Breaking News

ಬೆಂಗಳೂರು

ಖರ್ಗೆ ಕುಟುಂಬಕ್ಕೆ ಸೇರಿದ ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂಮಿ ವಾಪಸ್: ಪರಮೇಶ್ವರ ಅಚ್ಚರಿ ಹೇಳಿಕೆ

ಬೆಂಗಳೂರು: ಮುಡಾ ಹಗರಣ ಆರೋಪ ತೀವ್ರಗೊಂಡ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ 14 ನಿವೇಶನಗಳನ್ನು ವಾಪಸ್ ನೀಡಿದ್ದರು. ಅದರ ಬೆನ್ನಲ್ಲೇ ಕೆಐಎಡಿಬಿ ಭೂಮಿ ಹಂಚಿಕೆಯಲ್ಲಿಯೂ ಅಕ್ರಮದ ಆರೋಪ ಕೇಳಿಬಂದಿತ್ತು ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ಸಿದ್ದಾರ್ಥ ವಿಹಾರ ಟ್ರಸ್ಟ್ ಭೂಮಿ ವಾಪಸ್ ಮಾಡಿದ್ದು, ಪರಮೇಶ್ವರ್‌ ಅವರು ಅಚ್ಚರಿ ಹೇಳಿಕೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿನ ಮಾಧ್ಯಮಗಳ ಜೊತೆಗೆ ಮಾತನಾಡಿ, ತಪ್ಪು ಮಾಡಿದ್ದಾರೆ ಅನ್ನೋ ಕಾರಣಕ್ಕೆ …

Read More »

ಭಯೋತ್ಪಾದಕರಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಬ್ಬ: ರಾಜ್ಯ ಸರ್ಕಾರದ ವಿರುದ್ಧ ಆರ್.ಅಶೋಕ್ ಲೇವಡಿ

ಬೆಂಗಳೂರು: ಭಯೋತ್ಪಾದಕರಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಂದು ರೀತಿ ಹಬ್ಬ ಎಂದು ವಿಪಕ್ಷ ನಾಯಕ ಆರ್. ಅಶೋಕ್ ರಾಜ್ಯಸರ್ಕಾರದ ವಿರುದ್ದ ಲೇವಡಿ ಮಾಡಿದ್ದಾರೆ. ಹಿಂದೆಯೂ ಅನೇಕ ಗಲಭೆ ಕೇಸ್ ವಾಪಸ್ ಪಡೆದು ಅಧಿಕಾರ ಕಳೆದುಕೊಂಡರು. ಈಗಲೂ ಹುಬ್ಬಳ್ಳಿ ಗಲಭೆ ಕೇಸ್ ಗಳನ್ನು ವಾಪಸ್ ಪಡೆದಿದ್ಧಾರೆ. ಇಂತಹ ಬೆಳವಣಿಗೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ ಆಗಲಿದೆ ಕಾನೂನು ಸುವ್ಯವಸ್ಥೆ ಹದಗೆಡಲಿದೆ ಎಂದು ಕಿಡಿ ಕಾರಿದ್ದಾರೆ. ಮುಸ್ಲಿಂ ಮತೀಯ ಭಯೋತ್ಪಾದಕರಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ …

Read More »

ರಾಜ್ಯದಲ್ಲಿ ಸೆಪ್ಟೆಂಬರ್ ನ ವಾಣಿಜ್ಯ ತೆರಿಗೆಗಳ ಸಂಗ್ರಹ 8429.23 ಕೋಟಿ ರೂ.

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್‌ನಲ್ಲಿ 8429.23 ಕೋಟಿ ರೂ. ವಾಣಿಜ್ಯ ತೆರಿಗೆಗಳ ಸಂಗ್ರಹವಾಗಿದೆ, ಇದು ಕಳೆದ ಐದು ತಿಂಗಳಲ್ಲಿ ಅಧಿಕವಾಗಿದೆ.ವಾಣಿಜ್ಯ ತೆರಿಗೆಗಳ ಇಲಾಖೆ ಮಾಹಿತಿ ಪ್ರಕಾರ ಏಪ್ರಿಲ್‌ನಲ್ಲಿ 9662.80 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹವಾಗಿತ್ತು ನಂತರ ಸೆಪ್ಟೆಂಬರ್ ನಲ್ಲಿ ಮಾತ್ರ 8 ಸಾವಿರ ಕೋಟಿ ರೂ.ಗಿಂತ ಹೆಚ್ಚು ಸಂಗ್ರಹವಾಗಿದೆ. ಮೇನಿಂದ ಆಗಸ್ಟ್ ವರೆಗೆ ಯಾವ ತಿಂಗಳಲ್ಲೂ ವಾಣಿಜ್ಯ ತೆರಿಗೆ ಸಂಗ್ರಹ 8 ಸಾವಿರ ಕೋಟಿ ರೂ.ಗಿಂತ ಅಧಿಕವಾಗಿರಲಿಲ್ಲ. ಆಗಸ್ಟ್ ತಿಂಗಳ …

Read More »

ರೈತರ ಶ್ರೇಯೋಭಿವೃದ್ಧಿಗಾಗಿ ಕೃಷಿ ಇಲಾಖೆಯಿಂದ ಹಲವು ಕಾರ್ಯಕ್ರಮಗಳು

ಬೆಂಗಳೂರು: ನಾಡಿನ ರೈತ ಬಾಂಧವರ ಶ್ರೇಯೋಭಿವೃದ್ಧಿಗಾಗಿ ಕೃಷಿ ಇಲಾಖೆಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಭೂತಾಯಿ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಮಣ್ಣಿಂದ ಜೀವ, ಮಣ್ಣಿಂದ ಕಾಯ ಎಂದಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಕ್ಯೂಆರ್ ಕೋಡ್ ಬಳಸಿ ಕೃಷಿ ಉಪಕರಣಗಳ ವಿತರಣೆಯ ಕ್ರಮ ವಹಿಸಲಾಗಿದೆ. ಈ ಮೂಲಕ ಪಾರದರ್ಶಕತೆಯೊಂದಿಗೆ ನಿರ್ವಹಣೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಭೂಸಾರ ನೂತನ ಮೊಬೈಲ್ ಆಪ್ ಬಳಸಿ 4.27 ಲಕ್ಷ ಮಣ್ಣು …

Read More »

ಗೃಹಲಕ್ಷ್ಮೀ ಹಣದಿಂದ ಗ್ರಂಥಾಲಯ ನಿರ್ಮಾಣ ಮಾಡಿದ ಮಹಿಳೆ

ಬೆಂಗಳೂರು: ಗೃಹಲಕ್ಷ್ಮೀ ಹಣದಿಂದ ಟಿವಿ, ಫ್ರಿಜ್‌ ತೆಗೆದುಕೊಂಡಿದ್ದು ಸುದ್ದಿಯಾಗಿತ್ತು. ಇತ್ತೀಚೆಗೆ ಉತ್ತರ ಕರ್ನಾಟಕದ ಮಹಿಳೆಯೊಬ್ಬಳು ಇಡೀ ಊರಿಗೆ ಹೋಳಿಗೆ ಊಟವ್ನೂ ಹಾಕಿಸಿದ್ದರು. ಎರಡು ದಿನಗಳ ಹಿಂದೆ ಮಹಿಳೆಯೊಬ್ಬಳು ತನ್ನ ಮಗನಿಗೆ ಬೈಕ್‌ಅನ್ನು ಗೃಹಲಕ್ಷ್ಮೀ ಹಣದಲ್ಲಿ ಖರೀದಿ ಮಾಡಿದ್ದರು. ಈಗ ಬೆಳಗಾವಿಯ ರಾಯಭಾಗ ತಾಲೂಕಿನ ಮಂಟೂರ ಗ್ರಾಮ ಪಂಚಾಯತಿಯ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ, ಗೃಹಲಕ್ಷ್ಮೀಯಿಂದ ಬಂದ ಹಣದಿಂದ ಗ್ರಾಮದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗ್ರಂಥಾಲಯ ನಿರ್ಮಾಣ ಮಾಡಿದ್ದಾರೆ. ಈ …

Read More »

ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ 5,267 ಹುದ್ದೆಗಳ ನೇಮಕಾತಿ: ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದ್ದು, ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಖಾಲಿ ಇರುವಂತ 5,267 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅನುಮತಿ ನೀಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕ 103ರಲ್ಲಿ ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ …

Read More »

ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಯೋಜನೆಗಳನ್ನು ಅಳವಡಿಸಿಕೊಳ್ಳಲು ಅರ್ಹ ರೈತರಿಂದ ಅರ್ಜಿ ಆಹ್ವಾನ

ಬೆಂಗಳೂರು: 2024-25 ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪಸೆಟ್ (ಗರಿಷ್ಠ 10 ಎಚ್‍ಪಿ), ಲಘು ನೀರಾವರಿ ಹಾಗೂ ತಂತಿ ಬೇಲಿ ಘಟಕಗಳನ್ನು ಅಳವಡಿಸಿಕೊಳ್ಳಲು ಇಚ್ಛಿಸುವ ಅರ್ಹ ರೈತರಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸೂಕ್ತ ದಾಖಲಾತಿಗಳೊಂದಿಗೆ ಅಕ್ಟೋಬರ್ 20, 2024 ರೊಳಗಾಗಿ ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ …

Read More »

ದೇಶಾದ್ಯಂತ ವಿಜಯದಶಮಿ ಸಂಭ್ರಮ: ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರಿಂದ ಶುಭಾಶಯ

ಬೆಂಗಳೂರು: ಇಂದು (ಶನಿವಾರ) ದೇಶದಾದ್ಯಂತ ಸಂಭ್ರಮದ ವಿಜಯದಶಮಿ ಆಚರಿಸಲಾಗುತ್ತಿದೆ. ಸಡಗರದ ವಿಜಯದಶಮಿ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಜನತೆಗೆ ಶುಭಾಶಯ ತಿಳಿಸಿದ್ದಾರೆ. ದೇಶದ ಜನತೆಗೆ ಶುಭಾಶಯ ತಿಳಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ವಿಜಯದಶಮಿಯ ಶುಭ ಸಂದರ್ಭದಲ್ಲಿ, ನಾನು ಎಲ್ಲಾ ದೇಶವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇದು ಅನ್ಯಾಯದ …

Read More »

ಗ್ರಾ.ಪಂ ನೌಕರರ ಮುಷ್ಕರ ಅಂತ್ಯ: ಬೇಡಿಕೆ ಈಡೇರಿಸಲು ಪ್ರಿಯಾಂಕ್ ಖರ್ಗೆ ಭರವಸೆ

ಬೆಂಗಳೂರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳನ್ನು ಬಿ ಗುಂಪಿನ ಹುದ್ದೆಗಳಾಗಿ ಉನ್ನತೀಕರಿಸಲು ಗ್ರಾಮೀಣಾಭಿವೃದ್ಧಿ ಇಲಾಖೆ ಆಯುಕ್ತರ ಅಧ್ಯಕ್ಷತೆಯಲ್ಲಿ ನೌಕರರ ಸಂಘಟನೆಗಳ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ರಚಿಸುವುದೂ ಸೇರಿದಂತೆ ಹಲವು ಬೇಡಿಕೆ ಈಡೇರಿಸಲು ಸಚಿವ ಪ್ರಿಯಾಂಕ್‌ ಖರ್ಗೆ ಸಮ್ಮತಿಸಿದರು. ರಾಜ್ಯ ಸರ್ಕಾರಿ ನೌಕರರ ಸಂಘ, ಗ್ರಾಮೀಣಾಭಿವೃದ್ಧಿ ಇಲಾಖೆಯ ವಿವಿಧ ಸಂಘಟನೆಗಳ ಪ್ರಮುಖರ ಜತೆ ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ಇಲಾಖೆಯ ಉನ್ನತಾಧಿಕಾರಿಗಳು ನಡೆಸಿದ ಮಾತುಕತೆ ಫಲಪ್ರದವಾದ ಕಾರಣ ಗ್ರಾಮ ಪಂಚಾಯಿತಿ ಅಧಿಕಾರಿಗಳು, …

Read More »

ಗ್ರಾಮ ಪಂಚಾಯತಿ ನೌಕರರಿಗೆ ಶೀಘ್ರವೇ ಗೌರವಧನ ಹೆಚ್ಚಳ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಸದಸ್ಯರು ಗೌರವಧನ ಹೆಚ್ಚಳದ ನಿರೀಕ್ಷೆಯಲ್ಲಿದ್ದಾರೆ. ಇವರಿಗೆ ದಸರಾ ಹಬ್ಬದ ಹೊತ್ತಲ್ಲೇ ಗುಡ್ ನ್ಯೂಸ್ ಎನ್ನುವಂತೆ, ಗೌರವಧನ ಹೆಚ್ಚಳ ಕುರಿತು ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ. ಇನ್ನೂ ನೌಕರರ ಮೇಲಿನ ಒತ್ತಡ ಕುರಿತು ಅಧ್ಯಯನ ಮಾಡಲು …

Read More »