BigTv News
September 15, 2024
Breaking News, ಬೆಂಗಳೂರು
ಬೆಂಗಳೂರು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್ ನಿಂದ ಚಾಮರಾಜನಗರದವರೆಗೆ 2500 ಕಿಲೋಮೀಟರ್ ಮಾನವ ಸರಪಳಿ ನಿರ್ಮಿಸಲಾಗಿದ್ದು, ಕಾರ್ಯಕ್ರಮ ಗಿನ್ನೆಸ್ ದಾಖಲೆಗೆ ಪಾತ್ರವಾಗಿದೆ. ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ ಕಾರ್ಯಕ್ರಮಕ್ಕೆ ಚಾಲನೆ ನಿಡಿದ್ದು, ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಗಿನ್ನೆಸ್ ವಿಶ್ವ ದಾಖಲೆ ಪ್ರಶಸ್ತಿ ಸ್ವೀಕರಿಸಿದ್ದಾರೆ. ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 2500 ಕಿ.ಮೀ. ಉದ್ದದ ಮಾನವ ಸರಪಳಿಯನ್ನು ರಾಜ್ಯಾದ್ಯಂತ ನಿರ್ಮಿಸುವ ಮೂಲಕ ವಿಶ್ವ ದಾಖಲೆಗೆ ಪಾತ್ರವಾಗಿದೆ. ಇದೇ ವೇಳೆ …
Read More »
BigTv News
September 15, 2024
Breaking News, ಬೆಂಗಳೂರು
ಬೆಂಗಳೂರು: ಮುಂದಿನ ನಾಲ್ಕು ವಾರಗಳಲ್ಲಿ ಕರ್ನಾಟಕದ ಎಲ್ಲಾ ಭಾಗಗಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನಗಳಲ್ಲಿ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ, ಮಲೆನಾಡು ಮತ್ತು ರಾಜ್ಯದ ಕರಾವಳಿ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಐಎಂಡಿ ಸೂಚನೆ ನೀಡಿದೆ. ಐಎಂಡಿ ಮೂಲಗಳ ಪ್ರಕಾರ ಜೂನ್ 1ರಿಂದ ಆಗಸ್ಟ್ 16, 2024 ರವರೆಗೆ ರಾಜ್ಯದಲ್ಲಿ ಸಾಮಾನ್ಯ 580.2 ಎಂಎಂಗೆ …
Read More »
BigTv News
September 15, 2024
Breaking News, ಬೆಂಗಳೂರು
ಬೆಂಗಳೂರು: ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಲ್ಲಿ ಎನ್ನುವ ಪ್ರಶ್ನೆಗೆ ಕೆಲವೇ ದಿನಗಳಲ್ಲಿ ಅಧಿಕೃತ ಉತ್ತರ ಸಿಗುವ ಸಾಧ್ಯತೆ ಇದೆ. ಡಾಬಸ್‌ಪೇಟೆ, ಕನಕಪುರ, ಮಾಗಡಿ, ದೊಡ್ಡಬಳ್ಳಾಪುರ, ಕನಕಪುರ, ವಸಂತನರಸಾಪುರ, ನೆಲಮಂಗಲ ಸೇರಿದಂತೆ ಹಲವು ಸ್ಥಳಗಳ ಹೆಸರು ಕೇಳಿಬಂದಿತ್ತು. ಇದೀಗ ನೆಲಮಂಗಲದ ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದು ಬಹುತೇಕ ಖಚಿತವಾಗಿದೆ. ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಬಂಧ 11ನೇ ಸುತ್ತಿನ ಸಭೆ ನಡೆದಿದೆ. ಐಡೆಕ್ ಸಂಸ್ಥೆ …
Read More »
BigTv News
September 14, 2024
Breaking News, ಬೆಂಗಳೂರು
ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ್ ಗೌರವ್ ದ್ವಾರಕಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಅತ್ಯಂತ ಕಡಿಮೆ ವೆಚ್ಚದಲ್ಲಿ ದ್ವಾರಕಾ, ನಾಗೇಶ್ವರ, ಸೋಮನಾಥ ಹಾಗೂ ತ್ರಯಂಬಕೇಶ್ವರ ದೇವಾಲಯಗಳ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಈ ಪ್ಯಾಕೇಜ್‌ಗೆ ಒಟ್ಟು ₹30,000 ತಗುಲಲಿದ್ದು, ಈ ಪೈಕಿ ರಾಜ್ಯ ಸರ್ಕಾರದ ವತಿಯಿಂದ ಅಂದಾಜು ₹15,000 ಮೊತ್ತವನ್ನು ಭರಿಸಲಾಗುತ್ತದೆ ಎಂದು ದತ್ತಿ ಇಲಾಖೆ ತಿಳಿಸಿದೆ. ಯಾತ್ರಾರ್ಥಿಗಳು ಬುಕ್ಕಿಂಗ್ ಮೊತ್ತವಾಗಿ ₹15,000 ಅನ್ನು ಮಾತ್ರ ಪಾವತಿಸಬೇಕಾಗುತ್ತದೆ. …
Read More »
BigTv News
September 14, 2024
Breaking News, ಬೆಂಗಳೂರು
ಬೆಂಗಳೂರು: ಸೆಪ್ಟೆಂಬರ್ 22ರಂದು ನಡೆಸಲು ನಿಗದಿಯಾಗಿದ್ದ 402 ಪಿಎಸ್‌ಐ ಹುದ್ದೆಗಳ ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯ ಕೇಳಿ ಬಂದಿತ್ತು. ಕೆಇಎ ಅವರೊಂದಿಗೆ ಚರ್ಚಿಸಿ, ಸೆ.28ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆ ದಿನ ಯುಪಿಎಸ್‌ಸಿ ಇಂಗ್ಲೀಷ್ ಕಡ್ಡಾಯ ಪರೀಕ್ಷೆ ಇರುವುದರಿಂದ ಅಕ್ಟೋಬರ್ 3ರಂದು ನಡೆಸಲು ನಿರ್ಧರಿಸಲಾಗಿದೆ. ಕೆಇಎ ಅವರು ಅಧಿಕೃತವಾಗಿ ಪ್ರಕಟಣೆ ಮಾಡಲಿದ್ದಾರೆ ಎಂದು ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ತಿಳಿಸಿದರು. ವಿಧಾನಸೌಧ ಸಮಿತಿ ಕೊಠಡಿಯಲ್ಲಿ ನಡೆದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ …
Read More »
BigTv News
September 14, 2024
Breaking News, ಬೆಂಗಳೂರು
ಬೆಂಗಳೂರು: ಲಂಡನ್ನಲ್ಲಿರುವ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ಮಾರಕ ದಶಮಾನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಲು ಸಂಸ್ಥೆ ಚಿಂತನೆ ನಡೆಸಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಕರ್ನಾಟಕದ ಹಿರಿಯ ಬಿಜೆಪಿ ನಾಯಕ, ಸಂಸದ ಬಸವರಾಜ ಬೊಮ್ಮಾಯಿ ಮೂಲಕ ಮೋದಿ ಅವರಿಗೆ ಆಹ್ವಾನ ನೀಡಲು ಸಂಸ್ಥೆ ಉದ್ದೇಶಿಸಿದೆ ಎಂಬುದು ತಿಳಿದುಬಂದಿದೆ. ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ಮಾರಕ ಸಂಸ್ಥೆ ಆಹ್ವಾನದ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಸದ್ಯ ಕುಟುಂಬ ಸಮೇತ ಲಂಡನ್ಗೆ ಭೇಟಿ ನೀಡಿದ್ದಾರೆ. ಲಂಡನ್ನಲ್ಲಿರುವ …
Read More »
BigTv News
September 13, 2024
Breaking News, ಬೆಂಗಳೂರು
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸಾರಿಗೆ ಇಲಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಿಎಂಟಿಸಿಗೆ ಸೇರ್ಪಡೆಯಾದ 100 ನೂತನ ಬಿಎಸ್-6 ಬಸ್‌ಗಳಿಗೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದರು. ಬಡವ ಮತ್ತು ಶ್ರೀಮಂತರ ಅಂತರ ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರ 5 ಗ್ಯಾರಂಟಿ ಯೋಜನೆ ಜಾರಿ ತಂದಿದೆ. ಶಕ್ತಿ ಯೋಜನೆ ಕಾರ್ಯಗತದ ನಂತರ ಸರ್ಕಾರಿ ಬಸ್‌ನಲ್ಲಿ ಓಡಾಡುವರ ಸಂಖ್ಯೆ ಹೆಚ್ಚಾಗಿದೆ. …
Read More »
BigTv News
September 13, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿನ ವಿದ್ಯುತ್ ಬಳಕೆ ಮೇಲೆ ನಿಗಾ ಇರಿಸಲು ಹಾಗೂ ವಿದ್ಯುತ್ ವೆಚ್ಚ ಕಡಿಮೆ ಮಾಡಲು ರಾಜ್ಯದ 50 ಗ್ರಾಮ ಪಂಚಾಯತಿಗಳಲ್ಲಿ ಸೋಲಾರ್ ಬೀದಿ ದೀಪಗಳನ್ನು ಅಳವಡಿಸುವ ಹೊಂಬೆಳಕು ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ವರ್ಷದ ಆಯವ್ಯಯದಲ್ಲಿ ಘೋಷಿಸಿದ್ದಂತೆ ಹೊಂಬೆಳಕು ಕಾರ್ಯಕ್ರಮವನ್ನು ಜಾರಿಗೆ ತರಲಾಗುತ್ತಿದ್ದು, ಈ ಕಾರ್ಯಕ್ರಮದ ಅನುಷ್ಠಾನಕ್ಕಾಗಿ 25 …
Read More »
BigTv News
September 13, 2024
Breaking News, ಬೆಂಗಳೂರು
ಬೆಂಗಳೂರು: ಕೆಲವೊಂದು ಪರೀಕ್ಷೆಗಳು ಮಕ್ಕಳ ಭವಿಷ್ಯಕ್ಕೆ ಬಹಳ ಮುಖ್ಯವಾಗಿದ್ದು, ಅದರಲ್ಲೂ ಎಸ್‌ಎಸ್‌ಎಲ್ ಸಿ ಪಿಯು ಪರೀಕ್ಷೆಗಳು ತುಂಬಾನೇ ಮುಖ್ಯವಾಗಿರುತ್ತವೆ. 100 ಅಂಕಗಳಿಗೆ 3 ಗಂಟೆ ಪರೀಕ್ಷೆ ನಡೆಸಲಾಗುತ್ತದೆ ಇಡೀ ವರ್ಷ ಓದಿರುವುದನ್ನು 3 ಗಂಟೆಗಳಲ್ಲಿ ಬರೆಯಬೇಕು. ಎಷ್ಟೋ ಮಕ್ಕಳಿಗೆ ಈ ಸಮಯವೇ ಸಾಕಾಗುವುದಿಲ್ಲ, ಆದರೆ ಈಗ ಆ ಸಮಯವನ್ನು ಕೂಡ ಇಳಿಸಲಾಗುತ್ತಿದೆ. ಈ ಸಂಬಂಧ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದ್ದು, ಹೊಸ ನಿಯಮ ಜಾರಿಗೆ ತಂದಿದೆ. ಇಷ್ಟು ವರ್ಷ …
Read More »
BigTv News
September 13, 2024
Breaking News, ಬೆಂಗಳೂರು
ಬೆಂಗಳೂರು: ಈದ್‌ಮಿಲಾದ್ ಹಬ್ಬದ ಪ್ರಯುಕ್ತ ಬೆಂಗಳೂರು ನಗರ ಪೊಲೀಸರು ಕೆಲ ಸೂಚನೆಗಳನ್ನು ಹೊರಡಿಸಿದ್ದಾರೆ. ಅದರಂತೆ ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ಮ್ಯೂಸಿಕ್ ಬಳಸುವಂತಿಲ್ಲ, ಹರಿತವಾದ ಆಯುಧ ಇಟ್ಟುಕೊಳ್ಳುವಂತಿಲ್ಲ. ಈದ್‌ಮಿಲಾದ್ ಹಬ್ಬದ ದಿನಗಳಾದ ಸೆ.15 ಹಾಗೂ 16ರಂದು ಮುಸ್ಲಿಮರು ನಗರದಲ್ಲಿ ಮೆರವಣಿಗೆ ನಡೆಸಲಿದ್ದಾರೆ. ವೈಎಂಸಿಎ ಮೈದಾನ, ಮಿಲ್ಲರ್ ರಸ್ತೆ, ಖುದ್ದುಸಾಬ್ ಈದ್ಗಾ ಮೈದಾನ, ಶಿವಾಜಿನಗರ ಛೋಟಾ ಮೈದಾನ, ಭಾರತೀನಗರದ ಸುಲ್ತಾನ್‌ಜೀ ಗುಂಟಾ ಮೈದಾನ ಮತ್ತಿತರ ಕಡೆಗಳಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಈ ಸಂಬಂಧ …
Read More »