BigTv News
October 16, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳಿಗೆ ಗುಡ್ ನ್ಯೂಸ್ ಎನ್ನುವಂತೆ 1.50 ಲಕ್ಷ ಸಬ್ಸಿಡಿಯೊಂದಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದಿಂದ ಪರಿಶಿಷ್ಟ ಪಂಗಡದವರು ಕನಿಷ್ಠ 10 ಸದಸ್ಯರು ಇರುವಂತ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ 1.50 ಸಬ್ಸಿಡಿ ಸಹಾಯಧನದೊಂದಿಗೆ 2 ಲಕ್ಷದವರೆಗೆ ಸಾಲ ಮತ್ತು ಸಹಾಯಧನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಘಟಕ ವೆಚ್ಚವಾಗಿ 2.50 ಲಕ್ಷವನ್ನು ಸಾಲ ಮತ್ತು ಸಹಾಯಧನವಾಗಿ ನೀಡಲಾಗುತ್ತದೆ. ಇದರಲ್ಲಿ 1.50 ಲಕ್ಷ ಸಹಾಯಧನವಾಗಿದ್ದರೇ, ರೂ.1 ಲಕ್ಷ …
Read More »
BigTv News
October 16, 2024
Breaking News, ಬೆಂಗಳೂರು
ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಗೆ ಅನುಗುಣವಾಗಿ ಬೆಂಗಳೂರು ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ಬೆಂಗಳೂರು ಕಲಬುರಗಿ ಎಕ್ಸ್‌ಪ್ರೆಸ್ ವಿಶೇಷ ರೈಲು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್‌ಎಂವಿಟಿ) ನಿಂದ ಅಕ್ಟೋಬರ್ 30 ಮತ್ತು ನವೆಂಬರ್ 2, 2024 ರಂದು ರಾತ್ರಿ 9.15 ಕ್ಕೆ ಹೊರಟು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಅಡೋಣಿ, ಮಂತ್ರಾಲಯ ರಸ್ತೆ, ರಾಯಚೂರು, …
Read More »
BigTv News
October 15, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಹಿಂಗಾರು ಮಳೆಗೆ ಅಕ್ಷರಶಃ ನಲುಗಿದ್ದು, ನಿನ್ನೆ ಸೋಮವಾರದಿಂದ ಮಂಗಳವಾರ ಬೆಳಗ್ಗೆವರೆಗೆ ಸುರಿದ ಧಾರಾಕಾರ ಮಳೆಗೆ ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತಗೊಂಡಿದೆ. ಐಎಂಡಿ ಹೇಳುವ ಪ್ರಕಾರ, ರಾತ್ರಿಯಿಂದ ಈವರೆಗೆ ಬರೋಬ್ಬರಿ 16.2 ಮಿಮೀ ಮಳೆ ದಾಖಲಾಗಿದೆ. ಬೆಂಗಳೂರು ನಗರದ ವಿವಿಧಡೆ ಮಳೆಯಿಂದಾಗಿ ಅನೇಕ ಸಮಸ್ಯೆಗಳು ಸೃಷ್ಟಿಯಾಗಿದ್ದು, ಬಿಬಿಎಂಪಿ ಅಲರ್ಟ್ ಆಗಿದೆ. ಭಾರತೀಯ ಹವಾಮಾನ ಇಲಾಖೆಯ ವರದಿ ಪ್ರಕಾರ, ಬೆಂಗಳೂರಿನ ಏರ್‌ಪೋರ್ಟ್ ಪ್ರದೇಶದಲ್ಲಿ 10.5 ಮಿ.ಮೀ. ಹಾಗೂ …
Read More »
BigTv News
October 15, 2024
Breaking News, ಬೆಂಗಳೂರು
ಬೆಂಗಳೂರು: ಪರಿಶಿಷ್ಟ ಪಂಗಡಗಳ ಜಾತಿ ಪ್ರಮಾಣಪತ್ರದಲ್ಲಿರುವ ಗೊಂದಲ ನಿವಾರಣೆಗೆ ಆದೇಶ ಹೊರಡಿಸುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಪರಿಶಿಷ್ಟ ಪಂಗಡ ಸಮುದಾಯಗಳ ಸಮಸ್ಯೆ ಕುರಿತು ಸಿಎಂ ಸಭೆ ನಡೆಸಿದರು. ಸಭೆ ಬಳಿಕ ಪ್ರತಿಕ್ರಿಯೆ ನೀಡಿದ ಸಿಎಂ, ಎಸ್‌ಟಿ ಸಮುದಾಯದ ಎಮ್‌ಎಲ್‌ಎಗಳು, ಸ್ವಾಮೀಜಿಗಳು ಸಮಸ್ಯೆ ಬಗ್ಗೆ ಮನವಿ ಮಾಡಿದ್ದರು. ವಾಲ್ಮೀಕಿ ನಿಗಮದ ಅನುದಾನವನ್ನು ಕಡಿತ ಮಾಡಬಾರದು ಎಂದು ಮನವಿ ಮಾಡಿದ್ದರು. ಎಸ್‌ಟಿ ಸಮುದಾಯದಲ್ಲಿ ಜಾತಿ ಪ್ರಮಾಣಪತ್ರವನ್ನು ಕೆಲವರು …
Read More »
BigTv News
October 15, 2024
Breaking News, ಬೆಂಗಳೂರು
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸುವಂತೆ ರಾಷ್ಟ್ರಪತಿಗಳಿಗೆ ಮನವಿ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಹಿಂದೂ ವಿರೋಧಿ ಸರ್ಕಾರ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿರುವ ಅಭಿವೃದ್ಧಿ ಶೂನ್ಯ ಸರ್ಕಾರ, ಭ್ರಷ್ಟ ಮುಖ್ಯಮಂತ್ರಿ ವಿರುದ್ಧ ಶೀಘ್ರದಲ್ಲೇ ರಾಷ್ಟ್ರಪತಿಗಳ ಭೇಟಿ ಮಾಡಿ ಭ್ರಷ್ಟ ಸರ್ಕಾರವನ್ನು ವಜಾಗೊಳಿಸಲು ಮನವಿ ಮಾಡುತ್ತೇವೆ ಎಂದರು. ಈ ಸರ್ಕಾರದಿಂದ ರಾಜ್ಯದ ರೈತರಿಗೆ, ಜನರಿಗೆ ಅನುಕೂಲವಾಗುತ್ತಿಲ್ಲ, ರಾಜ್ಯದ ಜನರ ಪಾಲಿಗೆ ಬದುಕಿದ್ದೂ …
Read More »
BigTv News
October 15, 2024
Breaking News, ಬೆಂಗಳೂರು
ಬೆಂಗಳೂರು: ಗ್ರಾಮ ಆಡಳಿತಾಧಿಕಾರಿ (ವಿಎಒ) ಹಾಗೂ ಜಿಟಿಟಿಸಿಯ ವಿವಿಧ ಹುದ್ದೆಗಳ ನೇಮಕಾತಿಗೆ ಸೆ.29ರಂದು ನಡೆಸಿದ್ದ ಕನ್ನಡ ಕಡ್ಡಾಯ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ. ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ಕೆಇಎ ವೆಬ್‌ಸೈಟ್ ಲಿಂಕ್ ನಲ್ಲಿ ನಮೂದಿಸಿ, ಫಲಿತಾಂಶವನ್ನು ಪಡೆಯಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಒಟ್ಟು 150 ಅಂಕಗಳ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದವರು ಮಾತ್ರ …
Read More »
BigTv News
October 15, 2024
Breaking News, ಬೆಂಗಳೂರು
ಬೆಂಗಳೂರು: ಅಕ್ಟೋಬರ್ 25ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಸಭೆಯಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ, ಹಣಕಾಸು ಒದಗಿಸುವ ಕೆಲಸ ಮಾಡಲಾಗುತ್ತಿದೆ. ಈ ಬಗ್ಗೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಅವರು ಮಾಹಿತಿ ನೀಡಿದ್ದು ಅ. 25 ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 22ನೇ ಸಭೆಯನ್ನು ವಿಧಾನಸೌಧದದ ಸಚಿವ ಸಂಪುಟ …
Read More »
BigTv News
October 15, 2024
Breaking News, ಬೆಂಗಳೂರು
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ನೀಡಬೇಕಿದ್ದ ಮೂರು ತಿಂಗಳ ಗೌರವಧನದ ಹಿಂಬಾಕಿ ಮತ್ತು ಅಕ್ಟೋಬರ್ ತಿಂಗಳ ಗೌರವಧನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಬಿಡುಗಡೆಗೊಳಿಸಿದೆ. ಜೂನ್, ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಗೌರವಧನಕ್ಕಾಗಿ ₹452 ಕೋಟಿ ಬಿಡುಗಡೆ ಮಾಡಿದೆ. ಜೊತೆಗೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ರಾಜ್ಯದ 31 ಜಿಲ್ಲೆಗಳ 204 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಿಬ್ಬಂದಿಯ ವೇತನ, ಬಾಹ್ಯಮೂಲ, ದಿನಗೂಲಿ ಸಿಬ್ಬಂದಿಯ ಸೆಪ್ಟೆಂಬರ್ ಮತ್ತು …
Read More »
BigTv News
October 15, 2024
Breaking News, ಬೆಂಗಳೂರು
ಬೆಂಗಳೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತು ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಅಕ್ಟೋಬರ್ 21ರಂದು ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ. ಪರಮೇಶ್ವರ್ ಅವರು ದಲಿತ ಮುಖಂಡರಾಗಿದ್ದು, ಅ. 21 ರಂದು ವಿಧಾನಸೌಧದಲ್ಲಿ ಎಸ್‌ಸಿ ಸಮುದಾಯದ ಶಾಸಕರ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಆಹಾರ ಮತ್ತು …
Read More »
BigTv News
October 14, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಿಂತಿಲ್ಲ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕ ರಾಜು ಕಾಗೆ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಆದರೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಿಂತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ ಎಂದು ಕಾಗೆ ಅವರ ಹೇಳಿಕೆ ನಾನು ನೋಡಿಲ್ಲ. ನಮ್ಮ ಸರ್ಕಾರ ಬಂದಾಗಿನಿಂದ ಬರಕ್ಕೆ …
Read More »