Breaking News

ಬೆಂಗಳೂರು

ರೇಷ್ಮೆ ಕೃಷಿ ಪಾಲುದಾರರಿಗೆ ಸಹಾಯಧನ ಹೆಚ್ಚಿಸಲು ಆಗ್ರಹ

ಬೆಂಗಳೂರು: ರೇಷ್ಮೆ ಕೃಷಿ ಪಾಲುದಾರರಿಗೆ ಸರ್ಕಾರ ನೀಡುತ್ತಿರುವ ಸಹಾಯಧನ ಬಹಳ ಕಡಿಮೆ ಇದೆ. ಇದನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ರೇಷ್ಮೆ ಮಂಡಳಿ ಸದಸ್ಯ, ಸಂಸದ ಎ.ಜಿ. ಲಕ್ಷ್ಮಿನಾರಾಯಣ ಆಗ್ರಹಿಸಿದರು. ನಗರದಲ್ಲಿ ಶನಿವಾರ ನಡೆದ ರೇಷ್ಮೆ ಕೃಷಿ ಪಾಲುದಾರರ ಸಭೆ ಮತ್ತು ಕೇಂದ್ರ ರೇಷ್ಮೆ ಮಂಡಳಿ ಅಮೃತ ಮಹೋತ್ಸವ ಆಚರಣೆಯಲ್ಲಿ ಅವರು ಮಾತನಾಡಿದರು. ಕೃಷಿ ಪಾಲುದಾರರಿಗೆ ನೀಡುತ್ತಿರುವ ಸಾಲ ಸೌಲಭ್ಯವನ್ನು ₹4 ಲಕ್ಷದಿಂದ ₹10 ಲಕ್ಷಕ್ಕೆ ಏರಿಸಬೇಕು. ರೀಲರ್‌ಗಳಿಗೂ ಸಹಾಯಧನವನ್ನು …

Read More »

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಜಿಯೋ ಟವರ್ ಸ್ಥಾಪನೆ

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿಯೂ ರಿಲಯನ್ಸ್ ಜಿಯೋದ ನೆಟ್‌ವರ್ಕ್ ಒದಗಿಸಿಕೊಡುವುದಕ್ಕಾಗಿ ಟವರ್ ಸ್ಥಾಪಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಗಾಜನೂರು, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ, ಹೂಗ್ಯಂನಂತಹ ಗ್ರಾಮಗಳಲ್ಲಿ ಜಿಯೋ ಟವರ್ ಸ್ಥಾಪಿಸುವಲ್ಲಿ ಯಶಸ್ಸು ಕಂಡಿದೆ. ಪರಿಸರ ಮತ್ತು ಭೌಗೋಳಿಕ ಸವಾಲುಗಳನ್ನು ಮೀರಿ ಜಿಯೋ 4ಜಿ ಮತ್ತು 5ಜಿ ನೆಟ್‌ವರ್ಕ್ ಸೇವೆಯನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದೆ. ರಾಜ್ಯದಾದ್ಯಂತ ಮುನ್ನೂರಕ್ಕೂ ಹೆಚ್ಚು ತಾಲ್ಲೂಕುಗಳಿಗೆ ತನ್ನ ಸೇವೆಯನ್ನು ವಿಸ್ತರಿಸಿದ್ದು, ಇದರಿಂದ ಆ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಅನೇಕ ಹಳ್ಳಿಗಳು …

Read More »

ಈಶಾನ್ಯ ಭಾರತದ ಮೂರು ರಾಜ್ಯಗಳಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಪ್ರವಾಸ

ಬೆಂಗಳೂರು: ಈಶಾನ್ಯ ಭಾರತದ ಮೂರು ರಾಜ್ಯಗಳಲ್ಲಿ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ನಿನ್ನೆಯಿಂದ ಮೂರು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ನಿನ್ನೆ ರಾತ್ರಿಯೇ ಬೆಂಗಳೂರಿನಿಂದ ನಾಗಾಲ್ಯಾಂಡ್‌ ರಾಜ್ಯದ ಧೀಮಾಪುರಕ್ಕೆ ತೆರಳಿದ್ದಾರೆ. ನಾಗಲ್ಯಾಂಡ್‌ ಮುಖ್ಯಮಂತ್ರಿ ನಿಪ್ಯು ರಿಯುಜು ಅವರು, ಧೀಮಾಪುರದಲ್ಲಿ ಕುಮಾರಸ್ವಾಮಿ ಹಾಗೂ ಅವರ ಪತ್ನಿ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಸ್ವಾಗತಿಸಿ ದಂಪತಿಗೆ ಭೋಜನ ಕೂಟ ಏರ್ಪಡಿದ್ದರು. ಬಳಿಕ ಆ ರಾಜ್ಯದ …

Read More »

ಬೆಂಗಳೂರಿನಲ್ಲಿ ದೇಶದ ಮೊದಲ ಬುಲೆಟ್ ಟ್ರೇನ್ ನಿರ್ಮಾಣ

ಬೆಂಗಳೂರು: ದೇಶದಲ್ಲಿ ಓಡಾಡಲಿರುವ ಮೊದಲ ಬುಲೆಟ್ ಟ್ರೈನ್ ಬೆಂಗಳೂರಿನಲ್ಲೇ ತಯಾರಾಗಲಿದೆ ಎಂದು ತಿಳಿದುಬಂದಿದೆ. ಎಂಟು ಬೋಗಿಗಳ ಎರಡು ರೈಲುಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರಿ ಸ್ವಾಮ್ಯದ ಬಿಇಎಂಎಲ್​ ಮಾತ್ರ ಬಿಡ್ ಸಲ್ಲಿಸಿದೆ. ಹೀಗಾಗಿ ಬುಲೆಟ್‌ ಟ್ರೇನ್‌ ತಯಾರಿಕೆಯಲ್ಲಿ ಬೆಂಗಳೂರು ಪ್ರಮುಖ ಪಾತ್ರ ವಹಿಸಲಿದೆ. ಬೆಂಗಳೂರು, ಮೈಸೂರು ಮತ್ತು ಕೆಜಿಎಫ್​ನಲ್ಲಿ ಘಟಕಗಳನ್ನು ಹೊಂದಿರುವ ಬಿಇಎಂಎಲ್‌ನ ಪರಿಪೂರ್ಣ ಘಟಕ ಬೆಂಗಳೂರು, ಬುಲೆಟ್‌ ಟ್ರೇನ್‌ ತಯಾರಿಕೆಗೆ ಅಗತ್ಯವಾದ ಮೂಲಸೌಲಭ್ಯಗಳನ್ನು ಹೊಂದಿದೆ. ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್​) …

Read More »

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಸಿಬ್ಬಂದಿಯಿಂದ ಧರಣಿ

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸುಪ್ರೀಂ ಕೋರ್ಟ್ ಆದೇಶದಂತೆ ನಿವೃತ್ತಿ ಉಪಧನ ಗ್ರಾಚ್ಯುಟಿ ಸೌಲಭ್ಯ ಹಾಗೂ ಗೌರವ ಧನ ಇಡುಗಂಟು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ಫ್ರೀಡಂ ಪಾರ್ಕ್‍ನಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಧರಣಿ ನಡೆಸಲಾಯಿತು. ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಅನ್ವಯ ಇದೀಗ ನೀಡಲಾಗುತ್ತಿರುವ ಗೌರವ ಸಂಭಾವನೆಯಲ್ಲಿ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. …

Read More »

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಪ್ರತಿಭಟನೆ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿನಿಂದನೆ, ಜೀವಬೆದರಿಕೆ, ಹನಿಟ್ರ್ಯಾಪ್ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಮುನಿರತ್ನ ಅವರ ವಿರುದ್ಧ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಸಿಡಿದೆದ್ದಾರೆ. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿ ಬಳಿ ಮುನಿರತ್ನ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ರು. ಮುನಿರತ್ನ ಓರ್ವ ಒಕ್ಕಲಿಗ, ದಲಿತರ ವಿರೋಧಿ ಎಂದು ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ರು. ಈ ಕೂಡಲೇ ಶಾಸಕ ಸ್ಥಾನಕ್ಕೆ ಮುನಿರತ್ನ ರಾಜೀನಾಮೆ ನೀಡುವಂತೆ …

Read More »

ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಹೆಚ್ಚುವರಿ ಗೋಧಿ ಹಂಚಿಕೆಯಲ್ಲಿ ಹೆಚ್ಚಳ

ಬೆಂಗಳೂರು: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿಯಲ್ಲಿ (ಪಿಎಂಜಿಕೆಎವೈ) ಗೋಧಿ ಹಂಚಿಕೆಯನ್ನು ಹೆಚ್ಚಿಸಲಾಗಿದೆ ಎಂದು ಸರ್ಕಾರ ಘೋಷಿಸಿದೆ. ಯೋಜನೆಯಡಿ ಫಲಾನುಭವಿಗಳು ಆಹಾರ ಧಾನ್ಯಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಆಹಾರ ಕಾರ್ಯದರ್ಶಿ ಹೇಳಿದ್ದಾರೆ. ವರದಿಗಳ ಪ್ರಕಾರ ಮಾರುಕಟ್ಟೆಯಲ್ಲಿ ಗೋಧಿ ಬೆಲೆಯನ್ನು ಸ್ಥಿರಗೊಳಿಸಲು ಹಂಚಿಕೆ ಮಾಡಲಾಗುತ್ತಿದೆ. ಆಹಾರ ಕಾರ್ಯದರ್ಶಿ ಸಂಜೀವ್ ಚೋಪ್ರಾ ಪ್ರಕಾರ, ಹಂಚಿಕೆ ಅಕ್ಟೋಬರ್‌ನಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ. ಸಚಿವರ ಸಮಿತಿಯು ಪಿಎಂಜಿಕೆಎವೈ ಅಡಿಯಲ್ಲಿ ಹೆಚ್ಚುವರಿ 35 ಲಕ್ಷ ಟನ್ …

Read More »

ಕರ್ನಾಟಕದಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕಸ್ತೂರಿ ರಂಗನ್‌ ವರದಿ ಜಾರಿಗೆ ಸಮ್ಮತಿ

ಬೆಂಗಳೂರು: ಕರ್ನಾಟಕದಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆ ನಿಟ್ಟಿನಲ್ಲಿ ಕಸ್ತೂರಿ ರಂಗನ್‌ ವರದಿ ಜಾರಿಗೆ ಸಂಬಂಧಿಸಿ ಜನಪ್ರತಿನಿಧಿಗಳ ಸಮ್ಮತಿ ದೊರಕಿದೆ. ಕೆಲವು ಷರತ್ತುಗಳೊಂದಿಗೆ ವರದಿಯನ್ನು ಕರ್ನಾಟಕದಲ್ಲಿ ಜಾರಿಗೊಳಿಸಿ ಪಶ್ಚಿಮ ಘಟ್ಟಗಳ ಶ್ರೇಣಿಯನ್ನು ಉಳಿಸಿಕೊಳ್ಳಬಹುದು ಎನ್ನುವ ಸಲಹೆಯನ್ನೂ ನೀಡಲಾಗಿದೆ.ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16,114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದ್ದು, ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಸಮ್ಮತಿಸಬಹುದು ಎನ್ನುವುದು ಪ್ರಮುಖ ನಿರ್ಣಯ ಈ …

Read More »

ಅಡುಗೆ ಎಣ್ಣೆ ಬೆಲೆ ಏರಿಕೆ: ಗ್ರಾಹಕರಿಂದ ತೀವ್ರ ಆಕ್ರೋಶ

ಬೆಂಗಳೂರು : ಇತ್ತೀಚೆಗೆ ರಾಜ್ಯ ಸರ್ಕಾರ ಹಾಲು ಪೆಟ್ರೋಲ್ ಹಾಗೂ ತರಕಾರಿ ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿತ್ತು. ಇದರಿಂದ ಗ್ರಾಹಕರು ಸಹಜವಾಗಿ ಆಕ್ರೋಶ ಹೊರಹಾಕಿದ್ದರು. ಇದರ ಮಧ್ಯ ಇದೀಗ ಅಡುಗೆ ಎಣ್ಣೆ ಬೆಲೆ ಕೂಡ ಏರಿಕೆ ಮಾಡಿ ಸರ್ಕಾರ ಜನರ ಕೆಂಗಣ್ಣಿಗೆ ಗುರಿಯಾಗಿದೆ. ಸದ್ಯ ಅಡುಗೆ ಎಣ್ಣೆ ಬೆಲೆ ಲೀಟರ್ ಗೆ 20 ರೂಪಾಯಿ ಹೆಚ್ಚಳ ಮಾಡಿದ್ದೂ, ಇದರಿಂದ ಗ್ರಾಹಕರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈಗಾಗಲೇ ಹಾಲು, …

Read More »

ಕರ್ನಾಟಕ ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಉಪಚುನಾವಣೆ: ಚುನಾವಣಾ ಆಯೋಗ ಘೋಷಣೆ

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ. ಈ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ಉಪ ಚುನಾವಣೆ ಎದುರಾಗಿದೆ. ಕರ್ನಾಟಕ ವಿಧಾನ ಪರಿಷತ್‌ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಸದಸ್ಯರನ್ನು ಆಯ್ಕೆ …

Read More »