Breaking News

ಬೆಂಗಳೂರು

ಪ್ರತಿಯೊಂದು ಅಕಾಡೆಮಿ ಮತ್ತು ಪ್ರಾಧಿಕಾರ ಚಟುವಟಿಕೆಗೆ ₹1 ಕೋಟಿ ಅನುದಾನ: ಸಚಿವ ಶಿವರಾಜ ತಂಗಡಗಿ

ಬೆಂಗಳೂರು: ಪ್ರತಿಯೊಂದು ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೂ ಚಟುವಟಿಕೆ ನಡೆಸುವ ಸಲುವಾಗಿ ₹1 ಕೋಟಿವರೆಗೂ ಅನುದಾನ ಒದಗಿಸಲಾಗುತ್ತಿದೆ. ಕಾರ್ಯಕ್ರಮದ ಕುರಿತು ಪ್ರಸ್ತಾವ ಸಲ್ಲಿಸಿದರೆ, ಅದಕ್ಕೆ ಅಗತ್ಯ ಅನುದಾನ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕರ್ನಾಟಕ ಕಲಾಶ್ರೀ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ನವೆಂಬರ್‌ 1ರಂದು ನಡೆಯಲಿರುವ …

Read More »

ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ಕೇಂದ್ರ ಸರ್ಕಾರದಿಂದ ₹3 ಲಕ್ಷ ಕೋಟಿ ರೂ. ಹಣ ಮೀಸಲು: ಕೇಂದ್ರ ಸಚಿವ ಎಚ್ಡಿಕೆ

ಬೆಂಗಳೂರು: ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಹೆಚ್ಚು ಒತ್ತು ನೀಡುತ್ತಿದ್ದು, ಕಳೆದ ಬಜೆಟ್ ಯುವಜನರಲ್ಲಿ ಕುಶಲತೆ ವೃದ್ಧಿಸುವ ನಿಟ್ಟಿನಲ್ಲಿ ₹3 ಲಕ್ಷ ಕೋಟಿಗೂ ಹೆಚ್ಚು ಹಣವನ್ನು ಮೀಸಲಿಡಲಾಗಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಪ್ರಧಾನಮಂತ್ರಿ ಉದ್ಯೋಗ ಮೇಳ (ರೋಜ್ ಗಾರ್ ಮೇಳ)ದ 2ನೇ ಹಂತದಲ್ಲಿ ದೇಶದಾದ್ಯಂತ ವಿವಿಧ ಕೇಂದ್ರ ಸರಕಾರಿ ಇಲಾಖೆಗಳಲ್ಲಿ ಉದ್ಯೋಗಕ್ಕೆ ಆಯ್ಕೆಯಾದ …

Read More »

ಪ್ರವಾಸೋದ್ಯಮ ಅಭಿವೃದ್ಧಿಗೆ 47 ಸಾವಿರ ನೇರ ಉದ್ಯೋಗ ಕಲ್ಪಿಸುವ ಗುರಿ: ಸಂಪುಟ ಒಪ್ಪಿಗೆ

ಬೆಂಗಳೂರು: ರಾಜ್ಯ ಸರಕಾರದ ಮಹತ್ವದ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, 2024-29ರ ವರೆಗೆ ಈ ನೀತಿ ಜಾರಿಯಲ್ಲಿರುತ್ತದೆ. 9 ಪ್ರಮುಖ ಕೇಂದ್ರೀಕೃತ ಪ್ರದೇಶಗಳನ್ನು ಗುರುತಿಸಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವುದಕ್ಕೆ ಯೋಜಿಸಲಾಗಿದೆ. ಕನಿಷ್ಟ 47 ಸಾವಿರ ಜನರಿಗೆ ನೇರ ಉದ್ಯೋಗ ಕಲ್ಪಿಸುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ಸಂಪುಟ ಸಭೆಯ ಬಳಿಕ ಪ್ರವಾಸೋದ್ಯಮ ಸಚಿವರೂ ಆಗಿರುವ ಎಚ್‌.ಕೆ. ಪಾಟೀಲ್‌ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, 25 ವಿಷಯಾಧಾರಿತ ಕ್ಷೇತ್ರಗಳ 44 …

Read More »

ಕಟ್ಟಡ ಕಾರ್ಮಿಕರ ವೈದ್ಯಕೀಯ ವೆಚ್ಚ ಸಹಾಯಧನ 2 ಲಕ್ಷದಿಂದ 5 ಲಕ್ಷ ರೂ.ಗೆ ಹೆಚ್ಚಳ: ಕಾರ್ಮಿಕರ ಸಭೆ ಮಂಡಳಿ ತೀರ್ಮಾನ

ಬೆಂಗಳೂರು: ಕಟ್ಟಡ ಕಾರ್ಮಿಕರು ಕ್ಯಾನ್ಸರ್, ಹೃದ್ರೋಗ ಚಿಕಿತ್ಸೆ ಪಡೆಯಲು ವೈದ್ಯಕೀಯ ವೆಚ್ಚ ಸಹಾಯಧನವನ್ನು 2 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗೆ ಹೆಚ್ಚಿಸಲು ಕಾರ್ಮಿಕ ಮಂಡಳಿ ಸಭೆ ತೀರ್ಮಾನಿಸಿತು. ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ನಡೆದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ 43ನೇ ಮಂಡಳಿ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಯಿತು. ಆಯುಷ್ಮಾನ್ ಯೋಜನೆಯ 5 ಲಕ್ಷ ರೂ.ವರೆಗಿನ ಚಿಕಿತ್ಸಾ ವೆಚ್ಚದ …

Read More »

ದೀಪಾವಳಿ ಪ್ರಯುಕ್ತ ಸಿಎಂ ಸಿದ್ದರಾಮಯ್ಯರಿಗೆ ಗೃಹ ಉತ್ಪನ್ನಗಳನ್ನು ನೀಡಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೀಪಾವಳಿ ಪ್ರಯುಕ್ತ ಸಂಜೀವಿನಿ ಯೋಜನೆಯಡಿ ತಯಾರಿಸಲಾದ ಗೃಹ ಉತ್ಪನ್ನಗಳನ್ನು ನೀಡಿದರು. ಸಂಜೀವಿನಿ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಮನೆಗಳಲ್ಲಿಯೇ ತಯಾರಿಸಿದ ಉತ್ಪನ್ನಗಳನ್ನು ಮಾರಾಟ ಮಾಡಿ ಅವರ ಜೀವನ ಮಟ್ಟ ಸುಧಾರಿಸುವ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲಾ ಪಂಚಾಯತ್ ಹಾಗೂ ಸ್ವ ಸಹಾಯ ಗುಂಪುಗಳ ಪರವಾಗಿ ಗೃಹ …

Read More »

ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆ: ಬಂದೋಬಸ್ತ್ ಗಾಗಿ 18 ಕಂಪನಿ ಕೇಂದ್ರಪಡೆಗಳ ಆಯೋಜನೆ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಂದೋಬಸ್ತ್ ಗಾಗಿ 18 ಕಂಪನಿ ಕೇಂದ್ರಪಡೆಗಳು ರಾಜ್ಯಕ್ಕೆ ಆಗಮಿಸಿವೆ. ಸಿಆರ್ಪಿಎಫ್, ಸಿಐಎಸ್‌ಎಫ್ ಹಾಗೂ ಬಿಎಸ್‌ಎಫ್ ಪಡೆಗಳು, ಮೂರೂ ಕ್ಷೇತ್ರಗಳಲ್ಲೂ ಸ್ಥಳೀಯ ಪೊಲೀಸರ ಜೊತೆ ಪಥಸಂಚಲನ ನಡೆಸಿವೆ. ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ 5 ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ 5 ಕಂಪನಿ ಕೇಂದ್ರಪಡೆಗಳನ್ನು ಸ್ಥಳೀಯ ಪೊಲೀಸರ ಜೊತೆ ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದೆ. ತೀವ್ರ ರಾಜಕೀಯ ಜಿದ್ದಾಜಿದ್ದಿನ ಕ್ಷೇತ್ರವೆಂದೇ ಹೇಳಲಾದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ …

Read More »

ನೂತನ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್

ಬೆಂಗಳೂರು: ನೂತನ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. ಸಾಹಸ, ಕೃಷಿ, ಕರಾವಳಿ, ಬೀಚ್ ಪ್ರವಾಸೋದ್ಯಮ, ಪಾರಂಪರಿಕ, ಪರಿಸರ, ಶೈಕ್ಷಣಿಕ ಪ್ರವಾಸೋದ್ಯಮ, ಒಳನಾಡು, ಸಾಹಿತ್ಯ, ಕಡಲು, ವೈದ್ಯಕಿಯ, ಗಣಿಗಾರಿಕೆ, ರಾಜಕೀಯ, ಆಧ್ಯಾತ್ಮ, ಧಾರ್ಮಿಕ, ಬುಡಕಟ್ಟು, ವಿವಾಹ ಪ್ರವಾಸೋದ್ಯಮಗಳು ಬರಲಿವೆ. ಸಮಾಜದ ಎಲ್ಲಾ ಸ್ಥರಗಳ ಬಡ, ಮಧ್ಯಮ ವರ್ಗದ ಮತ್ತು ಮೇಲ್ಮಧ್ಯಮ ವರ್ಗದ ಹಾಗೂ ಗಣ್ಯ ವರ್ಗದ ಪ್ರವಾಸಿ ಅವಶ್ಯಕತೆಗಳನ್ನು ಗಮನದಲ್ಲಿರಿಸಿಕೊಂಡು ಹೊಸ ನೀತಿಯನ್ನು ರಚಿಸಲಾಗಿದೆ. ಸಾಹಸ, ಕೃಷಿ, …

Read More »

ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಿರ್ಧಾರ

ಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸಲು ಕೊನೆಗೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೀರ್ಮಾನಿಸಿದೆ. ಇಂದು (ಅಕ್ಟೋಬರ್ 28) ನಡೆದ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿ(ಎಸ್​ಸಿ) ಒಳ ಮೀಸಲಾತಿ ಕಲ್ಪಿಸಲು ನಿರ್ಣಯಿಸಲಾಗಿದ್ದು, ನಿವೃತ್ತ ಹೈ ಕೋರ್ಟ್​ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶ ಸ್ವೀಕರಿಸಿ ಮುಂದಿನ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದೆ ಅಲ್ಲದೇ ಮೂರು ತಿಂಗಳಲ್ಲಿ ವರದಿ ಸಲ್ಲಿಕೆ ಮಾಡಲು ಆಯೋಗಕ್ಕೆ ಸೂಚನೆ ನೀಡಲಾಗಿದೆ. ಪರಿಶಿಷ್ಟ ಜಾತಿಗೆ ಒಳ …

Read More »

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: 450 ಹುದ್ದೆಗಳ ಭರ್ತಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವಂತ 450 ಪೊಲೀಸ್ ಇಲಾಖೆಯ ಹುದ್ದೆಗಳ ನೇಮಕಾತಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಭರ್ತಿಗೆ ಅನುಮೋದನೆ ನೀಡಲಾಗಿದೆ. ಈ ಮೂಲಕ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿಯನ್ನು ನೀಡಲಾಗಿದೆ. ಇಂದು ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದಂತ ಸಚಿವ ಮಹದೇವಪ್ಪ ಅವರು 22 ವಿಶೇಷ ಪೊಲೀಸ್ ಠಾಣೆಗಳ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ದೌರ್ಜನ್ಯ ಪ್ರಕರಣಗಳ ತುರ್ತು ವಿಲೇವಾರಿಗಾಗಿ ಠಾಣೆಗಳ ಸ್ಥಾಪನೆ ಮಾಡಲಾಗುತ್ತಿದೆ. …

Read More »

ಗ್ರಾಮ ಆಡಳಿತ ಅಧಿಕಾರಿ ಲಿಖಿತ ಪರೀಕ್ಷೆ: ಶೇ.80 ರಷ್ಟು ಮಂದಿ ಹಾಜರು

ಬೆಂಗಳೂರು : ಗ್ರಾಮ ಆಡಳಿತ ಅಧಿಕಾರಿಯ(ವಿಎಒ) ಒಂದು ಸಾವಿರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರವಿವಾರ ನಡೆಸಿದ ಲಿಖಿತ ಪರೀಕ್ಷೆ ಅತ್ಯಂತ ಸುಗಮವಾಗಿ ನಡೆದಿದ್ದು, ಶೇ.80ರಷ್ಟು ಮಂದಿ ಹಾಜರಾಗಿದ್ದಾರೆ. ಬೆಂಗಳೂರಿನ 88 ಕೇಂದ್ರ ಸೇರಿದಂತೆ ರಾಜ್ಯದ 1,173 ಕೇಂದ್ರಗಳಲ್ಲಿ ಯಾವುದೇ ತೊಂದರೆ ಇಲ್ಲದೆ ಪರೀಕ್ಷೆ ನಡೆದಿದೆ. ಒಟ್ಟು 4.79 ಲಕ್ಷ ಅಭ್ಯರ್ಥಿಗಳ ಪೈಕಿ 4.16 ಲಕ್ಷ ಮಂದಿ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಂಡಿದ್ದರು. ಅವರಲ್ಲಿ ಶೇ.80ರಷ್ಟು ಮಂದಿ ಪರೀಕ್ಷೆಗೆ …

Read More »