Breaking News

ಬೆಂಗಳೂರು

ಸಂತಶ್ರೇಷ್ಠ ಕನಕದಾಸರ ಜಯಂತಿ: ರಾಜ್ಯದ ಜನತೆಗೆ ಸಿಎಂ ಶುಭಾಶಯ

ಬೆಂಗಳೂರು : ಸಂತಶ್ರೇಷ್ಠ ಕನಕದಾಸರ 537 ನೇ ಜಯಂತಿ ಮಹೋತ್ಸವವನ್ನ ಸರ್ಕಾರದ ವತಿಯಿಂದ ಎಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನಕ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ದಾಸಶ್ರೇಷ್ಠ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ರಾಜ್ಯದ ಜನತೆಗೆ ಕನಕ ಜಯಂತಿಯ ಶುಭಾಶಯಗಳನ್ನು ಕೋರಿದರು. ಸಚಿವರಾದ ಹೆಚ್.ಸಿ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿ ಹಲವು …

Read More »

ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ: 1,016 ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿ ಮಾಡಿ ಆದೇಶ

ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸಂಬಂಧಿಸಿ 1,016 ಅಭ್ಯರ್ಥಿಗಳಿಗೆ ನ.16ರಂದು ಆನ್‍ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ನಡೆಸಲಾಗಿದ್ದು, ಅದರಂತೆ ಸ್ಥಳ ಆಯ್ಕೆ ಮಾಡಿಕೊಂಡವರಿಗೆ ಸ್ಥಳ ನಿಯುಕ್ತಿ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ರವಿವಾರ ಪ್ರಕಟನೆ ಹೊರಡಿಸಿರುವ ಅವರು, ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಮಂಜೂರಾದ ಹುದ್ದೆಗಳಲ್ಲಿ ಒಟ್ಟು 1,654 ಹುದ್ದೆಗಳು ಖಾಲಿ …

Read More »

ಪಿಡಿಒ ನೇಮಕಾತಿ ಪರೀಕ್ಷೆಯಲ್ಲಿ ಗೊಂದಲ: ವಿಚಾರಣೆಗೆ ಆದೇಶ

ಬೆಂಗಳೂರು: ಕಲ್ಯಾಣ ಕರ್ನಾಟಕ ವೃಂದದ 97 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ ಗೊಂದಲ ಉಂಟಾಗಿದೆ. ಪಿಡಿಒ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ರಾಯಚೂರು, ಕಲಬುರಗಿಯಲ್ಲಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಹಲವರು ಪರೀಕ್ಷೆಯನ್ನು ಬಹಿಷ್ಕರಿಸಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರಿನ ಪರೀಕ್ಷಾ ಕೇಂದ್ರದಲ್ಲಿ ಅನೇಕ ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆ ತಲುಪದಿರುವ ಬಗ್ಗೆ ವಿಚಾರಣೆಗೆ ಆದೇಶಿಸಲಾಗಿದೆ. ಅಭ್ಯರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪ್ರಶ್ನೆ ಪತ್ರಿಕೆ ವಿತರಿಸಿಲ್ಲ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ …

Read More »

ಯಾವುದೇ ಹೊಸ ನೇಮಕಾತಿ ಹೊರಡಿಸದಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಕಲ್ಪಿಸುವ ಬಗ್ಗೆ ಮುಂದಿನ ತೀರ್ಮಾನವಾಗುವವರೆಗೆ ಯಾವುದೇ ಹೊಸ ನೇಮಕಾತಿ ಹೊರಡಿಸದಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(DPAR) ಸೂಚನೆ ನೀಡಿದೆ. ಅಕ್ಟೋಬರ್ 28ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿ ಬಗ್ಗೆ ವರದಿ ನೀಡಲು ಏಕ ಸದಸ್ಯ ಆಯೋಗವನ್ನು ಸರ್ಕಾರ ರಚಿಸಿದೆ. ಮೂರು ತಿಂಗಳಲ್ಲಿ ವರದಿ ನೀಡುವಂತೆ ಆಯೋಗದ ಮುಖ್ಯಸ್ಥರಿಗೆ ಸೂಚಿಸಿದೆ. ಈ ವರದಿಯ …

Read More »

ಅನ್ನಭಾಗ್ಯ ಯೋಜನೆಯಡಿ ಹಣದ ಬದಲು ಆಹಾರ ಕಿಟ್ ವಿತರಣೆಗೆ ಚಿಂತನೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ರೇಷನ್ ನಲ್ಲಿ ಹಣ ನೀಡುವ ಬದಲು ಬೇಳೆ, ಅಡುಗೆ ಎಣ್ಣೆ, ಸಕ್ಕರೆ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಡಿತರ ಚೀಟಿದಾರರಿಗೆ ರೇಷನ್ ನಲ್ಲಿ ಹಣ ನೀಡುವ ಬದಲು ಅಡುಗೆ ಎಣ್ಣೆ, ಸಕ್ಕರೆ, ಬೇಳೆ ನೀಡುವ ಚಿಂತನೆ ನಡೆಸಿದ್ದು, ಪಡಿತರ ಚೀಟಿದಾರರಿಗೆ ಬಾಕಿ ಇರುವ ಹಣವನ್ನು ವಾರದಲ್ಲಿ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಕೇಂದ್ರ ಸರ್ಕಾರದ …

Read More »

ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿ ಡಿ.15 ರವರೆಗೆ ವಿಸ್ತರಣೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು: ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿಯನ್ನು ಡಿಸೆಂಬರ್ 18 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಈ ಮೊದಲು ಖರೀದಿ ಅವಧಿಯನ್ನು ನವೆಂಬರ್ 21ರವರೆಗೆ ನಿಗದಿಪಡಿಸಲಾಗಿತ್ತು. ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಡಿಸೆಂಬರ್ 18ರವರೆಗೆ ಖರೀದಿ ಮಾಡಲು ಅನುಮತಿ ನೀಡಿದೆ. ಪ್ರತಿ ಕ್ವಿಂಟಾಲ್ ಗೆ ರೂ 8,682 ನಿಗದಿಪಡಿಸಲಾಗಿದ್ದು, ಇದುವರೆಗೆ 20450 ಮೆಟ್ರಿಕ್ ಟನ್ ಖರೀದಿ ಮಾಡಲಾಗಿದೆ. ಬೆಳಗಾವಿ, …

Read More »

ಬಗರ್ ಹುಕುಂ ಅರ್ಜಿಗಳನ್ನು ನ.25 ರೊಳಗೆ ತೆರವುಗೊಳಿಸಲು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

ಬೆಂಗಳೂರು: ಬಗರ್ ಹುಕುಂ ಸಂಬಂಧಿತ ಅರ್ಜಿಗಳನ್ನು ನ.25ರೊಳಗೆ ತೆರವುಗೊಳಿಸಬೇಕು, ಆದೇಶ ಪಾಲನೆಯಾಗದಿದ್ದಲ್ಲಿ ಎಲ್ಲರಿಗೂ ಶೋಕಾಸ್ ನೋಟಿಸ್ ನೀಡಲಾಗುವುದು ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಖಡಕ್ ಸೂಚನೆ ನೀಡಿದ್ದಾರೆ. ಬಗರ್ ಹುಕುಂ ಅರ್ಜಿ ವಿಲೇವಾರಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ತಹಶೀಲ್ದಾರ್‌ಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಬಗರ್ ಹುಕುಂ ಬಡವರ ಕೆಲಸ, ಬಡ ರೈತರಿಗೆ ಶೀಘ್ರ ಭೂ ಮಂಜೂರು ಮಾಡಬೇಕು ಎಂದು ರೈತಪರ ಸಂಘಟನೆಗಳು …

Read More »

ಬೆಂಬಲ ಬೆಲೆ ಯೋಜನೆಯಡಿ ಶೀಘ್ರ ಭತ್ತ ಖರೀದಿ ಕೇಂದ್ರ ಸ್ಥಾಪನೆಗೆ ತೀರ್ಮಾನ: ಸಚಿವ ಬೋಸರಾಜು

ಬೆಂಗಳೂರು: ಬೆಂಬಲ ಬೆಲೆಯೊಂದಿಗೆ ಭತ್ತ ಖರೀದಿ ಕೇಂದ್ರ ಪ್ರಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗಿದೆ ಭತ್ತ ಖರೀದಿ ಕೇಂದ್ರವನ್ನು ಪ್ರಾರಂಭಿಸುವ ಭರವಸೆಯನ್ನು ಸಿಎಂ ನೀಡಿದ್ದಾರೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಜನವರಿ 01- 2025 ರಂದು ಕರ್ನಾಟಕದಲ್ಲಿ ಭತ್ತ ಖರೀದಿ ಕೇಂದ್ರ ಪ್ರಾರಂಭಿಸಲು ದಿನಾಂಕ ನಿಗದಿ ಮಾಡಲಾಗಿದೆ. ಆದರೆ ತುಂಗಭದ್ರಾ ಅಚ್ಚುಕಟ್ಟು …

Read More »

ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ 480 ಸಮುದಾಯ ಶೌಚಾಲಯಗಳ ನಿರ್ಮಾಣ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ 480 ಸಮುದಾಯ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದ್ದು 2025ರ ಜನವರಿ ಅಂತ್ಯದೊಳಗೆ ಶೌಚಾಲಯಗಳ ನಿರ್ಮಾಣವನ್ನು ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಸಜ್ಜುಗೊಳಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ವಿಮರ್ಶಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಿರ್ಮಾಣದ ನಂತರ ನಿರ್ವಹಣೆಯ ಜವಾಬ್ದಾರಿಯನ್ನು ನಿರ್ಮಾಣ ಸಂಸ್ಥೆಗೆ ಒಪ್ಪಿಸಲಾಗುತ್ತಿದ್ದು ಇದು ವಿನೂತನ ಪ್ರಯೋಗವಾಗಿದೆ, ನಿರ್ಮಾಣದ ನಂತರ ನಿರ್ವಹಣೆಯಿಲ್ಲದೆ ಸೊರಗಬಾರದು ಎಂಬ ಉದ್ದೇಶದಿಂದ ಈ …

Read More »

ಶೀಘ್ರದಲ್ಲೇ 10 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಕೆಲ ಮೂಲಭೂತ ಸೌಕರ್ಯಗಳ ಅಭಾವಿರುವುದು ನಿಜ, ಅದನ್ನು ಹಂತ-ಹಂತವಾಗಿ ಬಗೆಹರಿಸಲಾಗುವುದು. ರಾಜ್ಯದ ಸರ್ಕಾರ ಶಾಲೆಗಳಲ್ಲಿ ಶಿಕ್ಷಕರ ಅಭಾವವಿದ್ದು, ಈ ಸಂಬಂಧ 13,000 ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದ್ದು, ಇನ್ನೂ 10,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದ್ದೇವೆ ಎಂದು ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದರು. ಶಾಲಾ ಮಕ್ಕಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಧು ಬಂಗಾರಪ್ಪ ಅವರು ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಅತ್ಯುತ್ತಮ …

Read More »