BigTv News
October 21, 2024
Breaking News, ಬೆಂಗಳೂರು
ಬೆಂಗಳೂರು : ಅಕ್ಟೋಬರ್ 3 ರಿಂದ ಶಾಲಾ ಮಕ್ಕಳಿಗೆ ನೀಡಿದ್ದ ದಸರಾ ರಜೆ ಅಂತ್ಯಗೊಂಡಿದ್ದು ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಪುನಾರಂಭಗೊಳ್ಳಲಿದೆ. ದಸರಾ ಹಬ್ಬದ ಪ್ರಯುಕ್ತ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರವರೆಗೆ ದಸರಾ ರಜೆ ಘೋಷಣೆ ಮಾಡಿತ್ತು, ಒಟ್ಟು 17 ದಿನಗಳ ಕಾಲ ಶಾಲೆಗಳಿಗೆ ದಸರಾ ರಜೆಯನ್ನು ನೀಡಲಾಗಿತ್ತು. ಅಕ್ಟೋಬರ್ 21 ರ ಇಂದಿನಿಂದ ಶಾಲೆಗಳು ಮತ್ತೆ ಆರಂಭವಾಗಲಿವೆ. 2024-25ನೇ ಶೈಕ್ಷಣಿಕ ಸಾಲಿನ …
Read More »
BigTv News
October 20, 2024
Breaking News, ಬೆಂಗಳೂರು
ಬೆಂಗಳೂರು : ನವೆಂಬರ್ 13ರಂದು ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಶಿಗ್ಗಾವಿ ಸಂಡೂರು ಕ್ಷೇತ್ರಗಳಿಗೆ ಈಗಾಗಲೇ ಬಿಜೆಪಿ ಅಭ್ಯರ್ಥಿ ಹೆಸರು ಘೋಷಣೆಯಾಗಿದೆ. ಇನ್ನು ಚನ್ನಪಟ್ಟಣ ಜೆಡಿಎಸ್ ಗೆ ಸೇರಿದ್ದು ಯಾರಿಗೆ ಬೇಕಾದರೂ ಟಿಕೆಟ್ ಘೋಷಿಸಬಹುದು ಎಂದು ಬೆಂಗಳೂರಿನಲ್ಲಿ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯ ಬಿಎಸ್ ಯಡಿಯೂರಪ್ಪ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ ಅವರು, ಜೆಡಿಎಸ್ ನವರು ಅವರಿಗೆ ಬೇಕಾದವರಿಗೆ ಟಿಕೆಟ್ ಘೋಷಿಸಬಹುದು. ಬಿಜೆಪಿ ಜೆಡಿಎಸ್ …
Read More »
BigTv News
October 20, 2024
Breaking News, ಬೆಂಗಳೂರು
ಬೆಂಗಳೂರು: ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರ ವಿವಿಧ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳ ನಿಯೋಗದೊಂದಿಗೆ ಚರ್ಚೆ ನಡೆಸಿದ ಸಿಎಂ, ರೈತರ ಬೇಡಿಕೆಗಳನ್ನು ಪರಿಶೀಲಿಸಿ ಬಹು ಮುಖ್ಯವಾದ ಸಮಸ್ಯೆಗಳಿಗೆ ಶೀಘ್ರ …
Read More »
BigTv News
October 20, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮಾಡುವ ಅಧಿಕಾರ ಇಲ್ಲ ಕೇಂದ್ರ ಸರ್ಕಾರಕ್ಕೆ ಮಾತ್ರ ಜಾತಿ ಗಣತಿ ಮಾಡುವ ಅಧಿಕಾರವಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜಾತಿ ಜನಗಣತಿ ಕುರಿತು ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ತಮ್ಮನ್ನು ಭೇಟಿ ಮಾಡಿರುವ ಕುರಿತು ಪ್ರತಿಕ್ರಿಯಿಸಿರುವ ಅವರು, ಜಾತಿ ಗಣತಿ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ಇದು ಜಾತಿ ಗಣತಿಯಲ್ಲ ಸಾಮಾಜಿಕ ಆರ್ಥಿಕ ಸಮೀಕ್ಷೆ, …
Read More »
BigTv News
October 20, 2024
Breaking News, ಬೆಂಗಳೂರು
ಬೆಂಗಳೂರು: ಉಪ-ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡದೆಯೇ ಆಸ್ತಿ ನೋಂದಣಿಗೆ ಅವಕಾಶ ಕಲ್ಪಿಸುವ ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೇ 8ರಂದು ಅಂಕಿತ ಹಾಕಿದ್ದು, ರಾಜ್ಯ ಸರ್ಕಾರವು ಮಸೂದೆ ಜಾರಿಗೆ ಶನಿವಾರ ಅಧಿಸೂಚನೆ ಹೊರಡಿಸಿದೆ. ಈ ಮಸೂದೆಗೆ ವಿಧಾನಮಂಡಲವು ಇದೇ ಫೆಬ್ರುವರಿಯಲ್ಲಿ ಅನುಮೋದನೆ ನೀಡಿತ್ತು ಅದನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ಅನುಮೋದನೆಗೆ ಕಳುಹಿಸಲಾಗಿತ್ತು. ಆದರೆ, ಅವರು ಕೆಲವು ಸ್ಪಷ್ಟನೆಗಳನ್ನು ಕೇಳಿ ಮಸೂದೆಯನ್ನು ಸರ್ಕಾರಕ್ಕೆ ಮರಳಿಸಿದ್ದರು …
Read More »
BigTv News
October 20, 2024
Breaking News, ಬೆಂಗಳೂರು
ಬೆಂಗಳೂರು: ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು ಎಂಬಂತೆ, ಕಾಂಗ್ರೆಸ್ ಪಕ್ಷದ ಕುರ್ಚಿ ಗುದ್ದಾಟದಲ್ಲಿ ನಾಡಿನ ರೈತರು ದಿಕ್ಕಿಲ್ಲದೆ ಅನಾಥವಾಗಿದ್ದಾರೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಕಳೆದ ಎಂದು ವಾರದಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಆಹಾರ ಧಾನ್ಯಗಳು, ವಾಣಿಜ್ಯ ಬೆಳೆಗಳು, ತರಕಾರಿ, ಹೂವು ಸೇರಿದಂತೆ ಅನೇಕ ತೋಟಗಾರಿಕಾ ಬೆಳೆಗಳು ನಾಶವಾಗಿದ್ದು, ಈ ವರ್ಷವಾದರೂ ಉತ್ತಮ ಬೆಳೆ ಆಗಬಹುದು ಎಂಬ ನಿರೀಕ್ಷೆಯಲ್ಲಿದ್ದ …
Read More »
BigTv News
October 20, 2024
Breaking News, ಬೆಂಗಳೂರು
ಬೆಂಗಳೂರು: ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಸಮನ್ವಯತೆ, ಸಮಯಪ್ರಜ್ಞೆ, ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ, ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದನೆ ಹಾಗೂ ಹೊಣೆಗಾರಿಕೆ ಈ ಪಂಚಸೂತ್ರಗಳನ್ನು ಇರಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಪಂಚಾಯತ್ ರಾಜ್ ಮತ್ತು ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸಲಹೆ ನೀಡಿದರು. ನಗರದಲ್ಲಿ ಆಯೋಜಿಸಲಾಗಿದ್ದ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯದ ಗ್ರಾಮೀಣ ಭಾಗದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುತ್ತ, ರಾಜ್ಯದ ಜನರಿಗೆ ಸ್ವಾಭಿಮಾನ ಬದುಕು ನೀಡುವ …
Read More »
BigTv News
October 20, 2024
Breaking News, ಬೆಂಗಳೂರು
ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ನೀಡಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿಯ ಅನುಸಾರ ಮೀಸಲಾತಿ ಪ್ರಮಾಣವನ್ನು ಶೇ. 75ಕ್ಕೆ ಏರಿಸುವ ಚರ್ಚೆ ಇದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದರು. ಮುಂದಿನ ಸಂಪುಟ ಸಭೆಯಲ್ಲಿ ವರದಿ ಮಂಡಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು ಈ ಹಿನ್ನೆಲೆಯಲ್ಲಿ ಅವರನ್ನು ಭೇಟಿ ಮಾಡಿದ್ದೆ ವರದಿಯನ್ನು ಸಂಪುಟದಲ್ಲಿ ಇಡಲು ನಾನು ತಯಾರಿದ್ದೇನೆ. ಆದರೆ, ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ ಮೊದಲು ಎಲ್ಲರನ್ನೂ …
Read More »
BigTv News
October 20, 2024
Breaking News, ಬೆಂಗಳೂರು
ಬೆಂಗಳೂರು: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಅಖಾಡಕ್ಕೆ ಇಳಿದಿದ್ದಾರೆ. ಬಿಜೆಪಿ ಹೈಕಮಾಂಡ್ ಶಿಗ್ಗಾವಿ ಕ್ಷೇತ್ರದ ಅಧಿಕೃತ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಅವರನ್ನು ಕಣಕ್ಕೆ ಇಳಿಸಿದೆ. ಸುಮಾರು 60 ಆಕಾಂಕ್ಷಿಗಳು ಈ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನ ಆಕಾಂಕ್ಷಿಯಾಗಿದ್ದರು, ಆದರೆ ರಾಜಕೀಯ ಲೆಕ್ಕಾಚಾರದ ಆಧಾರದ ಮೇಲೆ ಅಂತಿಮವಾಗಿ ಈಗ ಭರತ್ ಬೊಮ್ಮಾಯಿ ಅವರಿಗೆ ಬಿಜೆಪಿ ಮಣೆ ಹಾಕಿದೆ.
Read More »
BigTv News
October 20, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದ 41 ತಾಲ್ಲೂಕುಗಳಲ್ಲಿ ಜಾರಿಯಲ್ಲಿರುವ ಅಟಲ್ ಭೂ ಜಲ್ ಯೋಜನೆಯ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ತಮ್ಮ ಕಚೇರಿಯಲ್ಲಿ ಅಟಲ್ ಭೂ ಜಲ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ದೇಶದ 7 ರಾಜ್ಯಗಳಲ್ಲಿ ಅಟಲ್ ಭೂ ಜಲ ಯೋಜನೆ ಜಾರಿಯಲ್ಲಿದೆ. ಸಮುದಾಯದ ಸಹಯೋಗದಲ್ಲಿ ಅಂತರ್ಜಲ ವೃದ್ದಿ ಹಾಗೂ ಅಂತರ್ಜಲ ಸಮರ್ಪಕ …
Read More »