BigTv News
October 22, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಪರಿಸರಸ್ನೇಹಿ ಇಂಧನ (ಗ್ರೀನ್ ಎನರ್ಜಿ) ಕ್ಷೇತ್ರದಲ್ಲಿ ಹೂಡಿಕೆ ಮತ್ತು ಉತ್ಪಾದನೆಗೆ ಯಥೇಚ್ಛ ಅವಕಾಶಗಳಿವೆ, ಈ ದೃಷ್ಟಿಯಿಂದ ಸೂಕ್ತ ನೀತಿಯನ್ನು ರೂಪಿಸಲಾಗುವುದು ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಹೇಳಿದರು. ಖನಿಜ ಭವನದಲ್ಲಿ ಆಯೋಜಿಸಿದ್ದ ಗ್ರೀನ್ ಎನರ್ಜಿ ಮತ್ತು ಕೋರ್ ಮ್ಯಾನುಫ್ಯಾಕ್ಚರಿಂಗ್ ವಲಯಗಳಿಗೆ ಸಂಬಂಧಪಟ್ಟ ಸರಕಾರದ ವಿಷನ್ ಗ್ರೂಪ್‌ಗಳ ಚೊಚ್ಚಲ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಬೃಹತ್ ಕೈಗಾರಿಕೆ ಇಲಾಖೆ ಮತ್ತು ಇಂಧನ ಇಲಾಖೆ ಎರಡೂ ಜತೆಗೂಡಿ ಈ …
Read More »
BigTv News
October 22, 2024
Breaking News, ಬೆಂಗಳೂರು
ಬೆಂಗಳೂರು: ಕಳೆದ 48 ಗಂಟೆಗಳಿಂದ ನಮ್ಮ ಅಧಿಕಾರಿಗಳ ತಂಡ ಮಳೆ ಪೀಡಿತ ಪ್ರದೇಶಗಳಲ್ಲಿ ನಿರಂತರವಾಗಿ ಪರಿಹಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಈಗ ಪರಿಹಾರ ಕಾರ್ಯ ನಡೆಯುವುದು ಮುಖ್ಯವೇ ಹೊರತು, ನಾನು ಸ್ಥಳಕ್ಕೆ ಭೇಟಿ ನೀಡುವುದಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಇಂದು ಪ್ರತಿಕ್ರಿಯಿಸಿದರು. ಬೆಂಗಳೂರಿನಲ್ಲಿ ಮಳೆಯಿಂದ ಹೆಚ್ಚಿನ ಹಾನಿಯಾಗಿದ್ದು, ನೀವು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುತ್ತಿಲ್ಲ ಎನ್ನುವ ವಿರೋಧ ಪಕ್ಷಗಳ ಆರೋಪದ ಬಗ್ಗೆ ಕೇಳಿದಾಗ, …
Read More »
BigTv News
October 22, 2024
Breaking News, ಬೆಂಗಳೂರು
ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಹಿಂಗಾರು ಮಳೆಯ ಆರ್ಭಟ ಶುರುವಾಗಿದ್ದು, ಮಳೆಗೆ ಸಾವಿರಾರು ಎಕರೆ ಬೆಳೆ ನಷ್ಟವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಕಳೆದ 2-3 ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಗೆ ಸುಮಾರು 36 ಸಾವಿರ ಹೆಕ್ಟೇರ್ ಪ್ರದೇಶವ್ಯಾಪ್ತಿಯ ಬೆಳೆ ಹಾನಿಗೊಳಗಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ 25 ಸಾವಿರ ಹೆಕ್ಟೇರ್ ಅಡಕೆ ಬೆಳೆಗೆ ಕೊಳೆ ರೋಗ ತಗುಲಿದೆ 3,000 ಹೆಕ್ಟೇರ್ ಪ್ರದೇಶದಲ್ಲಿನ ಈರುಳ್ಳಿ ಬೆಳೆ ಹಾನಿಯಾಗಿದೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿ …
Read More »
BigTv News
October 22, 2024
Breaking News, ಬೆಂಗಳೂರು
ಬೆಂಗಳೂರು: ಡಿಬಿಟಿ ಪ್ರಾರಂಭವಾದ 2023ರ ಜುಲೈಯಿಂದ 2024ರ ಜುಲೈವರೆಗೆ 8433.11 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ, ಡಿಬಿಟಿ ಮೂಲಕ ಪ್ರತಿಯೊಬ್ಬರಿಗೆ 170 ರೂ. ಕೊಡುತ್ತಿದ್ದೇವೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಡಿಬಿಟಿ ಹಣ ಬಾಕಿ ಇದ್ದು ಶೀಘ್ರವೇ ಹಣ ಖಾತೆಗೆ ವರ್ಗಾವಣೆ ಮಾಡಲಾಗುವುದು. ಸರ್ವರ್ ಸಮಸ್ಯೆ ಇದೆ, ಇಂದಿನಿಂದ ಆ ಸಮಸ್ಯೆ ಇರುವುದಿಲ್ಲ ಪ್ರಸ್ತುತ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ನೀಡಬೇಕಾಗಿರುವ ಅಕ್ಕಿ ಬದಲಾಗಿ ಡಿಬಿಟಿ ನೀಡುತ್ತಿರುವುದನ್ನು ಮುಂದುವರೆಸಲಾಗುತ್ತದೆ. ಪಡಿತರ ಚೀಟಿ …
Read More »
BigTv News
October 21, 2024
Breaking News, ಬೆಂಗಳೂರು
ಬೆಂಗಳೂರು: ಕೆಎಂಎಫ್ ವತಿಯಿಂದ ಪ್ರತಿದಿನ 2.5 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಇದು ಕೆಎಂಎಫ್ ಇತಿಹಾಸದಲ್ಲಿಯೇ ಬಹುದೊಡ್ಡ ಮೈಲಿಗಲ್ಲು ಎನ್ನಲಾಗಿದೆ. ಇದರಲ್ಲಿ ಒಂದು ಕೋಟಿ ಲೀಟರ್ ಹಾಲನ್ನು ಸ್ಥಳೀಯವಾಗಿ ಮಾರಾಟವಾಗುತ್ತಿದ್ದರೆ, ಇನ್ನೊಂದು ಕೋಟಿ ಲೀಟರ್ ಹಾಲನ್ನು ಕೆಎಂಎಫ್ ಉತ್ಪಾದಿಸುತ್ತದೆ. ಇನ್ನುಳಿದ 50ಸಾವಿರ ಲೀಟರ್ ಹಾಲನ್ನು ಖಾಸಗಿ ಡೈರಿಗಳು ಉತ್ಪಾದಿಸುತ್ತದೆ. ರಾಜ್ಯದಲ್ಲಿ ಶೇ.80ರಷ್ಟು ಕೆಎಂಎಫ್ ಬ್ರ್ಯಾಂಡ್ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳೇ ಮಾರಾಟವಾಗುತ್ತಿದೆ. ಇನ್ನುಳಿದಂತೆ ದೊಡ್ಡ ದೊಡ್ಡ ಡೈರಿಗಳನ್ನು ನಡೆಸುತ್ತಿರುವ …
Read More »
BigTv News
October 21, 2024
Breaking News, ಬೆಂಗಳೂರು
ಬೊಮ್ಮನಹಳ್ಳಿ: ಬೆಂಗಳೂರು ನಗರದಲ್ಲಿ ಒಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದ್ದು, ಅನೇಕ ಪ್ರದೇಶಗಳು ನೆರೆಯಿಂದ ತತ್ತರಿಸಿವೆ ನೆರೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ₹1 ಸಾವಿರ ಕೋಟಿ ಬಿಡುಗಡೆ ಮಾಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದರು. ನಗರದ ಸಿಲ್ಕ್ ಬೋರ್ಡ್ ಜಂಕ್ಷನ್ ಮತ್ತು ಎಚ್.ಎಸ್. ಆರ್ ಬಡಾವಣೆಯಲ್ಲಿನ ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಇಂದು ಭೇಟಿ ನೀಡಿದ ನಂತರ ಅವರು ಮಾತನಾಡಿದರು. ಸಿಲ್ಕ್ ಬೋರ್ಡ್ ಜಂಕ್ಷನ್‍ನಲ್ಲಿ ಪದೇಪದೇ ನೆರೆಯಿಂದ ಸಮಸ್ಯೆ …
Read More »
BigTv News
October 21, 2024
Breaking News, ಬೆಂಗಳೂರು
ಬೆಂಗಳೂರು: ನಗರದಲ್ಲಿ ಮಳೆ ನೀರು ನಿಲ್ಲುವ ಪ್ರದೇಶಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಮಿತಿ ರಚಿಸುವುದಾಗಿ ಬೆಂಗಳೂರು ನಗರ ಅಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಮಳೆ ಬಂದು ನೀರು ನಿಲ್ಲುವ ಸ್ಥಳಗಳನ್ನು ಗುರುತಿಸಿ ಸರಿಪಡಿಸಲು ಒಂದು ಸಮಿತಿಯನ್ನು ರಚಿಸಲಾಗುತ್ತಿದೆ. ಭವಿಷ್ಯದಲ್ಲಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ ಹೆಚ್ಚು ಮಳೆ ಬಂದು ಸಮಸ್ಯೆ ಎದುರಾಗುವ ಸ್ಥಳಗಳನ್ನು ನಾಗರಿಕರು ಅಧಿಕೃತವಾಗಿಯೇ ನಮಗೆ ತಿಳಿಸಲು ಅವಕಾಶ …
Read More »
BigTv News
October 21, 2024
Breaking News, ಬೆಂಗಳೂರು
ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ 545 ಪಿಎಸ್‌ಐ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗಿದೆ, 545 ಪಿಎಸ್‌ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಸಲಾಗಿತ್ತು. ಇದರಲ್ಲಿ 545 ಪಿಎಸ್‌ಐ ಹುದ್ದೆಗಳ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ಸರ್ಕಾರ ಇಂದು ಬಿಡುಗಡೆ ಮಾಡಿದೆ. ದಿನಾಂಕ: 06.06.2020 ರ ಸುತ್ತೋಲೆ ಅನ್ವಯ ಆಯ್ಕೆ ಪಟ್ಟಿಯಿಂದ ಹೊರಗುಳಿಯುವ 40 ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗನುಗುಣವಾಗಿ 40 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ವೃಂದದಲ್ಲಿ ಕಾಯ್ದಿರಿಸಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. …
Read More »
BigTv News
October 21, 2024
Breaking News, ಬೆಂಗಳೂರು
ಬೆಂಗಳೂರು: ಹಾಸನ ಮಾಜಿ ಸಂಸದ, ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ, ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇನ್ನೂ ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳನ್ನೂ ಕೋರ್ಟ್ ವಜಾಗೊಳಿಸಿದೆ ಇದೀಗ ಪ್ರಜ್ವಲ್‌ಗೆ ಜೈಲೇ ಗತಿ ಎನ್ನುವಂತಾಗಿದೆ. ಪ್ರಜ್ವಲ್ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ …
Read More »
BigTv News
October 21, 2024
Breaking News, ಬೆಂಗಳೂರು
ಬೆಂಗಳೂರು : ಶಾಲೆಗಳಲ್ಲಿ ವಾರಕ್ಕೊಮ್ಮೆ ಪ್ರತ್ಯೇಕ ಮೌಲ್ಯ ಶಿಕ್ಷಣ ತರಗತಿ ನಡೆಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಮನುಷ್ಯರಾಗಿ ನಮ್ಮ ಸಾಮಾಜಿಕ ಕರ್ತವ್ಯಗಳೇನು ಎನ್ನುವುದನ್ನು ತಿಳಿಸಿಕೊಡುವ ಮೂಲಕ ಮಕ್ಕಳಲ್ಲಿ ಸಾಮಾಜಿಕ ಜಾಗೃತಿ ಮೂಡಿಸಲು ಮುಂಬರುವ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ವಾರಕ್ಕೊಮ್ಮೆ ಪ್ರತ್ಯೇಕ ಮೌಲ್ಯ ಶಿಕ್ಷಣ ತರಗತಿ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮನುಷ್ಯರಾಗಿ ನಮ್ಮ ಸಾಮಾಜಿಕ ಕರ್ತವ್ಯಗಳೇನು ಎನ್ನುವುದನ್ನು ತಿಳಿಸಿಕೊಡುವ ಮೂಲಕ …
Read More »