Breaking News

ಬೆಂಗಳೂರು

ಕಲಾವಿದರಿಗೆ ಭದ್ರತೆ ಕಲ್ಪಿಸುವ ಕುರಿತು ಸೆ.16 ರಂದು ಮಹಿಳಾ ಆಯೋಗದ ಸಭೆ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಕಲಾವಿದೆಯರು ಎದುರಿಸುತ್ತಿರುವ ಸಮಸ್ಯೆ ಬಗೆಹರಿಸುವುದು, ಸೌಲಭ್ಯ. ಭದ್ರತೆ ಕಲ್ಪಿಸುವ ಕುರಿತಾಗಿ ಸೆ. 16 ರಂದು ಮಹತ್ವದ ಸಭೆ ನಡೆಯಲಿದೆ. ಕೇರಳದಲ್ಲಿ ಹೇಮಾ ಸಮಿತಿ ರಚನೆ ಮಾದರಿಯಲ್ಲಿ ರಾಜ್ಯದಲ್ಲಿಯೂ ಸಮಿತಿ ರಚನೆ ಕುರಿತಾಗಿ ಫೈರ್ ಸಂಘಟನೆ ಮನವಿ ಮಾಡಿದ್ದ ಹಿನ್ನಲೆಯಲ್ಲಿ ಸಭೆ ಕರೆಯಲಾಗಿದೆ. ಸೆ. 16 ರಂದು ಬೆಳಗ್ಗೆ 11.30ಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅಧ್ಯಕ್ಷತೆಯಲ್ಲಿ ಫಿಲ್ಮ್ ಚೇಂಬರ್ ನಲ್ಲಿ ಸಭೆ ನಡೆಯಲಿದೆ. …

Read More »

ಬೆಂಗಳೂರು ಉಪ ನಗರ ರೈಲ್ವೆ ಯೋಜನೆ 2026 ಕ್ಕೆ ಪೂರ್ಣ: ವಿ.ಸೋಮಣ್ಣ

ಬೆಂಗಳೂರು: ಬೆಂಗಳೂರು ಉಪನಗರ ರೈಲ್ವೆ ಯೋಜನೆಯ ಕಾಮಗಾರಿಯನ್ನು 2026ರ ಡಿಸೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸುವ ಉದ್ದೇಶವಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು. ವಿಧಾನಸೌಧದಲ್ಲಿಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್‌ ಅವರೊಂದಿಗೆ ನಡೆದ ಉಪನಗರ ರೈಲ್ವೆ ಯೋಜನೆ ಮತ್ತು ರಾಜ್ಯದ ವಿವಿಧ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ನಂತರ ಅವರು ಮಾತನಾಡಿದರು. ಉಪನಗರ ರೈಲು ಯೋಜನೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಣ ಮೀಸಲಿಟ್ಟಿದ್ದು, ಕೇಂದ್ರದ ಪಾಲಿನ …

Read More »

ಸರ್ಕಾರಿ ನೌಕರರಿಗೆ ವೈದ್ಯಕೀಯ ಭತ್ಯೆ ಹೆಚ್ಚಿಸಿ ರಾಜ್ಯಸರ್ಕಾರ ಆದೇಶ

ಬೆಂಗಳೂರು; ರಾಜ್ಯ ಸರ್ಕಾರಿ ನೌಕರರಿಗೆ ಈಗಾಗಲೇ 7ನೇ ವೇತನ ಆಯೋಗದ ವೇತನ ಶ್ರೇಣಿಯಂತೆ ವೇತನ ಜಾರಿಗೊಳಿಸಲಾಗಿತ್ತು. ಎನ್ ಪಿ ಎಸ್ ರದ್ದುಗೊಳಿಸಿ, ಓಪಿಎಸ್ ಜಾರಿಗೊಳಿಸುವ ಬಗ್ಗೆಯೂ ಸಮಿತಿಯನ್ನು ರಚಿಸಲಾಗಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ಎನ್ನುವಂತೆ ವೈದ್ಯಕೀಯ ಭತ್ಯೆ ದರಗಳನ್ನು ಪರಿಷ್ಕರಿಸಿ ಆದೇಶಿಸಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದು, ರಾಜ್ಯ ಸರ್ಕಾರದ ನೀತಿ ನಿರ್ಣಯದಂತೆ 05-09-2022ರ ಸರ್ಕಾರಿ ಆದೇಶದಲ್ಲಿ ನಗದುರಹಿತ …

Read More »

ನಕಲಿ ಅಂಕಪಟ್ಟಿ ಸಲ್ಲಿಕೆ: ನೀರಾವರಿ ಇಲಾಖೆಯ ಹುದ್ದೆಗಳಲ್ಲಿ ಗೋಲ್ಮಾಲ್ ಆರೋಪ

ಬೆಂಗಳೂರು : ನೀರಾವರಿ ಇಲಾಖೆಯ ಹೊಸ ಆಯ್ಕೆ ಪಟ್ಟಿಯಲ್ಲಿ ಗೋಲ್ಮಾಲ್ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಹಲವು ಅಭ್ಯರ್ಥಿಗಳು ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ ಎಂಬ ಆರೋಪವಿದೆ. ಇದೇ ವರ್ಷ ಜೂನ್​ 27 ರಂದು ಹೊಸದಾಗಿ 182 ಅಭ್ಯರ್ಥಿಗಳ ತಾತ್ಕಾಲಿಕ ಅಂತಿಮ ಆಯ್ಕೆ ಪಟ್ಟಿ ಪ್ರಕಟವಾಗಿತ್ತು. ಆಯ್ಕೆಯಾದ 182 ಅಭ್ಯರ್ಥಿಗಳಲ್ಲಿ 62 ಜನರು ನಕಲಿ ಅಂಕಪಟ್ಟಿಯನ್ನು ನೀಡಿದ್ದಾರೆ ಎಂದು ಕೆಲ ಅಭ್ಯರ್ಥಿಗಳು ಆರೋಪ ಮಾಡಿದ್ದಾರೆ. 2022ರ …

Read More »

ಕೃಷಿ ಇಲಾಖೆ: ಯಂತ್ರೋಪಕರಣಗಳನ್ನು ಖರೀದಿಸಲು ಸಬ್ಸಿಡಿ ದರದಲ್ಲಿ ಸಹಾಯಧನ ಸೌಲಭ್ಯ

ಬೆಂಗಳೂರು: ಕೃಷಿ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಸಹಾಯಧನ ಯೋಜನೆಯಡಿ ಮಿನಿ ಟ್ರ್ಯಾಕ್ಟರ್, ಟಿಲ್ಲರ್, ಪವರ್ ವೀಡರ್ ಸೇರಿದಂತೆ ಇತರೆ ಯಂತ್ರೋಪಕರಣಗಳನ್ನು ಖರೀದಿಸಲು ಸಬ್ಸಿಡಿ ದರದಲ್ಲಿ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೃಷಿ ಯಾಂತ್ರೀಕರಣ, ಕೃಷಿ ಸಂಸ್ಕರಣ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ರವರೆಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.90 ವರೆಗೆ ಸಹಾಯಧನ ನೀಡಲಾಗುತ್ತದೆ. ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ …

Read More »

ಗಣೇಶ ಚತುರ್ಥಿ: ಬೆಂಗಳೂರಿನಲ್ಲಿ 3 ಲಕ್ಷ ಗಣೇಶ ಮೂರ್ತಿಗಳ ವಿಸರ್ಜನೆ

ಬೆಂಗಳೂರು: ಬೆಂಗಳೂರಿನಲ್ಲಿ ಗಣೇಶ ಚತುರ್ಥಿ ಅದ್ದೂರಿಯಾಗಿ ಆಚರಣೆ ಮಾಡಲಾಗಿದ್ದು ಯಾವುದೇ ಅಹಿತಕರ ಘಟನೆಗಳಿಲ್ಲದಂತೆ ಹಬ್ಬ ನಡೆದಿದೆ. ಹಬ್ಬದ ದಿನಂದಂದೇ ಹಲವರು ಗಣೇಶ ವಿಸರ್ಜನೆ ಮಾಡಿದ್ದು, ನಗರದಲ್ಲಿ ಬರೊಬ್ಬರು 3 ಲಕ್ಷ ಗಣಪತಿ ಮೂರ್ತಿಗಳು ವಿರ್ಸಜನೆಗೊಂಡಿವೆ. ಬೆಂಗಳೂರಿನ,ಹಲಸೂರು ಕೆರೆ, ಯಡಿಯೂರು ಕೆರೆ ಸೇರಿದಂತೆ ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆಗಳಲ್ಲಿ ಶಾಶ್ವತ ಮತ್ತು ತಾತ್ಕಾಲಿಕ ಕಲ್ಯಾಣಿಗಳು, 462 ಮೊಬೈಲ್‌ ಟ್ಯಾಂಕ್‌ಗಳ ವ್ಯವಸ್ಥೆ ಮಾಡಲಾಗಿದೆ. ಕಳೆದ ವರ್ಷ ಗಣೇಶೋತ್ಸವ ಸಂದರ್ಭ ಬೆಂಗಳೂರಿನ ಯಡಿಯೂರು …

Read More »

ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ: ರಾಜ್ಯ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು : ರಾಜ್ಯಾದ್ಯಂತ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿಯಾಗಿದ್ದು, ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ದಿ.2 ರಿಂದ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರಲಾಗಿದ್ದು, ಇದರ ಅಡಿ ಸಾರ್ವಜನಿಕರು ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಛೇರಿಯಲ್ಲಿ ನೋಂದಣಿ ಮಾಡಬಹುದಾಗಿದೆ. ಎನಿವೇರ್ ರಿಜಿಸ್ಟ್ರೇಷನ್ ಸೇವೆ ಈಗ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಲಭ್ಯವಿದ್ದು, ನಿಮ್ಮ ಜಿಲ್ಲೆಯ ಸಮೀಪವಿರುವ ಯಾವುದೇ ಸಬ್ರಿಜಿಸ್ಟ್ರಾರ್ ಕಚೇರಿಯಲ್ಲಿ ನಿಮ್ಮ ದಾಖಲೆಯನ್ನು …

Read More »

ಶಾಲಾ ಮಕ್ಕಳಿಗೆ ವಾರದ 6 ದಿನವೂ ಮೊಟ್ಟೆ, ಚಿಕ್ಕಿ ಅಥವಾ ಬಾಳೆಹಣ್ಣು: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದಲ್ಲಿ ಸೆ.15 ಅಥವಾ 20ರ ನಂತರ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜತೆ ವಾರವಿಡೀ ಮೊಟ್ಟೆ, ಚಿಕ್ಕಿ ಅಥವಾ ಬಾಳೆಹಣ್ಣು ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿ, 6 ದಿನ ಹಾಲು, ರಾಗಿ ಮಾಲ್ಟ್‌, ಬಿಸಿಯೂಟ ಸಿಗುತ್ತಿದೆ ವಾರದಲ್ಲಿ ಒಂದು ದಿನ ಸಿಗುತ್ತಿರುವ ಮೊಟ್ಟೆಯನ್ನು 2 ದಿನ ನೀಡಲಾಗುತ್ತಿದೆ. ಅಜೀಂ ಪ್ರೇಮ್‌ಜೀ ಪ್ರತಿಷ್ಠಾನ ಜತೆ ಮಾಡಿಕೊಂಡಿರುವ ಒಪ್ಪಂದ ಪ್ರಕಾರ, 1,500 ಕೋಟಿ ರೂ. …

Read More »

ಟಿವಿ ಚಾನೆಲ್‌ಗಳಿಗೆ ಆಘಾತ ನೀಡಿದ ಕಾಂಗ್ರೆಸ್ ಸರ್ಕಾರ

ಬೆಂಗಳೂರು: ಕನ್ನಡ ನ್ಯೂಸ್ ಚಾನೆಲ್‌ಗಳ ಸಂಖ್ಯೆ ಈಗ ನೂರಕ್ಕೆ ತಲುಪಲು ಸಜ್ಜಾಗಿದ್ದು, ಎಲ್ಲೆಲ್ಲೂ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಹೀಗಿದ್ದಾಗ ಬಹುತೇಕ ನ್ಯೂಸ್ ಚಾನೆಲ್‌ಗಳು ಕಾಂಗ್ರೆಸ್ ವಿರುದ್ಧ ಉದ್ದೇಶ ಇಟ್ಟುಕೊಂಡೇ ಸುದ್ದಿ ಮಾಡುತ್ತಿವೆ ಎಂಬ ಆರೋಪ ಕಾಂಗ್ರೆಸ್ ನಾಯಕರದ್ದು. ಈ ಬೆಳವಣಿಗೆ ನಡುವೆ ಕರ್ನಾಟಕ ಕಾಂಗ್ರೆಸ್ ನಾಯಕರು ಟಿವಿ ಚಾನೆಲ್‌ಗಳಿಗೆ ಆಘಾತ ನೀಡಲು ಸಜ್ಜಾಗಿದ್ದು, ಟಿವಿ ಚಾನೆಲ್‌ಗಳ ವಿರುದ್ಧ ಹೊಸ ಬ್ರಹ್ಮಾಸ್ತ್ರ ಸಿದ್ಧಪಡಿಸಿದ್ದಾರೆ. ಅಂದಹಾಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ …

Read More »

ವಕ್ಫ್‌ ಆಸ್ತಿ ಸರ್ಕಾರದ್ದಲ್ಲ ಸಮಾಜದ ದಾನಿಗಳು ನೀಡಿದ್ದು: ಸಚಿವ ಜಮೀರ ಅಹ್ಮದ

ಬೆಂಗಳೂರು: ವಕ್ಫ್‌ ಆಸ್ತಿ ಸರ್ಕಾರದ್ದಲ್ಲ, ಸಮಾಜದ ದಾನಿಗಳು ನೀಡಿದ್ದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್‌ ಸಚಿವ ಜಮೀರ್‌ ಅಹಮದ್‌ ಖಾನ್‌ ಹೇಳಿದರು. ವಿಧಾನಸೌಧದಲ್ಲಿ ನಡೆದ ಜಿಲ್ಲಾ ವಕ್ಫ್‌ ಅಧ್ಯಕ್ಷರು, ಅಧಿಕಾರಿಗಳ ಸಭೆಯ ನಂತರ ಮಾತನಾಡಿದ ಅವರು, ವಕ್ಫ್‌ ಆಸ್ತಿಯ ಒಂದು ಇಂಚೂ ಸರ್ಕಾರದಿಂದ ಪಡೆದಿಲ್ಲ ಸಮಾಜದ ಒಳಿತಿಗಾಗಿ ದಾನಿಗಳು ಉದಾರವಾಗಿ ನೀಡಿದ್ದಾರೆ. ದೇವರ ಆಸ್ತಿಯ ಸಂರಕ್ಷಣೆ ಸಮಾಜದ ಎಲ್ಲರ ಹೊಣೆ ಎಂದರು. ವಕ್ಫ್‌ ಮಂಡಳಿಯಿಂದ 15 ಜಿಲ್ಲೆಗಳಲ್ಲಿ ಮಹಿಳಾ …

Read More »