Breaking News

ಬೆಂಗಳೂರು

ಸಂಚಾರಿ ಕುರಿಗಾಹಿಗಳಿಗೆ ರಾಜ್ಯಾದ್ಯಂತ ಶಸ್ತ್ರಾಸ್ತ್ರ ಲೈಸೆನ್ಸ್ ನೀಡಲು ಅಗತ್ಯ ಕ್ರಮಕ್ಕೆ ಸರ್ಕಾರ ಆದೇಶ

ಬೆಂಗಳೂರು: ಸಂಚಾರಿ ಕುರಿಗಾಹಿಗಳಿಗೆ ರಾಜ್ಯಾದ್ಯಂತ ಶಸ್ತ್ರಾಸ್ತ್ರ ಪರವಾನಿಗೆ ನೀಡಲು ಅಗತ್ಯ ಕ್ರಮ ವಹಿಸುವಂತೆ ಸರ್ಕಾರ ಆದೇಶಿಸಿದೆ. ಸಂಚಾರಿ ಕುರಿಗಾರರು ತಮ್ಮನ್ನು, ಕುರಿಗಳನ್ನು ರಕ್ಷಣೆ ಮಾಡಿಕೊಳ್ಳಲು ಹಾಗೂ ರಾಜ್ಯಾದ್ಯಂತ ತಮ್ಮೊಂದಿಗೆ ಬಂದೂಕು ತೆಗೆದುಕೊಂಡು ಹೋಗಲು ಅನುಕೂಲವಾಗುವಂತೆ ಲೈಸೆನ್ಸ್ ನೀಡುವ ಸಂಬಂಧ ಅಗತ್ಯ ಕ್ರಮ ವಹಿಸಲು ಒಳಾಡಳಿತ ಇಲಾಖೆ ಡಿಜಿ- ಐಜಿಪಿ ಮತ್ತು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಂಚಾರ ಕುರಿಗಾರರಿಗೆ ಅನುಕೂಲವಾಗುವಂತೆ ಅನೇಕ ಸೌಲಭ್ಯ ಕಲ್ಪಿಸಿರುವ ಸರ್ಕಾರ ಇದೀಗ ಶಸ್ತ್ರಾಸ್ತ್ರ …

Read More »

ಒಳ ಮೀಸಲಾತಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ 3 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಸಂದರ್ಭದಲ್ಲೇ ಪರಿಶಿಷ್ಟ ಜಾತಿ ಮೀಸಲು ವರ್ಗೀಕರಣ ವಿಚಾರ ಸರ್ಕಾರಕ್ಕೆ ತಲೆಬೇನೆ ತರಿಸಿದೆ, ಎಡ ಸಮುದಾಯದ ವಿಶ್ವಾಸ ಗಳಿಸಲು ಸರ್ಕಸ್ ಆರಂಭಿಸಿರುವ ಸಿಎಂ ಸಿದ್ದರಾಮಯ್ಯ ಅ.24ರ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲು ನಿರ್ಧರಿಸಿದ್ದಾರೆ. ಒಳಮೀಸಲಾತಿ ವಿಚಾರವಾಗಿ ನಡೆದ ಸಚಿವರು, ಮಾಜಿ ಸಚಿವರು, ಶಾಸಕರು, ಅಧಿಕಾರಿಗಳ ಸಭೆ ಯಲ್ಲಿ ಈ ತೀರ್ಮಾನ ಹೊರಬಿದ್ದಿದೆ. ಸಚಿವ ಮುನಿಯಪ್ಪ ಸಭೆಯ ನಿರ್ಧಾರಗಳ ಮಾಹಿತಿ …

Read More »

ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಕುಶಲಕರ್ಮಿಗಳಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಚರ್ಮ ಕುಶಲಕರ್ಮಿಗಳಾದ ಆದಿ ಕರ್ನಾಟಕ, ಆದಿ ಮಾದಿಗ, ಚಮ್ಮಾರ, ಸಮಗಾರ, ಡೋರ, ಮೋಚಿ ಜನಾಂಗದವರಿಗೆ 2024-25 ನೇ ಸಾಲಿಗೆ ನಿಗಮದ ವಿವಿಧ ಯೋಜನೆಗಳಿಗೆ ಅಕ್ಟೋಬರ್ 05 ರಿಂದ ಅಕ್ಟೋಬರ್ 30 ರವರೆಗೆ ಸೇವಾಸಿಂಧು ಪೋರ್ಟಲ್ ಮೂಲಕ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೌಶಲ್ಯ ಉನ್ನತೀಕರಣ ಯೋಜನೆ, ಸ್ವಾವಲಂಬಿ/ಸಂಚಾರಿ ಮಾರಾಟ ಮಳಿಗೆ, ಮಹಿಳಾ ಕುಶಲಕರ್ಮಿಗಳಿಗೆ …

Read More »

ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ, ಮುಂದಿನ 4 ದಿನ ದಕ್ಷಿಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರವಾಗಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಬೆಂಗಳೂರು, ಬೆಂ.ಗ್ರಾಮಾಂತರದ ದೊಡ್ಡಬಳ್ಳಾಪುರ, ಚಿತ್ರದುರ್ಗದ ಹಿರಿಯೂರು, ದಾವಣಗೆರೆ, ಕೊಪ್ಪಳದ ಗಂಗಾವತಿ, ಮಂಡ್ಯ, ಶಿವಮೊಗ್ಗದ ಆಗುಂಬೆ, ಮಡಿಕೇರಿಯ ನಾಗಮಂಡಲ, ಯಾದಗಿರಿ ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಶುಕ್ರವಾರ ತಡರಾತ್ರಿ ಹಾಗೂ ಶನಿವಾರ ವರ್ಷಧಾರೆಯಾಗಿದೆ. ಬೆಳಗಾವಿ, ಧಾರವಾಡ, …

Read More »

2ಎ ಮೀಸಲಾತಿ ಸಭೆ ವಿಫಲ: ಪಂಚಮಸಾಲಿ ಲಿಂಗಾಯತದಿಂದ ಮತ್ತೆ ಹೋರಾಟಕ್ಕೆ ರಣಕಹಳೆ

ಬೆಂಗಳೂರು: ಪಂಚಮಸಾಲಿ ಲಿಂಗಾಯತ 2ಎ ಮೀಸಲಾತಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯಶ್ರೀ ಸೇರಿದಂತೆ ಸಮುದಾಯದ ಘಟನಾನುಘಟಿ ನಾಯಕರು ಭಾಗಿಯಾಗಿದ್ದರು. ಆದ್ರೆ, ಸಿಎಂ ಸಿದ್ದರಾಮಯ್ಯನವರು ಈಗಲೇ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರಿಂದ ಪಂಚಮಸಾಲಿ ಮೀಸಲು ಹೋರಾಟ ಸಮಿತಿ ಅಸಮಾಧಾನಗೊಂಡಿದ್ದು, ಡಿಸೆಂಬರ್ 9ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಗೂ ಟ್ರಾಕ್ಟರ್ ರ್ಯಾಲಿ ನಡೆಸಲು ತೀರ್ಮಾನಿಸಿದೆ. ಸಿಎಂ ಸಭೆ …

Read More »

ಪಂಚಾಯತ್ ರಾಜ್ ಇಲಾಖೆಯಲ್ಲಿ ಸರಿಯಾದ ಸಮಯದಲ್ಲಿ ಕೆಲಸಗಳು ಆಗುತ್ತಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ

ಬೆಂಗಳೂರು: ಪಂಚಾಯತ್ ರಾಜ್‌ ಇಲಾಖೆಯಲ್ಲಿ ಎಲ್ಲ ಸವಲತ್ತು ಇದೆ, ಸಿಬ್ಬಂದಿಯೂ ಇದ್ದಾರೆ ಆದರೆ ಸರಿಯಾದ ರೀತಿಯಲ್ಲಿ ಮತ್ತು ಸರಿಯಾದ ಸಮಯದಲ್ಲಿ ಕೆಲಸಗಳು ಆಗುತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ನಗರದಲ್ಲಿ ಇಂದು ಆಯೋಜಿಸಲಾಗಿದ್ದ ಪಂಚಾಯತ್ ರಾಜ್‌ ಅಧಿಕಾರಿಗಳ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಿರೀಕ್ಷಿತ ಮಟ್ಟದಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ, ಕೆಲಸವೂ ಆಗುತ್ತಿಲ್ಲ ಅಧಿಕಾರಿಗಳು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂಬುದನ್ನು …

Read More »

ರಾಜ್ಯದ ಆರ್ಥಿಕ ಪರಿಸ್ಥಿತಿಗೆ ಕನ್ನಡಿ ಹಿಡಿದಿದೆ: ಆರ್ ಅಶೋಕ್ ವಾಗ್ದಾಳಿ

ಬೆಂಗಳೂರು: 15 ಬಜೆಟ್ ಮಂಡಿಸಿರುವ ಸ್ವಯಂಘೋಷಿತ ಆರ್ಥಿಕ ತಜ್ಞರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದರೂ ಸಂಪನ್ಮೂಲ ಸಂಗ್ರಹಣೆಯಲ್ಲಿ ಶೇ.4% ರಷ್ಟು ಹಿನ್ನಡೆಯಾಗಿದ್ದು, ಕಾಂಗ್ರೆಸ್​ ಸರ್ಕಾರ ಬಂದಾಗಿನಿಂದ ಕುಸಿಯುತ್ತಿರುವ ರಾಜ್ಯದ ಆರ್ಥಿಕ ಪರಿಸ್ಥಿತಿಗೆ ಕನ್ನಡಿ ಹಿಡಿದಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್​.ಅಶೋಕ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯನವರೇ, ತೆರಿಗೆ ಸಂಗ್ರಹ ಕುಸಿತವಾಗಿರುವುದಕ್ಕೆ ಗ್ಯಾರೆಂಟಿ ಫಲಾನುಭವಿಗಳನ್ನು ಯಾಕೆ ಹೊಣೆ ಮಾಡುತ್ತಿದ್ದೀರಿ ಗ್ಯಾರೆಂಟಿ ಯೋಜನೆಗಳು ರಾಜ್ಯದ ಆರ್ಥಿಕತೆಯನ್ನು ಹೆಚ್ಚಿಸುತ್ತದೆ ಎಂದು ಈ ಹಿಂದೆ ತಾವೇ …

Read More »

ಶಾಲೆಗಳಲ್ಲಿ ಕಲಿಕೆಯ ಫಲಿತಾಂಶ ಸುಧಾರಿಸಲು ಸರ್ಕಾರದಿಂದ ಶಿಕ್ಷಣ ಕೋಪೈಲಟ್ ಯೋಜನೆ ಜಾರಿಗೆ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ಶಿಕ್ಷಣ ಕೋಪೈಲಟ್ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ. ರಾಜ್ಯದ ನಗರ ಮತ್ತು ಗ್ರಾಮೀಣ ಭಾಗಗಳ 750 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಂದ ಆಯ್ದ 1,000 ಶಿಕ್ಷಕರಿಗೆ ಶಿಕ್ಷಣ ಕೋಪೈಲಟ್‌ – ಎಐ …

Read More »

ರಾಜ್ಯ ಸರ್ಕಾರದಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರದಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 2024-25 ನೇ ಸಾಲಿನ ಶೈಕ್ಷಣಿಕ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಿದೆ. ಪ್ರಸಕ್ತ ಸಾಲಿಗೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರದ ವಿವಿಧ ಇಲಾಖೆಗಳಲ್ಲಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (ಎಸ್‌ಎಸ್ಪಿ) ಮೂಲಕ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿರುತ್ತದೆ. ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ …

Read More »

ಸರ್ಕಾರ ಬೆಳೆಹಾನಿ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ವಿತರಿಸಲು ಆರ್.ಅಶೋಕ್ ಆಗ್ರಹ

ಬೆಂಗಳೂರು: ರಾಜ್ಯಾದ್ಯಂತ ಅಕಾಲಿಕ ಮಳೆಯಿಂದ ಕೃಷಿ ಬೆಳೆ, ಉತ್ಪನ್ನಗಳು ಹಾಳಾಗಿದ್ದು, ಸರ್ಕಾರ ಬೆಳೆ ಹಾನಿ ಸಮೀಕ್ಷೆ ನಡೆಸಿ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ವಿತರಿಸಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ರಾಜ್ಯಾದ್ಯಂತ ಅಕಾಲಿಕ ಮಳೆಯಾದ ಪರಿಣಾಮ ಅನೇಕ ಜಿಲ್ಲೆಗಳಲ್ಲಿ ಬೆಳೆದಿದ್ದ ಆಹಾರ ಧಾನ್ಯಗಳು, ಬೇಳೆ ಕಾಳುಗಳು, ಎಣ್ಣೆ ಕಾಳುಗಳು, ವಾಣಿಜ್ಯ ಬೆಳೆಗಳು, ತರಕಾರಿ, ಹೂವು ಸೇರಿದಂತೆ ಅನೇಕ ಬೆಳೆಗಳು ನಾಶವಾಗಿವೆ ಎಂದು ತಿಳಿಸಿದ್ದಾರೆ. ಈ ವರ್ಷವಾದರೂ ಉತ್ತಮ …

Read More »