BigTv News
February 4, 2025
Breaking News, ಬೆಂಗಳೂರು
ಬೆಂಗಳೂರು : 2025-26ನೇ ಸಾಲಿನ ಕೇಂದ್ರ ಸರಕಾರದ ಬಜೆಟ್‍ನಲ್ಲಿ ಕರ್ನಾಟಕದ ರೈಲ್ವೆ ಯೋಜನೆಗಳಿಗೆ 7564 ಕೋಟಿ ರೂ.ಅನುದಾನ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು. ದಕ್ಷಿಣ ಭಾರತದ ರಾಜ್ಯಗಳ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ ಬಜೆಟ್‍ನಲ್ಲಿ ಹಂಚಿಕೆಯಾಗಿರುವ ಅನುದಾನದ ಕುರಿತು ಹೊಸದಿಲ್ಲಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರು ಮಾತನಾಡಿದರು. ಯುಪಿಎ ಸರಕಾರದ ಅವಧಿಯಲ್ಲಿ ರಾಜ್ಯದ ರೈಲ್ವೆ ಯೋಜನೆಗಳಿಗೆ ಹಂಚಿಕೆಯಾಗುತ್ತಿದ್ದ ಅನುದಾನಕ್ಕಿಂತ 9 ಪಟ್ಟು ಹೆಚ್ಚು ಇದಾಗಿದೆ. …
Read More »
BigTv News
February 4, 2025
Breaking News, ಬೆಂಗಳೂರು
ಬೆಂಗಳೂರು: ಈ ವರ್ಷ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳ ವಿದ್ಯಾರ್ಥಿಗಳ ಫಲಿತಾಂಶಗಳನ್ನು ಸುಧಾರಿಸಲು, ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಇಲಾಖೆ (DSERT) 20 ಅಂಶಗಳ ಕಾರ್ಯಕ್ರಮವನ್ನು ಜಾರಿಗೆ ತಂದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಡಿಎಸ್‌ಇಆರ್‌ಟಿ ಕಚೇರಿಯಲ್ಲಿ ನಿನ್ನೆ ನಡೆದ ಎಸ್‌ಎಸ್‌ಎಲ್‌ಸಿ ಫಲಿತಾಂಶಗಳನ್ನು ಸುಧಾರಿಸುವ ಕುರಿತು ರಾಜ್ಯ ಮಟ್ಟದ ಚರ್ಚೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತಮ ಶೈಕ್ಷಣಿಕ ಕಾರ್ಯಕ್ಷಮತೆಯನ್ನು …
Read More »
BigTv News
February 4, 2025
Breaking News, ಬೆಂಗಳೂರು
ಬೆಂಗಳೂರು : ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಮಾದರಿಯ ವಸತಿ ಶಾಲೆಗಳಿಗೆ 2025-26ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಮತ್ತು ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಸೇರಿದಂತೆ ಒಟ್ಟು ಶಾಲೆಗಳು ಕಾರ್ಯನಿರ್ವಹಿಸುತ್ತಿರುತ್ತವೆ. ಪ್ರಸ್ತುತ 2025-26ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ …
Read More »
BigTv News
February 4, 2025
Breaking News, ಬೆಂಗಳೂರು
ಬೆಂಗಳೂರು: ರಾಜ್ಯದ ಸರಕಾರಿ ಪ್ರಾಥಮಿಕ ಶಾಲೆಗಳ ಅನುದಾನಕ್ಕೆ 22.47 ಕೋಟಿ ರೂ. ಬಿಡುಗಡೆ ಮಾಡಿ ಸಮಗ್ರ ಶಿಕ್ಷಣ ಕರ್ನಾಟಕದ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. 1ರಿಂದ 30 ಮಕ್ಕಳಿರುವ ಪ್ರತೀ ಶಾಲೆಗೆ ತಲಾ 2 ಸಾವಿರ ರೂ., 31ರಿಂದ 100 ವಿದ್ಯಾರ್ಥಿಗಳಿರುವ ಶಾಲೆಗೆ 5 ಸಾವಿರ ರೂ., 101ರಿಂದ 250 ಶಾಲೆಗಳಿರುವ ಶಾಲೆಗೆ 10 ಸಾವಿರ ರೂ., 251ರಿಂದ 1,000 ವಿದ್ಯಾರ್ಥಿಗಳಿರುವ ಶಾಲೆಗೆ 15 ಸಾವಿರ ರೂ.ಮತ್ತು ಸಾವಿರಕ್ಕಿಂತ ಹೆಚ್ಚು ಮಕ್ಕಳಿರುವ …
Read More »
BigTv News
February 4, 2025
Breaking News, ಬೆಂಗಳೂರು
ಬೆಂಗಳೂರು: ರೈತರು, ಕಾಂಗ್ರೆಸ್‌ನ ತೀವ್ರ ಪ್ರತಿರೋಧದಿಂದಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಿಂಪಡೆದಿದ್ದ ಮೂರು ಕೃಷಿ ಕಾಯ್ದೆಗಳ ಅನ್ವಯವೇ, ರೈತರ ಆದಾಯ ಹೆಚ್ಚಿಸಲು ಶಿಫಾರಸು ನೀಡಿ ಎಂದು ಕರ್ನಾಟಕ ಕೃಷಿ ಬೆಲೆ ಆಯೋಗಕ್ಕೆ ರಾಜ್ಯ ಸರ್ಕಾರ ಸೂಚಿಸಿದೆ. ಕೃಷಿ ಬೆಲೆ ಆಯೋಗಕ್ಕೆ ನೇಮಕ ಮಾಡಲಾದ ಅಧ್ಯಕ್ಷ ಮತ್ತು ಸದಸ್ಯರಿಗೆ ಷರತ್ತು-ನಿಬಂಧನೆ ಮತ್ತು ಕರ್ತವ್ಯಗಳನ್ನು ನಿಗದಿ ಮಾಡಿ 2024ರ ಡಿಸೆಂಬರ್ 24ರಂದು ರಾಜ್ಯ ಕೃಷಿ ಇಲಾಖೆ ಹೊರಡಿಸಿದ ಆದೇಶದಲ್ಲಿ ಈ ಉಲ್ಲೇಖವಿದೆ. …
Read More »
BigTv News
February 4, 2025
Breaking News, ಬೆಂಗಳೂರು
ಬೆಂಗಳೂರು : 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಶಾಲಾನುದಾನ ಬಿಡುಗಡೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ(1)ರನ್ವಯ 2024-25ನೇ ಸಾಲಿಗೆ ಶಾಲಾನುದಾನ ಕಾರ್ಯಕ್ರಮದಡಿ 42136 ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ರೂ.11459.00 ಲಕ್ಷಗಳು ಅನುಮೋದನೆಯಾಗಿರುತ್ತದೆ. ಸದರಿ ಪಿಎಬಿ ಅನುಮೋದಿತ ಶಾಲಾನುದಾನದಲ್ಲಿ ಪಿ.ಎಂ ಶ್ರೀ ಯೋಜನೆಯಡಿ ಅನುಮೋದಿತ (2 ಹಂತದ) ಶಾಲೆಗಳನ್ನು ಹೊರತುಪಡಿಸಿ 41933 ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಶೇಕಡಾ 20 ರಷು ಶಾಲಾನುದಾನವನ್ನು …
Read More »
BigTv News
February 4, 2025
Breaking News, ಬೆಂಗಳೂರು
ಬೆಂಗಳೂರು : ರಾಜ್ಯ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಸಿಹಿಸುದ್ದಿ ನೀಡಿದ್ದು, ಮುಂದಿನ ಬಜೆಟ್‌ನಲ್ಲಿ ಗೌರವಧನ ಹೆಚ್ಚಿಸುವುದಾಗಿ ಸರ್ಕಾರ ಭರವಸೆ ನೀಡಿದೆ. ರಾಜ್ಯ ಸರ್ಕಾರವು ಗೌರವಧನ ಹೆಚ್ಚಳದ ಭರವಸೆ ನೀಡಿದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಧರಣಿ ತಾತ್ಕಾಲಿಕವಾಗಿ ಅಂತ್ಯಗೊಳಿಸಿದ್ದಾರೆ. ಕರ್ನಾಟಕ ರಾಜ್ಯ (ಎಐಟಿಯುಸಿ) ನೇತೃತ್ವದಲ್ಲಿ ಧರಣಿ ನಡೆಸಿದ ಸಾವಿರಾರು ಸಿಬ್ಬಂದಿ ಚುನಾವಣೆ ವೇಳೆ ಖಾನಾಪುರದಲ್ಲಿ ಪ್ರಿಯಾಂಕಾ ಗಾಂಧಿ ನೀಡಿದ್ದ ಭರವಸೆಯಂತೆ ಆರನೇ …
Read More »
BigTv News
February 3, 2025
Breaking News, ಬೆಂಗಳೂರು
ಬೆಂಗಳೂರು : ಪ್ರಸಕ್ತ ಸಾಲಿನ SSLC ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿ ಈ ಬಾರಿ ಯಾವುದೇ ಕಾರಣಕ್ಕೂ ಗ್ರೇಸ್ ಮಾರ್ಕ್ಸ್ (ಕೃಪಾಂಕ) ಕೊಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಕೊಟ್ಟಿದ್ದ 10% ಗ್ರೇಸ್ ಅಂಕ ರದ್ದುಗೊಳಿಸಲಾಗಿದೆ ಎಂದರು. ಒಂದು ದಿನಕ್ಕೆ 1 ಅಂಕ ಎಂಬ ಕಾರ್ಯಕ್ರಮ ರೂಪಿಸಿದ್ದೇವೆ. ಮಕ್ಕಳಿಗೆ ಬೆಳಗ್ಗೆ ಫೋನ್ ಮಾಡಿ ಎಬ್ಬಿಸಿ ಓದಿಸುವ ಕಾರ್ಯಕ್ರಮ …
Read More »
BigTv News
February 3, 2025
Breaking News, ಬೆಂಗಳೂರು
ಬೆಂಗಳೂರು: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಸಭೆಗಳನ್ನು ಕರೆಯಲು ಸರ್ಕಾರ ಹೊಸ ನಿಯಮ ರೂಪಿಸಿದೆ. ಈ ನಿಯಮಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಸಭೆ ಕರೆಯುವ ಮತ್ತು ನಡೆಸುವು ನಿಯಮಗಳು, 2024) ಎಂದು ಕರೆಯತಕ್ಕದ್ದು ಎಂದು ಹೇಳಿದೆ. ಈ ಕುರಿತು ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಕೃತ ಆದೇಶವನ್ನು ಹೊರಡಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ 1993 (1993ರ ಕರ್ನಾಟಕ ಆಧಿನಿಯಮ ಸಂಖ್ಯೆ:14)ರ ಪ್ರಕರಣ 3ಇ …
Read More »
BigTv News
February 3, 2025
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ವಿರೋಧಿ ಬಣ ಬಹಿರಂಗವಾಗಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಪಟ್ಟು ಹಿಡಿದಿದ್ದು, ಸದ್ಯ ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗಳಿಗೆ ನಡುವೆ ಬಿಜೆಪಿ ಹೈಕಮಾಂಡ್ ಮಹತ್ವದ ನಿರ್ಧಾರಕ್ಕೆ ಬಂದಿದೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ ಎನ್ನುವ ಚರ್ಚೆ ಕಮಲ ಪಾಳಯದಲ್ಲಿ ನಡೆಯುತ್ತಿದೆ. ಆದರೆ, ಭಿನ್ನಮತೀಯರ ವಿರೋಧವನ್ನು ಲೆಕ್ಕಿಸದೆ, …
Read More »