾರ ಇಂದು ಆದೇಶ ಹೊರಡಿಸಿದೆ. ಏಳನೇ ವೇತನ ಆಯೋಗದ ಶಿಫಾರಸ್ಸಿನ ಮೇರೆಗೆ ಕರ್ನಾಟಕ ನಾಗರಿಕ ಸೇವೆಗಳು (ಪರಿಷ್ಕೃತ ವೇತನ) ನಿಯಮಗಳು 2024ನ್ನು ರಾಜ್ಯ ಸರಕಾರ ಜಾರಿಗೆ ತಂದಿದ್ದು, ಅದರಂತೆ ಗುತ್ತಿಗೆ ಆಧಾರದ ಸಿಬ್ಬಂದಿಯ ಪರಿಷ್ಕೃತ ಸಂಚಿತ …

Read More »

ಪ್ರತಿವರ್ಷ ಇನ್ಮುಂದೆ ಡಿ.26 ರಂದು ಗ್ರಾ.ಪಂ. ಕಂಪ್ಯೂಟರ್ ಆಪರೇಟರ್ ಗಳ ದಿನವಾಗಿ ಆಚರಣೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಂಪ್ಯೂಟರ್‌ ಆವಿಷ್ಕಾರ ಮಾಡಿದ ವಿಜ್ಞಾನಿ ಚಾರ್ಲ್ಸ್‌ ಬ್ಯಾಬೇಜ್‌ ಅವರ ಹುಟ್ಟಿದ ದಿನವಾದ ಡಿಸೆಂಬರ್ 26ರಂದು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿನ ಡಾಟಾ ಎಂಟ್ರಿ ಆಪರೇಟರುಗಳು ಇನ್ನು ಮುಂದೆ ಪ್ರತಿ ವರ್ಷ ಕಂಪ್ಯೂಟರ್‌ ಆಪರೇಟರುಗಳ ದಿನವನ್ನಾಗಿ ಆಚರಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಈ …

Read More »

ರಾಜ್ಯದಲ್ಲಿ 20 ತಾಲೂಕುಗಳ ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ತೀರ್ಮಾನ

ಬೆಂಗಳೂರು : ರಾಜ್ಯದಲ್ಲಿ ಸುಮಾರು 20 ತಾಲೂಕುಗಳಲ್ಲಿರುವ ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.ಸುಮಾರು 100 ಕೋಟಿ ವೆಚ್ಚದಲ್ಲಿ 200 ಪಶು ಆಸ್ಪತ್ರೆಗಳ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದೂ, 20 ತಾಲೂಕುಗಳ ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲು ಇದೀಗ ರಾಜ್ಯ ಸರ್ಕಾರ ತೀರ್ಮಾನಿಸಿದೆ. 10 ಕೋಟಿ ರೂಪಾಯಿ ವೆಚ್ಚದಲ್ಲಿ ಪಶು ಆಸ್ಪತ್ರೆಗಳು ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು, ಬಾಡಿಗೆ ಹಾಗೂ ಶಿಥಿಲಾವಸ್ಥೆಯಲ್ಲಿರುವ ಪಶು ಆಸ್ಪತ್ರೆಗಳನ್ನು ಮರು ನಿರ್ಮಾಣ ಮಾಡಲು ಮೇಲ್ದರ್ಜೆಗೆ ಏರಿಸಲಾಗಿದೆ. …

Read More »

ಬೆಂಗಳೂರು ರೈಲ್ವೆ ನಿಲ್ದಾಣವನ್ನು ವಿಮಾನ ನಿಲ್ದಾಣ ಮಾದರಿಯಲ್ಲಿ ಮರು ವಿನ್ಯಾಸ

ಬೆಂಗಳೂರು: ಮೆಜೆಸ್ಟಿಕ್‌ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್‌) ರೈಲು ನಿಲ್ದಾಣವನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮಾದರಿಯಲ್ಲಿ ಮರು ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಲು ನೈರುತ್ಯ ರೈಲ್ವೆ ಮುಂದಾಗಿದೆ. ಒಟ್ಟು ₹ 1,200 ಕೋಟಿ ವೆಚ್ಚದ ಯೋಜನೆಗೆ ಒಪ್ಪಿಗೆ ಕೋರಿ ಕೇಂದ್ರ ಸಂಪುಟದ ಮುಂದೆ ಪ್ರಸ್ತಾವ ಸಲ್ಲಿಸಲಾಗಿದೆ. ಕೆಎಸ್‌ಆರ್‌ ರೈಲ್ವೆ ನಿಲ್ದಾಣ, ಮೆಜೆಸ್ಟಿಕ್‌ ರೈಲ್ವೆ ನಿಲ್ದಾಣ, ಸಿಟಿ ರೈಲ್ವೆ ನಿಲ್ದಾಣ ಎಂದು ನಾನಾ ಹೆಸರಿನಿಂದ ಕರೆಯಲಾಗುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣವು …

Read More »

ಅಂತಿಮ ಅಧಿಸೂಚನೆ ಹೊರಡಿಸಿದ ಜಮೀನುಗಳನ್ನು ವಾಪಸ್ ನೀಡಲು ಅವಕಾಶವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂತಿಮ ಅಧಿಸೂಚನೆ ಹೊರಡಿಸಿದ ಜಮೀನುಗಳನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಮಾತುಕತೆ ನಡೆಸಿದ ಸಿಎಂ, ಭೂಸ್ವಾಧೀನಕ್ಕಾಗಿ ಅಂತಿಮ ಅಧಿಸೂಚನೆ ಹೊರಡಿಸಿದ ಜಮೀನುಗಳನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ವ್ಯಾಪ್ತಿಯಲ್ಲಿ 1777 ಎಕರೆ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿದ್ದು, 430 ಎಕರೆಗೆ ಅಂತಿಮ …

Read More »

ರಾಜ್ಯದಲ್ಲಿ ಸರ್ಕಾರ ರೈತರ ಪರವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಭೆ ನಡೆಸಿದರು. ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿ ವತಿಯಿಂದ 13 ಹಳ್ಳಿಗಳ ವ್ಯಾಪ್ತಿಯಲ್ಲಿ 1,777 ಎಕರೆ ಜಮೀನು ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದುಈಗಾಗಲೇ ಮೂರು ಬಾರಿ ಭೂಸ್ವಾಧೀನ ಪ್ರಕ್ರಿಯೆ ನಡೆಸಿರುವುದರಿಂದ ಹೊಸದಾಗಿ ಭೂಸ್ವಾಧೀನ ನಡೆಸಬಾರದು. ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎನ್ನುವ ರೈತರ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ 430 …

Read More »

ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಿ: ರೈತರ ನಿಯೋಗದಿಂದ ಸಿಎಂ ಸಿದ್ದರಾಮಯ್ಯರಿಗೆ ಮನವಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಭೆ ನಡೆಸಿದರು. ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿ ವತಿಯಿಂದ 13 ಹಳ್ಳಿಗಳ ವ್ಯಾಪ್ತಿಯಲ್ಲಿ 1777 ಎಕ್ರೆ ಜಮೀನು ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು, ಈಗಾಗಲೇ ಮೂರು ಬಾರಿ ಭೂಸ್ವಾಧೀನ ಪ್ರಕ್ರಿಯೆ ನಡೆಸಿರುವುದರಿಂದ ಹೊಸದಾಗಿ ಭೂಸ್ವಾಧೀನ ನಡೆಸಬಾರದು. ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎಂದು ರೈತರ ನಿಯೋಗ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. …

Read More »

ಸಿಎಂ ಸಿದ್ದರಾಮಯ್ಯ ನೇತೃತ್ವದ ಸಮಿತಿ ಸಭೆಯಲ್ಲಿ ₹9,823 ಕೋಟಿ ಹೂಡಿಕೆ ಯೋಜನೆಗಳಿಗೆ ಒಪ್ಪಿಗೆ: 5,605 ಉದ್ಯೋಗ ಸೃಷ್ಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 64ನೇ ಸಭೆಯು ಒಟ್ಟು ₹9,823.31 ಕೋಟಿ ಬಂಡವಾಳ ಹೂಡಿಕೆಯ ಒಂಬತ್ತು ಯೋಜನೆಗಳಿಗೆ ಹಸಿರು ನಿಶಾನೆ ತೋರಿಸಿದೆ. ಇದರಿಂದ 5,605 ಉದ್ಯೋಗಗಳು ಸೃಷ್ಟಿಯಾಗಲಿವೆ. ಇಂದು ಕೃಷ್ಣಾ ದಲ್ಲಿ ನಡೆದ ಸಭೆಯಲ್ಲಿ ಬೃಹತ್ ಮತ್ತು ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಕೃಷಿ ಸಚಿವ ಚೆಲುವರಾಯಸ್ವಾಮಿ, ಸರಕಾರದ ಮುಖ್ಯ …

Read More »

ಬೆಂಗಳೂರಿನಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸುವ ಬೆದರಿಕೆ: ವೈದ್ಯರೊಬ್ಬರಿಂದ 20 ಸಾವಿರ ಲಂಚ ಪಡೆದ ಬೆಸ್ಕಾಂ ಅಧಿಕಾರಿಗಳು

ಬೆಂಗಳೂರು: ಮನೆಯಿಂದಲೇ ಕ್ಲಿನಿಕ್ ನಡೆಸುತ್ತಿದ್ದ ಪರ್ಯಾಯ ಔಷಧ ವೈದ್ಯರೊಬ್ಬರಿಂದ ಹೊರಮಾವಿನ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಅಧಿಕಾರಿಗಳು, ಪವರ್ ಕನೆಕ್ಷನ್ ಸ್ಥಗಿತಗೊಳಿಸುವುದಾಗಿ ಬೆದರಿಕೆ ಹಾಕಿ 20,000 ರೂ. ಲಂಚ ಪಡೆದಿರುವುದು ಬೆಳಕಿಗೆ ಬಂದಿದೆ. ಸಹಾಯಕ ಎಂಜಿನಿಯರ್ (ಎಇ) ವೀರೇಶ್ ಮತ್ತು ಅವರ ಸಹವರ್ತಿ ಸುಬ್ರಮಣಿಯನ್, ಮೀಟರ್ ರೀಡರ್, ಹಣ ನೀಡದಿದ್ದರೇ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸುವುದಾಗಿ ಬೆದರಿಕೆ ಹಾಕಿದರು. ಇದಾದ ನಂತರ ಮತ್ತೊಬ್ಬ ಮೀಟರ್ ರೀಡರ್ ಸುದರ್ಶನ್ ವಿ ಕಳೆದ …

Read More »

ನಾಡಿನ ಪ್ರತಿ ಅನ್ನದಾತನಿಗೂ ರಾಷ್ಟ್ರೀಯ ರೈತ ದಿನದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೋಟ್ಯಂತರ ಜನರ ಹಸಿವು ನೀಗಿಸುತ್ತಿರುವ ಈ ನಾಡಿನ ಪ್ರತಿ ಅನ್ನದಾತನಿಗೂ ರಾಷ್ಟ್ರೀಯ ರೈತ ದಿನದ ಶುಭಾಶಯಗಳು ಎಂದು ಸಿಎಂ ಸಿದ್ದರಾಮಯ್ಯ ಶುಭ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕೃಷಿ ದೇಶದ ಬೆನ್ನೆಲುಬು. ಕೃಷಿಯನ್ನು ಕೇವಲ ವೃತ್ತಿಯಾಗಿಸಿಕೊಳ್ಳದೆ, ಬದುಕಿನ ಮಾರ್ಗವಾಗಿಸಿಕೊಂಡು ಕೋಟ್ಯಂತರ ಜನರ ಹಸಿವು ನೀಗಿಸುತ್ತಿರುವ ಈ ನಾಡಿನ ಪ್ರತಿ ಅನ್ನದಾತನಿಗೂ ರಾಷ್ಟ್ರೀಯ ರೈತ ದಿನದ ಶುಭಾಶಯಗಳು ಎಂದು ಹೇಳಿದ್ದಾರೆ. ನಮ್ಮ ಸರ್ಕಾರದ ರೈತಪರವಾದ …

Read More »