Breaking News

ಬೆಂಗಳೂರು

ನಾಗಮಂಗಲದಲ್ಲಿ ಉದ್ವಿಗ್ನ ಸ್ಥಿತಿ: ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲು ಯತ್ನಾಳ್ ಆಗ್ರಹ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ದುರದ್ದೇಶಪೂರ್ವಕವಾಗಿ ಕಲ್ಲುತೂರಾಟ ನಡೆಸಿದ್ದು, ಇದು ಪೂರ್ವ ನಿಯೋಜಿತಕೃತ್ಯವಾಗಿದೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ತಾರ್ಕಿಕ ಅಂತ್ಯ ನೀಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಫೈರ್ ಬ್ರ್ಯಾಂಡ್ ಬಿಜೆಪಿ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ. ನಾಗಮಂಗಲ ಪಟ್ಟಣದಲ್ಲಿ ನಡೆದ ಗಲಭೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಯತ್ನಾಳ್ ಅವರು, ನಿನ್ನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ …

Read More »

ಮುಂದಿನ 4 ವರ್ಷ ನಾನೇ ಸಿಎಂ: ಸಿದ್ದರಾಮಯ್ಯರಿಂದ ಮಹತ್ವದ ಘೋಷಣೆ

ಬೆಂಗಳೂರು: ಮೂಡಾ‌ ಹಗರಣದಿಂದ ಸಿಎಂ ಸಿದ್ದರಾಮಯ್ಯ ಅವರ ಮೇಲೆ ವಿಪಕ್ಷ ನಾಯಕರು ದಾಳಿ ನಡೆಸುತ್ತಲೇ ಇದ್ದು, ಕೇಸ್ ಕೋರ್ಟ್ ನಲ್ಲಿ ನಡೆಯುತ್ತಿರುವ ಕಾರಣ ಸಿಎಂ ಸ್ಥಾನಕ್ಕೆ ಕುತ್ತು ಬರುತ್ತೆ, ಸರ್ಕಾರ ಪತನವಾಗುತ್ತೆ ಎಂದೇ ವಿಪಕ್ಷ ನಾಯಕರು ಹೇಳಿಕೆಗಳನ್ನ ನೀಡುತ್ತಿದ್ದಾರೆ. ಇದರ ನಡುವೆ ನಾನು ಕೂಡ ಸಿಎಂ ಆಕಾಂಕ್ಷಿ, ನಾನ್ಯಾಕೆ ಸಿಎಂ ಆಗಬಾರದು ಅಂತ ಹನುಮಂತನ ಬಾಲ ಬೆಳೆದಂತೆ ಆಕಾಂಕ್ಷಿಗಳ ಲೀಸ್ಟ್ ಬೆಳೆಯುತ್ತಾ ಹೋಗುತ್ತಿದೆ. ಹೀಗಾಗಲೇ ಸಿಎಂ ರೇಸ್‌ನಲ್ಲಿ ಸತೀಶ್ ಜಾರಕಿಹೊಳಿ, …

Read More »

ಸಂಕಷ್ಟಕ್ಕೆ ಸಿಲುಕಿದ ಕರ್ನಾಟಕದ ಹೈನುಗಾರಿಕೆ ವಲಯ

ಬೆಂಗಳೂರು: ಹಾಲು ಉತ್ಪಾದಕರು ಒಂದೆಡೆ ಚಿಲ್ಲರೆ ದರ ಏರಿಕೆ ಮಾಡುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದರೆ, ಮತ್ತೊಂದೆಡೆ ಹಾಲು ಉತ್ಪಾದಕರು ಪ್ರೋತ್ಸಾಹಧನ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹೈನುಗಾರಿಕೆ ವಲಯ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ. ನಂದಿನಿ ಬ್ರಾಂಡ್‌ನಡಿಯಲ್ಲಿ ಸರಕುಗಳನ್ನು ಮಾರಾಟ ಮಾಡುವ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಜೂನ್‌ನಲ್ಲಿ ಪ್ರತಿ 500 ಮಿಲಿ ಪ್ಯಾಕೆಟ್‌ಗೆ 50 ಮಿಲಿ ಸೇರಿಸುವ ಸಂದರ್ಭದಲ್ಲಿ 2 ರೂ. ಹೆಚ್ಚಳ ಮಾಡಿದೆ. ಆದರೆ ಹಾಲು …

Read More »

100 ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಂದು ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 ನೂತನ‌ ಬಸ್ ಗಳು ಬಿಎಂಟಿಸಿ ಸೇರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ …

Read More »

11 ಸಾವಿರ ಎಕರೆ ಭೂಮಿಯನ್ನು ಅಧಿಸೂಚಿತ ಅರಣ್ಯ ಎಂದು ಘೋಷಣೆ: ಈಶ್ವರ ಖಂಡ್ರೆ

ಬೆಂಗಳೂರು: ಕಳೆದ 18 ತಿಂಗಳಲ್ಲಿ ಅರಣ್ಯ ಇಲಾಖೆ ಸುಮಾರು 11 ಸಾವಿರ ಎಕರೆ ಭೂಮಿಯನ್ನು ಅಧಿಸೂಚಿತ ಅರಣ್ಯ ಎಂದು ಘೋಷಿಸಿದೆ. ಜತೆಗೆ ಬೆಂಗಳೂರು, ಕೋಲಾರ, ಬೀದರ್‌ ಸೇರಿ ರಾಜ್ಯದ ವಿವಿಧೆಡೆ ಸಾವಿರಾರು ಕೋಟಿ ರೂ. ಬೆಲೆ ಬಾಳುವ 10 ಸಾವಿರ ಎಕರೆಗೂ ಹೆಚ್ಚು ಅರಣ್ಯ ಭೂಮಿಯನ್ನು ಮರಳಿ ವಶಕ್ಕೆ ಪಡೆಯಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದರು. ಅವರು ಬೆಂಗಳೂರಿನ ಅರಣ್ಯ ಭವನದಲ್ಲಿ ರಾಷ್ಟ್ರೀಯ ಹುತಾತ್ಮರ ದಿನದ ಅಂಗವಾಗಿ …

Read More »

ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ: ಅರಣ್ಯ ರಕ್ಷಕರು ಜೀವ ಸಂಕುಲದ ಸಂರಕ್ಷಕರು

ಬೆಂಗಳೂರು: ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಷ್ಟ್ರೀಯ ಅರಣ್ಯ ಹುತಾತ್ಮ‌ರ ದಿ‌ನದ ಅಂಗವಾಗಿ ಅರಣ್ಯ ಭವನದಲ್ಲಿನ‌ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು, ರಾಜ್ಯದಲ್ಲಿ ಅನುಪಾತಕ್ಕೆ ತಕ್ಕಷ್ಟು ಅರಣ್ಯವಿಲ್ಲ ಆದ್ದರಿಂದ ಅರಣ್ಯೀಕರಣ ಹೆಚ್ಚಾಗಬೇಕು ಕಾಡು ಮತ್ತು ವನ್ಯ ಪ್ರಾಣಿ ಸಂಪತ್ತಿನ‌ ರಕ್ಷಣೆ ಕೇವಲ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಯ ಕರ್ತವ್ಯ ಎಂದರೆ ನಾವು ನಮ್ಮ‌ ಹೊಣೆಗಾರಿಕೆಯಿಂದ ತಪ್ಪಿಸಿಕೊಂಡಂತಾಗುತ್ತದೆ ಎಂದರು. …

Read More »

ಬಿಜೆಪಿ ಸರ್ಕಾರದ ಹಗರಣದ ತನಿಖೆ ನಡೆಸಲು ಸಚಿವ ಸಂಪುಟ ಉಪ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವಸಂಪುಟ ಉಪ ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಕುರಿತು ಬುಧವಾರ ಅರಣ್ಯಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಕುರಿತ …

Read More »

ಮೀಸಲಾತಿ ರದ್ದು ಕುರಿತು ರಾಹುಲ್ ಗಾಂಧಿ ಹೇಳಿಕೆ ವಿವಾದ: ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಬಿಜೆಪಿ

ಬೆಂಗಳೂರು: ಮೀಸಲಾತಿ ರದ್ದುಪಡಿಸುವುದಾಗಿ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರು ಅಮೆರಿಕದಲ್ಲಿ ತಮ್ಮ ಮನದಾಳದ ಮಾತನ್ನು ಹೇಳಿದ್ದಾರೆ. ಇದನ್ನು ಖಂಡಿಸಿ ಇವತ್ತಿನಿಂದ ಎರಡು ದಿನಗಳ ಕಾಲ ರಾಹುಲ್ ಗಾಂಧಿಯವರ ಪ್ರತಿಕೃತಿ ದಹನ ಮಾಡಲಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಪ್ರಕಟಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎಸ್‍ಸಿ, ಎಸ್‍ಟಿಗಳಿಗೆ ಗೌರವ ಕೊಡಬೇಕು, ಅವರಿಗೆ ರಕ್ಷಣೆ ಕೊಡಬೇಕೆಂಬ …

Read More »

ಅರಣ್ಯ ಇಲಾಖೆ ಸಿಬ್ಬಂದಿಯೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ ಬಳಸಿಕೊಳ್ಳಲು ಅವಕಾಶ: ಈಶ್ವರ ಖಂಡ್ರೆ

ಬೆಂಗಳೂರು: ರಾಜ್ಯದ ಸಮೃದ್ಧ ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು, ಜೀವದ ಹಂಗು ತೊರೆದು ಶ್ರಮಿಸುವ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಲಿ ಇರುವ ಪೊಲೀಸ್ ಕ್ಯಾಂಟೀನ್ ಸೌಲಭ್ಯ ಬಳಸಿಕೊಳ್ಳಲು ಅವಕಾಶ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನ ಅರಣ್ಯ ಭವನದಲ್ಲಿಂದು ರಾಷ್ಟ್ರೀಯ ಹುತಾತ್ಮರ ದಿನದ ಅಂಗವಾಗಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚ ಸಮರ್ಪಿಸಿದ ಬಳಿಕ ಮಾತನಾಡಿದ ಅವರು, ಕಾಡ್ಗಿಚ್ಚು …

Read More »

ನಾಗಾವಿ ಐತಿಹಾಸಿಕ ಸ್ಥಳ ಅಭಿವೃದ್ದಿಪಡಿಸಲು ಕಾರ್ಯ ಯೋಜನೆಗೆ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು : ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿರುವ ನಾಗಾವಿ ಐತಿಹಾಸಿಕ ಸ್ಥಳವನ್ನು ಅಭಿವೃದ್ಧಿ ಪಡಿಸಲು ಕಾರ್ಯಯೋಜನೆ ರೂಪಿಸಲಾಗಿದ್ದು, ಅದರಂತೆ ಸ್ಮಾರಕಗಳನ್ನು ಉಳಿಸಿಕೊಂಡು ಸುಂದರ ಪ್ರವಾಸಿ ತಾಣವಾಗಿ ರೂಪಿಸಲು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು. ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಕಾರ್ಯಯೋಜನೆ ಪರಿಶೀಲಿಸಿದ ಅವರು, ನಾಗಾವಿಯಲ್ಲಿ 10-13 ಶತಮಾನಗಳ ನಡುವೆ ಘಟಿಕಾಸ್ಥಾನವಿದ್ದು 400ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಪಾಠ-ಪ್ರವಚನಗಳಲ್ಲಿ ನಿರತರಾಗಿದ್ದರು, ಅವರಿಗೆ ಉಳಿದುಕೊಳ್ಳಲು ವಸತಿ ನಿಲಯಗಳ ವ್ಯವಸ್ಥೆಯಿದ್ದು, …

Read More »