Breaking News

ಬೆಂಗಳೂರು

ಎಲೆಕ್ನಿಕ್ ವಾಹನ ಬ್ಯಾಟರಿ ಚಾರ್ಜರಗಳ ಪರೀಕ್ಷಾ ಸೌಲಭ್ಯ ಕೇಂದ್ರಕ್ಕೆ ಜೋಶಿ ಶಂಕುಸ್ಥಾಪನೆ

ಬೆಂಗಳೂರು: ಎಲೆಕ್ನಿಕ್ ವಾಹನ ಬ್ಯಾಟರಿ ಹಾಗೂ ಚಾರ್ಜ‌್ರಗಳ ಪರೀಕ್ಷಾ ಸೌಲಭ್ಯ ಕೇಂದ್ರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಬೆಂಗಳೂರಿನ ಜಕ್ಕೂರಿನಲ್ಲಿ ಈ ಸೌಲಭ್ಯ ಕೇಂದ್ರವನ್ನು ನಿರ್ಮಿಸಲಾಗುತ್ತಿದೆ. ಶಂಕುಸ್ಥಾಪನೆ ನಂತರ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ದಕ್ಷಿಣ ಭಾರತದಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರು ನಗರದಲ್ಲಿ ಎಲೆಕ್ನಿಕ್ವಾ ಹನಗಳ ಉದ್ಯಮ ವೇಗವಾಗಿ ಬೆಳೆಯುತ್ತಿದೆ. ಈ ಪರೀಕ್ಷಾ ಸೌಲಭ್ಯ ಕೇಂದ್ರ ಆರಂಭಿಸಿರುವುದರಿಂದ ಇ.ವಿ ಉದ್ಯಮಕ್ಕೆ ಹೊಸ ಹುರುಪು ಸಿಕ್ಕಂತಾಗುತ್ತದೆ. ಬೆಂಗಳೂರು …

Read More »

ಮಂಗಳಮುಖಿಯರಿಂದ ಯುವಕನ ಕಿಡ್ನ್ಯಾಪ್

ಬೆಂಗಳೂರು : 18 ವರ್ಷದ ಯುವಕನೋರ್ವನನ್ನು ಕಿಡ್ನ್ಯಾಪ್ ಮಾಡಿದ ಮಂಗಳಮುಖಿಗಳು ಆತನ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಶಾಕಿಂಗ್ ಘಟನೆ ನಡೆದಿದೆ. ಅಲ್ಲಿಗೆ ಬಂದ ಮಂಗಳಮುಖಿಗಳು ಆತನನ್ನು ಮನವೊಲಿಸುವ ಕೆಲಸ ಮಾಡಿದರು. ನೀನು ನನ್ನ ಜೊತೆ ಬಂದರೆ ಒಳ್ಳೆಯ ಮನೆಯಲ್ಲಿ ಇರಿಸಿ ಉತ್ತಮ ಸಂಪಾದನೆ ಮಾಡಲು ದಾರಿ ಮಾಡಿಕೊಡುವುದಾಗಿ ಹೇಳಿದ್ದಾರೆ. ಆತ ಬರಲು ಒಪ್ಪದಿದ್ದರೂ ಕೂಡ ಬಲವಂತವಾಗಿ ಮನೆಯೊಂದಕ್ಕೆ ಎಳೆದುಕೊಂಡು ಹೋಗಿದ್ದಾರೆ. ನೀನು ಹೆಣ್ಣಾದರೆ ಹೆಚ್ಚು ದುಡಿಯಬಹುದು , ಇದಕ್ಕೆ …

Read More »

ಭಾರತೀಯ ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು : ಮುಂದಿನ ಮೂರು ಗಂಟೆಯಲ್ಲಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಿಂಚಿನ ಜೊತೆ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಹವಾಮಾನ ವರದಿಯ ಬುಲೆಟಿನ್‌ನಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ,ರಾಮನಗರ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದೆ. 5 ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯೇ ಹಲವೆಡೆ ಮಳೆ ಸುರಿದಿದೆ.ಮನೆಯೊಳಗೆ ಇರಿ, ಕಿಟಕಿಗಳು …

Read More »

ಉರುಳಿ ಬಿದ್ದ ಮರ: ಇಬ್ಬರಿಗೆ ಗಾಯ

ಬೆಂಗಳೂರು:: ಚಲಿಸುತ್ತಿದ್ದ ಆಟೋ ಮೇಲೆ ಮರವೊಂದು ಉರುಳಿ ಬಿದ್ದು, ಚಾಲಕ ಸೇರಿ ಇಬ್ಬರಿಗೆ ಗಾಯಗಳಾಗಿರುವ ಘಟನೆ ಬೆಂಗಳೂರು ಸದಾಶಿವನಗರ ಪೊಲೀಸ್ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಘಟನೆಯಲ್ಲಿ ಆಟೋ ಜೊತೆಗೆ ಮತ್ತೊಂದು ವಾಹನಕ್ಕೂ ಹಾನಿಯಾಗಿದ್ದು, ಚಾಲಕನ ಕೈ ಮೂಳೆ ಮುರಿತಗೊಂಡಿದೆ ಎಂದು ವರದಿಯಾಗಿದೆ. ನಿನ್ನೆ ಮಧ್ಯಾಹ್ನ 12.30ರ ಸುಮಾರಿಗೆ ಘಟನೆ ನಡೆದಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Read More »

ರಾಜ್ಯಪಾಲರಿಗೆ ಅವಮಾನ ಮಾಡಿದ ಎಲ್ಲ ಕಾಂಗ್ರೆಸ್ಸಿಗರ ವಿರುದ್ಧ ಪ್ರಕರಣ ದೂರು ದಾಖಲು

ಬೆಂಗಳೂರು:ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಈ ಹಿನ್ನೆಲೆ ರಾಜ್ಯದ ಹಲವೆಡೆ ನಿನ್ನೆ ಪ್ರತಿಭಟನೆ ನಡೆದಿದೆ. ಈ ನಡುವೆ ರಾಜ್ಯಪಾಲರಿಗೆ ಅವಮಾನ ಮಾಡಿದ ಎಲ್ಲ ಕಾಂಗ್ರೆಸ್ಸಿಗರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದ್ದಾರೆ. ಇಂದು ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಪೊಲೀಸ್‌ ಮಹಾ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಅವರು ದೂರು ಸಲ್ಲಿಸಿದರು. ಈ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

Read More »

ಮಂಗಳ ಮುಖಿಯರು ಯುವಕನ ಮೇಲೆ ಅಟ್ಟಹಾಸ

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ‌ಮಂಗಳ ಮುಖಿಯರು ಯುವಕನ ಮೇಲೆ ಅಟ್ಟಹಾಸ ಮೆರೆದಿರುವ ಘಟನೆ ನಡೆದಿದೆ. ಟೀ ಅಂಗಡಿಯಲ್ಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದಾತನನ್ನು ಲಿಂಗ ಪರಿವರ್ತನೆ ಮಾಡಿ ಭಿಕ್ಷಾಟನೆಗೆ ಒತ್ತಾಯಿಸಿದ ಘಟನೆ ನಡೆದಿದೆ. ಅಕ್ರಮವಾಗಿ ಲಿಂಗ ಪರಿವರ್ತನೆ, ಅಶ್ಲೀಲ ಪೋಟೊ ತೆಗೆದುಕೊಂಡು ಬ್ಲಾಕ್ ಮೇಲ್ ಮಾಡಿದ್ದಲ್ಲದೆ ಮನಬಂದಂತೆ ಥಳಿಸಿ ಚಿತ್ರ ಹಿಂಸೆ ಕೊಟ್ಟಿದ್ದಾರೆ. ಭಿಕ್ಷಾಟನೆ ಮಾಡುವಂತೆ ದೈಹಿಕ ಹಲ್ಲೆ, ಮಾನಸಿಕ ಹಿಂಸೆ ನೀಡಿ ನಾಲ್ವರು ಮಂಗಳಮುಖಿಯರು ಹುಡುಗನ ಲಿಂಗ …

Read More »

ಸಿದ್ದರಾಮಯ್ಯ ಗೆ ಬೀಗ್ ರಿಲೀಫ್

ಬೆಂಗಳೂರು‌: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್, ಆಗಸ್ಟ್ 29ಕ್ಕೆ ಮುಂದೂಡಿದೆ. ಸಿಎಂ ಪರ ವಕೀಲರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ, ಸುಮಾರು ಒಂದೂವರೆ ಗಂಟೆ ಕಾಲ ವಾದ-ಪ್ರತಿವಾದ ಆಲಿಸಿದ ಬಳಿಕ ವಿಚಾರಣೆಯನ್ನು ಆಗಸ್ಟ್ 29 ಮಧ್ಯಾಹ್ನ 2.30ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ. ಅಲ್ಲದೇ ಜನಪ್ರತಿನಿಧಿಗಳ ಕೋರ್ಟ್​ನ …

Read More »

ಇಂದು ಕರ್ನಾಟಕದಾದ್ಯಂತ ಕಾಂಗ್ರೆಸ್​ ಪ್ರತಿಭಟನೆ

ಬೆಂಗಳೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿದೆ. ಸಿಎಂ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ನಿನ್ನೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದೇ ತಡ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಸಿದ್ದು ಬೆಂಬಲಿಗರು ರೊಚ್ಚಿಗೆದ್ದಿದ್ರು. ಇವತ್ತು ಕೂಡಾ ಸಿದ್ದರಾಮಯ್ಯ ತವರು ಮೈಸೂರು ಜಿಲ್ಲೆಯಲ್ಲಿ ದೊಡ್ಡ ಹೋರಾಟ ನಡೆಸಿದ್ದರು. ಇನ್ನು ಇಂದು ಕರ್ನಾಟಕದಾದ್ಯಂತ ಕಾಂಗ್ರೆಸ್​ ಪ್ರತಿಭಟನೆಗೆ ಮುಂದಾಗಿದೆ. ಹೀಗಾಗಿ ವಾಹನ ಸವಾರರಿಗೆ ಪ್ರತಿಭಟನೆ ಬಿಸಿ ತಟ್ಟಲಿದೆ. ನಿನ್ನೆ ನಡೆದ ಪ್ರತಿಭಟನೆ ಜಸ್ಟ್ …

Read More »

ಆಗಸ್ಟ್​ 21ರಂದು ಬೆಂಗಳೂರಿನಲ್ಲಿ ಪಾದಯಾತ್ರೆ

ಬೆಂಗಳೂರು: ಮೈಸೂರು ಪಾದಯಾತ್ರೆಗೆ ಸೆಡ್ಡು ಹೊಡೆದು ರೆಬೆಲ್​ ಟೀಂ ಪ್ರತ್ಯೇಕ ಪಾದಯಾತ್ರೆ ಮಾಡುವುದಕ್ಕೆ ಸರ್ಕಸ್​ ಮಾಡುತ್ತಿದೆ. ಕಳೆದ ವಾರವಷ್ಟೇ ಬೆಳಗಾವಿಯಲ್ಲಿ ಬಿಜೆಪಿ ಸಮಾನ ಮನಸ್ಕರ ತಂಡೆ ಸಭೆ ಸೇರುವ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದರು. ಇದೀಗ ಮತ್ತೆ ಸಭೆ ಸೇರುವುದಕ್ಕೆ ಆಗಸ್ಟ್​ 21ರಂದು ಬೆಂಗಳೂರಿನಲ್ಲಿ ನಿರ್ಧರಿಸಿದ್ದರು. ಅನಿವಾರ್ಯ ಕಾರಣದಿಂದ ಸಭೆಯೂ ಮುಂದೂಡಿಕೆಯಾಗಿದ್ದು, ಇದೀಗ ಎಲ್ಲರ ಚಿತ್ತ ಇದೀಗ ಹೈಕಮಾಂಡ್​ನತ್ತ ನೆಟ್ಟಿದೆ. ಪಾದಯಾತ್ರೆಯನ್ನು ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಸಭೆಗಳಲ್ಲಿ …

Read More »

ಸಿದ್ದರಾಮಯ್ಯ ರಾಜೀನಾಮೆ ಕೊಡುವ ಮಾತೇ ಇಲ್ಲಾ : ಡಿಕೆಶಿ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿಯನ್ನು ರಾಜ್ಯಪಾಲರು ನೀಡಿದ್ದಾರೆ. ಥಾವರಚಂದ ಗೆಹ್ಲೋಟ್ ನಡೆ ರಾಜ್ಯ ರಾಜಕೀಯದಲ್ಲಿ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಶನಿವಾರ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ. …

Read More »