BigTv News
November 5, 2024
Breaking News, ಬೆಂಗಳೂರು
ಬೆಂಗಳೂರು: ಜೀತ ಪದ್ಧತಿ ನಿಷೇಧಿಸಿ 48 ವರ್ಷಗಳು ಕಳೆದರೂ ಬೆಂಗಳೂರು ಮತ್ತು ರಾಜ್ಯದ ಇತರ 10 ಜಿಲ್ಲೆಗಳಲ್ಲಿ ಈ ಪದ್ಧತಿ ಇನ್ನೂ ಜೀವಂತವಾಗಿದೆ. ಜೀತ ಕಾರ್ಮಿಕ ಪದ್ಧತಿಯನ್ನು ಪತ್ತೆ ಮಾಡಿ ಅದನ್ನು ಕೊನೆಗಾಣಿಸಲೆಂದು ರಾಜ್ಯ ಸರ್ಕಾರ ಹೊಸದಾಗಿ 52 ಅಧಿಕಾರಿಗಳನ್ನು ನೇಮಿಸಿದ್ದು, ಜೀತ ನಿಗ್ರಹ ಅಧಿಕಾರಿಗಳು ಎಂದು ಅವರನ್ನು ಕರೆಯಲಾಗಿದೆ. ಎಲ್ಲೆಲ್ಲಿ ಜೀತ ಕಾರ್ಮಿಕ ಪದ್ಧತಿ ಇದೆ ಎಂಬುದನ್ನು ಪತ್ತೆ ಮಾಡಿ, ಅದಕ್ಕೆ ಸಾಕ್ಷ್ಯಗಳನ್ನು ಸಂಗ್ರಹಿಸಿ ಆಪಾದಿತರನ್ನು ಶಿಕ್ಷೆಗೆ ಗುರಿಪಡಿಸುವುದು …
Read More »
BigTv News
November 5, 2024
Breaking News, ಬೆಂಗಳೂರು
ಬೆಂಗಳೂರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಯನ್ನು ಗ್ರೂಪ್-ಬಿ ವೃಂದಕ್ಕೆ ಮೇಲ್ದರ್ಜೆಗೇರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಲು ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಮತ್ತು ನೌಕರರ ವೃಂದ ಸಂಘಗಳ ಬೇಡಿಕೆಗಳನ್ನು ಪರಿಶೀಲಿಸುವ ಹಿನ್ನೆಲೆಯಲ್ಲಿ ಈ ಸಭೆ ನಡೆಯಿತು. ನೌಕರರ ಬೇಡಿಕೆಗಳ ಪರಿಶೀಲನೆಗಾಗಿಯೇ ಇತ್ತೀಚೆಗೆ ಸರ್ಕಾರ …
Read More »
BigTv News
November 5, 2024
Breaking News, ಬೆಂಗಳೂರು
ಬೆಂಗಳೂರು: ಏಕಗವಾಕ್ಷಿ ಯೋಜನೆಯಡಿ ಹಸಿರು ನಿಶಾನೆ ನೀಡಲಾಗಿರುವ ಕೈಗಾರಿಕಾ ಯೋಜನೆಗಳಿಗೆ ಗರಿಷ್ಠ 100 ದಿನಗಳ ಒಳಗೆ ಅಗತ್ಯವಿರುವ ಎಲ್ಲ ಅನುಮೋದನೆಗಳನ್ನು ನೀಡಲು ಮೈಕ್ರೋಸಾಫ್ಟ್ ಕಂಪನಿಯ ನೆರವಿನಿಂದ ಉಮಾ (ಉದ್ಯೋಗ ಮಿತ್ರ ಅಸಿಸ್ಟೆಂಟ್) ಎಂಬ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ. ಇದನ್ನು ಫೆಬ್ರುವರಿ ತಿಂಗಳಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ. ಏಕಗವಾಕ್ಷಿ ಯೋಜನೆ ಜಾರಿ ಸಂಬಂಧ ಮೈಕ್ರೋಸಾಫ್ಟ್ ಸಂಸ್ಥೆಯ ಪ್ರತಿನಿಧಿಗಳು ನೀಡಿದ ಪ್ರಾತ್ಯಕ್ಷಿಕೆ …
Read More »
BigTv News
November 5, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 5 ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭ ಮಾಡಲು ಸರ್ಕಾರ ಉದ್ದೇಶಿಸಿದ್ದು, ಈ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಲು ಸಚಿವ ಶರಣ ಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿರುವ ಸದ್ಯ 22 ವೈದ್ಯ ಕಾಲೇಜುಗಳಿದ್ದು, ಕನಕಪುರ ಮತ್ತು ರಾಮನಗರ ವೈದ್ಯ ಕಾಲೇಜು ಈ ವರ್ಷ ಪ್ರಾರಂಭವಾಗುವ ನಿರೀಕ್ಷೆ ಇದೆ. ಇದಲ್ಲದೆ, ಬಾಗಲಕೋಟೆ, ತುಮಕೂರು, ಕೋಲಾರ, ದಾವಣಗೆರೆ ಮತ್ತು ಬಿಜಾಪುರದಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಎಲ್ಲಾ …
Read More »
BigTv News
November 4, 2024
Breaking News, ಬೆಂಗಳೂರು
ಬೆಂಗಳೂರು: ಹಿಂದೂ ಹೆಣ್ಣು ಮಕ್ಕಳನ್ನು ಲವ್ ಜಿಹಾದ್ ಮೂಲಕ ಮತಾಂತರ ಮಾಡಿದಂತೆ ಈಗ ಸಚಿವ ಜಮೀರ್ ಅಹಮದ್ ಖಾನ್ ಅವರು ವಕ್ಫ್ ಮೂಲಕ ಹಿಂದೂಗಳ ಭೂಮಿ ಕಬಳಿಸಲು ಕಾಂಗ್ರೆಸ್ ಲ್ಯಾಂಡ್ ಜಿಹಾದ್ ನಡೆಸುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಕೆ.ಆರ್.ಪುರಂನ ತಹಸೀಲ್ದಾರ್ ಕಚೇರಿ ಎದುರು ಪಕ್ಷದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ಲವ್ ಜಿಹಾದ್ ತುಂಬಿ ನಮ್ಮ ಮುಗ್ದ ಹೆಣ್ಣು …
Read More »
BigTv News
November 3, 2024
Breaking News, ಬೆಂಗಳೂರು
ಬೆಂಗಳೂರು: ಸೇವಾ ಮನೋಭಾವನೆಯಿಂದ ಉಚಿತವಾಗಿ ಅತ್ಯಾಧುನಿಕ ಚಿಕಿತ್ಸೆಯನ್ನು ನೀಡುತ್ತಿರುವ ಸತ್ಯಸಾಯಿ ಟ್ರಸ್ಟ್ ಜೊತೆಗೂಡಿ ರಾಯಚೂರಿನ ರಾಜೀವ್ ಗಾಂಧಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯನ್ನು ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವ ಎನ್ ಎಸ್ ಬೋಸರಾಜು ತಿಳಿಸಿದರು. ಇತ್ತೀಚೆಗೆ ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆದ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರಾದ ಸುಜಾತಾ ರಾಥೋಡ್, ರಾಯಚೂರು ಜಿಲ್ಲಾಧಿಕಾರಿಗಳಾದ ನಿತೇಶ್ ಕೆ, ಸತ್ಯಸಾಯಿ ಟ್ರಸ್ಟ್ ನ ಪದಾಧಿಕಾರಿಗಳಾದ ಗೋವಿಂದ ರೆಡ್ಡಿ ಸೇರಿದಂತೆ …
Read More »
BigTv News
November 2, 2024
Breaking News, ಬೆಂಗಳೂರು
ಬೆಂಗಳೂರು: ವಕ್ಫ್ ಮಂಡಳಿ ಆಸ್ತಿ ವಿಚಾರವಾಗಿ ರೈತರಿಗೆ ಯಾವುದೇ ನೋಟಿಸ್ ಕೊಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೊಟ್ಟಿರುವ ನೋಟಿಸ್ ವಾಪಸ್ ಪಡೆಯಲು ಸೂಚಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ವಕ್ಫ್ ಮಂಡಳಿ ಆಸ್ತಿ ವಿಚಾರ ಸದ್ಯ ಮುಗಿದು ಹೋದ ಅಧ್ಯಾಯ. ಮುಂದೆ ಯಾವ ರೀತಿ ಬೆಳವಣಿಗೆ ಆಗುತ್ತದೆಯೊ ಗೊತ್ತಿಲ್ಲ ಕಂದಾಯ ಇಲಾಖೆಯಲ್ಲಿನ ದಾಖಲಾತಿ ಹಾಗೂ …
Read More »
BigTv News
November 1, 2024
Breaking News, ಬೆಂಗಳೂರು
ಬೆಂಗಳೂರು : ರಾಜ್ಯ ಸರ್ಕಾರ ಮಹತ್ವದ ಯೋಜನೆಯನ್ನು ಪರಿಷ್ಕರಿಸುವ ವಿಷಯಕ್ಕೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿಕೆ ನೀಡಿದ್ದು ಯಾರಿಗೆ ಟಿಕೆಟ್ ತೆಗೆದುಕೊಳ್ಳುವ ಶಕ್ತಿ ಇದೆಯೋ ಅವರು ಡಿ.ಕೆ ಶಿವಕುಮಾರ್ ಅವರಿಗೆ ಹೇಳಿದ್ದಾರೆ. ಅದನ್ನು ಡಿ.ಕೆ ಶಿವಕುಮಾರ್ ಪ್ರಸ್ತಾಪ ಮಾಡಿದರು ಎಂದು ಹೇಳಿದರು. ಮುಂದುವರಿದು ಮಾತನಾಡಿದ ರಾಮಲಿಂಗರೆಡ್ಡಿ ಶಕ್ತಿ ಕಾರ್ಯಕ್ರಮ ಇನ್ನೂ 8.5 ವರ್ಷ ಇರುತ್ತದೆ. ಈ ಅವಧಿಯ 3.5 ಹಾಗೂ ಮುಂದಿನ ಅವಧಿ 5 ವರ್ಷ ಜಾರಿಯಲ್ಲಿ ಇರುತ್ತದೆ ಎಂದು …
Read More »
BigTv News
November 1, 2024
Breaking News, ಬೆಂಗಳೂರು
ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ರಾಜ್ಯದಲ್ಲಿ 2023 ರ ಜುಲೈನಿಂದ ಇಲ್ಲಿಯವರೆಗೆ 51.39 ಕೋಟಿ ಫಲಾನುಭವಿಗಳಿಗೆ ಡಿಬಿಟಿ ಮೂಲಕ 8,433 ಕೋಟಿ ರೂ. ಹಣ ವರ್ಗಾವಣೆ ಮಾಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ವತಿಯಿಂದ ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ರಾಷ್ಟ್ರ ಧ್ವಜಾರೋಹಣ …
Read More »
BigTv News
November 1, 2024
Breaking News, ಬೆಂಗಳೂರು
ಬೆಂಗಳೂರು: ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಹಲವು ಯೋಜನೆಗಳನ್ನು ಕೈಗೊಳ್ಳಲಾಗಿದೆ. ಅದೇ ರೀತಿ 2024-25ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಘಟಕಗಳ ಸಬ್ಸಿಡಿ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿ ರೈತರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಅರ್ಹ ರೈತರು ಅರ್ಜಿಯ ನಮೂನೆಗಳನ್ನ ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಪಡೆದು ಅರ್ಜಿಯನ್ನ ಸಲ್ಲಿಸಬಹುದು. ಈ ಯೋಜನೆಯನ್ನು ರೈತರ ಅವಶ್ಯಕತೆಗನುಗುಣವಾಗಿ ಅಚ್ಚು ಕಟ್ಟು ಪ್ರದೇಶವನ್ನು ಒಳಗೊಂಡಂತೆ ಅನುಷ್ಠಾನಗೊಳಿಸಲಾಗುವುದು. ಯಾವೆಲ್ಲಾ ಘಟಕಗಳಿಗೆ ಎಷ್ಟು ಸಬ್ಸಿಡಿ …
Read More »