Breaking News

ಬೆಂಗಳೂರು

ಬೆಂಗಳೂರಿನಲ್ಲಿ ಸೆ.28 ರಂದು ನೂತನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಉದ್ಘಾಟನೆ

ಬೆಂಗಳೂರು: ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಸೆಪ್ಟೆಂಬರ್‌ 27 ರಂದು ತನ್ನ ವಾರ್ಷಿಕ ಮಹಾಸಭೆ ನಡೆಸಲಿದ್ದು, ಇದರ ಬೆನ್ನಲ್ಲೇ ಸೆಪ್ಟೆಂಬರ್‌ 28ರಂದು ಬೆಂಗಳೂರಿನಲ್ಲಿ ನೂತನ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ ಅನ್ನು ಉದ್ಘಾಟನೆ ಮಾಡಲಿದೆ ಎಂಬುದು ಬೆಳವಣಿಗೆಗೆ ಹತ್ತಿರದ ಮೂಲಗಳಿಂದ ಖಾತ್ರಿಯಾಗಿದೆ. ನೂತನ ಅತ್ಯಾಧುನಿಕ ಕ್ರಿಕೆಟ್‌ ಅಕಾಡೆಮಿಯ ಉದ್ಘಾಟನೆಯನ್ನು ಬಿಸಿಸಿಐ ಖಾತ್ರಿ ಪಡಿಸಿದೆ. ಬಿಸಿಸಿಐ ಮಾಜಿ ಕಾರ್ಯದರ್ಶಿ ಜಯ ಶಾ ಈ ಕುರಿತಾಗಿ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ (ಕೆಎಸ್‌ಸಿಎ) …

Read More »

ಹೈಕೋರ್ಟ್ ತೀರ್ಪು ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕೇರಳ ಪ್ರವಾಸ

ಬೆಂಗಳೂರು : ಮುಡಾ ಹಗರಣ ಸಂಬಂಧ ಹೈಕೋರ್ಟ್ ಆದೇಶ ಹೊರ ಬೀಳುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಕೇರಳ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಕೇರಳಕ್ಕೆ ತೆರಳಲಿರುವ ಸಿಎಂ ಸಿದ್ದರಾಮಯ್ಯ, ಕೇರಳದ ಮಲಪುರಂ ಜಿಲ್ಲೆಯಲ್ಲಿ ನಡೆಯಲಿರುವ ಆರ್ಯಧನ್ ಪ್ರಶಸ್ತಿ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಹಾಗೂ ರಾಜ್ಯಪಾಲರ ನಿರ್ಧಾರ ಸರಿ ಇದೆ ಎಂದು ಹೈಕೋರ್ಟ್ ತೀರ್ಪು ಪ್ರಕಟಿಸಿದೆ.

Read More »

ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಉರ್ದು ಕಡ್ಡಾಯ: ಆದೇಶಕ್ಕೆ ರಾಜ್ಯಾದ್ಯಂತ ಭಾರೀ ವಿರೋಧ

ಬೆಂಗಳೂರು: ಕರ್ನಾಟಕ ಸರ್ಕಾರವು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳ ಶಿಕ್ಷಕರ ಹುದ್ದೆಗೆ ಉರ್ದು ಭಾಷೆ ಕಡ್ಡಾಯ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಸರ್ಕಾರದ ನಡೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉರ್ದು ಭಾಷೆ ಕಡ್ಡಾಯಗೊಳಿಸಿರುವ ನಿರ್ಧಾರದ ಬಗ್ಗೆ ವಿರೋಧ ಪಕ್ಷ ಬಿಜೆಪಿ ಟೀಕಿಸಿದ್ದು, ಇದು ಕಾಂಗ್ರೆಸ್ ಸರ್ಕಾರದ ಮುಸ್ಲಿಂ ತುಷ್ಟೀಕರಣ ಎಂದು ಆರೋಪಿಸಿದೆ, ಇದಕ್ಕೆ ಕನ್ನಡ ಸಂಘಟನೆಗಳು ಹೋರಾಟ ಮಾಡುವುದಾಗಿ …

Read More »

ಸಿದ್ದರಾಮಯ್ಯ ರಾಜೀನಾಮೆ ಅಗತ್ಯವಿಲ್ಲ: ಸಿಎಂ ಪರ ನಿಂತ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಕ್ರಿಮಿನಲ್ ಪ್ರಕರಣದ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್‌ ಪುರಸ್ಕರಿಸಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯವಾಗಿ ಹಿನ್ನಡೆ ಅನುಭವಿಸಿದ್ದಾರೆ. ಸಿದ್ದರಾಮಯ್ಯ ಅವರ ರಾಜೀನಾಮೆಗೂ ವಿರೋಧ ಪಕ್ಷಗಳ ಒತ್ತಡ ತೀವ್ರವಾಗಿದೆ. ಆದರೆ, ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಹಾಗೂ ಅವರ ಹಿಂದೆ ಬಲವಾಗಿ ನಿಲ್ಲುವುದಾಗಿ ಕಾಂಗ್ರೆಸ್‌ ಪಕ್ಷ ಸ್ಪಷ್ಟ ಪಡಿಸಿದೆ. ಕಾಂಗ್ರೆಸ್‌ ಹೈಕಮಾಂಡ್ …

Read More »

ಉಪಚುನಾವಣೆ ಗೆಲ್ಲಲು ಬಿಜೆಪಿ ರಾಜ್ಯ ಕೋರ್ ಕಮೀಟಿ ಸಭೆ

ಬೆಂಗಳೂರು: ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಮುಂಬರುವ ಉಪ ಚುನಾವಣೆಗೆ ಸಂಬಂಧಿಸಿ ವಿಸ್ತ್ರತವಾಗಿ ಚರ್ಚೆ ನಡೆಸಿದ್ದೇವೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಚನ್ನಪಟ್ಟಣ, ಸೊಂಡೂರು ಮತ್ತು ಶಿಗ್ಗಾಂವಿ ಉಪ ಚುನಾವಣೆ ಯಾವುದೇ ಸಮಯದಲ್ಲಿ ಘೋಷಣೆ ಆಗಬಹುದು. 3 ಉಪ ಚುನಾವಣೆಗಳನ್ನು ಸವಾಲಾಗಿ ಸ್ವೀಕರಿಸಿ, ಗೆಲ್ಲುವ ದೃಷ್ಟಿಯಿಂದ ವಿಶೇಷ ಪ್ರಯತ್ನ …

Read More »

ಯಾವ ತನಿಖೆಗೂ ಹಿಂಜರಿಯುವುದಿಲ್ಲ, ಸತ್ಯಕ್ಕೆ ಜಯ ಸಿಗಲಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ, ಆದೇಶ ಪ್ರತಿ ಪಡೆದು ಓದಿದ ಬಳಿಕ‌ ಪ್ರತಿಕ್ರಿಯೆ ನೀಡುತ್ತೇನೆ. ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ, ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಪಾಲರ ಪ್ರಾಸಿಕ್ಯೂಷನ್ ಹೈಕೋರ್ಟ್ ಎತ್ತಿ ಹಿಡಿದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿರುವ ಅವರು …

Read More »

ಸಿದ್ದರಾಮಯ್ಯಗೆ ಹೈಕೋರ್ಟ್ ನಿಂದ ಬಿಗ್ ಶಾಕ್: ಬಿಜೆಪಿಯಲ್ಲಿ ಸಂತಸ

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದ ರಾಜ್ಯಪಾಲದ ನಿರ್ಧಾರವನ್ನು ಹೈಕೋರ್ಟ್​ ಎತ್ತಿಹಿಡಿದೆ. ಸಿದ್ದರಾಮಯ್ಯ ಅರ್ಜಿ ವಜಾಗೊಂಡಿದ್ದು, ಅವರಿಗೆ ದೊಡ್ಡ ಹಿನ್ನಡೆಯಾಗಿದೆ. ಕೋರ್ಟ್​ ತೀರ್ಪು ಹೊರಬೀಳುತ್ತಿದ್ದಂತೆ ಪ್ರತಿಪಕ್ಷ ಬಿಜೆಪಿಯಲ್ಲಿ ಸಂತಸ ಮನೆ ಮಾಡಿದೆ. ಮುಂದಿನ ಹೋರಾಟ ಪ್ರಕಟಕ್ಕೆ ಬಿಜೆಪಿ ಮುಂದಾಗಿದ್ದು, ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತುರ್ತು ಸುದ್ದಿಗೋಷ್ಠಿ ನಡೆಸಿದರು. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಮೈಸೂರಿನವರೆಗೂ ವಿಜಯೇಂದ್ರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಗಿತ್ತು. ಹೈಕೋರ್ಟ್​ ತೀರ್ಪು …

Read More »

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಾಳೆ ಬೆಳಿಗ್ಗೆ 10 ಗಂಟೆಗೆ ತುರ್ತು ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು : ಮುಡಾ ಹಗರಣದ ಬಗ್ಗೆ ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಾಳೆ ಬೆಳಗ್ಗೆ 10 ಗಂಟೆ ತುರ್ತು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಲ್ ಪಿ ಸಭೆ ನಡೆಯಲಿದ್ದು, ಮುಂದಿನ ಸಿಎಂ ನಡೆ ಬಹಳ ಕುತೂಹಲ ಮೂಡಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮವನ್ನು …

Read More »

ದೇವಸ್ಥಾನಗಳ ನಿರ್ವಹಣೆಗೆ ಸೂಕ್ತ ಕಾನೂನು ರಚನೆಯಾಗಬೇಕು: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ 1.80 ಲಕ್ಷ ದೇವಸ್ಥಾನಗಳಿದ್ದು, ಇದರಲ್ಲಿ 34 ಸಾವಿರ ದೇವಸ್ಥಾನಗಳು ಮಾತ್ರ ಮುಜರಾಯಿ ಇಲಾಖೆ ಅಧೀನದಲ್ಲಿವೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೇವಸ್ಥಾನಗಳನ್ನು ಮುಜರಾಯಿ ಇಲಾಖೆ ಅಧೀನದಿಂದ ಹೊರಗೆ ಇಡಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಇದ್ದ ರೀತಿಯಲ್ಲಿ ಸರ್ಕಾರದ ಅಧೀನದಿಂದ ದೇವಸ್ಥಾನಗಳನ್ನು ಹೊರಗಿಡಬೇಕು ಎಂಬ ಮಠಾಧೀಶರ ಆಗ್ರಹಕ್ಕೆ ಅವರು ಈ ರೀತಿ ಪ್ರತಿಕ್ರಿಯಿಸಿದರು. ನಮ್ಮ ರಾಜ್ಯದಲ್ಲಿ ಯಾವುದೇ ಮಠಗಳು ಸರ್ಕಾರದ ಅಧೀನದಲ್ಲಿ ಇಲ್ಲ. …

Read More »

ಬೆಂಗಳೂರಿನಲ್ಲಿ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತರಕಾರಿ ಬೆಲೆ ಏರಿಕೆ ಆಗಿದ್ದರ ಮಧ್ಯೆ ಈರುಳ್ಳಿ ಪ್ರಿಯರಿಗೆ ಇಲ್ಲೊಂದು ಸಿಹಿ ಸುದ್ದಿ ಸಿಕ್ಕಿದೆ, ಈರುಳ್ಳಿ ಕೆ.ಜಿ. ಚಿಲ್ಲರೆ ಬೆಲೆ 55 ರಿಂದ 65 ರೂಪಾಯಿವರೆಗೆ ಇದೆ. ಫ್ರೆಶೋದಲ್ಲಿ ಕೆ.ಜಿ. ಈರುಳ್ಳಿಗೆ 79 ರೂಪಾಯಿ ಇದೆ. ಇದೆಲ್ಲ ಗಮನಿಸಿರುವ ಕೇಂದ್ರ ಸರ್ಕಾರ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಇಂದಿನಿಂದ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ ಮಾಡುತ್ತಿದೆ. ಬೆಂಗಳೂರಿನಿಂದ ಇಂದಿನಿಂದ ಮೊಬೈಲ್ ವ್ಯಾನ್ ಮೂಲಕ ಕೇಂದ್ರ ಸರ್ಕಾರ ರಿಯಾಯಿತಿ ದರಕ್ಕೆ …

Read More »