Breaking News

ಬೆಂಗಳೂರು

ಚೆಕ್ ಬೌನ್ಸ್ ಪ್ರಕರಣ : ಕನ್ನಡದ ನಟಿ ಜೈಲು ಪಾಲು

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣ ಸಾಬೀತಾಗಿರುವ ಹಿನ್ನೆಲೆಯಲ್ಲಿ ನಟಿ ಪದ್ಮಜಾ ರಾವ್ ಅವರಿಗೆ ಮೂರು ತಿಂಗಳು ಜೈಲು ಶಿಕ್ಷೆ ಹಾಗೂ ನಲವತ್ತು ಲಕ್ಷ ರೂಪಾಯಿ ದಂಡ ವಿಧಿಸಿ ಮಂಗಳೂರಿನ ಎಂಟನೇ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ನಾಲ್ಕು ವರ್ಷಗಳ ಹಿಂದೆ ನಟಿ ಪದ್ಮಜಾ ರಾವ್ ಅವರ ಚೆಕ್ ಬೌನ್ಸ್ ಪ್ರಕರಣ ಭಾರೀ ಸುದ್ದಿಯಾಗಿತ್ತು. ತುಳು ಸಿನಿಮಾ ನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ಅವರ ಬಳಿಯಿಂದ ಪದ್ಮಜಾ ರಾವ್, 41ಲಕ್ಷ ರೂಪಾಯಿ …

Read More »

ಇಸ್ಕಾನ್ ದೇವಾಲಯಕ್ಕೆ ಶೋಭಾ ಕರಂದ್ಲಾಜೆ ಭೇಟಿ

ಬೆಂಗಳೂರು: ನಾಡಿನೆಲ್ಲೆಡೆ ಇಂದು ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದ್ದು, ಬೆಂಗಳೂರಿನ ಇಸ್ಕಾನ್ ದೇವಾಲಯದಲ್ಲೂ ಜನ್ಮಾಷ್ಟಮಿ ವಿಜೃಂಭಣೆಯಿಂದ ನಡೆಯುತ್ತಿದೆ. ಈ ಸಂಧರ್ಭ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಸ್ಕಾನ್ ದೇವಾಲಯಕ್ಕೆ ಭೇಟಿ ನೀಡಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಲ್ಲಿ ಪಾಲ್ಗೊಂಡರು. ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಭಕ್ತರು ಶ್ರೀ ಕೃಷ್ಣನ ಸರಣೆ ಮಾಡುತ್ತಿದ್ದಾರೆ. ಇಸ್ಕಾನ್‌ನಲ್ಲಿ ಮುಂಜಾನೆ 4:3ರಿಂದ ರಾಧಾ- ಕೃಷ್ಣರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಮುಂಜಾನೆ 4:30ಕ್ಕೆ ಕೃಷ್ಣನಿಗೆ ಮಂಗಳಾರತಿಮತ್ತು ತುಳಸಿ ಆರತಿ …

Read More »

ಹುಡುಗಿಯರ ಜೊತೆ ನಟ ದರ್ಶನ ವಿಡಿಯೋ ಕಾಲ್ !

ಬೆಂಗಳೂರು: ಸದ್ಯ ಬಿಸಿ ಬಿಸಿ ಸುದ್ದಿ ಏನೂ ಅಂದ್ರೆ. ಕೇವಲ ರೌಡಿ ಶೀಟರ್‌ಗಳು, ಆಪ್ತರು ಅಷ್ಟೇ ಅಲ್ಲದೆ ಹುಡುಗಿಯರು ದರ್ಶನ್‌ನ ವಿಡಿಯೋ ಕಾಲ್‌ನಲ್ಲಿ ಮಾತನಾಡಿಸಿದ್ರಂತೆ. ಜೈಲಲ್ಲಿರೋ ಸ್ನೇಹಿತನ ಮೊಬೈಲ್‌ಗೆ ಆರ್‌ಆರ್ ನಗರದ ಯುವತಿ ವಿಡಿಯೋ ಕಾಲ್ ಮಾಡಿ ದರ್ಶನ್ ದರ್ಶನ ಪಡೆದಿದ್ದಾಳೆ. ಈ ವಿಡಿಯೋವನ್ನು ಜಿಮ್‌ನಲ್ಲಿ ತನ್ನ ಸ್ನೇಹಿತೆಗೆ ತೋರಿಸಿ ನೋಡು ಬಾಸ್ ಹೇಗಿದ್ದಾರೆ. ಧಮ್ ಹೊಡ್ಕೊಂಡು ಆರಾಮಗಿದ್ದಾರೆ ಅಂತ ಬಿಲ್ಡಪ್ ಕೊಟ್ಟಿದ್ದಾಳೆ. ಈ ಫೋಟೋಗಳನ್ನ ಆ ಯುವತಿ ಕೆಲ …

Read More »

ಜೈಲಿನ ಅವ್ಯವಾಹರ ವಿಚಾರ : ಕಾರಾಗೃಹಕ್ಕೆ ಡಿಜಿ ಭೇಟಿ

ಬೆಂಗಳೂರು : ಜೈಲಿನ ಅವ್ಯವಾಹರ ವಿಚಾರಕ್ಕೆ ಸಂಬಂಧಿಸಿದಂತೆ ಜೈಲಿಗೆ ಕೆಲವೆ ಕ್ಷಣಗಳಲ್ಲಿ ಕಾರಗೃಹ ಡಿಜಿ ಮಾಲೀನಿ ಕೃಷ್ಣಮೂರ್ತಿ ಭೇಟಿ ನೀಡಲಿದ್ದಾರೆ. ತಡರಾತ್ರಿವೆರೆಗೂ ಜೈಲಿನ ಅಧಿಕಾರಿಗಳು ಜೈಲಿನಲ್ಲಿ ಜಪ್ತಿ ನಡೆಸಿದ್ರು ಇದೀಗ ಜೈಲನ್ನ ಖುದ್ದಾಗಿ ಪರೀಕ್ಷಿಸಲು ಡಿಜಿ ಮಾಲೀನಿ ಕೃಷ್ಣಮೂರ್ತಿ ಭೇಟಿ ನೀಡಲಿದ್ದಾರೆ.

Read More »

ದೋಷಪೂರಿತ ನೋಂದಣಿ ಫಲಕ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಸಿಲಿಕಾನ್ ಸಿಟಿಯ ಸಂಚಾರ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದೋಷಪೂರಿತ ನೋಂದಣಿ ಫಲಕ ಹೊಂದಿರುವ 9,684 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಕುರಿತು ಬೆಂಗಳೂರಿನ ಸಂಚಾರ ವಿಭಾಗದ ಜಂಟಿ ಆಯುಕ್ತ ಅಲೋಕ್ ಕುಮಾರ್ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದು, ದೋಷಪೂರಿತ/ ಸಂಖ್ಯೆ ಫಲಕಗಳಿಲ್ಲದೆ ಸಂಚಾರ ನಿಯಮ ಉಲ್ಲಂಘನೆ ಮಾಡಲಾಗುತ್ತಿದೆ. ರಸ್ತೆ ಅಪಘಾತ ಪ್ರಕರಣಗಳಲ್ಲಿ ಅಧಿಕಾರಿಗಳ ಕಣ್ಣಪ್ಪಿಸಿ ಅಪರಾಧ ಎಸಗಲು ಸಹ ಬಳಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ನಗರದ ರಸ್ತೆಗಳಲ್ಲಿ …

Read More »

ಬೆಂಗಳೂರಿನಲ್ಲಿ 8300 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲಿದೆ‌: ಎಂ.ಬಿ. ಪಾಟೀಲ್

ಬೆಂಗಳೂರು: ಇಂಧನ ಕ್ಷೇತ್ರದ ಸಂಶೋಧನಾ ಸಂಸ್ಥೆ ಷೆರ್ವನ್ ಬೆಂಗಳೂರಿನಲ್ಲಿ 8300 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲಿದೆ. ಷೆರ್ವನ್ ಇಂಡಿಯಾ ಮುಖ್ಯಸ್ಥ ಅಕ್ಷಯ್ ಸಾಕ್ಷಿ, ಪ್ರಧಾನ ವ್ಯವಸ್ಥಾಪಕಿ ಅವರೊಂದಿಗೆ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಸಭೆ ನಡೆಸಿದ ಬಳಿಕ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಷೆರ್ವನ್ ಕಂಪನಿ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಮತ್ತು ನಾವೀನ್ಯತೆ ಶ್ರೇಷ್ಠತಾ ಕೇಂದ್ರ ಸ್ಥಾಪಿಸಲಿದೆ. ಈ ಕೇಂದ್ರಗಳ ಮೂಲಕ ಇಂಧನ ವ್ಯವಸ್ಥೆಯ ತಂತ್ರಜ್ಞಾನದ …

Read More »

ಆಗಸ್ಟ್ 26ರಂದು ಬೆಂಗಳೂರು ನಗರದಾದ್ಯಂತ ಮಾಂಸ ಮಾರಾಟ ನಿಷೇಧ

ಬೆಂಗಳೂರು: ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಗಸ್ಟ್ 26ರಂದು ಬೆಂಗಳೂರು ನಗರದಾದ್ಯಂತ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ಆಯುಕ್ತರು, ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಆ.26ರಂದು ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. ಕೃಷ್ಣ ಜನ್ಮಾಷ್ಟಮಿ ದಿನದಂದು ಮಾಂಸ ಮಾರಾಟ ನಿಷೇಧಿಸಿ ಆದೇಶ …

Read More »

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 23,526ಕ್ಕೆ ಏರಿಕೆ ಆಗಿದೆ. ಕಳೆದ 24 ಗಂಟೆಯಲ್ಲಿ ಡೆಂಗ್ಯೂಯಿಂದ ಇಬ್ಬರು ಮೃತರಾಗಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಬರೋಬ್ಬರಿ 10674 ಕೇಸ್ ದಾಖಲಾಗಿದ್ದು, ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 196 ಡೆಂಗ್ಯೂ ಕೇಸ್ ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ ಗುಣಮುಖರದಾವರು 171 ಮಂದಿ ಅಂತ ತಿಳಿದು ಬಂದಿದ್ದು ಇದುವರೆಗೆ ಡೆಂಗ್ಯೂಯಿಂದ ಚೇತರಿಸಿಕೊಂಡವರು 22,285 ಮಂದಿ ಮಾತ್ರ. ಒಟ್ಟು ಸಕ್ರೀಯ ಡೆಂಗ್ಯೂ ಪ್ರಕರಣಗಳ ಸಂಖ್ಯೆ 1229 …

Read More »

ಲಾರಿ ಚಾಲಕನ ನಿರ್ಲಕ್ಷ್ಯ:ಉರುಳಿದ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು

ಬೆಂಗಳೂರು: ಲಾರಿ ಚಾಲಕನ ನಿರ್ಲಕ್ಷ್ಯದಿಂದ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಇಂದು ನಸುಕಿನ ಜಾವ 1:30ರ ವೇಳೆಗೆ ಚಿಕ್ಕಬಾಣಾವರ-ಹೆಸರಘಟ್ಟ ಮುಖ್ಯರಸ್ತೆಯಲ್ಲಿ ನಡೆದಿದೆ. ಎಂ ಸ್ಯಾಂಡ್ ಲಾರಿ ಚಾಲಕ ನಿದ್ದೆ ಕಣ್ಣಿನಲ್ಲಿ ಟಿಪ್ಪರ್ ಎತ್ತಿದ್ದಾನೆ. ಈ ವೇಳೆ ಲಾರಿ ಟಾಪ್‌ಗೆ ವಿದ್ಯುತ್ ವೈರ್ ಸಿಕ್ಕಿಹಾಕಿಕೊಂಡಿದೆ. ಇದನ್ನು ಗಮನಿಸದೆ ಚಾಲಕ ಲಾರಿ ಚಲಾಯಿಸಿದ್ದಾನೆ. ಈ ಪರಿಣಾಮ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಜಖಂಗೊಂಡು ನೆಲಕ್ಕುರಿಳಿವೆ. ಚಿಕ್ಕಬಾಣಾವರ ಮುಖ್ಯರಸ್ತೆಯಲ್ಲೇ ಕಂಬಗಳು ಬಿದ್ದಿದ್ದು, …

Read More »

ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರಿಗೆ ವಿಶ್ವಾಸದ ಕೊರತೆ ಇದೆ : ಡಾ.ಜಿ.ಪರಮೇಶ್ವರ

ಬೆಂಗಳೂರು: ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರಿಗೆ ವಿಶ್ವಾಸದ ಕೊರತೆ ಇದೆ. ಆದ್ದರಿಂದಲೇ 11 ಮಸೂದೆಗಳನ್ನು ವಾಪಸ್ ಕಳುಹಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಸ್ಪಷ್ಟಿಕರಣ ಕೇಳಿ ಒಂದೆರಡು ಮಸೂದೆಗಳನ್ನು ವಾಪಸ್ ಕಳುಹಿಸುತ್ತಿದ್ದರು. ಆದರೆ, ಈವರೆಗೆ ಸಾರಸಗಟಾಗಿ ಇಷ್ಟೊಂದು ಮಸೂದೆಗಳನ್ನು ವಾಪಸ್ ಕಳುಹಿಸಿರುವ ಉದಾಹರಣೆಗಳಿರಲಿಲ್ಲ. 11 ಬಿಲ್‌ಗಳನ್ನು ವಾಪಸ್ ಕಳಿಸಿರುವುದು ನೋಡಿದರೆ, ರಾಜ್ಯಪಾಲರಿಗೆ ನಮ್ಮ ಸರ್ಕಾರದ ಮೇಲೆ ವಿಶ್ವಾಸದ ಕೊರತೆ ಆಗಿದೆಯೆಂಬ …

Read More »