Breaking News

ಬೆಂಗಳೂರು

ರಾಜ್ಯದ ಗ್ರಾಮ ಪಂಚಾಯತಿಯ 2,166 ಪಿಡಿಒಗಳು ಮೇಲ್ದರ್ಜೆಗೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಪಿಡಿಒಗಳಿಗೆ ಸಿಹಿಸುದ್ದಿ ಎನ್ನುವಂತೆ ಮೊದಲ ಹಂತದಲ್ಲಿ 2166 ಪಿಡಿಒಗಳನ್ನು ಮೇಲ್ದರ್ಜೆಗೆರಿಸಲಾಗುವುದು ಎಂಬುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ. ಮೊದಲ ಹಂತದಲ್ಲಿ 2,166 ಪಿಡಿಒಗಳನ್ನು ಮೇಲ್ದರ್ಜೆಗೇರಿಸಲಾಗುವುದು. ನಂತರ ಉಳಿದವರಿಗೂ ಅವಕಾಶ ಕಲ್ಪಿಸಲಾಗುವುದು. ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ. ಈಗಾಗಲೇ ಪ್ರಕಟಿಸಿರುವ ವರ್ಗಾವಣೆ ಕರಡು ಅಧಿಸೂಚನೆಯಲ್ಲಿನ ನ್ಯೂನತೆಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಲಾಗುವುದು. …

Read More »

ಗ್ರಾ.ಪಂ ನೌಕರರಿಗೆ ಶೀಘ್ರವೇ ಬಡ್ತಿ ನೀಡಲಾಗುವುದು: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆ ಪರಿಹರಿಸಿ ಬಡ್ತಿ ನೀಡಲಾಗುವುದು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಕರ ವಸೂಲಿಗಾರರು, ಕ್ಲರ್ಕ್ ಮತ್ತು ಡಾಟಾ ಎಂಟ್ರಿ ಆಪರೇಟರ್ಗಳು, ನೀರಗಂಟಿಗಳು, ಜವಾನರು, ಸ್ವಚ್ಛತಾ ಕೆಲಸಗಾರರು, ದ್ವಿತೀಯ ದರ್ಜೆ ಸಹಾಯಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗೆಜೆಟೆಡ್ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ …

Read More »

ಕಳಸಾ ಬಂಡೂರಿ ಯೋಜನೆಗೆ ತಕ್ಷಣವೇ ಅನುಮೋದನೆ ನೀಡಲು ಕೇಂದ್ರಕ್ಕೆ ಸರ್ಕಾರ ಆಗ್ರಹ

ಬೆಂಗಳೂರು: ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಗೋವಾ ಸರ್ಕಾರ ಒಡ್ಡುತ್ತಿರುವ ಅಡೆತಡೆಗಳ ಬಗ್ಗೆ ಕರ್ನಾಟಕ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಜತೆಗೆ, ವಿಳಂಬ ಮಾಡದೆ ಯೋಜನೆಗೆ ಅನುಮೋದನೆ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಯೋಜನೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿಲ್ಲ ಎಂಬುದನ್ನೂ ಸ್ಪಷ್ಟಪಡಿಸಿದೆ. ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ (ಎನ್‌ಬಿಡಬ್ಲ್ಯು) 80 ನೇ ಸ್ಥಾಯಿ ಸಮಿತಿ ಸಭೆಯಲ್ಲಿ ಕಣಕುಂಬಿಯಲ್ಲಿ ಕಳಸಾ ಬಂಡೂರಿ ಯೋಜನೆಯಡಿ ನೀರನ್ನು ತಿರುಗಿಸುವ ಬಗ್ಗೆ ಚರ್ಚಿಸಲಾಗಿದೆ. …

Read More »

ಪ್ರಸ್ತುತ ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರತ್ಯೇಕ ಸಭೆ, ವಿವಾದಾತ್ಮಕ ಹೇಳಿಕೆಗಳ ಮೂಲಕ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಹುಟ್ಟುಹಾಕುತ್ತಿರುವ ಸಚಿವರ ವಿರುದ್ಧ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಚಹಾ, ಭೋಜನದ ನೆಪದಲ್ಲಿ ಸಚಿವರಾದ ಸತೀಶ ಜಾರಕಿಹೊಳಿ, ಎಚ್‌.ಸಿ.ಮಹದೇವಪ್ಪ, ಜಿ. ಪರಮೆಶ್ವರ್ ಅವರು ಗೌಪ್ಯವಾಗಿ ಸಭೆ ಸೇರಿ ಚರ್ಚಿಸಿರುವ ವಿಚಾರ ಸಭೆಯಲ್ಲಿ ಪ್ರಸ್ತಾವವಾಗಿದೆ. ಈ ವೇಳೆ ಮೂವರು ಸಚಿವರೂ, ಜೊತೆಯಾಗಿ ಊಟ ಮಾಡಿರುವುದನ್ನೇ ಮಾಧ್ಯಮಗಳು ಅಪಾರ್ಥ ಕಲ್ಪಿಸಿಕೊಂಡು …

Read More »

ಸಚಿವರ ನಿರ್ಧಾರದಿಂದ ಸುಖ್ಯಾಂತಗೊಂಡ ಗ್ರಾ.ಪಂ ನೌಕರರ ಮುಷ್ಕರ

ಬೆಂಗಳೂರು: ಕಳೆದ ಆರು ದಿನಗಳಿಂದ ರಾಜ್ಯದಾದ್ಯಂತ ಗ್ರಾಮ ಪಂಚಾಯತಿಗಳ ನೌಕಕರು ಹೂಡಿದ್ದ ಮುಷ್ಕರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರು ತೆಗೆದುಕೊಂಡ ನಿರ್ಧಾರಗಳಿಂದ ಸುಖಾಂತ್ಯವಾಗಿದೆ. ಹೀಗಾಗಿ ನಾಳೆಯಿಂದ ಎಂದಿನಂತೆ ಕಚೇರಿ ಕಾರ್ಯಗಳಲ್ಲಿ ನಿರತರಾಗುವುದಾಗಿ ನೌಕರ ಸಂಘದ ಪ್ರತಿನಿಧಿಗಳು ಘೋಷಿಸಿದರು. ನೌಕರರ ಮಹಾ ಒಕ್ಕೂಟ ಹಾಗೂ ಗ್ರಾಮ ಪಂಚಾಯತ್ ಸದಸ್ಯರುಗಳ ಸುಮಾರು 300ಕ್ಕೂ ಹೆಚ್ಚು ಪ್ರತಿನಿಧಿಗಳು ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ತಮ್ಮ …

Read More »

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.38.75 ರಿಂದ ಶೇ.42.5ರಷ್ಟು ಹೆಚ್ಚಳ ಮಾಡಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದು, ಅದರಲ್ಲಿ 2018ರ ಪರಿಷ್ಕೃತ ತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 38.75 ರಿಂದ ಶೇಕಡ 42.5 …

Read More »

ರಾಜ್ಯದ ಗ್ರಾ.ಪಂ ನೌಕರರ ಬೇಡಿಕೆ ಈಡೇರಿಕೆಗೆ ವಿಜಯೇಂದ್ರ ಆಗ್ರಹ

ಬೆಂಗಳೂರು: ರಾಜ್ಯದ ಎಲ್ಲ ಗ್ರಾಮ ಪಂಚಾಯತ್‍ಗಳ ನೌಕರರು ಹಲವು ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟು ಮುಷ್ಕರನಿರತರಾಗಿದ್ದು, ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಗ್ರಾಮ ಪಂಚಾಯತ್‍ಗಳ 11 ವೃಂದಗಳ ನೌಕರರು ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಅನಿರ್ದಿಷ್ಟಾವಧಿ ಬೃಹತ್ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ರಾಜ್ಯಾದ್ಯಂತ ಗ್ರಾಮ ಪಂಚಾಯತ್ ಸೇವೆ ಸ್ಥಗಿತಗೊಂಡಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಗಂಭೀರವಾಗಿ …

Read More »

80 ರೂ. ಗಡಿ ದಾಟಿದ ಈರುಳ್ಳಿ ಬೆಲೆ

ಬೆಂಗಳೂರು: ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಈರುಳ್ಳಿ ದರ 80 ರೂಪಾಯಿ ಗಡಿ ದಾಟಿದೆ. ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬಂದರೂ ಬೆಲೆ ಏರುಗತಿಯಲ್ಲಿ ಸಾಗುತ್ತಿದ್ದು, ಮತ್ತಷ್ಟು ದರ ಹೆಚ್ಚಳ ಆತಂಕ ಎದುರಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ದರ 75 ರಿಂದ 80 ರೂಪಾಯಿಗೆ ಮಾರಾಟವಾಗಿದೆ. ಮಹಾರಾಷ್ಟ್ರದಿಂದ 500ಕ್ಕೂ ಅಧಿಕ ಲಾರಿಗಳು ಸೇರಿ ಸುಮಾರು 980 ಲಾರಿಗಳು ಬೆಂಗಳೂರಿಗೆ ಬಂದಿವೆ. ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಗೆ 95,783, ದಾಸನಪುರ ಮಾರುಕಟ್ಟೆಗೆ …

Read More »

ಬೆಂಗಳೂರಿನ ಹಸಿರು ಹೊದಿಕೆ ಹೆಚ್ಚಿಸಲು ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನ ಅಭಿವೃದ್ದಿ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಸಿರು ಹೊದಿಕೆ ಹೆಚ್ಚಿಸಲು ಯಲಹಂಕದ ಮಾದಪ್ಪನಹಳ್ಳಿಯಲ್ಲಿರುವ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ ಅಭಿವೃದ್ಧಿಪಡಿಸುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ವನ್ಯಜೀವಿ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತೀಯ ಅರಣ್ಯ ಸಮೀಕ್ಷೆ ವರದಿಯಂತೆ ಬೆಂಗಳೂರು ಭಾರತದಲ್ಲಿ ಅತಿ ಹೆಚ್ಚು ಭೂ ಪ್ರದೇಶ ಹೊಂದಿರುವ ಮೂರನೇ ನಗರವಾಗಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ನಗರದಲ್ಲಿ ಸುಮಾರು 89 ಚದರ …

Read More »

ಈ ತಿಂಗಳ ಅಂತ್ಯದಲ್ಲಿ ಕೆ ಎಸ್ ಆರ್ ಟಿ ಸಿ ಗೆ 2.0 ಐರಾವತ ಬಸ್ ಗಳ ಸೇರ್ಪಡೆ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆಎಸ್‌ಆರ್ಟಿಸಿಯ ಐರಾವತ ಕ್ಲಬ್ ಕ್ಲಾಸ್ 2.0 ಮಾದರಿಯ 20 ಬಸ್‌ಗಳನ್ನು ಈ ತಿಂಗಳ ಕೊನೆಯಲ್ಲಿ ಸಮೂಹಕ್ಕೆ ಸೇರ್ಪಡೆಗೊಳಿಸಲಿದೆ. 2.0 ಐರಾವತ್ ಕ್ಲಬ್ ಕ್ಲಾಸ್ ಬಸ್ಗಳಲ್ಲಿ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಶಕ್ತಿಶಾಲಿ ಹ್ಯಾಲೊಜಿನ್ ಹೆಡ್ಲೈಟ್ಗಳು ಮತ್ತು ಡೇ ರನ್ನಿಂಗ್ ಲೈಟ್ಗಳೊಂದಿಗೆ ಹೊಸ ಪ್ಲಶ್ ಇಂಟೀರಿಯರ್ಸ್ ಮತ್ತು ಬಾಹ್ಯ ಸ್ಕ್ಯಾಂಡಿ ನೇವಿಯನ್ ವಿನ್ಯಾಸ ಹೊಂದಿರುವ ಐಷಾರಾಮಿ ಬಸ್ ಇದಾಗಿದೆ. ಹೊಸಕೋಟೆ ಬಳಿ ಇರುವ ವೋಲ್ವೋ ಬಸ್ ತಯಾರಕ ಕಾರ್ಖಾನೆಗೆ …

Read More »