BigTv News
October 7, 2024
Breaking News, ಬೆಂಗಳೂರು
ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಶ್ರೀಗಳನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಕೋರ್ಟ್ ಆದೇಶ ನೀಡಿದೆ. ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುರುಘಾಶ್ರೀಗಳನ್ನು ಬಿಡುಗಡೆ ಮಾಡುವಂತೆ ಆದೇಶ ನೀಡಿದೆ. ಈ ಹಿಂದೆ ಮುರುಘಾ ಶ್ರೀಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ ಸಾಕ್ಷ್ಯ ವಿಚಾರಣೆ ನಡೆಸುವವರೆಗೂ ಮುರುಘಾಶ್ರೀಯನ್ನು ಬಂಧನದಲ್ಲಿಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ …
Read More »
BigTv News
October 7, 2024
Breaking News, ಬೆಂಗಳೂರು
ಬೆಂಗಳೂರು: ಅಕ್ಟೋಬರ್ 10ರ ಗುರುವಾರದಂದು ರಾಜ್ಯ ಸಚಿವ ಸಂಪುಟ ಸಭೆ ಇರೋದಿಲ್ಲ, ವಾಲ್ಮೀಕಿ ಜಯಂತಿ ಹಿನ್ನಲೆಯಲ್ಲಿ ಮುಂದೂಡಲಾಗಿದೆ. ಅಕ್ಟೋಬರ್ 18ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಅಂದಿನ ಸಭೆಯಲ್ಲಿ ಜಾತಿಗಣತಿ ವರದಿ ಜಾರಿಯ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಜಾತಿಗಣತಿ ವರದಿ ಜಾರಿಯ ಬಗ್ಗೆ ಸಂಸದರು, ಶಾಸಕರನ್ನು ಒಳಗೊಂಡ ಮಹತ್ವದ ಸಭೆಯಲ್ಲಿ ಜಾತಿಗಣತಿ ವರದಿ ಜಾರಿಗೆ …
Read More »
BigTv News
October 7, 2024
Breaking News, ಬೆಂಗಳೂರು
ಬೆಂಗಳೂರು: ಮುಡಾ ಪ್ರಕರಣದಿಂದ ಸರ್ಕಾರಕ್ಕೆ ಸಾಕಷ್ಟು ಮುಜುಗರವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜ ಯೇಂದ್ರ ಪುನರುಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ ಸರ್ಕಾರ ಯಾವುದೇ ಸಂದರ್ಭದಲ್ಲೂ ಬೀಳಬಹುದು. ಸಿದ್ದರಾಮಯ್ಯನವರು ಈಗಲಾದರೂ ಬಂಡತನ ಬಿಟ್ಟು ತಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ …
Read More »
BigTv News
October 7, 2024
Breaking News, ಬೆಂಗಳೂರು
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿಯೇ ಸತೀಶ್ ಜಾರಕಿಹೊಳಿ ನಡೆ ಸಂಚಲನ ಮೂಡಿಸಿದೆ, ಸತೀಶ್ ಜಾರಕಿಹೊಳಿ ಅವರು ಇದ್ದಕ್ಕಿದ್ದ ಹಾಗೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಬಂದಿದ್ದರು. ಈ ಭೇಟಿ ಹಲವು ಕುತೂಹಲಗಳಿಗೆ ಕಾರಣವಾಗಿದೆ ಮೊದಲೇ ರಾಜ್ಯ ರಾಜಕಾರಣದಲ್ಲಿ ಏನೇನೋ ಸುದ್ದಿ ಸದ್ದು ಮಾಡುತ್ತಿದೆ. ಅದರಲ್ಲೂ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರುತ್ತಲೇ ಇದೆ. ಈ ಬೆನ್ನಲ್ಲೇ ಜಾರಕಿಹೊಳಿ ನಡೆ ಚರ್ಚೆ ಹುಟ್ಟು ಹಾಕಿದ್ದು, ಇದೀಗ ಡಿಕೆ ಬ್ರದರ್ಸ್ …
Read More »
BigTv News
October 7, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯತಿಗೆ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆ ಸೃಜಿಸುವ ಬಗ್ಗೆ ಸರ್ಕಾರ ಸಮಿತಿ ರಚನೆ ಮಾಡಿದೆ. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ವಿ.ವಿ. ಅಧ್ಯಯನ ಸಮಿತಿ ಸೋಮವಾರದಿಂದ ಆಯ್ದ 32 ಗ್ರಾಮ ಪಂಚಾಯಿತಿಗಳಿಗೆ ಸಮಿತಿ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದೆ. ಬೆಳಗಾವಿ, ಧಾರವಾಡ, ರಾಯಚೂರು, ಕೂಪ್ಪಳ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಮಂಡ್ಯ ಮತ್ತು ಕೂಡಗು ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಿಗೆ ಅಧ್ಯಯನ ಸಮಿತಿ ಪ್ರವಾಸ …
Read More »
BigTv News
October 7, 2024
Breaking News, ಬೆಂಗಳೂರು
ಬೆಂಗಳೂರು: ಅಧಿಕಾರಿಗಳಿಂದ ಸ್ಪಷ್ಟ ಭರವಸೆ ಸಿಗದ ಕಾರಣ, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಗ್ರಾಮ ಪಂಚಾಯಿತಿ ಅಧಿಕಾರಿಗಳು, ನೌಕರರು ಮತ್ತು ಸದಸ್ಯರು, ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿದ್ದ ಮುಷ್ಕರವನ್ನು ಶನಿವಾರ ಸ್ಥಗಿತಗೊಳಿಸಿ, ರಾಜ್ಯದ 31 ಜಿಲ್ಲಾ ಪಂಚಾಯಿತಿ ಕಚೇರಿಗಳ ಎದುರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಜಿಟಿಜಿಟಿ ಮಳೆಯ ನಡುವೆಯೂ ಧರಣಿಯಲ್ಲಿ ಪಾಲ್ಗೊಂಡಿದ್ದ ಗ್ರಾಮ ಪಂಚಾಯಿತಿ ಅಧಿಕಾರಿಗಳು, ನೌಕರರ ಮತ್ತು ಸದಸ್ಯರನ್ನು ಪಂಚಾಯತ್ ರಾಜ್ ಆಯುಕ್ತಾಲಯದ ಉಪ ನಿರ್ದೇಶಕ ಎಂ.ಚಂದ್ರಪ್ಪ …
Read More »
BigTv News
October 5, 2024
Breaking News, ಬೆಂಗಳೂರು
ಬೆಂಗಳೂರು: ಅಲ್ಪಸಂಖ್ಯಾತರ ಸಮುದಾಯದ ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕೆ ಒತ್ತು ನೀಡಲು ವಕ್ಫ್ ಬೋರ್ಡ್ ವತಿಯಿಂದ ಪ್ರತಿ ಜಿಲ್ಲೆಯಲ್ಲೂ ಪದವಿ ಪೂರ್ವ ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ಶನಿವಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್ ಬೋರ್ಡ್ ವತಿಯಿಂದ ತಿರುಮೇನಹಳ್ಳಿಯಲ್ಲಿರುವ ಹಜ್ ಭವನದ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ 100 ಮದ್ರಸಾಗಳಲ್ಲಿ ಔಪಚಾರಿಕ ಶಿಕ್ಷಣಕ್ಕೆ ಚಾಲನೆ, 26 ಜಿಲ್ಲೆಗಳಿಗೆ …
Read More »
BigTv News
October 5, 2024
Breaking News, ಬೆಂಗಳೂರು
ಬೆಂಗಳೂರು: ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದು, ಈ ಮೂಲಕ ರೈತರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಈ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ ಮಾಡಲಾಗಿದೆ. ಸಾಗುವಳಿ ಮಾಡುತ್ತಿರುವರುವ 14 ಲಕ್ಷ ರೈತರು ಅರ್ಜಿ ಹಾಕಿದ್ದಾರೆ ಸರ್ಕಾರಿ ಭೂಮಿ ಸಕ್ರಮಗೊಳಿಸುವಂತೆ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಸಂಬಂಧ ತಹಶೀಲ್ದಾರ್ಗಳ ಜೊತೆ ಸಭೆ …
Read More »
BigTv News
October 5, 2024
Breaking News, ಬೆಂಗಳೂರು
ಬೆಂಗಳೂರು: ಇಸ್ರೋ ಚಂದ್ರಯಾನ 3 ಉಡಾವಣೆ ಮಾಡಿ ವಿಶ್ವದಲ್ಲೇ ದಾಖಲೆ ಬರೆದಿತ್ತ, ಅದಾದ ನಂತರ ಸೂರ್ಯನ ಅನ್ವೇಷಣೆಗೆ ಆದಿತ್ಯ ಎಲ್ 1 ಉಡಾವಣೆ ಮಾಡಿ ಅದರಲ್ಲೂ ಸಕ್ಸಸ್ ಆಗಿದ್ದ ಇಸ್ರೋ ಇದೀಗ ಶುಕ್ರಗ್ರಹದ ಮೇಲೆ ಅನ್ವೇಷಣೆ ಮಾಡುವುದಕ್ಕೆ ಮುಂದಾಗಿದೆ. ಆ ಮೂಲಕ ಭಾರತದಲ್ಲಿ ಮತ್ತೊಂದು ಮೈಲಿಗಲ್ಲು ಸೃಷ್ಟಿಸಲು ಸಜ್ಜಾಗಿದೆ 2028 ರ ವೇಳೆಗೆ ದಾಖಲೆ ಬರೆಯುವುದು ಖಚಿತವಾಗಿದೆ. ಇಸ್ರೋ ಶುಕ್ರಗ್ರಹದ ಅನ್ವೇಷಣೆ ಮುಂದಾಗಿದ್ದು, ಇದಕ್ಕೆ ಸರ್ಕಾರವು ಕೈ ಜೋಡಿಸಿದೆ. 1200 …
Read More »
BigTv News
October 5, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ನಂತರ 2024-25ನೇ ಸಾಲಿನ ಆರ್ಥಿಕ ವರ್ಷದ ಮೊದಲ ಆರು ತಿಂಗಳಲ್ಲಿ ಸರ್ಕಾರದ ಗುರಿಗಿಂತ ಸುಮಾರು 10,000 ಕೋಟಿ ರೂ. ತೆರಿಗೆ ಸಂಗ್ರಹಣೆ ಕಡಿಮೆ ಆಗಿದೆ. ಇದು ರಾಜ್ಯದ ಆರ್ಥಿಕ ಸ್ಥಿತಿಗತಿಗೆ ಹಿಡಿದ ಕನ್ನಡಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್ ಅವರು, ರಾಜ್ಯ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಾಗಿನಿಂದ …
Read More »