BigTv News
December 4, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬೆಳ್ಳಂಬೆಳಗ್ಗೆ ಕಾರು ಹಾಗೂ ಬಿಎಂಟಿಸಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ಹೊತ್ತಿ ಉರಿದ ಘಟನೆ ಬೆಂಗಳೂರಿನ ನಾಯಂಡಳ್ಳಿ ಸಮೀಪದ ರಿಂಗ್‌ರೋಡ್‌ನಲ್ಲಿ ನಡೆದಿದೆ.ಬಿಎಂಟಿಸಿ ಬಸ್ ರಿಂಗ್‌ರೋಡ್‌ನಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ನಿಂತಿತ್ತು. ಈ ವೇಳೆ ನಿಂತಿದ್ದ ಬಸ್‌ಗೆ ವೇಗವಾಗಿ ಬಂದ i20 ಕಾರು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರು ಚಾಲಕ ಹೊರ ಬಂದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. …
Read More »
BigTv News
December 2, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯ ಸರ್ಕಾರವು ಬೆಳಗಾವಿಯಲ್ಲಿ ಡಿಸೆಂಬರ್ 4ರಿಂದ ಆರಂಭಗೊಳ್ಳಲಿರುವ ಚಳಿಗಾಲದ ಅಧಿವೇಶನದಲ್ಲಿ ಇಕ್ಕಟ್ಟಿಗೆ ಸಿಲುಕಿಕೊಳ್ಳಬಾರದು ಎಂಬ ಕಾರಣಕ್ಕೆ ತುರ್ತು ಬರ ಪರಿಹಾರವೆಂದು ಭಿಕ್ಷೆಯ ರೂಪದಲ್ಲಿ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿಟಿ ನಾಗಣ್ಣ ರಾಜ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ 2,000 ರೂ. ಕೊಡುವುದಾಗಿ ಹೇಳಿದ್ದಾರೆ. ಆದರೆ, ಕಂದಾಯ …
Read More »
BigTv News
November 30, 2023
ಕರ್ನಾಟಕ, ಬೆಂಗಳೂರು, ಸಿನಿಮಾ, ಸುದ್ದಿ
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಭರ್ಜರಿ ಬ್ಯಾಚುಲರ್ಸ್’ ಶೋವಿನಲ್ಲಿ ರುದ್ರ ಮಾಸ್ಟರ್‌ಗೆ ಜೋಡಿಯಾಗಿ ಕಾಣಿಸಿಕೊಂಡಿದ್ದ ಚಂದನಾ ಅನಂತಕೃಷ್ಣ ಶೋವಿನಿಂದ ಅರ್ಧಕ್ಕೆ ಹೊರಬಂದಿದ್ದರು. ಆದರೆ, ಅವರು ಯಾಕೆ ಶೋವಿನಿಂದ ಅರ್ಧಕ್ಕೆ ಹೊರಬಂದರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಹೌದು, ಚಂದನಾ ಅನಂತಕೃಷ್ಣ ಅವರು ಇದೀಗ ನಟನೆಯ ಮೂಲಕ ನಿಮ್ಮ ಮನ ಸೆಳೆಯಲಿದ್ದಾರೆ.ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ಹೊಚ್ಚ ಹೊಸ ಧಾರಾವಾಹಿ ‘ಲಕ್ಷ್ಮಿ ನಿವಾಸ’ದಲ್ಲಿ ಚಂದನಾ ಅನಂತಕೃಷ್ಣ ನಟಿಸಲಿದ್ದಾರೆ. ಜೀ ಕನ್ನಡ ವಾಹಿನಿಯು …
Read More »
BigTv News
November 30, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಈ ವರ್ಷ ಮಳೆ ಕೈಕೊಟ್ಟಿದ್ದು, ರಾಜ್ಯದೆಲ್ಲೆಡೆ ಬರಗಾಲದ ಛಾಯೆ ಆವರಿಸಿದೆ. ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು ದೊಡ್ಡ ಸವಾಲಾಗಿದ್ದರೆ, ಇತ್ತ ರೈತರ ಬದುಕು ಕೂಡ ಸಂಕಷ್ಟಕ್ಕೆ ಸಿಲುಕಿದೆ. ನಿರೀಕ್ಷಿಸಿದ ಮಟ್ಟಿಗೆ ಮಳೆಯಾಗದೇ ನೀರಿಲ್ಲದೇ ಬೆಳೆಗಳು ಜಮೀನುಗಳಲ್ಲೇ ಒಣಗಿ ನಾಶವಾಗುತ್ತಿದೆ.ಬರ ಹಾಗೂ ಇತರ ಸವಾಲುಗಳ ಮಧ್ಯೆಯೇ ರೈತರು ಈ ಬಾರಿ ಒಂದಿಷ್ಟು ಬೆಳೆಯನ್ನು ಬೆಳೆದಿದ್ದು, ಇದೀಗ ಫಸಲ ಮಾರಾಟಕ್ಕೆ ಸಿದ್ಧರಾಗಿದ್ದಾರೆ. ಹೀಗಾಗಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಗೆ …
Read More »
BigTv News
November 27, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬಿಜೆಪಿಯವರು ಬ್ರಿಟಿಷರು ಇದ್ದಂತೆ. ಅವರು ಚುನಾವಣೆಗಾಗಿ ನಮ್ಮ ಸೈನಿಕರನ್ನು ಬಲಿಕೊಟ್ಟಿದ್ದಾರೆ ಎಂದು ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಎಚ್‌ಸಿ ಬಾಲಕೃಷ್ಣ ಆರೋಪಿಸಿದ್ದಾರೆ. ಮಾಗಡಿ ತಾಲೂಕಿನ ತೂಬಿನಕೆರೆ ಗ್ರಾಮದಲ್ಲಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಸೈನಿಕರನ್ನು ಚುನಾವಣೆಗೆ ಬಳಸಿಕೊಳ್ಳುತ್ತಿದೆ. 2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರಚಿಸಿದ್ದು ಹೇಗೆ? ಲೋಕಸಭಾ ಚುನಾವಣೆಗೂ ಮುನ್ನ ಪುಲ್ವಾಮಾದಲ್ಲಿ ಸೈನಿಕರ ಬಲಿದಾನ ವಾಯಿತು ಎಂದು ವಾಗ್ದಾಳಿ ನಡೆಸಿದರು. ಮೋದಿಯವರು ವಿಶ್ವ ಮಾನವ ಆಗುವ …
Read More »
BigTv News
November 27, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಗ್ಯಾರಂಟಿ ಯೋಜನೆಗಳ ಭಾರದಿಂದ ಆದಾಯ ಹೊಂದಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಇಂತಹ ಸಂದರ್ಭದಲ್ಲಿಯೇ ದಂಡ, ಸೆಸ್ ಹೆಚ್ಚಿಸಿ ಎಂದು ಸರ್ಕಾರಕ್ಕೆ ಶಿಫಾರಸು ಸಲ್ಲಿಕೆಯಾಗಿದೆ. ಸರ್ಕಾರ ಈ ಶಿಫಾರಸು ಒಪ್ಪಲಿದೆಯೇ? ಕಾದು ನೋಡಬೇಕಿದೆ.ಕರ್ನಾಟಕ ಆಡಳಿತ ಸುಧಾರಣಾ ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ 6ನೇ ವರದಿಯನ್ನು ಸಲ್ಲಿಕೆ ಮಾಡಿದೆ. ಸರ್ಕಾರದ 7 ಇಲಾಖೆಗಳ 882 ಶಿಫಾರಸುಗಳನ್ನು ಸಲ್ಲಿಸಿದೆ. ಇಲಾಖೆಗಳ ಆದಾಯ ವೃದ್ಧಿಗೆ ಹಲವು ಶಿಫಾರಸುಗಳನ್ನು ಮಾಡಲಾಗಿದೆ.ಸರ್ಕಾರ ಎಲ್ಲಾ ಇಲಾಖೆಗಳ ಆಡಳಿತ ಸುಧಾರಣೆಗೆ ಕೈಗೊಳ್ಳಬೇಕಾದ …
Read More »
BigTv News
November 27, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡಿದ್ದು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್‌ಗೆ ಹೊಸ ಆತ್ಮವಿಶ್ವಾಸ ಸಿಕ್ಕಂತಾಗಿದೆ. ಸದ್ಯ ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಹೊಸ ಹುರುಪಿನೊಂದಿಗೆ ಸ್ಪರ್ಧಿಸಿದೆ. ನವೆಂಬರ್ 30ರಂದು ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಕಾಂಗ್ರೆಸ್ ಭರ್ಜರಿಯಾಗಿ ಪ್ರಚಾರ ಮಾಡುತ್ತಿದೆ.ತೆಲಂಗಾಣದಲ್ಲಿ ಅಧಿಕಾರ ನಡೆಸುತ್ತಿರುವ ಬಿಆರ್‌ಎಸ್ ಪಕ್ಷಕ್ಕೆ ಪೈಪೋಟಿ ಕೊಡಲು ಸ್ಥಳೀಯ ಮಟ್ಟದಲ್ಲಿ ದೊಡ್ಡ ನಾಯಕರ ಕೊರತೆ ಇರುವ ಕಾರಣ, ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಮತದಾರರನ್ನು ಸೆಳೆಯಲು ಕರ್ನಾಟಕದ ಕ್ಯಾಬಿನೆಟ್‌ನ ಮುಕ್ಕಾಲು ಭಾಗದಷ್ಟು …
Read More »
BigTv News
November 27, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಸಿದ್ದರಾಮಯ್ಯನವರು ಅಕ್ಕಿ ಕೊಡ್ತೀನಿ, ಬ್ಯಾಳಿ ಕೊಡ್ತೀನಿ, ಕೋಳಿ, ಕುರಿ ಕೊಡ್ತೀನಿ ಎನ್ನುತ್ತಾರೆ. 140 ಕೋಟಿಯಲ್ಲಿ ಶೇ 25 ದಲಿತರಿರುವ ನಾವು ನಮಗೆ ಕೋಳಿ, ಕುರಿ, ಅಕ್ಕಿ ಬೇಡ. ಶಿಕ್ಷಣ ಕೊಡಿ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ದೀನದಲಿತರನ್ನು ಮತಬ್ಯಾಂಕಾಗಿ ಬಳಸಿಕೊಂಡರೇ ಹೊರತು ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಬಯಸಿದಂತೆ ಅಸ್ಪೃಶ್ಯರು ಮತ್ತು ದಲಿತರನ್ನು ಮೇಲೆತ್ತುವ ಕೆಲಸ …
Read More »
BigTv News
November 25, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕಾಂಗ್ರೆಸ್‌ನ ಭ್ರಷ್ಟಾಚಾರ, ಗೂಂಡಾಗಳ ಮಹಾಪೋಷಕರು ಮುಖ್ಯಮಂತ್ರಿ ಸಿದ್ದರಾಮಯ್ಯ. ಭ್ರಷ್ಟರ ಪಾಲಿನ ಆಲದಮರ ಹಾಗೂ ಪೋಷಕ. ಅರಸಿ ಬಂದವರಿಗೆಲ್ಲ ನೀರು, ನೆಳಲನ್ನು ಒದಗಿಸುವ ಮಹಾಸಂರಕ್ಷಕರ ಭ್ರಷ್ಟ ಸಾಧನೆಯ ಪಕ್ಷಿನೋಟ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು 380 ಪಟ್ಟು ಅಕ್ರಮ ಆಸ್ತಿ ಪ್ರಕರಣದಿಂದ ಪಾರು ಮಾಡಿದ್ದೇ ಈ ಭ್ರಷ್ಟ ಪೋಷಕ. ಕೆಪಿಸಿಎಲ್‌ನ 447 …
Read More »
BigTv News
November 24, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕರ್ನಾಟಕದ ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರ ಕರಡು ಪಟ್ಟಿಯನ್ನು ಈಗ ಪ್ರಕಟಿಸಲಾಗಿದೆ. ಈ ಬಗ್ಗೆ ಬೆಂಗಳೂರು ಪದವೀಧರರ ಕ್ಷೇತ್ರ ಮತದಾರರ ನೋಂದಣಾಧಿಕಾರಿ & ಪ್ರಾದೇಶಿಕ ಆಯುಕ್ತರು ಮಾಹಿತಿ ನೀಡಿದ್ದಾರೆ. ಹಾಗಾದರೆ ಪಟ್ಟಿ ಪರಿಶೀಲನೆ ಮಾಡುವುದು ಹೇಗೆ? ಮತದಾರರ ಕರಡು ಪಟ್ಟಿ ಪರಿಶೀಲನೆಗೆ ಮತದಾರರ ನೋಂದಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರ ಕಾರ್ಯಾಲಯ ಸಂಪರ್ಕಿಸಬಹುದು. ಹಾಗೂ ಕೋಲಾರ ಸೇರಿ ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮತ್ತು …
Read More »