Breaking News

ಬೆಂಗಳೂರು

ಕೆ ಆರ್ ಐ ಡಿ ಎಲ್ ಕಾಮಗಾರಿಗಳ ಪ್ರಕ್ರಿಯೆಗೆ ಗಾಂಧಿ ಸಾಕ್ಷಿ ಕಾಯಕ 2.0 ತಂತ್ರಾಂಶ ಅಭಿವೃದ್ದಿ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕೆಆರ್‌ಐಡಿಎಲ್ (ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ) ನಿರ್ವಹಿಸುವ ಕಾಮಗಾರಿಗಳ ಪ್ರಗತಿಯೂ ಸೇರಿದಂತೆ ಎಲ್ಲ ಪ್ರಕ್ರಿಯೆಗಳನ್ನು ಪಾರದರ್ಶಕವಾಗಿ ನಡೆಸಲು ಗಾಂಧಿ ಸಾಕ್ಷಿ ಕಾಯಕ 2.0 (ವರ್ಕ್ ಮಾನಿಟರಿಂಗ್ ಸಿಸ್ಟಂ) ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಈ ತಂತ್ರಾಂಶವನ್ನು ಬುಧವಾರ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಕೆಆರ್‌ಐಡಿಎಲ್ ನಿರ್ವಹಿಸುವ ಕಾಮಗಾರಿಗಳ ಸಂಪೂರ್ಣ ಮಾಹಿತಿಗಳು, ಕಾಮಗಾರಿಗಳನ್ನು ವಹಿಸುವ ಇಲಾಖೆಗಳಿಂದ ಬಿಡುಗಡೆಯಾಗುವ ಅನುದಾನದ …

Read More »

ಅ.23 ರಿಂದ ಕಿತ್ತೂರು ವಿಜಯ ಉತ್ಸವ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಕ್ಟೋಬರ್​ 23, 24 ಮತ್ತು 25ರಂದು ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಕಿತ್ತೂರು ವಿಜಯ ಉತ್ಸವ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗ ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಚಾಲನೆ ನೀಡಿದರು ಇದೇ ವೇಳೆ ಕಿತ್ತೂರು ಉತ್ಸವದ ಪೋಸ್ಟರ್​ ಬಿಡುಗಡೆ ಮಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, 1824ರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರೊಂದಿಗೆ ಹೋರಾಡಿ ವಿಜಯಶಾಲಿಯಾದರು. ಈ …

Read More »

ಸಿಎಂ ಸಿದ್ದರಾಮಯ್ಯ ಯಾವುದೇ ಕ್ಷಣದಲ್ಲಾದರೂ ರಾಜೀನಾಮೆ ಕೊಡಬಹುದು: ಬಿ ವೈ ವಿಜಯೇಂದ್ರ

ಬೆಂಗಳೂರು: ಅಧಿಕಾರಕ್ಕಾಗಿ ತೊಡೆ ತಟ್ಟುವ ಸ್ವಪಕ್ಷೀಯರನ್ನು ಸುಮ್ಮನಾಗಿಸಲು ಸೈಟ್ ಹಿಂತಿರುಗಿಸುವ ಈ ರಾಜಕೀಯ ನಾಟಕ ಮಾಡುತ್ತಿದ್ದಾರೆ, ಮುಖ್ಯಮಂತ್ರಿಗಳು ಯಾವುದೇ ಕ್ಷಣದಲ್ಲಿ ರಾಜೀನಾಮೆ ಕೊಡಬಹುದು ಇದು ಕೆಲವೇ ಗಂಟೆಗಳಲ್ಲಿ ಆದರೂ ಅಚ್ಚರಿಯಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ಹೈಕೋರ್ಟ್ ತೀರ್ಪು, ಜನಪ್ರತಿನಿಧಿಗಳ ಕೋರ್ಟಿನ ಆದೇಶದ ಬಳಿಕ ನಿನ್ನೆ ಇ.ಡಿ. ಕೇಸು ದಾಖಲಾಗಿದೆ. ರಾಜ್ಯಪಾಲರು ದೆಹಲಿಯ ಕೈಗೊಂಬೆ ಎನ್ನುತ್ತಿದ್ದ ಸಿದ್ದರಾಮಯ್ಯನವರು ನಿವೇಶನ ವಾಪಸ್ ನೀಡುತ್ತಿರುವುದು ಕಾನೂನಿನ ಕುಣಿಕೆಯಿಂದ ಪಾರಾಗುವ …

Read More »

ಹಿರಿಯ ನಾಗರಿಕರ ಮಾಶಾಸನ ಹೆಚ್ಚಳಕ್ಕೆ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ 50 ಲಕ್ಷಕ್ಕೂ ಹೆಚ್ಚು ಹಿರಿಯ ನಾಗರಿಕರಿಗೆ ಮಾಸಾಶನ (ವೃದ್ಧಾಪ್ಯ ವೇತನ) ನೀಡಲಾಗುತ್ತಿದೆ. ಅವರ ಮಾಸಾಶನ ಹೆಚ್ಚಳದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನಗರದಲ್ಲಿ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಹಿರಿಯ ನಾಗರಿಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ವೇದಿಕೆಯಲ್ಲಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಾಸಾಶನ ಹೆಚ್ಚಿಸಬೇಕೆಂಬ ಹಿರಿಯ …

Read More »

ಸಿಎಂ ಅಧ್ಯಕ್ಷತೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ

ಬೆಂಗಳೂರು: ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 2024ನೇ ಸಾಲಿನ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತಂತೆ ಪೂರ್ವಭಾವಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಶಾಸಕರುಗಳಾದ ರಘುಮೂರ್ತಿ, ಡಾ.ಶ್ರೀನಿವಾಸ್, ಬಸವನಗೌಡ ದದ್ದಲ್, ಬಿ.ಎಂ.ನಾಗರಾಜು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.

Read More »

ನಾನು ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ, ರಾಜೀನಾಮೆ ನೀಡುವ ಅಗತ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾನು ಅತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ ರಾಜಿನಾಮೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು. ಈ ಕುರಿತು ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನನ್ನ ಪತ್ನಿ ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಪತ್ರ ಬರೆದಿರುವ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ. ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿಯವರು ಜಮೀನಿನ ಮಾಲೀಕರಾಗಿದ್ದರು. ಉಡುಗೊರೆ ರೂಪದಲ್ಲಿ ನನ್ನ ಪತ್ನಿಗೆ 3 ಎಕರೆ 16 ಗುಂಟೆ ಜಮೀನು ನೀಡಿದ್ದರು. ಅದನ್ನು ಮುಡಾದವರು ಒತ್ತುವರಿ ಮಾಡಿಕೊಂಡು …

Read More »

ರಾಜ್ಯ ಸರ್ಕಾರದಿಂದ ಬಿಪಿಎಲ್ ಮಾನದಂಡಗಳ ಪರಿಶೀಲನೆಗೆ ಸಮಿತಿ ರಚನೆ

ಬೆಂಗಳೂರು : ಬಿಪಿಎಲ್ ಮಾನದಂಡಗಳ ಪರಿಶೀಲನೆಗೆ ರಾಜ್ಯ ಸರ್ಕಾರದಿಂದ ಸಮಿತಿ ರಚನೆ ಮಾಡಲಾಗಿದೆ. ಬಿಪಿಎಲ್ ಕುಟುಂಬಗಳಿಗೆ ಪಡಿತರ ಚೀಟಿ ವಿತರಣಾ ಮಾನದಂಡ ಪರಿಶೀಲನೆಗೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ಉಪ ಸಮಿತಿಯನ್ನು ರಚನೆ ಮಾಡಿದೆ. ಬಿಪಿಎಲ್ ಮಾನದಂಡಗಳ ಪರಿಶೀಲನೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಲಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ …

Read More »

ಹಿರಿಯ ನಾಗರಿಕರಿಗಾಗಿ ಆರೋಗ್ಯ ವಿಮೆ ಯೋಜನೆ ಜಾರಿಗೊಳಿಸಲು ಅಗತ್ಯ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಹಿರಿಯ ನಾಗರಿಕರ ಜೀವನಾನುಭವ, ಅವರ ಸಹನೆ, ಸಾಮರ್ಥ್ಯ ನಮ್ಮೆಲ್ಲರಿಗೂ ಪ್ರೇರಣದಾಯಕ. ಹಿರಿಯ ನಾಗರಿಕರು ಅಶಕ್ತರಲ್ಲ ಸಶಕ್ತರು. ಹಿರಿಯರನ್ನು ಗೌರವಿಸುವುದು ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಹಿರಿಯ ನಾಗರಿಕರಿಗಾಗಿ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ …

Read More »

ಪ್ರೀಮೆಟ್ರಿಕ್ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ರೂ.750 ರಿಂದ 1750ಕ್ಕೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಪ್ರೀ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ವಿದ್ಯಾರ್ಥಿ ವೇತನವನ್ನು ರೂ.750ರಿಂದ ರೂ.1,750ಕ್ಕೆ ಹೆಚ್ಚಳ ಮಾಡಲಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನಮ್ಮ ಸಂವಿಧಾನ ಜಾರಿಯಾಗುವ ಮೊದಲೇ ಮೈಸೂರು ರಾಜ್ಯದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತದಲ್ಲಿ ಮೀಸಲಾತಿಯನ್ನು ಜಾರಿಗೆ ತರಲಾಗಿತ್ತು. 1960 ರಲ್ಲಿ ನಾಗೇಗೌಡ ಸಮಿತಿ ರಚನೆಯಾಯಿತು. ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಾವನೂರು ಆಯೋಗ ರಚಿಸಲಾಯಿತು. …

Read More »

ಬೆಂಗಳೂರಿನಲ್ಲಿ ಅ.4 ರಿಂದ ಗ್ರಾ.ಪಂ ನೌಕರರ ಮುಷ್ಕರ: ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಬಲ ಘೋಷಣೆ

ಬೆಂಗಳೂರು : ಅ.4 ರಿಂದ ನಡೆಯಲಿರುವ ಗ್ರಾ. ಪಂ ನೌಕರರ ಮುಷ್ಕರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಬಲ ಘೋಷಣೆ ಮಾಡಿದೆ. ದಿ. 04-10-2024 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಹೋರಾಟಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಬೆಂಬಲ ಸೂಚಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ …

Read More »