BigTv News
October 18, 2024
Breaking News, ಬೆಂಗಳೂರು
ಬೆಂಗಳೂರು : ಈಗಾಗಲೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ಬಿಸಿ ಊಟ ಹಾಗೂ ವಾರಕ್ಕೆ ಆರು ದಿನ ಮೊಟ್ಟೆ ವಿತರಿಸುವ ಯೋಜನೆ ಜಾರಿ ಮಾಡಿದೆ ಇದೀಗ ಎಲ್ಲಾ ಸರ್ಕಾರಿ ಮಕ್ಕಳಿಗೆ ಸರ್ಕಾರ ಸಿಹಿ ಸುದ್ದಿ ಒಂದು ನೀಡಿದ್ದು, ಉಚಿತವಾಗಿ ಟ್ಯೂಷನ್ ಹೇಳಿ ಕೊಡುವ ಯೋಜನೆ ಜಾರಿ ಮಾಡುವ ಚಿಂತನೆ ನಡೆಸುತ್ತಿದೆ. ಈಗಾಗಲೆ ಶೈಕ್ಷಣಿಕ ವಿಚಾರಕ್ಕೆ ಸಂಬಂಧಪಟ್ಟಂತೆ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಅಲ್ಲದೆ ಪಠ್ಯಕ್ರಮ ವಿಚಾರದಲ್ಲಿ ಹಲವು …
Read More »
BigTv News
October 17, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಇಂದು ಪದಗ್ರಹಣ ಮಾಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದರು. ಮೊದಲಿಗೆ ವಿಧಾನಸಭಾ ಚುನಾವಣೆಯಲ್ಲಿ ಜಯನಗರದಿಂದ ಸೋಲನುಭವಿಸಿದ್ದ ಮಾಜಿ ಶಾಸಕಿ ಸೌಮ್ಯ ರೆಡ್ಡಿ, ನಂತರ 2024ರ ಲೋಕಸಭೆ ಚುನಾವಣೆಯಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಬೆಂಗಳೂರು ದಕ್ಷಿಣ ಲೋಕಸಭೆ …
Read More »
BigTv News
October 17, 2024
Breaking News, ಬೆಂಗಳೂರು
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದೆ ಬೆಂಗಳೂರಿನಲ್ಲಿ ಸತತ ಎರಡು ದಿನಗಳಿಂದ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರ ವರ್ಷಧಾರೆ ಸುರಿಯುತ್ತಿರುವುದರಿಂದ ಬಿತ್ತನೆ ಕಾರ್ಯಕ್ಕೆ ಅಡಚಣೆಯಾಗಿದ್ದು, ರೈತರು ಕಂಗಾಲಾಗಿದ್ದಾರೆ. ರಾಜ್ಯದ ಹಲವೆಡೆ ನಿರಂತರ ಮಳೆ ರೈತರ ಕಣ್ಣಲ್ಲಿ ನೀರು ತರಿಸಿದೆ ತೊಗರಿ ಕಣಜ ಕಲಬುರಗಿ ಜಿಲ್ಲೆಯಾದ್ಯಂತ ಎರಡು ದಿನದಿಂದ ಮಳೆ ಸುರಿಯುತ್ತಿದೆ ಇದರಿಂದಾಗಿ ಜಿಲ್ಲೆಯ ಐದು ಲಕ್ಷ ಹೆಕ್ಟೇರ್‌ಗೂ ಅಧಿಕ ಪ್ರದೇಶದಲ್ಲಿ …
Read More »
BigTv News
October 17, 2024
Breaking News, ಬೆಂಗಳೂರು
ಬೆಂಗಳೂರು: ಪರಿಹಾರ ಧನ ಸಿಕ್ಕಿದೆ ಎಂದು ಗೊತ್ತಾದರೆ ಕೆಲವರು ಶೇ 10-15 ಬಡ್ಡಿ ಕೊಡುತ್ತೇವೆ ಎಂದು ಬರುತ್ತಾರೆ ಯಾಮಾರಿದರೆ ಹಣ ಕಳೆದುಕೊಳ್ಳುತ್ತೀರಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಕೆಎಸ್‌ಆರ್‌ಟಿಸಿ ನೌಕರರ ಕುಟುಂಬಗಳಿಗೆ ಎಚ್ಚರಿಸಿದರು. ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿ ಕುಟುಂಬಕ್ಕೆ ತಲಾ ₹ 1 ಕೋಟಿ, ಅನಾರೋಗ್ಯದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ ₹ 10 ಲಕ್ಷ ಪರಿಹಾರವನ್ನು ಕೆಎಸ್‌ಆರ್‌ಟಿಸಿ 63ನೇ ಸಂಸ್ಥಾಪನಾ ಕಾರ್ಯಕ್ರಮದಲ್ಲಿ ವಿತರಿಸಿ ಅವರು ಮಾತನಾಡಿದರು. ಪರಿಹಾರದ ಹಣವನ್ನು …
Read More »
BigTv News
October 17, 2024
Breaking News, ಬೆಂಗಳೂರು
ಬೆಂಗಳೂರು: ಕೆಎಸ್‌ಆರ್ಟಿಸಿ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಿಗೆ 5800 ಹೊಸ ಬಸ್ ಗಳ ಸೇರ್ಪಡೆಗೆ ನಿರ್ಧರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ರಾಜ್ಯ ರಸ್ತೆ ಸಾರಿಗೆ ನಿಗಮದ 63ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಶಾಂತಿನಗರ ಕೆಎಸ್‌ಆರ್ಟಿಸಿ ಕೇಂದ್ರೀಯ ವಿಭಾಗ ಘಟಕ 2ರಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪುನಶ್ಚೇಚೇತನಗೊಳಿಸಿದ ಐರಾವತ ಕ್ಲಬ್ ಕ್ಲಾಸ್ ವಾಹನಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ನಾಲ್ಕು ನಿಗಮಗಳಿಗೆ 5,800 ಹೊಸ ಬಸ್ …
Read More »
BigTv News
October 17, 2024
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕದ ಮೂರನೇ ಬೃಹತ್ ಕೆರೆ ವಿಜಯಪುರದ ಮಮದಾಪುರ ಕೆರೆ ಇಲ್ಲಿ ಒಟ್ಟು 2 ಲಕ್ಷ ಗಿಡಗಳನ್ನು ನೆಡಲು ಸರ್ಕಾರ ಪ್ಲಾನ್ ಮಾಡಿಕೊಂಡಿದೆ. ಇನ್ನು ಇಲ್ಲಿನ ಮಮದಾಪುರ ಉದ್ಯಾನಕ್ಕೆ ವಿಜಯಪುರದ ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಹೆಸರನ್ನು ರಾಜ್ಯ ಸರ್ಕಾರ ಇಟ್ಟಿದೆ ಎಂದು ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ ಮಾಹಿತಿ ನೀಡಿದರು. ವಿಜಯಪುರ ಜಿಲ್ಲೆಯ ಮಮದಾಪುರದಲ್ಲಿ ಇರುವ 1,494.38 ಎಕರೆ ವಿಸ್ತೀರ್ಣದ …
Read More »
BigTv News
October 17, 2024
Breaking News, ಬೆಂಗಳೂರು
ಬೆಂಗಳೂರು: ಕೃಷಿ ಇಲಾಖೆಯ ಕೃಷಿ ಸಂಸ್ಕರಣೆ ಯೋಜನೆಯಡಿ ಹಿಟ್ಟಿನ ಗಿರಣಿ, ಖಾರ ಕುಟ್ಟುವ ಯಂತ್ರ, ಶಾವಿಗೆ ಯಂತ್ರ, ಭತ್ತದ ಮಿಲ್, ರೊಟ್ಟಿ ಮಾಡುವ ಯಂತ್ರ ಹಾಗೂ ಸಣ್ಣ ಎಣ್ಣೆ ಗಾಣಗಳು ಸರ್ಕಾರ ಸಹಾಯಧನದಲ್ಲಿ ಲಭ್ಯವಿದ್ದು, ರೈತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳಿಗೆ ಸಂಪರ್ಕಿಸಿ ಅರ್ಜಿ ಸಲ್ಲಿಸಿ ಈ ಯೋಜನೆಯ ಉಪಯೋಗ ಪಡೆಯುವಂತೆ ಜಂಟಿ ಕೃಷಿ ನಿರ್ದೇಶಕರಾದ …
Read More »
BigTv News
October 17, 2024
Breaking News, ಬೆಂಗಳೂರು
ಬೆಂಗಳೂರು: ಹಾವೇರಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಹಾನಿಯಾಗಿದೆ ಮನೆಗಳಿಗೆ ನೀರು ನುಗ್ಗಿದೆ. ಒಂದು ಮಗು ನೀರಿನಲ್ಲಿ ಕೊಚ್ಚಿ ಹೋಗಿ ಸಾವಿಗೀಡಾಗಿದೆ ಎಲ್ಲ ತಾಲೂಕುಗಳಲ್ಲಿ ಬೆಳೆ ನಾಶವಾಗಿದೆ ರಾಜ್ಯ ಸರ್ಕಾರ ಕೂಡಲೇ ಬೆಳೆ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಕುರಿತು ಸರಣಿ ಎಕ್ಸ್ ಮಾಡಿರುವ ಅವರು, ನಿರಂತರ ಮಳೆಯಿಂದಾಗಿ ಮನೆಗಳು ಬಿದ್ದಿದ್ದು, ಮನೆ …
Read More »
BigTv News
October 17, 2024
Breaking News, ಬೆಂಗಳೂರು
ಬೆಂಗಳೂರು: ಎಲ್ಲಾ ಎಸ್ ಟಿ ವಸತಿ ಶಾಲೆಗಳಿಗೆ ಮತ್ತು ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಶ್ರೀ ವಾಲ್ಮೀಕಿ ಜಯಂತಿ ಪ್ರಯುಕ್ತ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ, ಐದು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ ಮಾತನಾಡಿದರು. ಶಾಕುಂತಲಾ ನಾಟಕ ಬರೆದ ಕಾಳಿದಾಸ ಕುರುಬ ಸಮುದಾಯದವರು, ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು, …
Read More »
BigTv News
October 16, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಮುಂದುವರಿಯಲಿದ್ದು, ಅಕ್ಟೋಬರ್ 19ರವರೆಗೆ ಧಾರಾಕಾರ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆಯಲ್ಲಿ ಇನ್ನೂ ನಾಲ್ಕು ದಿನಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರವಾಗಿ ವರ್ಷಧಾರೆ ಸುರಿಯಲಿದೆ. ಈಗಾಗಲೇ ಮೀನು …
Read More »