BigTv News
November 12, 2024
Breaking News, ಬೆಂಗಳೂರು
ಬೆಂಗಳೂರು : ಕರ್ನಾಟಕದಲ್ಲಿ ಭಾರತದ ಮೊದಲ ಜಿಸಿಸಿ ನೀತಿಯನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ, ಇದು ಈ ವಲಯದಲ್ಲಿ ಜಾಗತಿಕ ಪ್ರತಿಭೆ ಮತ್ತು ಹೂಡಿಕೆಗಳಿಗೆ ಕರ್ನಾಟಕವನ್ನು ಪ್ರಶಸ್ತ ತಾಣವಾಗಿಸುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಬೆಂಗಳೂರಿನಲ್ಲಿ ಝೈಸ್ ಗ್ಲೋಬಲ್ ಕೆಪಬಿಲಿಟೀಸ್ ಸೆಂಟರ್ ಉದ್ಘಾಟನೆ ಮಾಡಲಾಗಿದ್ದು, ಇದರಿಂದ 600 ಕ್ಕೂ ಹೆಚ್ಚು ವೃತ್ತಿಪರರು ಜಾಗತಿಕವಾಗಿ ಹೊಸ ಆವಿಷ್ಕಾರಗಳಿಗೆ ಕೊಡುಗೆ ನೀಡಲಿದ್ದಾರೆ. ನಮ್ಮ …
Read More »
BigTv News
November 11, 2024
Breaking News, ಬೆಂಗಳೂರು
ಬೆಂಗಳೂರು : ನವೆಂಬರ್ 14 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಅಪರ ಕಾರ್ಯದರ್ಶಿ ಇವರು ಸುತ್ತೋಲೆ ಹೊರಡಿಸಿದ್ದು, ದಿನಾಂಕ, 14.11.2024, ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 23 ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದಿದ್ದಾರೆ. ವಿಧಾನಸಭೆ ಉಪ ಚುನಾವಣೆ, ವಿವಿಧ …
Read More »
BigTv News
November 11, 2024
Breaking News, ಬೆಂಗಳೂರು
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಯ ಕೊಂದುಕೊರತೆ ಕುರಿತಾಗಿ ಚರ್ಚೆ ನಡೆಸಲು ಪ್ರತಿ ತಿಂಗಳ ಮೂರನೇ ಶನಿವಾರ ಬೆಂಗಳೂರಿನಲ್ಲಿರುವ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಸಭೆ ನಡೆಸಲಾಗುವುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಗ್ರಾಮ ಪಂಚಾಯಿತಿ ನೌಕರರ ವಿವಿಧ ಸಂಘಟನೆಗಳ ಜಂಟಿ ಸಭೆಯಲ್ಲಿ ನೀಡಿದ್ದ ಭರವಸೆಯಂತೆ ಪ್ರತಿ ತಿಂಗಳ ಮೂರನೇ ಶನಿವಾರ ಕೊಂದು ಕೊರತೆ ಸಭೆ ನಡೆಸಲು …
Read More »
BigTv News
November 10, 2024
Breaking News, ಬೆಂಗಳೂರು
ಬೆಂಗಳೂರು: ಮಾರಾಟದಲ್ಲಿ ಹೊಸ ಪ್ರಯತ್ನ, ಸಿಬ್ಬಂದಿ ಪರಿಶ್ರಮ, ದಸರಾ, ದೀಪಾವಳಿ ಹಬ್ಬಗಳ ಪರಿಣಾಮವಾಗಿ ಅಕ್ಟೋಬರ್ ತಿಂಗಳೊಂದರಲ್ಲೇ ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್) ನಂದಿನಿ ಬ್ರ್ಯಾಂಡ್‌ನ ಸಿಹಿ ಉತ್ಪನ್ನಗಳು ದಾಖಲೆ ಪ್ರಮಾಣದಲ್ಲಿ ಮಾರಾಟವಾಗಿವೆ. ಈ ವರ್ಷಾರಂಭದಲ್ಲಿ ಯುಗಾದಿ ಮತ್ತು ರಂಜಾನ್ ಹಬ್ಬದ ಸಮಯದಲ್ಲಿ, ಕೆಎಂಎಫ್ 16.5 ಲಕ್ಷ ಲೀಟರ್ ಮೊಸರು ಮತ್ತು 51 ಲಕ್ಷ ಲೀಟರ್ ಹಾಲನ್ನು ಮಾರಾಟ ಮಾಡಿ ದಾಖಲೆ ನಿರ್ಮಿಸಿತ್ತು. ಈಗ ದಸರಾ-ದೀಪಾವಳಿ ಸಮಯದಲ್ಲಿ ಸಿಹಿ ಉತ್ಪನ್ನಗಳೂ ದಾಖಲೆ …
Read More »
BigTv News
November 10, 2024
Breaking News, ಬೆಂಗಳೂರು
ಬೆಂಗಳೂರು: ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ (ಆರ್‌ಆರ್‌ಬಿ) ವಿಲೀನಕ್ಕೆ ಸಂಬಂಧಿಸಿದಂತೆ ರಾಜ್ಯಗಳು ತಮ್ಮ ಅಭಿಪ್ರಾಯ ತಿಳಿಸಬೇಕಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನಗರದಲ್ಲಿ ನಡೆದ ದಕ್ಷಿಣ ವಲಯದ 10 ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಒಂದು ರಾಜ್ಯ, ಒಂದು ಆರ್‌ಆರ್‌ಬಿ ಎಂಬುದು ಸರ್ಕಾರದ ತತ್ವವಾಗಿದೆ. ಹಾಗಾಗಿ, ವಿಲೀನ ಪ್ರಸ್ತಾವ ಕುರಿತು ಅಭಿಪ್ರಾಯ ಮಂಡಿಸಬೇಕಿದೆ ಎಂದು ಸೂಚಿಸಿದರು. ಗ್ರಾಮೀಣ ಪ್ರದೇಶದ ಆರ್ಥಿಕತೆ ಬೆಳವಣಿಗೆಯಲ್ಲಿ …
Read More »
BigTv News
November 10, 2024
Breaking News, ಬೆಂಗಳೂರು
ಬೆಂಗಳೂರು: ಕೃಷಿ ಸಂಬಂಧಿತ ಚಟುವಟಿಕೆಗಳಾದ ಹೈನುಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆಮುಂತಾದವು ಗಳಿಗೆ ವಿಶೇಷ ಗಮನ ಹರಿಸಿ ಹೆಚ್ಚಿನ ಸಾಲ ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿಗೆ ನಿರ್ದೇಶನ ನೀಡಿದರು. ಬೆಂಗಳೂರಿನಲ್ಲಿ ನಡೆದ ದಕ್ಷಿಣ ಭಾರತ ರಾಜ್ಯಗಳನ್ನು ಒಳಗೊಂಡ 10 ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮುದ್ರಾ, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ …
Read More »
BigTv News
November 9, 2024
Breaking News, ಬೆಂಗಳೂರು
ಬೆಂಗಳೂರು: ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಜ್ಯ ಸರ್ಕಾರ 25 ಕೋಟಿ ರೂ. ಮಂಜೂರು ಮಾಡಿದೆ. ಕಾರ್ಯಕ್ರಮ ಆಯೋಜಿಸಲು ಕೆಎಸ್‌ಎಂಸಿ ಎಂಡ್ ಎ ಸಂಸ್ಥೆಯ ಸೇವೆಯನ್ನು ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮದಡಿ ಪ್ರದತ್ತವಾದ ಅಧಿಕಾರ ಚಲಾಯಿತಿ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಲಾಗಿದೆ. ಉತ್ತಮ ಗುಣಮಟ್ಟದ ಸರಕು, ಸೇವೆ ಸಮಂಜಸ ದರದಲ್ಲಿ ಪಡೆದುಕೊಳ್ಳುವುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜವಾಬ್ದಾರಿ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಮಂಡ್ಯದ ಜನ …
Read More »
BigTv News
November 9, 2024
Breaking News, ಬೆಂಗಳೂರು
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಶನಿವಾರ) ಬೆಂಗಳೂರಿನಲ್ಲಿ ದಕ್ಷಿಣ ವಲಯದ 10 ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ (ಆರ್‌ಆರ್‌ಬಿ) ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಮತ್ತು ಪುದುಚೇರಿಯ ಕೇಂದ್ರಾಡಳಿತ ಪ್ರದೇಶಗಳ ಆರ್‌ಆರ್‌ಬಿಗಳ ಕಾರ್ಯಕ್ಷಮತೆಯನ್ನು ನಿರ್ಮಲಾ ಸೀತಾರಾಮನ್ ಪರಿಶೀಲಿಸಿದ್ದಾರೆ. ಇಂದು ನಡೆದ ಸಭೆಯಲ್ಲಿ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, ಹಣಕಾಸು ಸೇವೆಗಳ ಇಲಾಖೆ (ಡಿಎಫ್‌ಎಸ್) ಕಾರ್ಯದರ್ಶಿ, ಡಿಎಫ್‌ಎಸ್‌ನ ಹಿರಿಯ …
Read More »
BigTv News
November 9, 2024
Breaking News, ಬೆಂಗಳೂರು
ಬೆಂಗಳೂರು : ವಕ್ಫ್ ಬೋರ್ಡ್ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿಯವರು ರೈತರ ಹೆಸರನ್ನು ದುರ್ಬಳಕೆ ಮಾಡುತ್ತಿರುವುದು ಖಂಡನೀಯ ಎಂದು ಕಾಂಗ್ರೆಸ್ ವತಿಯಿಂದ ಇಂದು ಸಂಸದ ತೇಜಸ್ವಿ ಸೂರ್ಯ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಲಾಯಿತು. ನಗರದ ಕಾಂಗ್ರೆಸ್ ಭವನದ ರೇಸ್ ಕೋರ್ಸ್ ರಸ್ತೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್ ಅವರ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ಕೈನಾಯಕರು ಕಿಡಿಕಾರಿದರು. ವಕ್ಫ್ …
Read More »
BigTv News
November 9, 2024
Breaking News, ಬೆಂಗಳೂರು
ಬೆಂಗಳೂರು : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಪ್ರಕರಣಗಳನ್ನು ವಿಚಾರಣೆ ಮಾಡಬೇಕಾದರೆ ಕನಿಷ್ಠ ಒಂದು ದಿನವನ್ನೇ ಆ ಪ್ರಕರಣಗಳಿಗಾಗಿ ಮೀಸಲಿಡಬೇಕು ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಟಿಪ್ಪು ಸುಲ್ತಾನ್ ಲಕ್ಷಾಂತರ ಹಿಂದೂಗಳ ಕೊಲೆ ಮಾಡಿದ್ದಾನೆ. ಅವನು ಹರಾಮ್ಕೋರ ಎಂದು ಮೇ.1ರಂದು (2023) ಯತ್ನಾಳ್ ಚುನಾವಣೆಯ ಪ್ರಚಾರದ ಭಾಷಣದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅಂದು ಯತ್ನಾಳ್ ಧಾರವಾಡದ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದಲ್ಲಿ ಪ್ರಚಾರದಲ್ಲಿ ಈ ಮಾತನ್ನು ಆಡಿದ್ದರು. ಈ …
Read More »