Breaking News

ಬೆಂಗಳೂರು

ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅತಿಥಿ ಶಿಕ್ಷಕರ ಹಂಚಿಕೆ ಮಾಡಿ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಕರ್ನಾಟಕದ ಶಾಲಾ ಶಿಕ್ಷಣ ಇಲಾಖೆ ಆಯುಕ್ತ ಕಛೇರಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅತಿಥಿ ಶಿಕ್ಷಕರ ಹಂಚಿಕೆ ಮಾಡಿ ಆದೇಶಿಸಿದೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರುಗಳನ್ನು ನೇಮಕ ಮಾಡಿಕೊಳ್ಳುವ ಕುರಿತು 2ನೇ ಹಂತದ ಹೆಚ್ಚುವರಿ ಅತಿಥಿ ಶಿಕ್ಷಕರ ಹಂಚಿಕೆ ಬಗ್ಗೆ ಆದೇಶಿಸಲಾಗಿದೆ. ಈ ಕುರಿತು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಜ್ಞಾಪನಾ ಪತ್ರವನ್ನು ಹೊರಡಿಸಿದ್ದಾರೆ. ಈ ಪತ್ರ 2024-25ನೇ ಸಾಲಿನ ಶೈಕ್ಷಣಿಕ …

Read More »

ಪಿಡಿಒಗಳಿಂದ ಅನಿರ್ದಿಷ್ಟಾವಧಿ ಮುಷ್ಕರ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಅಧಿಕಾರಿಗಳ ಹಾಗೂ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ರಾಜ್ಯಾದ್ಯಂತ ಸೇವೆಯನ್ನು ಸ್ಥಗಿತಗೊಳಿಸಿ ಫ್ರೀಡಂ ಪಾರ್ಕ್‌ನಲ್ಲಿ ಕ‌ರ್ನಾಟಕ ರಾಜ್ಯ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಹಾಗೂ ಸಂಬಂಧಪಟ್ಟ ಸಂಘಟನೆಗಳು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿವೆ. ಪಂಚಾಯತ್‌ಗಳ ಜನಸಂಖ್ಯೆ ಎರಡರಿಂದ ಮೂರು ಪಟ್ಟು ಹೆಚ್ಚಾಗಿದೆ ಆದರೆ ಸಿಬಂದಿ ಸಂಖ್ಯೆ ಮಾತ್ರ 30 ವರ್ಷಗಳ ಹಿಂದಿನ ಜನಸಂಖ್ಯೆಯ ಅನುಪಾತದಲ್ಲಿದೆ. ಸಿಬ್ಬಂದಿ ಕೊರತೆಯಿಂದ ಹೆಚ್ಚುವರಿ ಹೊರೆ ಬೀಳುತ್ತಿದೆ ದಿನದಿಂದ ದಿನಕ್ಕೆ …

Read More »

ರೈತರಿಂದ ಖರೀದಿಸುವ ಹಾಲಿನ ದರ ಕಡಿತ: 5 ತಿಂಗಳಿಂದ ಬಿಡುಗಡೆಯಾಗದ ಸಹಾಯಧನ

ಬೆಂಗಳೂರು: ಹಾಲು ಒಕ್ಕೂಟಗಳು ರೈತರಿಗೆ ನೀಡುವ ಹಾಲು ಖರೀದಿ ದರ ಕಡಿತಗೊಳಿಸಲಾಗಿದೆ ಮೊದಲೇ ಸಂಕಷ್ಟದಲ್ಲಿರುವ ಹೈನು ಉತ್ಪಾದಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಒಕ್ಕೂಟಗಳು ನಷ್ಟದಲ್ಲಿರುವ ಕಾರಣ ದರ ಕಡಿತ ಅನಿವಾರ್ಯವೆಂದು ಆಡಳಿತ ಮಂಡಳಿಗಳು ಹೇಳಿವೆ ಪಶು ಆಹಾರ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ಹಾಲಿನ ದರ ಕಡಿತ ಮಾಡಿರುವುದು ಹಾಲು ಉತ್ಪಾದಕರಿಗೆ ಬರೆ ಎಳೆದಂತಾಗಿದೆ. ಅಲ್ಲದೆ, ಕಳೆದ ಐದು ತಿಂಗಳಿನಿಂದ ಸರ್ಕಾರ ನೀಡುವ ಸಹಾಯಧನವೂ ರೈತರಿಗೆ …

Read More »

ಗ್ರಾ.ಪಂ ಪಿಡಿಒ ಕಾರ್ಯದರ್ಶಿಗಳಿಂದ ತೀವ್ರಗೊಂಡ ಅನಿರ್ದಿಷ್ಟಾವಧಿ ಹೋರಾಟ

ಬೆಂಗಳೂರು: ಇಲಾಖೆಗಳಲ್ಲಿ ಆಗುತ್ತಿರುವ ತಾರತಮ್ಯ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಪಿಡಿಓಗಳು ಹಾಗೂ ಕಾರ್ಯದರ್ಶಿಗಳು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ನಗರದ ಫ್ರೀಡಂಫಾರ್ಕ್‌ನಲ್ಲಿ ರಾಜ್ಯದ ನಾನಾಕಡೆಯಿಂದ ಬಂದಿರುವ ಸಾವಿರಾರು ಮಂದಿ ಸರ್ಕಾರದ ಧೋರಣೆಯನ್ನು ಕಟುವಾಗಿ ಟೀಕಿಸಿದ್ದು, ನಮ ಭಾವನೆಗಳಿಗೆ ಮತ್ತು ಬೇಡಿಕೆಗಳಿಗೆ ಸ್ಪಂದಿಸದ ಹೊರತು ಹೋರಾಟ ನಿಲ್ಲುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಮದು ಶಾಂತಿಯುತ ಹೋರಾಟ ನಮ್ಮ ಹಕ್ಕಿನ ಬೇಡಿಕೆಯಾಗಿದ್ದು, ಇದನ್ನು ಸಹಾನುಭೂತಿಯಿಂದ ಕೇಳಿಸಿಕೊಳ್ಳದೆ ಇಲಾಖೆ …

Read More »

ಪಿಎಸ್‌ಐ ನೇಮಕಾತಿ ಪರೀಕ್ಷೆ: ಶೇ.35.5 ಅಭ್ಯರ್ಥಿಗಳು ಗೈರು

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ 402 ಹುದ್ದೆ ಗಳ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗಳ ನೇಮಕಾತಿ ಪರೀಕ್ಷೆ ರಾಜ್ಯದ 6 ಜಿಲ್ಲೆಗಳ 163 ಕೇಂದ್ರಗಳಲ್ಲಿ ಯಾವುದೇ ಗೊಂದಲ ಇಲ್ಲದೆ ಗುರುವಾರ ಸುಸೂತ್ರವಾಗಿ ನಡೆಯಿತು. ಆದರೆ, ಇದಕ್ಕೆ ಶೇ. 35.5ರಷ್ಟು ಮಂದಿ ಗೈರಾಗಿದ್ದಾರೆ. ಒಟ್ಟು 66,990 ಮಂದಿ ಪರೀಕ್ಷೆಗೆ ಅರ್ಹರಾಗಿದ್ದರು ಅವರಲ್ಲಿ 56,528 ಮಂದಿ ಮಾತ್ರ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡಿದ್ದರು. ಅದರಲ್ಲೂ 43,250 ಮಂದಿ ಪರೀಕ್ಷೆಗೆ (ಶೇ. 64.5ರಷ್ಟು) ಹಾಜರಾಗಿದ್ದರು ಎಂದು …

Read More »

ಗಾಂಧಿ ಸಾಕ್ಷಿ ಕಾಯಕ 2.0 ತಂತ್ರಾಂಶವನ್ನು ಲೋಕಾರ್ಪಣೆಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯಾಭಿವೃದ್ಧಿ ನಿಗಮ (ಕೆಆರ್‌ಐಡಿಎಲ್) ನಿರ್ವಹಿಸುವ ಕಾಮಗಾರಿಗಳ ಪ್ರಗತಿಯ ಸಂಪೂರ್ಣ ಮಾಹಿತಿಗಳು, ಕಾಮಗಾರಿಗಳನ್ನು ವಹಿಸುವ ಇಲಾಖೆಗಳಿಂದ ಬಿಡುಗಡೆಯಾಗುವ ಅನುದಾನದ ಸ್ವೀಕೃತಿ ಹಾಗೂ ಬಳಕೆ, ಸೂಕ್ತ ರೀತಿಯಲ್ಲಿ ಲೆಕ್ಕಪತ್ರಗಳ ನಿರ್ವಹಣೆ ಮುಂತಾದ ವಿವಿಧ ಅಂಶಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಅನುಕೂಲವಾಗುವಂತೆ ಗಾಂಧಿ ಸಾಕ್ಷಿ ಕಾಯಕ 2.0 (ವರ್ಕ್ ಮಾನಿಟರಿಂಗ್ ಸಿಸ್ಟಂ) ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದ್ದು ಗಾಂಧಿ ಜಯಂತಿ ದಿನದಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ …

Read More »

ಎಲೆಕ್ಟ್ರಿಕ್ ಟ್ಯಾಕ್ಸಿ ಸೇವೆಯ ವಿಸ್ತರಣೆಗೆ ಚಾಲನೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಖಾಸಗಿ ಕಂಪನಿಯಾದ ರೆಫೆಕ್ಸ್ ಇವೀಲ್ಜ್ ನಿರ್ವಹಿಸುತ್ತಿರುವ ಹೊಸ ಎಲೆಕ್ಟ್ರಿಕ್ ಏರ್‌ಪೋರ್ಟ್ ಟ್ಯಾಕ್ಸಿ ಸೇವೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಚಾಲನೆ ನೀಡಿದರು. ಏರ್‌ಪೋರ್ಟ್ ಆಪರೇಟರ್‌ನ ಸಹಯೋಗದೊಂದಿಗೆ ರೆಫೆಕ್ಸ್ ಇವೀಲ್ಜ್ ಕಂಪನಿಯು ಏರ್‌ಪೋರ್ಟ್ ಟ್ಯಾಕ್ಸಿ ಸೇವೆ ಒದಗಿಸುತ್ತಿದ್ದು, ಈಗಾಗಲೇ 200 ಎಲೆಕ್ಟ್ರಿಕ್ ಕಾರುಗಳು ಕಾರ್ಯಾಚರಿಸುತ್ತಿವೆ. ಇದೀಗ ಇನ್ನೂ 170 ಎಲೆಕ್ಟ್ರಿಕ್ ಕಾರುಗಳು ಸೇವೆಗೆ ಸೇರ್ಪಡೆಯಾದಂತಾಗಿದೆ. ಇ ಟ್ಯಾಕ್ಸಿ ಸೇವೆಗೆ ಚಾಲನೆ ನೀಡಿರುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಸಾಮಾಜಿಕ ಮಾಧ್ಯಮ ಎಕ್ಸ್​ …

Read More »

ಕಡತ ವಿಲೇವಾರಿಗೆ ಹೆಚ್ಚು ಆದ್ಯತೆ: ತಡರಾತ್ರಿವರೆಗೂ ಕಡತಗಳಿಗೆ ಸಹಿ ಹಾಕಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನವರಿಗೆ ಸಾಲು ಸಾಲು ಹಿನ್ನಡೆಯಾದ ಬೆನ್ನಲ್ಲೇ ತಮ್ಮ ಮುಂದಿರುವ ಕಡತ ವಿಲೇವಾರಿಗೆ ಹೆಚ್ಚು ಆದ್ಯತೆ ನೀಡಿದ್ದು, ತಡರಾತ್ರಿಯವರೆಗೆ ಕುಳಿತು ವರ್ಗಾವಣೆ ಹಾಗೂ ಇನ್ನಿತರ ಪ್ರಮುಖ ಕಡತಗಳಿಗೆ ಸಹಿ ಹಾಕಿದ್ದಾರೆ. ಬುಧವಾರ ಇಡೀ ಗಾಂಧಿ ಜಯಂತಿಯಲ್ಲಿ ಸಿಎಂ ಪಾಲ್ಗೊಂಡಿದ್ದು, ಗುರುವಾರ ಅಂದರೆ ಇಂದು ದಸರಾ ಕಾರ್ಯಕ್ರಮಕ್ಕೆ ಮೈಸೂರಿಗೆ ತೆರಳಿದ್ದಾರೆ. ಜೊತೆಗೆ ಶುಕ್ರವಾರ ಹಾಗೂ ಶನಿವಾರ ಎರಡು ದಿನ ರಾಯಚೂರು ಜಿಲ್ಲೆಯ ವಿವಿಧ ಕಾರ್ಯಕ್ರಮದಲ್ಲಿ …

Read More »

ಕರ್ನಾಟಕದಲ್ಲಿ ಗಾಂಧೀಜಿ ಭೇಟಿ ನೀಡಿದ ಸ್ಥಳಗಳಲ್ಲಿ ಸ್ಮಾರಕಗಳ ನಿರ್ಮಾಣ: ಸಚಿವ ಎಚ್ ಕೆ ಪಾಟೀಲ್

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರು ಕರ್ನಾಟಕದ ಸುಮಾರು 50 ಸ್ಥಳಗಳಿಗೆ ವಿವಿಧ ಸಂದರ್ಭದಲ್ಲಿ ಭೇಟಿ ನೀಡಿದ್ದಾರೆ ಅವರು ಭೇಟಿ ನೀಡಿದ್ದ ಸ್ಥಳಗಳಲ್ಲಿ ಗಾಂಧೀಜಿ ಅವರ ಸ್ಮಾರಕಗಳನ್ನು ನಿರ್ಮಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು. ಕರ್ನಾಟಕ ಗಾಂಧೀ ಸ್ಮಾರಕ ನಿಧಿಯು ಗಾಂಧಿ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧೀಜಿ ಅವರ 155ನೇ ಜನ್ಮಜಯಂತಿ ವಿಶ್ವ ಅಹಿಂಸಾ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಗಾಂಧೀಜಿ …

Read More »

ಸ್ವಚ್ಛ ಭಾರತ ಪರಿಕಲ್ಪನೆ ಗಾಂಧೀಜಿಯವರ ಆಶಯವಾಗಿತ್ತು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಬೆಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸ್ವಚ್ಛ ಭಾರತ ಪರಿಕಲ್ಪನೆಯನ್ನು ನನಸು ಮಾಡಿದ್ದಾರೆ ಪ್ರಧಾನಿ ಮೋದಿ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಪ್ರತಿಪಾದಿಸಿದರು. ಬುಧವಾರ ಗಾಂಧಿ ಜಯಂತಿ ಪ್ರಯುಕ್ತ ಬೆಂಗಳೂರಿನ ಯಶವಂತಪುರದ ಸಂವಿಧಾನ ವೃತ್ತದಲ್ಲಿ ಬಿಜೆಪಿ ಎಸ್‍ಸಿ ಮೋರ್ಚಾ ಆಯೋಜಿಸಿದ್ದ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸ್ವಚ್ಛ ಭಾರತ ಪರಿಕಲ್ಪನೆ ಗಾಂಧಿಯವರ ಆಶಯವಾಗಿತ್ತು. ದೇಶಾದ್ಯಂತ 12 ಕೋಟಿಗೂ ಅಧಿಕ …

Read More »