Breaking News

ಬೆಂಗಳೂರು

285 ಕೋಟಿ ರೂ. ವೆಚ್ಚದಲ್ಲಿ ಐಸ್ ಕ್ರೀಂ ಉತ್ಪಾದನಾ ಘಟಕ ಸ್ಥಾಪನೆ

ಬೆಂಗಳೂರು: ಐವತ್ತು ಕೋಟಿ ರೂಪಾಯಿಗೂ ಹೆಚ್ಚು ಬಂಡವಾಳ ಹೂಡಿಕೆಯ 14 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳು ಸೇರಿದಂತೆ ಒಟ್ಟು 88 ಯೋಜನೆಗಳಿಂದ ₹4,071.11 ಕೋಟಿ ಬಂಡವಾಳ ಹೂಡಿಕೆಯ ಹಾಗೂ 10,585 ಜನರಿಗೆ ಉದ್ಯೋಗವಕಾಶ ಲಭಿಸುವ ಯೋಜನೆಗಳಿಗೆ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಒಪ್ಪಿಗೆ ನೀಡಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆ ಆನೇಕಲ್‌ನ ವೀರಸಂದ್ರ …

Read More »

ಅಡುಗೆ ಎಣ್ಣೆ ಬೆಲೆ ಶೇ.20 ರಷ್ಟು ಏರಿಕೆ

ಬೆಂಗಳೂರು : ಕಳೆದ 10 ದಿನಗಳಲ್ಲಿ ಅಡುಗೆ ಎಣ್ಣೆಯ ಬೆಲೆ ಸುಮಾರು 20% ರಷ್ಟು ಏರಿಕೆಯಾಗಿದ್ದು, ರಾಜ್ಯದಲ್ಲಿ ಹಬ್ಬದ ಋತುವನ್ನು ಆಚರಿಸುವ ಜನರ ಮೇಲೆ ಆರ್ಥಿಕ ಒತ್ತಡವನ್ನ ಹೆಚ್ಚಿಸಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯೊಂದಿಗೆ, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಅಡುಗೆ ಎಣ್ಣೆ ಬೆಲೆಗಳ ಹೆಚ್ಚಳದ ಜೊತೆಗೆ, ಹಾಲು, ಬೇಳೆಕಾಳುಗಳು ಮತ್ತು ತರಕಾರಿಗಳಂತಹ ಅಗತ್ಯ ವಸ್ತುಗಳು ಇತ್ತೀಚಿನ ವಾರಗಳಲ್ಲಿ ದುಬಾರಿಯಾಗಿವೆ. ಮದ್ಯದ ಬೆಲೆಯನ್ನು ಈಗಾಗಲೇ ಮೂರು ಬಾರಿ ಹೆಚ್ಚಿಸಲಾಗಿದ್ದು, ರಾಜ್ಯ ಸರ್ಕಾರವು …

Read More »

ಪಿಎಂ ಮಿತ್ರ ಟೆಕ್ಸ್ ಟೈಲ್ ಪಾರ್ಕ್ ಯೋಜನೆಗೆ 390 ಕೋಟಿ ರೂ. ಅನುದಾನ: ಸಚಿವ ಶಿವಾನಂದ ಪಾಟೀಲ

ಬೆಂಗಳೂರು : ರಾಜ್ಯ ಸರ್ಕಾರದಿಂದ ಪಿಎಂ ಮಿತ್ರ ಟೆಕ್ಸ್ಟೈಲ್ ಪಾರ್ಕ್ ಯೋಜನೆಗೆ ಮೂಲಸೌಕರ್ಯ ನಿರ್ಮಿಸಲು 390 ಕೋಟಿ ರೂಪಾಯಿ ಅನುದಾನ ಸಚಿವ ಸಂಪುಟದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ್ ಅವರು ಮಾಹಿತಿ ನೀಡಿದರು. ಎಪಿಎಂಸಿ ವರ್ತಕರು ಹಾಗೂ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಗಳ ಅಧ್ಯಕ್ಷರ ಸಮಾವೇಶದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕಲಬುರಗಿಯಲ್ಲಿ ಒಂದು ಸಾವಿರ ಎಕರೆ ಭೂಮಿ ಹಂಚಿಕೆ ಮಾಡಿ ಪಿಎಂ ಮಿತ್ರ …

Read More »

ಪಶ್ಚಿಮ ಘಟ್ಟಗಳ ಸಂರಕ್ಷಣೆ ಕುರಿತ ಡಾ.ಕಸ್ತೂರಿ ರಂಗನ್‌ ವರದಿ ಜಾರಿಯಿಲ್ಲ: ಕರ್ನಾಟಕ ಸಚಿವ ಸಂಪುಟ ತೀರ್ಮಾನ

ಬೆಂಗಳೂರು: ಮೊದಲಿನಿಂದಲೂ ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದ ಡಾ.ಕೆ.ಕಸ್ತೂರಿ ರಂಗನ್‌ ವರದಿಯನ್ನು ವಿರೋಧಿಸುತ್ತಲೇ ಬಂದಿರುವ ಕರ್ನಾಟಕವು ಇದನ್ನು ಜಾರಿಗೊಳಿಸದಿರಲು ನಿರ್ಧಿರಿಸಿದೆ. ಕರ್ನಾಟಕದಲ್ಲಿ ಹಾದು ಹೋಗಿರುವ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಸುಮಾರು ಹನ್ನೊಂದು ಜಿಲ್ಲೆಗಳ ಜನರ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕಸ್ತೂರಿ ರಂಗನ್‌ ವರದಿಯನ್ನು ಅನುಷ್ಠಾನಗೊಳಿಸದೇ ಸಂಪೂರ್ಣವಾಗಿ ವಿರೋಧಿಸುವ ನಿರ್ಧಾರಕ್ಕೆ ಬರಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಕಸ್ತೂರಿ ರಂಗನ್‌ ವರದಿಯನ್ನು ಸಂಪೂರ್ಣವಾಗಿ ವಿರೋಧಿಸಲು ನಿರ್ಣಯಿಸಿತು. …

Read More »

5,800 ಎಕರೆ ಪ್ರದೇಶದಲ್ಲಿ ಕ್ವಿನ್ ಸಿಟಿ ಯೋಜನೆ ನಿರ್ಮಾಣ: ಸಚಿವ ಎಂ ಬಿ ಪಾಟೀಲ್

ಬೆಂಗಳೂರು: ಕ್ವಿನ್ ಸಿಟಿ ಇದೊಂದು ವೈಶಿಷ್ಟ್ಯ ಪೂರ್ಣ ಯೋಜನೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕ್ವಿನ್ ಸಿಟಿ (ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರ) ಯೋಜನೆ ಉದ್ಘಾಟನೆ ಬಳಿಕ ಅವರು ಮಾತನಾಡಿದರು. ಒಟ್ಟು 5,800 ಎಕರೆಯಲ್ಲಿ ಕ್ವಿನ್ ಸಿಟಿಯನ್ನು ಅಭಿವೃದ್ಧಿಪಡಿಸುವ ಉದ್ದೇಶವಿದ್ದು, ಮೊದಲ ಹಂತದಲ್ಲಿ 2,000 ಎಕರೆಯಲ್ಲಿ ಇದನ್ನು ಸಾಕಾರಗೊಳಿಸಲಾಗುವುದು. 5 ಲಕ್ಷ ಜನವಸತಿಯ ಗುರಿಯುಳ್ಳ ವಿನೂತನ ನಗರದ ಪರಿಧಿಯಲ್ಲಿ …

Read More »

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಗ್ರಾಮೀಣ ಪತ್ರಕರ್ತರಿಗೆ ವೃತ್ತಿಗೆ ಸಂಬಂಧಿ ಚಟುವಚಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ವಿತರಣೆಗೆ ಸರ್ಕಾರ ಆದೇಶಿಸಿದೆ. ಇಂದು ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಡಿ 2024-25ನೇ ಸಾಲಿನ ಅಯವ್ಯಯ ಭಾಷಣದ ಕಂಡಿಕೆ 431ರಲ್ಲಿ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು …

Read More »

ಹಂತ ಹಂತವಾಗಿ ರಾಜೀವ್ ವಿವಿ ರಾಮನಗರಕ್ಕೆ ಸ್ಥಳಾಂತರ: ಡಿಸಿಎಂ ಡಿಕೆಶಿ

ಬೆಂಗಳೂರು: ರಾಜೀವ್ ಗಾಂಧಿ ವೈದ್ಯಕೀಯ ವಿವಿಯನ್ನು ಹಂತ ಹಂತವಾಗಿ ರಾಮನಗರಕ್ಕೆ ಸ್ಥಳಾಂತರ ಹಾಗೂ ಕನಕಪುರ ಮೆಡಿಕಲ್ ಕಾಲೇಜಿಗೆ ಮೂಲಸೌಕರ್ಯ ಹೆಚ್ಚಿಸಿ ಎನ್ ಎಂ ಸಿ (ನ್ಯಾಷನಲ್ ಮೆಡಿಕಲ್ ಕಮಿಷನ್)ಗೆ ಮರು ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ರಾಮನಗರ ಹಾಗೂ ಕನಕಪುರ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆ ಹಾಗೂ ಕಾರ್ಯಾರಂಭ ಸಂಬಂಧ ವಿಧಾನಸೌಧದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, …

Read More »

ಶೌಚಾಲಯಗಳ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡದ 318 ಪಿಡಿಒಗಳ ಅಮಾನತಿಗೆ ಸೂಚನೆ

ಬೆಂಗಳೂರು: ನಿಗದಿತ ಅವಧಿಯ ಒಳಗೆ ಶೌಚಾಲಯಗಳ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡದ 318 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಅಮಾನತು ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸೂಚಿಸಿದೆ. ಸ್ವಚ್ಛ ಭಾರತ್ ಮಿಷನ್‌ ಯೋಜನೆಯಡಿ ವೈಯಕ್ತಿಕ ಶೌಚಾಲಯ ನಿರ್ಮಾಣ ಮಾಡಲು ಸಿಟಿಜನ್‌ ಪೋರ್ಟಲ್‌ ಮೂಲಕ ಸಲ್ಲಿಕೆಯಾದ ಬೇಡಿಕೆ ಆಧಾರದಲ್ಲಿ ಪ್ರತಿ ಪಂಚಾಯಿತಿವಾರು ಪಟ್ಟಿ ಸಿದ್ಧಪಡಿಸಲಾಗಿತ್ತು. ಎಲ್ಲ ಪಂಚಾಯಿತಿಗಳಿಂದ ಸಲ್ಲಿಕೆಯಾಗಿದ್ದ 4.85 ಲಕ್ಷ ಶೌಚಾಲಯಗಳಲ್ಲಿ 3.60 ಲಕ್ಷ ಶೌಚಾಲಯಗಳಿಗೆ …

Read More »

ಯಲಹಂಕದಲ್ಲಿ ಮೊದಲ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿದ್ಯುತ್‌ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ 2030ಕ್ಕೆ ರಾಜ್ಯದಿಂದ 60 ಸಾವಿರ ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಗುರಿ ಇಟ್ಟುಕೊಂಡಿದ್ದು, ಇದಕ್ಕಾಗಿ ವಿವಿಧ ಮೂಲಗಳಿಂದ ಉತ್ಪಾದನೆಯ ಕಾರ್ಯಯೋಜನೆ ರೂಪಿಸಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಸ್ಥಾಪಿಸಿರುವ ರಾಜ್ಯದ ಮೊಟ್ಟ ಮೊದಲ 370 ಮೆಗಾವ್ಯಾಟ್ ಸಾಮರ್ಥ್ಯದ ಅನಿಲ ಆಧಾರಿತ ಯಲಹಂತ ಸಂಯುಕ್ತ ವಿದ್ಯುತ್ ಸ್ಥಾವರವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಜೊತೆಗೂಡಿ ಉದ್ಘಾಟಿಸಿ …

Read More »

ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆ ಕುರಿತು ಸಮಿತಿ ರಚಿಸಿ ಸರ್ಕಾರ ಆದೇಶ

ಬೆಂಗಳೂರು: ಕರ್ನಾಟಕ ಸರ್ಕಾರ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಕುರಿತು ಗಮನಹರಿಸಿದ್ದು, ವಿವಿಧ ಬೇಡಿಕೆಗಳನ್ನು ಶಿಕ್ಷಕರು ಸರ್ಕಾರದ ಮುಂದೆ ಇಟ್ಟಿದ್ದಾರೆ. ಆದ್ದರಿಂದ ಸರ್ಕಾರ ಈ ಕುರಿತು ಪರಿಶೀಲಿಸಿ ವರದಿ ನೀಡಲು ಸಮಿತಿಯನ್ನು ರಚಿಸಿ ಆದೇಶಿಸಿದೆ. ಒಂದು ತಿಂಗಳಿನಲ್ಲಿ ವರದಿ ಸಲ್ಲಿಸಬೇಕು ಎಂದು ಸಮಿತಿಗೆ ಗಡುವು ನಿಗದಿ ಮಾಡಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಎಂ. ಎ. ಮಹಾಲಕ್ಷ್ಮಿ ಸರ್ಕಾರದ ಅಧೀನ ಕಾರ್ಯದರ್ಶಿ, ಶಾಲಾ ಶಿಕ್ಷಣ …

Read More »