BigTv News
October 28, 2024
Breaking News, ಬೆಂಗಳೂರು
ಬೆಂಗಳೂರು: ಈ ಬಾರಿ ಮುಂಗಾರು ಮತ್ತು ಹಿಂಗಾರು ಅವಧಿಯಲ್ಲಿ ಸುರಿದ ವಾಡಿಕೆಗಿಂತ ಹೆಚ್ಚು ಮಳೆಯ ಕಾರಣ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಮಳೆಯಿಂದಾಗಿ ಮನೆಗಳು ಸಹ ಹಾನಿಯಾಗಿವೆ ಮೂರು ದಿನಗಳಲ್ಲಿ ಜಂಟಿ ಸಮೀಕ್ಷೆ ಪೂರ್ಣಗೊಳ್ಳಲಿದ್ದು, ಮುಂದಿನ 15 ದಿನಗಳಲ್ಲಿ ರೈತರ ಖಾತೆಗೆ ಬೆಳೆ ನಷ್ಟ ಪರಿಹಾರ ಜಮೆಯಾಗಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಜಗಳೂರು ತಾಲೂಕಿನ ಸಂಗೇನಹಳ್ಳಿ ಕೆರೆ ಕೋಡಿ ವೀಕ್ಷಣೆ ಮಾಡಿದರು, ಹಿರೇಮಲ್ಲನಹೊಳೆಯಲ್ಲಿ …
Read More »
BigTv News
October 27, 2024
Breaking News, ಬೆಂಗಳೂರು
ಬೆಂಗಳೂರು: ಮಹಾತಗಾಂಧೀಜಿಯವರು ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿ ಶತಮಾನೋತ್ಸವ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಅದ್ಧೂರಿ ಕಾರ್ಯ ಕ್ರಮವನ್ನು ಆಯೋಜಿಸಲು ಕಾಂಗ್ರೆಸ್ ತಯಾರಿ ನಡೆಸಿದ್ದು, ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಪಕ್ಷದ ಎಲ್ಲಾ ಶಾಸಕರು, ಸಂಸದರು, ಸಚಿವರೊಂದಿಗೆ ಮಹತ್ವದ ಸಮಾಲೋಚನೆ ನಡೆಸಿದರು. ಭಾನುವಾರ ರಜಾ ದಿನವೂ ಕೂಡ ಇಂದು ಬಿಡುವಿಲ್ಲದಂತೆ ಚಟುವಟಿಕೆಯಲ್ಲಿ ತೊಡಗಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಗೃಹಕಚೇರಿ ಕೃಷ್ಣಾದಿಂದಲೇ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದ್ದಾರೆ. ಬಿಜೆಪಿ …
Read More »
BigTv News
October 27, 2024
Breaking News, ಬೆಂಗಳೂರು
ಬೆಂಗಳೂರು: ವಕ್ಫ್ ಬೋರ್ಡ್ ಜೊತೆ ಸೇರಿಕೊಂಡು ರೈತರ 15 ಸಾವಿರ ಎಕರೆ ಭೂಮಿಯನ್ನು ಕಬಳಿಸಲು ಕಾಂಗ್ರೆಸ್ ಸರ್ಕಾರ ಹುನ್ನಾರ ನಡೆಸಿದೆ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರ ರೈತರಿಗೆ ವಕ್ಫ್ ಬೋರ್ಡ್‌ನಿಂದ ನೋಟಿಸ್ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ವಕ್ಫ್ ಹೆಸರಲ್ಲಿ ರೈತರ ಭೂಮಿಯನ್ನು ಸರ್ಕಾರ ಕಿತ್ತುಕೊಳ್ಳಲು ಮುಂದಾಗಿದೆ. ಹರಿಜನರಿಗೆ ನೋಟಿಸ್ ಕೊಟ್ಟು ಅವರ ಭೂಮಿ ಕಿತ್ತುಕೊಳ್ಳುವ ಮೂಲಕ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ದೂರಿದರು. ಲೋಕಸಭೆಯಲ್ಲಿ …
Read More »
BigTv News
October 27, 2024
Breaking News, ಬೆಂಗಳೂರು
ಬೆಂಗಳೂರು: ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ (ಪಿಎಸ್‌ಜಿಎಂಬಿವೈ)ಯಡಿ ಮನೆ ಚಾವಣಿ ಮೇಲೆ ಸೌರ ಫಲಕ ಅಳವಡಿಸಿಕೊಂಡ ಫಲಾನುಭವಿಗಳಿಗೆ ಉತ್ತೇಜಿಸಲು ಕೇಂದ್ರ ಸರ್ಕಾರ ಇನ್ನೊಂದು ದಿಟ್ಟ ಹೆಜ್ಜೆಯಿಡುತ್ತಿದೆ. ಸೂರಿನ ಮೇಲೆ ಸೌರಶಕ್ತಿಯಿಂದ ಉತ್ಪಾದಿತ ಮನೆಗೆ ಬಳಸಿಕೊಂಡ ನಂತರವೂ ಹೆಚ್ಚುವರಿಯಾಗಿ ಲಭ್ಯ ವಿದ್ಯುತ್‌ನ್ನು ಎಸ್ಕಾಂಗಳು ಖರೀದಿಸುವುದು ಶೀಘ್ರ ಕಡ್ಡಾಯವಾಗಲಿದೆ. ಇದಕ್ಕಾಗಿ ಅಧಿಕಾರಿ ವರ್ಗದಮಟ್ಟದಲ್ಲಿ ಚರ್ಚೆಗಳು ನಡೆದಿವೆ. ಫಲಾನುಭವಿಗಳಿಗೆ ಅನುಕೂಲ ಮಾಡಿಕೊಡಲು ಸಂಬಂಧಿಸಿದ ಕಾಯ್ದೆಗೆ ತಿದ್ದುಪಡಿ ಕರಡು ಸಿದ್ಧವಾಗುತ್ತಿದೆ. ಇಷ್ಟರಲ್ಲೇ ಅಂತಿಮವಾಗಲಿದೆ ಎಂದು …
Read More »
BigTv News
October 27, 2024
Breaking News, ಬೆಂಗಳೂರು
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹಳ್ಳಿಕಾರರ ಸಂಘದ ವತಿಯಿಂದ ಪೂರ್ಣಿಮಾ ಪ್ಯಾಲೇಸ್ ನಲ್ಲಿ ಆಯೋಜಿಸಿದ್ದ ಹಳ್ಳಿಕಾರ ಸಮುದಾಯದ ಸಮಾವೇಶ ಹಾಗೂ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹಳ್ಳಿಕಾರರ ಸಂಘದ ಉಪಾಧ್ಯಕ್ಷರಾದ ಕೆ.ಎಂ.ನಾಗರಾಜು ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪಮೋಯ್ಲಿ,ಡಿಸಿಎಂ ಡಿಕೆ ಶಿವಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ಸಚಿವರುಗಳಾದ ರಾಮಲಿಂಗ ರೆಡ್ಡಿ, …
Read More »
BigTv News
October 27, 2024
Breaking News, ಬೆಂಗಳೂರು
ಬೆಂಗಳೂರು: ವಿವಿಧ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲು ದಿನದಿಂದ ದಿನಕ್ಕೆ ಒತ್ತಡ ಹೆಚ್ಚಾಗುತ್ತಿದ್ದಂತೆ ಇದೀಗ ಬೆಂಗಳೂರು ಭಾಗದ ಕ್ಷೇತ್ರಗಳಿಗೆ ಅನುದಾನ ಬಿಡುಗಡೆಗೊಳಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ. ಬೆಂಗಳೂರು ಭಾಗದ ಕ್ಷೇತ್ರಗಳಿಗೆ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರ ವಿವೇಚನೆಯಲ್ಲಿರುವ ಅನುದಾನ ಬಳಸಿಕೊಂಡು ಅನುದಾನ ನೀಡುವಂತೆ ಸೂಚನೆ ನೀಡಿರುವ ಡಿ.ಕೆ.ಶಿವಕುಮಾರ್, ಈ ಅನುದಾನವನ್ನು ತುರ್ತು ಕಾಮಗಾರಿಗಳಿಗೆ ಶಾಸಕರೊಂದಿಗೆ ಚರ್ಚಿಸಿ ಕ್ರಿಯಾ ಯೋಜನೆ ರೂಪಿಸುವಂತೆ ಸೂಚನೆ ನೀಡಿದ್ದಾರೆ. …
Read More »
BigTv News
October 27, 2024
Breaking News, ಬೆಂಗಳೂರು
ಬೆಂಗಳೂರು: ಗೆಜೆಟ್ ನೋಟಿಫಿಕೇಷನ್‌ನಲ್ಲಿ ತಪ್ಪಾಗಿ ನಮೂದು ಆಗಿದೆ ಇದು ಯಾವುದು ವಕ್ಫ್ ಜಮೀನಲ್ಲ ರೈತರ ಜಮೀನು ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಮಟ್ಟದಲ್ಲಿ, ರಾಜ್ಯ ಮಟ್ಟದಲ್ಲಿ ಬಹಳಷ್ಟು ಚರ್ಚೆ ಆಗುತ್ತಿದೆ. ವಕ್ಫ್ ಬೋರ್ಡ್ ನೋಟಿಸ್ ಕೊಟ್ಟಿದ್ದಾರೆ ತಹಶೀಲ್ದಾರ್ ಜೊತೆ ರೈತರ ಜೊತೆಗೆ ಚರ್ಚೆ ಮಾಡಿ, ರೈತರ ಒಂದಿಂಚು ಜಮೀನು ತಪ್ಪಾಗಿ ವಕ್ಫ್‌ಗೆ ಹೋಗುವುದಿಲ್ಲ ಎಂದು ಟ್ವೀಟ್ ಮಾಡಿದ್ದೆ. ಇದಾದ …
Read More »
BigTv News
October 27, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಮಳೆಯಿಂದಾಗಿ 25 ಮಂದಿ ಸಾವನ್ನಪ್ಪಿದ್ದಾರೆ, 2,077 ಮನೆ ಹಾನಿಗೀಡಾಗಿವೆ 1 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ಹಾನಿ ಸಂಭವಿಸಿದೆ ಶೀಘ್ರ ಸೂಕ್ತ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ. ಇದೇ ವೇಳೆ, ಬೆಂಗಳೂರಿನ ರಾಜಕಾಲುವೆಗಳ ಅಭಿವೃದ್ಧಿಗೆ 2,000 ಕೋಟಿ ಮತ್ತು ರಸ್ತೆಗಳ ಅಭಿವೃದ್ಧಿಗೆ 5,000 ಕೋಟಿ ನೆರವು ನೀಡಲು ವಿಶ್ವಬ್ಯಾಂಕ್ ಒಪ್ಪಿದೆ. ನವೆಂಬರ್, ಡಿಸೆಂಬರ್‌ನಲ್ಲಿಯೂ ಹೆಚ್ಚು ಮಳೆ ಆಗುವ ನಿರೀಕ್ಷೆ ಇದ್ದು, ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಡಿಸಿಗಳಿಗೆ ಸಿಎಂ …
Read More »
BigTv News
October 27, 2024
Breaking News, ಬೆಂಗಳೂರು
ಬೆಂಗಳೂರು: ಭಾರಿ ಮಳೆಯಿಂದ ನಗರದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗುತ್ತಿದ್ದು, ಈ ಸಮಸ್ಯೆಗೆ ಪರಿಹಾರ ಕಲಿಸಲು 2,000 ಕೋಟಿ ವೆಚ್ಚದಲ್ಲಿ 253 ಕಿ.ಮೀ. ರಾಜಕಾಲುವೆ ತಡೆಗೋಡೆ ಮರು ನಿರ್ಮಾಣ ಮಾಡಲು ಯೋಜನಾ ವರದಿಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಂಗೀಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಾದ್ಯಂತ ಉಂಟಾಗಿರುವ ಅತಿವೃಷ್ಟಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರ ಜತೆ ಸಭೆ ನಡೆಸಿದ ಅವರು ಬಳಿಕ ಸುದ್ದಿಗೋಷ್ಠಿ ನಡೆಸಿದರು. …
Read More »
BigTv News
October 27, 2024
Breaking News, ಬೆಂಗಳೂರು
ಬೆಂಗಳೂರು: ಸುಸ್ಥಿರ ಕೃಷಿಯಲ್ಲಿ ಅತ್ಯಾಧುನಿಕ ಕ್ರಮಗಳನ್ನು ಗುರುತಿಸಲು, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ತನ್ನ ವಾರ್ಷಿಕ ಕೃಷಿ ಮೇಳವನ್ನು ನವೆಂಬರ್ 14 ರಿಂದ 17 ರವರೆಗೆ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಿದೆ. ಸರ್ಕಾರದ ಪ್ರಮುಖ ಇಲಾಖೆಗಳೊಂದಿಗೆ ಜಂಟಿಯಾಗಿ ಆಯೋಜಿಸಲಾಗುವ ಈ ವರ್ಷದ ಕಾರ್ಯಕ್ರಮ ಹವಾಮಾನ ಸ್ಮಾರ್ಟ್ ಡಿಜಿಟಲ್ ಕೃಷಿ ಎಂಬ ವಿಷಯದ ಅಡಿಯಲ್ಲಿ ಆಯೋಜಿಸಲಾಗುವುದು. ಹೊಸದಾಗಿ ಅಭಿವೃದ್ಧಿಪಡಿಸಿದ ನಾಲ್ಕು ಬೆಳೆ ಪ್ರಬೇಧಗಳು, ಪ್ರಾತ್ಯಕ್ಷಿಕೆಗಳು ಮತ್ತು ಹವಾಮಾನ-ಸ್ಥಿತಿಸ್ಥಾಪಕ ಕೃಷಿಯನ್ನು ಬೆಂಬಲಿಸಲು ತಜ್ಞರ …
Read More »