Breaking News

ಬೆಂಗಳೂರು

ಬೆಂಗಳೂರಿನ ಹೆಬ್ಬಾಳದಲ್ಲಿ ಸಾವಯವ ಮತ್ತು ಸಿರಿಧಾನ್ಯ ಹಬ್ ಸ್ಥಾಪನೆ: ಸಚಿವ ಎಚ್.ಕೆ.ಪಾಟೀಲ್

ಬೆಂಗಳೂರು : ರಾಜ್ಯದ ಸಾವಯವ ಮತ್ತು ಸಿರಿಧಾನ್ಯ ಉತ್ಪಾದಕರಿಗೆ, ಮಾರುಕಟ್ಟೆದಾರರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗುವಂತೆ ಮಾರುಕಟ್ಟೆ ಸಂಪರ್ಕವನ್ನು ವಿಸ್ತರಿಸಲು ಮತ್ತು ಆರೋಗ್ಯವನ್ನು ಸುಧಾರಿಸಲು ಸಾವಯವ ಮತ್ತು ಸಿರಿಧಾನ್ಯ ಹಬ್ ಅನ್ನು 20 ಕೋಟಿ ರೂ.ಅನುದಾನದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹೆಬ್ಬಾಳದಲ್ಲಿ …

Read More »

ರಾಜ್ಯ ಸರ್ಕಾರ: ನೇರ ನಗದು ವರ್ಗಾವಣೆ ಮೂಲಕ ರೈತರಿಗೆ 2100 ಕೋಟಿ ರೂ. ಬೆಳೆ ವಿಮೆ ಪಾವತಿ

ಬೆಂಗಳೂರು: ನೇರ ನಗದು ವರ್ಗಾವಣೆ ಮೂಲಕ ರಾಜ್ಯದ ರೈತರಿಗೆ 2100 ಕೋಟಿ ರೂ ಬೆಳೆ ವಿಮೆ ಪಾವತಿ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಜಿಕೆವಿಕೆ ಆವರಣದಲ್ಲಿ ಬೆಂಗಳೂರು ಕೃಷಿ ವಿವಿ ವತಿಯಿಂದ ಏರ್ಪಡಿಸಲಾಗಿದ್ದ ಕೃಷಿ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕ ತಂತ್ರಜ್ಞಾನ ಜೊತೆಗೆ ಸಮಗ್ರ ಬೇಸಾಯ ಅಳವಡಿಕೆಯಿಂದ ಸುಸ್ಥಿರ ಹಾಗೂ ಲಾಭದಾಯಕ ಕೃಷಿಗೆ ದಾರಿಯಾಗಿದೆ. ರೈತರು ಈ ನಿಟ್ಟಿನಲ್ಲಿ ಗಮನ ಹರಿಸುವ ಅಗತ್ಯವಿದೆ ಎಂದು ಹೇಳಿದರು, ಈ …

Read More »

ಪಿಎಂ ಆವಾಸ್ ಯೋಜನೆಯಡಿ ಅನುದಾನ ಹೆಚ್ಚಿಸುವಂತೆ ಒತ್ತಾಯಿಸಿ ಪ್ರಧಾನಿಗೆ ಪತ್ರ

ಬೆಂಗಳೂರು: ಪ್ರಧಾನ ಮಂತ್ರಿ ಆವಾಸ್‌ ಯೋಜನೆ (ನಗರ) 2.0 ಅಡಿಯಲ್ಲಿ ಕೇಂದ್ರ ಸರ್ಕಾರದ ಪಾಲಿನ ಅನುದಾನವನ್ನು ಹೆಚ್ಚಿಸುವಂತೆ ಒತ್ತಾಯಿಸಿ ಪ್ರಧಾನಿಯವರಿಗೆ ಪತ್ರ ಬರೆಯಲು ಗುರುವಾರ ನಡೆದ ಸಂಪುಟ ಸಭೆ ನಿರ್ಧರಿಸಿದೆ. ಸಭೆಯ ಬಳಿಕ ವಿವರ ನೀಡಿದ ಕಾನೂನು ಸಚಿವ ಎಚ್.ಕೆ. ಪಾಟೀಲ, ಪಿ.ಎಂ. ಆವಾಸ್‌ ಯೋಜನೆಯ ಪ್ರತಿ ಫಲಾನುಭವಿಗೆ ಕೇಂದ್ರ ಸರ್ಕಾರವು ₹ 1.5 ಲಕ್ಷ ಅನುದಾನವನ್ನು ಮಾತ್ರ ಒದಗಿಸುತ್ತಿದೆ. ಇದರಿಂದ ಯೋಜನೆ ಅನುಷ್ಠಾನ ಕಷ್ಟವಾಗುತ್ತಿದೆ. ಕೇಂದ್ರದ ಪಾಲಿನ ಅನುದಾನ …

Read More »

ನಮ್ಮ ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಭಿವೃದ್ಧಿಗೆ ಹಣದ ಕೊರತೆ ಇಲ್ಲ, ನಮ್ಮ ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಮ್ಮ ರಾಜ್ಯದ ಬಜೆಟ್ 3 ಲಕ್ಷದ 71 ಸಾವಿರ ಕೋಟಿ ಇದ್ದು, ಇದರಲ್ಲಿ ಪಂಚ ಗ್ಯಾರೆಂಟಿ ಯೋಜನೆಗಳಿಗೆ 55 ಸಾವಿರ ಕೋಟಿಯನ್ನು ಬಳಕೆ ಮಾಡಲಾಗುತ್ತಿದೆ. ಉಳಿದ ಹಣವನ್ನು ಯೋಜನಾ, ಯೋಜನೇತರ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಕೆ ಮಾಡಲಾಗುತ್ತಿದೆ ಎಂದರು. ನಾವು 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದರೂ ಸಹ ಕರ್ನಾಟಕದ …

Read More »

ಒಳ ಮೀಸಲಾತಿ ಕುರಿತು ನ್ಯಾ.ನಾಗಮೋಹನ್ ದಾಸ್ ಆಯೋಗ ರಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಬಗ್ಗೆ ವರದಿ‌ ಸಲ್ಲಿಸಲು ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅಧ್ಯಕ್ಷತೆಯ ಏಕಸದಸ್ಯ ಆಯೋಗ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಒಳ ಮೀಸಲಾತಿ ಜಾರಿ ಮಾಡುವ ನಿಟ್ಟಿನಲ್ಲಿ ಅಗತ್ಯ ದತ್ತಾಂಶವನ್ನು ಎಲ್ಲಿಂದ ಸಂಗ್ರಹ ಮಾಡಬೇಕು ಎಂಬುವುದನ್ನು ಪರಿಶೀಲನೆ ಮಾಡಲು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚನೆ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು. …

Read More »

ರಾಜ್ಯದಲ್ಲಿ ಎಲ್ಲಾ ಆಸ್ತಿಗಳ ನೋಂದಣಿಗೆ ಇ-ಖಾತಾ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ವಸತಿ, ವಾಣಿಜ್ಯ ಮತ್ತು ಕೃಷಿ ಭೂಮಿ ಸೇರಿದಂತೆ ಎಲ್ಲಾ ರೀತಿಯ ಆಸ್ತಿಗಳ ನೋಂದಣಿಗೆ ಇ-ಖಾತಾಗಳನ್ನು ರಾಜ್ಯ ಸರ್ಕಾರ ಕಡ್ಡಾಯ ಮಾಡಿದೆ. ಸ್ಥಿರಾಸ್ತಿಗಳ ನೋಂದಣಿಗಾಗಿ ಗ್ರಾಮಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತೆಗಳನ್ನು ವಿತರಿಸುವ ಸಂಬಂಧ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ಸಭೆ ನಡೆಯಿತು. ಈ ವೇಳೆ ಗ್ರಾಮ ಪಂಚಾಯಿತಿಗಳು …

Read More »

ಗ್ರಾಮೀಣ ಪ್ರದೇಶಗಳ ಇ-ಸ್ವತ್ತು ಮಂಜೂರಾತಿ ಪ್ರಕ್ರಿಯೆ ಸರಳೀಕರಣಕ್ಕೆ ಕಾರ್ಯಪಡೆ ರಚನೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳ ಇ-ಸ್ವತ್ತು ಮಂಜೂರಾತಿ ಪ್ರಕ್ರಿಯೆಯನ್ನು ಸರಳೀಕರಣ ಹಾಗೂ ಸಬಲೀಕರಣಗೊಳಿಸುವ ಸಲುವಾಗಿ ಕಂದಾಯ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವ ಸಲುವಾಗಿ ಕಾರ್ಯಪಡೆಯೊಂದನ್ನು ರಚಿಸುವದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಇ-ಖಾತ ಸಂಬಂಧದಲ್ಲಿ ನಾಳೆ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಇಂದು ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಸುದೀರ್ಘವಾಗಿ …

Read More »

ರಾಷ್ಟ್ರೀಯ ಹೆದ್ದಾರಿ 48 ಕಾಮಗಾರಿ ವೀಕ್ಷಿಸಿದ ಕೇಂದ್ರ ಸಚಿವ ಸೋಮಣ್ಣ

ಬೆಂಗಳೂರು: ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ ಸೋಮಣ್ಣ ಅವರು ಇಂದು ನೆಲಮಂಗಲದಿಂದ ತುಮಕೂರುವರೆಗಿನ ರಾಷ್ಟ್ರೀಯ ಹೆದ್ದಾರಿ 48 ಕಾಮಗಾರಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಬೇಗೂರು, ಕುಲುವನಹಳ್ಳಿ, ಹನುಮಂತಪುರ, ಹಳೆನಿಜಗಲ್ ಮತ್ತು ಬಿಲ್ಲಿನಕೋಟೆ ಗ್ರಾಮಗಳ ಜನರನ್ನು ಭೇಟಿಯಾಗಿ ಅವರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಈ ರಾಷ್ಟ್ರೀಯ ಹೆದ್ದಾರಿ 48 ನ್ನು ದಶಪಥಗಳಲ್ಲಿ ವಿಸ್ತರಿಸುತ್ತಿರುವುದರಿಂದ ಭೂ ಸ್ವಾಧೀನ ಪ್ರಕ್ರಿಯೆ ಜಾರಿಯಲ್ಲಿದೆ. ಆದರೆ ಹೆದ್ದಾರಿ ಕಾಮಗಾರಿ ವಿಳಂಬಗೊಳ್ಳುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ …

Read More »

ರೇಷ್ಮೆ ಬೆಳೆಗಾರರಿಗೆ ಸಿಹಿಸುದ್ದಿ: ಪ್ರೋತ್ಸಾಹಧನ 10 ರಿಂದ 30 ರೂ.ಗೆ ಹೆಚ್ಚಿಸಿ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ರೇಷ್ಮೆ ಬೆಳೆಗಾರರಿಗೆ ಸಿಹಿಸುದ್ದಿ ನೀಡಿದ್ದು, ಬೈವೋಲೈನ್ ರೇಷ್ಮೆ ಗೂಡುಗಳಿಗೆ ನೀಡುತ್ತಿರುವ ಪ್ರೋತ್ಸಾಹಧನ ಪ್ರತಿ ಕಿಲೋಗೆ 10 ರಿಂದ ₹30 ಕ್ಕೆ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ರೇಷ್ಮೆ ಕೃಷಿ ಮತ್ತು ರೇಷ್ಮೆ ನೂಲು ಬಿಚ್ಚಾಣಿಕೆ ಚಟುವಟಿಕೆಗಳಲ್ಲಿ ಪ್ರತಿ ವರ್ಷ ಅಂದಾಜು 15.34 ಲಕ್ಷ ಜನರಿಗೆ ಉದ್ಯೋಗ ಭಾಗ್ಯ ಸಿಕ್ಕಿದೆ. ₹200 ಕೋಟಿ ವೆಚ್ಚದಲ್ಲಿ ಶಿಡ್ಲಘಟ್ಟದಲ್ಲಿ ಎರಡು ಹಂತದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ …

Read More »

ಸಿವಿಲ್ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ: ಉಪಚುನಾವಣೆ ಮತಕ್ಕೆ ಕುತ್ತು ಬರುವ ಭೀತಿಯಲ್ಲಿ ಸರ್ಕಾರ ಯೂ ಟರ್ನ್

ಬೆಂಗಳೂರು: ಸಿವಿಲ್ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮ್ ಸಮುದಾಯದವರಿಗೆ ಶೇ.4 ರಷ್ಟು ಮೀಸಲಾತಿ ನೀಡುವ ಪ್ರಸ್ತಾವನೆಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿರುವ ಬೆನ್ನಲ್ಲೇ ಸರ್ಕಾರ ಸ್ಪಷ್ಟನೆ ನೀಡಿದೆ. ಸಿಎಂ ಸಿದ್ದರಾಮಯ್ಯ ಪ್ರಸ್ತಾವನೆಗೆ ಅನುಮೋದನೆ ನೀಡಿದ ವಿಚಾರವಾಗಿ ಬಿಜೆಪಿ ಈಗಾಗಲೇ ಆಕ್ರೋಶ ವ್ಯಕ್ತಪಡಿಸಿದೆ. ಈ ವಿಚಾರ ಸಾರ್ವಜನಿಕವಾಗಿ ಚರ್ಚೆಗೆ ಕಾರಣವಾಗಬಹುದು ಮತ್ತು ನಾಳೆ ನಡೆಯಲಿರುವ ಉಪಚುನಾವಣೆ ಮೇಲೆ ಪರಿಣಾಮ ಬೀರಬಹುದು ಎಂದು ಅರಿತ ಸರ್ಕಾರ ಯೂ ಟರ್ನ್ ಹೊಡೆದಿದೆ. ಉಪಚುನಾವಣೆಗೆ ಒಂದು ದಿನ …

Read More »