BigTv News
September 23, 2024
Breaking News, ಬೆಂಗಳೂರು
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ನಾಲ್ಕನೇ ಸಭೆ ನಡೆಸಲಾಯಿತು. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಕಾಮಗಾರಿಗಳ ಅನುಷ್ಠಾನಕ್ಕೆ ರೂ.179.30 ಕೋಟಿ ಟೆಂಡರ್ ಮೊತ್ತಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿತ್ತು, ಈಗ ಕಾಮಗಾರಿ ಮುಗಿಸಲು 3 ತಿಂಗಳ ಡೆಡ್ ಲೈನ್ ನೀಡಲಾಗಿದೆ. ಈ ಜೊತೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ವಿದ್ಯಾರ್ಥಿಗಳ …
Read More »
BigTv News
September 23, 2024
Breaking News, ಬೆಂಗಳೂರು
ಬೆಂಗಳೂರು: ಕೃಷಿ ಬೆಳೆಗಳಿಗೆ ವಿದ್ಯುತ್ ಪೂರೈಕೆ ನಿರ್ವಹಣೆಗಾಗಿ ಎಐ ತಂತ್ರಜ್ಞಾನ ಬಳಕೆ ಮಾಡಲು ಇಂಧನ ಇಲಾಖೆ ಮುಂದಾಗಿದೆ. ಇಂಧನ ಸಚಿವ ಕೆ. ಜೆ ಜಾರ್ಚ್ ಮಾಹಿತಿ ನೀಡಿದ್ದು, ಕೃಷಿ ಬೆಳೆಗಳಿಗೆ ವಿದ್ಯುತ್ ಪೂರೈಕೆ ನಿರ್ವಹಣೆಗೆ ಎಐ ತಂತ್ರಜ್ಞಾನ ಬಳಕೆ ಮಾಡಲು ಇಂಧನ ಇಲಾಖೆ ಮುಂದಾಗಿದೆ. ಕೃಷಿ ಬೆಳೆಗಳಿಗೆ ಅಗತ್ಯತೆ ಪ್ರದೇಶವಾರು ಅನುಗುಣವಾಗಿ ವಿದ್ಯುತ್ ಪೂರೈಕೆ ನಿರ್ವಹಣೆಗೆ ಕೃತಕ ಬುದ್ದಿ ಮತ್ತೆ ತಂತ್ರಜ್ಞಾನ ಬಳಸಲು ಹಿಂದಿನ ಇಲಾಖೆ ಮುಂದಾಗಿದ್ದು, ಈಗಾಗಲೇ ಪ್ರಾಯೋಗಿಕವಾಗಿ …
Read More »
BigTv News
September 22, 2024
Breaking News, ಬೆಂಗಳೂರು
ಬೆಂಗಳೂರು: ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದ ವಿಚಾರ ದೇಶದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಲಡ್ಡು ತಯಾರಿಕೆಯಲ್ಲಿ ಈ ಹಿಂದೆ ಬಳಸಿರುವ ತುಪ್ಪ ಕಲಬೆರಕೆಯಿಂದ ಕೂಡಿತ್ತು ಎಂಬ ಆರೋಪ ಕೇಳಿಬಂದಿದೆ. ಇದರಿಂದ ಜಾಗೃತಗೊಂಡ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ತಯಾರಾಗುವ ವಿವಿಧ ಕಂಪನಿಯ ತುಪ್ಪವನ್ನು ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಿದೆ. ಇಲ್ಲಿ ತಯಾರಾಗುವ ಮತ್ತು ಮಾರಾಟ ಮಾಡುತ್ತಿರುವ ವಿವಿಧ ಕಂಪನಿಯ ತುಪ್ಪಗಳನ್ನು ಪರೀಕ್ಷೆ ನಡೆಸುವಂತೆ ಸಚಿವ ದಿನೇಶ್ ಗುಂಡೂರಾವ್ ರಾಜ್ಯ ಆಹಾರ ಸುರಕ್ಷಿತ ಹಾಗೂ ಗುಣಮಟ್ಟ …
Read More »
BigTv News
September 22, 2024
Breaking News, ಬೆಂಗಳೂರು
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಪಶ್ಚಿಮ ವಲಯದ ಮತ್ತಿಕೆರೆ ಮತ್ತು ಮಲ್ಲೆಶ್ವರದ ಬಡಾವಣೆಗಳಲ್ಲಿರುವ ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್ ಅಳವಡಿಸಲಾಗುತ್ತಿದೆ ಎಂದು ಬಿಬಿಎಂಪಿಯ ಆರೋಗ್ಯ ಹಾಗೂ ಪಶುಪಾಲನಾ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋಶ್ ಹೇಳಿದ್ದಾರೆ. ಬಿಝ್ ಆರ್ಬಿಟ್ ಸಂಸ್ಥೆ ಸಹಯೋಗದೊಂದಿಗೆ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್ ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ಹಿಂದೆ ಲಸಿಕೆ ಹಾಕಿದ ಬೀದಿನಾಯಿಗಳಿಗೆ ಬಣ್ಣ …
Read More »
BigTv News
September 22, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಸರಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಯಾದ ಕೆಎಚ್‌ಐಆರ್ (ನಾಲೆಡ್ಜ್ ಹೆಲ್ತ್ ಇನ್ನೋವೇಶನ್ ರೀಸರ್ಚ್) ಸಿಟಿಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ.26ರಂದು ಚಾಲನೆ ನೀಡಲಿದ್ದಾರೆ. ಇದರ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕಾರ್ಯಕ್ರಮ ಏರ್ಪಡಿಸಿದ್ದು, ದೇಶ ವಿದೇಶಗಳ ಗಣ್ಯ ಉದ್ಯಮಿಗಳು, ಶಿಕ್ಷಣ ತಜ್ಞರು, ಸಂಶೋಧಕರು ಮತ್ತು ವೈದ್ಯಕೀಯ ಕ್ಷೇತ್ರದ ಸಾಧಕರು ಭಾಗವಹಿಸಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಈ ಬಗ್ಗೆ …
Read More »
BigTv News
September 22, 2024
Breaking News, ಬೆಂಗಳೂರು
ಬೆಂಗಳೂರು: ದಸರಾ ಹಬ್ಬದ ಪ್ರಯುಕ್ತ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ ಮಾಡಲಾಗಿದೆ. ಇದರಿಂದಾಗಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಓಡಾಟಕ್ಕೆ ಅನುಕೂಲವಾಗಲಿದೆ. ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸಲು ನೈರುತ್ಯ ರೈಲ್ವೆಯು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.
Read More »
BigTv News
September 22, 2024
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕದ ಮೊದಲ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಬೆಂಗಳೂರಿನ ಯಲಹಂಕದಲ್ಲಿ ಉದ್ಘಾಟನೆಗೆ ಅಣಿಯಾಗಿದೆ. ಸುಮಾರು 370 ಮೆಗಾವ್ಯಾಟ್ ವಿದ್ಯುತ್ ಅನ್ನು ಅನಿಲ ಬಳಸಿ ಉತ್ಪಾದನೆ ಮಾಡುವ ಪ್ರಯೋಗ ಬಹುತೇಕ ಯಶಸ್ವಿಯಾಗಿದ್ದು, ಇನ್ನು ಎರಡು ದಿನದಲ್ಲಿ ಅಧಿಕೃತವಾಗಿ ವಿದ್ಯುತ್ ಉತ್ಪಾದನೆ ಶುರುವಾಗಲಿದೆ. ಯಲಹಂಕ ಕಂಬೈನ್ಡ್ ಸೈಕಲ್ ಪವರ್ ಪ್ಲಾಂಟ್ ಸೆಪ್ಟೆಂಬರ್ 24 ರಂದು ಯಲಹಂಕದಲ್ಲಿ ಕಾರ್ಯಾರಂಭ ಮಾಡಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಾವರವನ್ನು ಉದ್ಘಾಟಿಸಲಿದ್ದಾರೆ ಎಂದು ಇಂಧನ ಸಚಿವ …
Read More »
BigTv News
September 22, 2024
Breaking News, ಬೆಂಗಳೂರು
ಬೆಂಗಳೂರು: ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ತಿರುಪತಿ ಲಡ್ಡು ಪ್ರಕರಣ ಇದೀಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ತಿರುಪತಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ದನದ ಕೊಬ್ಬು, ಮೀನೆಣ್ಣೆ ಬೆರೆಕೆ ಮಾಡಿದ್ದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ. ಇನ್ನು ಮತ್ತೊಂದೆಡೆ ಇದೀಗ ಕರ್ನಾಟಕದ ಕೆಎಂಎಫ್ ನಂದಿನಿ ತುಪ್ಪಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಮತ್ತಷ್ಟು ನಂದಿನಿ ತುಪ್ಪ ಪೂರೈಸುವಂತೆ ಕೆ ಎಂ ಎಫ್ ಗೆ ಟಿಟಿಡಿ ಇ-ಮೇಲ್ …
Read More »
BigTv News
September 22, 2024
Breaking News, ಬೆಂಗಳೂರು
ಬೆಂಗಳೂರು : ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ ಪಂಪ್‍ಸೆಟ್‍ನ ವಿದ್ಯುತ್ ಆರ್.ಆರ್.ಸಂಖ್ಯೆಗೆ ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ಜೋಡಣೆಗೆ ಸೆ.23 ರ ನಾಳೆಯೇ ಕೊನೆಯ ದಿನವಾಗಿದೆ. ಆದ್ದರಿಂದ ಹೆಸ್ಕಾಂಗಳು 10 ಹೆಚ್‌ಪಿ ಪಂಪ್ ಸೆಟ್ ಹೊಂದಿರುವ ರೈತರ ಆಧಾರ್ ಸಂಖ್ಯೆ ಸಂಗ್ರಹ ಮಾಡುತ್ತಿದೆ. ಹಾಲಿ ಇರುವ ಕೃಷಿ ಪಂಪ್‍ಸೆಟ್‍ನ ವಾರಸುದಾರರು ಮರಣ ಹೊಂದಿದ್ದಲ್ಲಿ ಪ್ರಸ್ತುತ ಪಹಣಿಯಲ್ಲಿರುವ ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ, ಹಿಂದಿನ ವಾರಸುದಾರರ ಮರಣ ಪ್ರಮಾಣ ಪತ್ರ, …
Read More »
BigTv News
September 22, 2024
Breaking News, ಬೆಂಗಳೂರು
ಬೆಂಗಳೂರು: ಹೊರಗುತ್ತಿಗೆ ಕಾರ್ಮಿಕರ ಸೇವೆಗಳನ್ನು ಒದಗಿಸುವ ಸೊಸೈಟಿಯನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸುವ ಮಹತ್ವದ ನಿರ್ಧಾರಕ್ಕೆ ಕಾರ್ಮಿಕ ಇಲಾಖೆ ಮುಂದಾಗಿದೆ. ಈ ಕುರಿತು ಸಚಿವ ಸಂತೋಷ್ ಲಾಡ್ ಮಾಹಿತಿ ನೀಡಿದ್ದು, ಪ್ರಸ್ತುತ ಕಲಬುರ್ಗಿ ವಿಭಾಗದ ಬೀದರ್ ಜಿಲ್ಲೆಯಲ್ಲಿ ಮಾತ್ರ ಈ ಮಾದರಿ ಅನುಷ್ಠಾನದಲ್ಲಿತ್ತು. ಈಗ ಇತರ ಮೂರು ವಿಭಾಗಗಳ ಮೈಸೂರು, ಧಾರವಾಡ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಈ ಸೊಸೈಟಿ ರಚಿಸಲು ಪ್ರಸ್ತಾವನೆ ಕೇಳಲಾಗಿದೆ ಎಂದು ತಿಳಿಸಿದ್ದಾರೆ. ಆಯಾ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ …
Read More »