Breaking News

ಬೆಂಗಳೂರು

400 ಹೊಸ ಎಲೆಕ್ಟ್ರಿಕ್ ಬೆಂಗಳೂರು ಮಹಾನಗರ ಬಸ್ ಗಳು ನಗರ ಸಾರಿಗೆಗೆ ಸೇರ್ಪಡೆ ಆಗಲಿವೆ: ಸಿದ್ದರಾಮಯ್ಯ.

ಬೆಂಗಳೂರು: ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬೆಂಗಳೂರು ಮಹಾನಗರ ಬಸ್ ಗಳು ನಗರ ಸಾರಿಗೆಗೆ ಸೇರ್ಪಡೆ ಆಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ವಿದ್ಯುತ್ ಚಾಲಿತ ಬಸ್ ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಇಲ್ಲಿಯವರೆಗೂ ರಾಜ್ಯ ಸಾರಿಗೆಯ ಬಸ್ ಗಳಲ್ಲಿ 120 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. ನಿತ್ಯ 40 ಲಕ್ಷ ಜನ …

Read More »

ಹೊಸ ವರ್ಷಾಚರಣೆಗೆ ನಾಡಿನಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ‌ ನಡೆಯದಂತೆ ತೀವ್ರ ಮುಂಜಾಗ್ರತಾ ಕ್ರಮ…

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಜನ ಹೊಸ ವರ್ಷ ಎದುರು ನೋಡುತ್ತಿದ್ದಾರೆ. ಇದರಲ್ಲಿ ಬಹುತೇಕರು ಹೊಸ ವರ್ಷಾಚರಣೆಗೆ ಸಿದ್ಧವಾಗಿದೆ ಈ ಸಂದರ್ಭದಲ್ಲಿ ನಾಡಿನಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ‌ ನಡೆಯದಂತೆ ತೀವ್ರ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ನಿರ್ದೇಶನ ನೀಡಿದರು.ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪೊಲೀಸ್ ಇಲಾಖೆ, ಆರೋಗ್ಯ, ಅಬಕಾರಿ ಇಲಾಖೆ, ಬಿಬಿಎಂಪಿ, ಬಿಎಂಆರ್‌ಸಿಎಲ್, ಬಿಎಂಟಿಸಿಯ ಹಿರಿಯ ಅಧಿಕಾರಿಗಳ ಜೊತೆ ಶುಕ್ರವಾರ ನಡೆದ ಸಭೆಯಲ್ಲಿ ಅವರು …

Read More »

ಟ್ರಾಫಿಕ್ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಲಿರುವ ಮೆಟ್ರೋದ ನೀಲಿ, ಹಳದಿ, ಪಿಂಕ್ ಮಾರ್ಗದ ಕಾಮಗಾರಿಗಳು ಪ್ರಗತಿ…..

ಬೆಂಗಳೂರು ಮಹಾನಗರದ ಟ್ರಾಫಿಕ್ ಸಮಸ್ಯೆಗೆ ಪರಿಹಾರವಾಗಿರುವ ನಮ್ಮ ಮೆಟ್ರೋದ ಹಲವು ಮಾರ್ಗಗಳ ಕಾಮಗಾರಿ ವೇಗ ಪಡೆದುಕೊಂಡಿದೆ. ಟ್ರಾಫಿಕ್ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಲಿರುವ ಮೆಟ್ರೋದ ನೀಲಿ, ಹಳದಿ, ಪಿಂಕ್ ಮಾರ್ಗದ ಕಾಮಗಾರಿಗಳು ಪ್ರಗತಿಯಲ್ಲಿವೆ. ಮಹತ್ವಾಕಾಂಕ್ಷೆಯ ಬೆಂಗಳೂರು ನಮ್ಮ ಮೆಟ್ರೋದ ಬ್ಲೂ ಲೈನ್ ಹಂತ 2A, ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಕೆ ಆರ್ ಪುರ (ಹೊರ ವರ್ತುಲ ರಸ್ತೆ ಮಾರ್ಗ) ವರೆಗೆ ವ್ಯಾಪಿಸಿದ್ದು, ಯೋಜನೆಯ ಶೇ. 39% ಗರ್ಡರ್ ಲಾಂಚ್‌ಗಳನ್ನು …

Read More »

ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಬೆನ್ನಲ್ಲೇ ಕರ್ನಾಟಕದಲ್ಲೂ ಸರ್ಕಾರ ಮುಂಜಾಗ್ರತ ಕ್ರಮ…

ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಬೆನ್ನಲ್ಲೇ ಕರ್ನಾಟಕದಲ್ಲೂ ಸರ್ಕಾರ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಂಡಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡುರಾವ್, ‘ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯ ಇಲ್ಲ. ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಕೇಂದ್ರ ಸರ್ಕಾರದೊಂದಿಗೂ ಚರ್ಚೆ ನಡೆದಿದೆ. ಅರವತ್ತು ವರ್ಷ ಮೇಲ್ಪಟ್ಟವರು ಜಾಗರೂಕತೆಯಿಂದಿರಬೇಕು. ಬೇರೆ ಬೇರೆ ಆರೋಗ್ಯ ಸಮಸ್ಯೆ …

Read More »

ನೀವು ಮೊಘಲರಲ್ಲ, ಮೊಘಲರೇ ಮತ್ತೆ ಹುಟ್ಟಿ ಬಂದರೂ ಈಗದು ಸಾಧ್ಯವಿಲ್ಲ: ಬಿ ವೈ ವಿಜಯೇಂದ್ರ.

ಬೆಂಗಳೂರು: ಶ್ರೀರಾಮ ಮಂದಿರ ಉಳಿಯ ಬೇಕೆಂದರೆ ಹಿಂದೂ ರಾಷ್ಟ್ರವಾಗಬೇಕು ಎಂಬ ಪೇಜಾವರ ಶ್ರೀಗಳ ಹೇಳಿಕೆ ಸರಿಯಲ್ಲ, ಅದು ಬಿಜೆಪಿಯ ಸಿದ್ಧಾಂತ,ಅದಕ್ಕೆ ನಾವು ಅವಕಾಶ ಕೊಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಬಿ ವೈ ವಿಜಯೇಂದ್ರ ಅವರು ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್‌ ಮೂಲಕ ಕುಟುಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾನ್ಯ ಸಿದ್ದರಾಮಯ್ಯ ನವರೇ, “ಹಿಂದೂ ರಾಷ್ಟ್ರ ಕಲ್ಪನೆ ಈ ದೇಶದ ಕೋಟ್ಯಾಂತರ ಜನರ ಸಂಕಲ್ಪ, ಅದಕ್ಕೆ ಅವಕಾಶ …

Read More »

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಡಿ.ವಿ. ಸದಾನಂದಗೌಡ.

ಬೆಂಗಳೂರು: ಬೆಳಗಾವಿಯಲ್ಲಿ ಎಸ್ಟಿ ಮಹಿಳೆಯನ್ನು ವಿವಸ್ತ್ರ ಮಾಡಿ, ಮೆರವಣಿಗೆ ಮಾಡಿರುವುದು ಯಾರು ಕೂಡ ಸಹಿಸಲಾಗದು. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದಗೌಡ ಅವರು ಆಕ್ಷೇಪ ವ್ಯಕ್ತಪಡಿಸಿದರು. ಬೆಂಗಳೂರಿನ ಮೇಖ್ರಿ ವೃತ್ತದಲ್ಲಿ ಮಹಿಳಾ ಮೋರ್ಚಾ ವತಿಯಿಂದ ಶನಿವಾರ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇದನ್ನು ಖಂಡಿಸಿ ನಾವು ಇಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ. ಪೆÇಲೀಸರು ಇಲ್ಲಿ …

Read More »

ಶಾಲಾ ಮೈದಾನ ಮತ್ತು ಆವರಣವನ್ನು ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಬಳಕೆ ಮಾಡಿಕೊಳ್ಳಬೇಕು ಎಂದು ಕರ್ನಾಟಕದ ಶಿಕ್ಷಣ ಇಲಾಖೆ ಸುತ್ತೋಲೆ…

ಬೆಂಗಳೂರು: ಶಾಲಾ ಮೈದಾನ ಮತ್ತು ಆವರಣವನ್ನು ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಬಳಕೆ ಮಾಡಿಕೊಳ್ಳಬೇಕು ಎಂದು ಕರ್ನಾಟಕದ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಬಿ. ಬಿ. ಕಾವೇರಿ, ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಕುರಿತು ಎಂಬ ವಿಷಯವನ್ನು ಸುತ್ತೋಲೆ ಒಳಗೊಂಡಿದೆ

Read More »

ಆರ್ಯ ಈಡಿಗರ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ನಟ ಶಿವರಾಜ್‌ಕುಮಾರ್‌ಗೆ ಎಂಪಿ ಟಿಕೆಟ್‌ ಕೊಡುವ ಆಫರ್‌…

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿ ಮೂರು ಪಕ್ಷಗಳಿಂದಲೂ ಈಗಿನಿಂದಲೇ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಇನ್ನು ಕಾಂಗ್ರೆಸ್‌ನಿಂದ ಡಿಸಿಎಂ ಡಿ.ಕೆ.ಶಿವಕುಮಾರ್‌ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು (ಡಿಸೆಂಬರ್‌ 10) ಹಮ್ಮಿಕೊಂಡಿದ್ದ ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ನಟ ಶಿವರಾಜ್‌ಕುಮಾರ್‌ಗೆ ಎಂಪಿ ಟಿಕೆಟ್‌ ಕೊಡುವ ಆಫರ್‌ ನೀಡಿದರು. ಅರಮನೆ ಮೈದಾನದಲ್ಲಿ ಇಂದು ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಮೃತ ಮಹೋತ್ಸವ …

Read More »

ಕರ್ನಾಟಕ ಕಾಂಗ್ರೆಸ್ ಇದೀಗ ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಹೊಸ ಅಸ್ತ್ರ ಪ್ರಯೋಗ….

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಈಗ ಕರ್ನಾಟಕದ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ನಾಯಕರ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ‘ಉಗ್ರ’ ಹೇಳಿಕೆ ನೀಡಿದ ನಂತರ ಅಸಮಾಧಾನ ಸ್ಫೋಟಗೊಂಡಿದೆ. ರಾಷ್ಟ್ರೀಯ ಮಟ್ಟದಲ್ಲಿ ಇದೇ ವಿಚಾರ ದೊಡ್ಡ ಸದ್ದು ಮಾಡುವಾಗ, ಕರ್ನಾಟಕ ಕಾಂಗ್ರೆಸ್ ಇದೀಗ ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಹೊಸ ಅಸ್ತ್ರ ಪ್ರಯೋಗ ಮಾಡಿದೆ. ಅಷ್ಟಕ್ಕೂ ಕೆಲವು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ & ಕರ್ನಾಟಕ ಕಾಂಗ್ರೆಸ್ …

Read More »

ಗಣ್ಯರಿಂದ ಲೀಲಾವತಿಯವರಿಗೆ ಅಂತಿಮ ನಮನ…

ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದ ಹಿರಿಯ ನಟಿ ಲೀಲಾವತಿ ಅಂತ್ಯಕ್ರಿಯೆ ಸಿದ್ಧತೆ ನಡೀತಿದೆ. ಸದ್ಯ ಪಾರ್ಥೀವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಇರಿಸಲಾಗಿದ್ದು ರಾಜಕೀಯ ಮುಖಂಡರು, ಕಲಾವಿದರು ಬಂದು ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಪಾರ್ಥೀವ ಶರೀರವನ್ನು ನೆಲಮಂಗಲದ ಸೋಲದೇವನಹಳ್ಳಿಗೆ ಕೊಂಡೊಯ್ಸು ತೋಟದಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಯಡಿಯೂರಪ್ಪ, ಹಿರಿಯ ನಟ ಶ್ರೀನಾಥ್, ದ್ವಾರಕೀಶ್ ನಟಿಯರಾದ ಪೂಜಾ ಗಾಂಧಿ, ಶ್ರುತಿ, …

Read More »