Breaking News

ಬೆಂಗಳೂರು

ಭಾರತೀಯ ಜನತಾ ಪಕ್ಷವು 12 ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದೆ….

ವಿಧಾನಸಭಾ ಚುನಾವಣೆ ಕಾವು ಹೆಚ್ಚಾಗಿದೆ. ಒಂದೊಂದೇ ಪಕ್ಷಗಳು ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿವೆ. ಈ ಪೈಕಿ ಬಿಜೆಪಿ ಅಂತಿಮಗೊಂಡ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಇತ್ತೀಚೆಗೆ ಬಿಡುಗಡೆ ಮಾಡಿತು. ಆದರೆ ಪಟ್ಟಿಯಲ್ಲಿ ಪಕ್ಷದ ಹಿರಿಯ ನಾಯಕಿ, ಮಾಜಿ ಸಂಸದೆಯ ಹೆಸರನ್ನು ಕೈ ಬಿಡಲಾಗಿದೆ. ಇದು ಮುಂದಿನ ರಾಜಕೀಯ ಬೆಳವಣಿಗೆಗಳತ್ತ ಕೌತುಕ ಮೂಡಿಸಿದೆ. ಇದೇ ನವೆಂಬರ್ 30 ರಂದು ತೆಲಂಗಾಣ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಭಾರತೀಯ ಜನತಾ ಪಕ್ಷವು 12 ಅಭ್ಯರ್ಥಿಗಳ ನಾಲ್ಕನೇ …

Read More »

75 ಲಕ್ಷಕ್ಕೂ ಹೆಚ್ಚು ಮೌಲ್ಯದ 133 ಲ್ಯಾಪ್‌ಟಾಪ್‌ಗನ್ನು ವಶಪಡಿಸಿಕೊಳ್ಳಲಾಗಿದೆ…..

ಬೆಂಗಳೂರಿನ ಸದಾಶಿವನಗರ ಪ್ರದೇಶದಲ್ಲಿ ಪೇಯಿಂಗ್ ಗೆಸ್ಟ್ (ಪಿಜಿ) ಮತ್ತು ಬ್ಯಾಚುಲರ್ ವಸತಿಗಳನ್ನು ಗುರಿಯಾಗಿಸಿಕೊಂಡ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್ ಕಳ್ಳನನ್ನು ಬಂಧಿಸಿದ ಎರಡು ವಾರಗಳ ನಂತರ, 75 ಲಕ್ಷಕ್ಕೂ ಹೆಚ್ಚು ಮೌಲ್ಯದ 133 ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. 39 ವರ್ಷದ ಟೆಕ್ಕಿ, ಶ್ರೀನಾಥ್ ಕಂಪ್ಯೂಟರ್ ಸೈನ್ಸ್ ಪದವೀಧರನಾಗಿದ್ದು, ಸುಲಭವಾಗಿ ಹಣ ಸಂಪಾದನೆ ಮಾಡಲು ಕಳ್ಳತನಕ್ಕೆ ಇಳಿದಿದ್ದ, ಇದಕ್ಕೂ ಮೊದಲು ಮಾಹಿತಿ ತಂತ್ರಜ್ಞಾನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ …

Read More »

ಸತೀಶ್‌ ಜಾರಕಿಹೊಳಿ ಮುನಿಸು ಡಿ ಕೆ ಶಿವಕುಮಾರ್‌ ಅಸಮಾಧಾನಕ್ಕೆ ಕಾರಣ…

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆದ್ದು ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನಲ್ಲಿ ಅಸಮಾಧಾನದ ಕಿಚ್ಚು ಜೋರಾಗಿದೆ. ಈ ಹಿಂದೆ ಮೈತ್ರಿ ಸರ್ಕಾರದ ವೇಳೆ ಡಿ ಕೆ ಶಿವಕುಮಾರ್‌ ವಿರುದ್ಧ ರಮೇಶ್‌ ಜಾರಕಿಹೊಳಿ ಸಮಸ್ಯೆಯಾಗಿದ್ರೆ, ಇಂದು ಸಚಿವ ಸತೀಶ್‌ ಜಾರಕಿಹೊಳಿ ಮುನಿಸು ಡಿ ಕೆ ಶಿವಕುಮಾರ್‌ ಅಸಮಾಧಾನಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಐದು ತಿಂಗಳು ಪೂರ್ಣಗೊಂಡಿದ್ದು, ಬೆಳಗಾವಿ ರಾಜಕೀಯದಿಂದಾಗಿ ಕಾಂಗ್ರೆಸ್‌ ನಲ್ಲಿರುವ ಅಸಮಾಧಾನವು ಹೆಚ್ಚಾಗಿದೆ. ಈ …

Read More »

ಉದ್ಧಟತನದ ಮುಖ್ಯಮಂತ್ರಿ ಮತ್ತು ರಾಜ್ಯ ಸರಕಾರವನ್ನು ನಾವು ಬೇರೆಲ್ಲೂ ಕಾಣಲಿಲ್ಲ….

ಬೆಂಗಳೂರು: ಹಿಂದೂ ಹೆಣ್ಮಕ್ಕಳ ಸುಮಂಗಲಿತನ ಕಿತ್ತುಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಅವರು ಕಿಡಿಕಾರಿದರು. ಈ ಕುರಿತು ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕರ್ನಾಟಕದ ಮಹಿಳೆಯರ ಪರಿಸ್ಥಿತಿ ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ. ತಾನು ಹೋದುದೇ ದಾರಿ ಎಂಬ ಉದ್ಧಟತನದ ಮುಖ್ಯಮಂತ್ರಿ ಮತ್ತು ರಾಜ್ಯ ಸರಕಾರವನ್ನು ನಾವು ಬೇರೆಲ್ಲೂ ಕಾಣಲಿಲ್ಲ. ಇದೊಂದು ರಾಕ್ಷಸ ಸರಕಾರ ಎಂದು ಹೇಳಿದರೂ ತಪ್ಪಾಗಲಾರದು ಎಂದು …

Read More »

ಡಿಸಿಎಂ ಡಿ ಕೆ ಶಿವಕುಮಾರ್‌ ಖುದ್ದು ಸತೀಶ್‌ ಜಾರಕಿಹೊಳಿ ಭೇಟಿ ಮಾಡಿ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ….

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಲ್ಲಿ ಅಸಮಾಧಾನಿತರ ಮುನಿಸು ಹೆಚ್ಚಾಗಿದ್ದು, ಸಚಿವ ಸತೀಶ್‌ ಜಾರಕಿಹೊಳಿ ಪಕ್ಷದ ಹಿರಿಯ ನಾಯಕರ ಮೇಲೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದ್ದು, ಈ ಅಸಮಾಧಾನವನ್ನ ಶಮನಗೊಳಿಸಲು ಡಿಸಿಎಂ ಡಿ ಕೆ ಶಿವಕುಮಾರ್‌ ಖುದ್ದು ಸತೀಶ್‌ ಜಾರಕಿಹೊಳಿ ಭೇಟಿ ಮಾಡಿ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚನೆಯಾಗಿ ಇನ್ನೂ ಆರು ತಿಂಗಳು ಪೂರೈಸಿಲ್ಲ. ಈ ಮಧ್ಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ಸತೀಶ್‌ ಜಾರಕಿಹೊಳಿ ನಡುವೆ ಮುನಿಸು ಏರ್ಪಟ್ಟಿದೆ. ಅಲ್ಲದೇ …

Read More »

ಅಧ್ಯಯನ ಮಾಡುತ್ತೇವೆ ಎನ್ನುತ್ತಾರೆ. ಮಾಡಲಿ, ನಮ್ಮ ತಕರಾರು ಇಲ್ಲ…..

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬರ ಅಧ್ಯಯನಕ್ಕೆ ಹಾಸನಕ್ಕೆ ತೆರಳಿರುವುರಲ್ಲಿ ನಮ್ಮ ತಕರಾರು ಇಲ್ಲ. ಕೇಂದ್ರ ಸರ್ಕಾರದ ಬಳಿ ಕೇಳಿ ನಮಗೆ ಪರಿಹಾರ ಕೊಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬರ ಅಧ್ಯಯನವನ್ನು ಕೇಂದ್ರದ ತಂಡ ನಡೆಸಿ ಹೋಗಿದ್ದಾರೆ. ಕೇಂದ್ರ ಸರ್ಕಾರಕ್ಕೆಅವರಿನ್ನೂ ವರದಿ ನೀಡಿಲ್ಲ. ಬಿಜೆಪಿ ಯವರು ರಾಜಕಾರಣ ಮಾಡಲು ಅಧ್ಯಯನ ಮಾಡುತ್ತೇವೆ ಎನ್ನುತ್ತಿದ್ದಾರೆ. ಕೇಂದ್ರ ಸರ್ಕಾರದ ಬಳಿ …

Read More »

ಹಾಸನಾಂಬೆ ದರ್ಶನ ಪಡೆಯಲಿರುವ ಮುಖ್ಯಮಂತ್ರಿ…

ಹಾಸನ: ವರ್ಷಕ್ಕೊಮ್ಮೆ ದರ್ಶನ ಕರುಣಿಸುವ ಹಾಸನಾಂಬ ದೇಗುಲದ ಬಾಗಿಲು ನವೆಂಬರ್‌ 2ರಂದು ತೆರೆದಿದ್ದು, ಭಕ್ತರಿಗೆ ದರ್ಶನಕ್ಕೆ ನವೆಂಬರ್‌ 3ರಂದು ಅವಕಾಶ ಕಲ್ಪಿಸಲಾಗಿತ್ತು. ಅಂದಿನಿಂದ ಹಲವು ರಾಜಕಾರಣಿಗಳು ಕೂಡ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆಯುತ್ತಿದ್ದಾರೆ. ಹಾಗೆಯೇ 5ನೇ ದಿನವಾದ ನಾಳೆ (ನವೆಂಬರ್‌ 07) ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ನಾಳೆ (ನವೆಂಬರ್‌ 07) ಬೆಳಗ್ಗೆ 12-30ಕ್ಕೆ ಹಾಸನಾಂಬೆ ದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಈ ವೇಳೆ …

Read More »

ಸಿದ್ದು ಬಗ್ಗೆ ಗುಣಗಾನ…

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ್ದ ‘ರೈತ ಸಾಂತ್ವನ ಯಾತ್ರೆ’ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತ ಮಾಡಿದ್ದರು. ಈ ಕುರಿತು ಭಾನುವಾರ ಅವರು ಪೋಸ್ಟ್ ಹಾಕಿದ್ದರು. ಸೋಮವಾರ ಈ ಪೋಸ್ಟ್‌ಗೆ ಎಚ್. ಡಿ. ಕುಮಾರಸ್ವಾಮಿ ಉತ್ತರ ನೀಡಿದ್ದಾರೆ. ‘ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ‘ಹೃದಯ ವೈಶಾಲ್ಯತೆ’ಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ‘ದೊಡ್ಡ’ ಗುಣವನ್ನು ಮನಸಾರೆ ಕೊಂಡಾಡುತ್ತೇನೆ. …

Read More »

ಕಾಂಗ್ರೆಸ್ ಸರ್ಕಾರ ಜನರ ನೋವನ್ನು ಕಡೆಗಣಿಸುತ್ತಿದೆ :ಸಿ ಟಿ ರವಿ..

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಲ್ಲಿ ಮುಖ್ಯಮಂತ್ರಿ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ರೋಮ್ ಹತ್ತಿ ಉರಿಯುತಿದ್ದರೆ ನಿರೋ ಪಿಟೀಲು ಬಾರಿಸುತ್ತಿದ್ದ” ಎಂಬಂತೆ ರಾಜ್ಯ ಬರದ ಬೇಗುದಿಯಲ್ಲಿ ನರಳುತ್ತಿದ್ದರೆ ರಾಜ್ಯದ ಕಾಂಗ್ರೆಸ್ ಸರ್ಕಾರ “ನಾನು ಮುಖ್ಯಮಂತ್ರಿ ನಾನು ಮುಖ್ಯಮಂತ್ರಿ” ಆಟ ಆಡಿ ಜನರ ನೋವನ್ನು ಕಡೆಗಣಿಸುತ್ತಿದೆ ಎಂದು ಮಾಜಿ ಸಚಿವ ಸಿ ಟಿ ರವಿ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಸಿ ಟಿ ರವಿ ಅವರು, ರಾಜ್ಯ ಸರ್ಕಾರ ತನ್ನ ಜವಾಬ್ದಾರಿ …

Read More »

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ ಇಳಿಕೆ ಕಂಡ ಚಿನ್ನ-ಬೆಳ್ಳಿ ದರ

ಬೆಂಗಳೂರು ;- ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,500 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,640ರೂ. ಬೆಳ್ಳಿ ಬೆಲೆ 1 …

Read More »