Breaking News

ಬೆಂಗಳೂರು

ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಹದಗೆಟ್ಟಿದೆ ಎಂದು ಬಿಜೆಪಿ ತೀವ್ರ ವಾಗ್ದಾಳಿ….

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸ್ವತಃ ಶಾಸಕರೇ ದಿನಕ್ಕೊಬ್ಬರಂತೆ ಬೀದಿಗಿಳಿದು ಅಸಮಾಧಾನ ಹೊರ ಹಾಕುವ ಮಟ್ಟಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಹದಗೆಟ್ಟಿದೆ ಎಂದು ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್‌ನ ಕಾಗವಾಡ ಶಾಸಕ ರಾಜು ಕಾಗೆ ಅವರು, ಮೊನ್ನೆಯಷ್ಟೇ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದರು. ಈ ಸಂಬಂಧ ಟ್ವೀಟ್ ಮೂಲಕ ಕರ್ನಾಟಕ ಬಿಜೆಪಿಯು ರಾಜ್ಯ ಸರ್ಕಾರದ ಆಡಳಿತ ಕಾರ್ಯ ನಿರ್ವಹಣೆ …

Read More »

ಜೆಡಿಎಸ್​ ಬಿಜೆಪಿಯಲ್ಲಿ ವಿಲೀನ ಆದರೂ ಅಚ್ಚರಿಪಡಬೇಕಿಲ್ಲ ಲಕ್ಷ್ಮಣ್ ಸವದಿ

ಬೆಂಗಳೂರು: ಲೋಕಸಭಾ ಚುನಾವಣೆಗಾಗಿ ಬಿಜೆಪಿ-ಜೆಡಿಎಸ್​ ಮೈತ್ರಿ ವಿಚಾರಕ್ಕೆ ಸಂಬಂಧಿಸಿ ಜೆಡಿಎಸ್​ ಬಿಜೆಪಿಯಲ್ಲಿ ವಿಲೀನ ಆದರೂ ಅಚ್ಚರಿಪಡಬೇಕಿಲ್ಲ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಚುನಾವಣೆ ವೇಳೆಗೆ JDS ಬಿಜೆಪಿಯಲ್ಲಿ ವಿಲೀನವಾದರೂ ಅಚ್ಚರಿಪಡಬೇಕಿಲ್ಲ. ಆದರೆ ಇದಕ್ಕೆ ಜೆಡಿಎಸ್​ ವರಿಷ್ಠ ದೇವೇಗೌಡರು ಒಪ್ಪಿಗೆ ಇಲ್ಲ. ಹೀಗಾಗಿ ಚುನಾವಣೆಗೆ ಮಾತ್ರ ಜೆಡಿಎಸ್​​-ಬಿಜೆಪಿ ಮೈತ್ರಿ ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಜೆಡಿಎಸ್​​ ಪಕ್ಷ ಬಿಜೆಪಿಯಲ್ಲಿ ವಿಲೀನವಾಗಬಹುದು. ಕುಮಾರಸ್ವಾಮಿ, ಜೆಡಿಎಸ್​​ …

Read More »

ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಡಿ.ಕೆ.ಶಿವಕುಮಾರ್

ಬೆಂಗಳೂರು: ಡಿಸಿಎಂ ತಗೊಂಡು ಏನ್ ಮಾಡಬೇಕು ಆದರೆ ಲಿಂಗಾಯತರು ಸಿಎಂ ಆಗಬೇಕು ಎಂದು ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಾಮನೂರು ಶಿವಶಂಕರಪ್ಪ ಅವರು ಏಕೆ ಹೀಗೆ ಹೇಳಿದ್ದಾರೆ ಎನ್ನುವ ಕುರಿತು ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಲಿಂಗಾಯತ ಅಧಿಕಾರಿಗಳದ್ದು ನಾಯಿಪಾಡು ಮತ್ತು ಲಿಂಗಾಯತರಿಗೆ ಡಿಸಿಎಂ ಸ್ಥಾನ ಬೇಡ ಸಿಎಂ ಸ್ಥಾನ …

Read More »

ರಾಜ್ಯದಲ್ಲಿ ಕಾವೇರಿ ಕಿಚ್ಚು: ಕರ್ನಾಟಕ ಬಂದ್.

ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್​ ಆದೇಶದ ಬೆನ್ನಲ್ಲೇ ರಾಜ್ಯದಲ್ಲಿ ಕಾವೇರಿ ಕಿಚ್ಚು ಭುಗಿಲೆದ್ದಿದೆ. ಕಾವೇರಿಗಾಗಿ ರಾಜ್ಯದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಗೆ ಕರೆ ನೀಡಿದ್ದು, ಕಾವೇರಿಗಾಗಿ ಇಡೀ ಕರುನಾಡೇ ಕಂಪ್ಲೀಟ್‌ ಬಂದ್‌ ಆಗಿದೆ.ಹೌದು, ಅಗತ್ಯ ಸೇವೆ ಬಿಟ್ಟು ಉಳಿದೆಲ್ಲವೂ ಸೇವೆ ಬಂದ್ ಆಗಲಿದ್ದು, ಕರ್ನಾಟಕ ಬಂದ್​ಗೆ ಸಾವಿರಕ್ಕೂ ಹೆಚ್ಚು ಸಂಘಟನೆಗಳ ಸಾಥ್ ನೀಡಿದ್ದಾರೆ. ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಸಹ ಬಂದ್‌ ಗೆ ಬೆಂಬಲಿಸಿದ್ದಾರೆ.

Read More »

ಬೆಂಗಳೂರು ಬಂದ್ ಗೆ ಶಾಲೆ ಕಾಲೇಜ್ ಗೆ ರಜೆ ನೀಡೋದು ಶಿಕ್ಷಣ ಇಲಾಖೆ ಗೆ ಬಿಟ್ಟಿದ್ದು..

ಬೆಂಗಳೂರು: ಕರ್ನಾಟಕ ಬಂದ್‌ – ಶಾಲಾ, ಕಾಲೇಜುಗಳಿಗೆ ರಜೆ ಕೊಡುವ ಅಧಿಕಾರ ಡಿಸಿಗಳಿಗೆ ಕೊಟ್ಟ ಶಿಕ್ಷಣ ಇಲಾಖೆ. ಬೆಂಗಳೂರು ಸೆಪ್ಟಂಬರ್ 29ರಂದು ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆ ಜಿಲ್ಲಾಧಿಕಾರಿಗೆ ನೀಡಿದೆ.ಈ ಕುರಿತು ಸೂಚನೆ ನೀಡಿರುವ ಶಿಕ್ಷಣ ಇಲಾಖೆ, ಪರಿಸ್ಥಿತಿಯನ್ನು ಗಮನಿಸಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡಬಹುದು ಎಂದಿದೆ.ಈ ಕುರಿತು ಸೂಚನೆ ನೀಡಿರುವ ಶಿಕ್ಷಣ ಇಲಾಖೆ, ಪರಿಸ್ಥಿತಿಯನ್ನು ಗಮನಿಸಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡಬಹುದು …

Read More »

ಬಂದೋಬಸ್ತ್ ಪೊಲೀಸರಿಗೆ ನೀಡಿದ ಟಿಫನ್ ನಲ್ಲಿ ಸತ್ತ ಇಲಿ ಪತ್ತೆ….

ಆಹಾರದಲ್ಲಿ ಸತ್ತ ಇಲಿ ಪತ್ತೆ.. ಪೋಲೀಸರಿಗೇ ಹೀಗೆ ಮಾಡೋದ..? ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಷಯದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಇಂದು ಸೆ.26ರಂದು ಕನ್ನಡ ಪರ ಸಂಘಟನೆಗಳು ಮತ್ತು ರೈತರು ಮಾಡಿದ ಬಂದ್‌ಗೆ ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೀಗ ಬಂದಗೆ ನಿರತರಾಗಿರುವ ಪೊಲೀಸರಿಗೆ ಅಸಮರ್ಪಕ ಆಹಾರವನ ಪೂರೈಕೆ ಮಾಡಿರುವುದು ಬಯಲಾಗಿದೆ.ಬೆಂಗಳೂರು ಬಂದ್ ಹಿನ್ನೆಲೆ ಬಂದೋಬಸ್ತ್ ನಿಯೋಜನೆಗೊಂಡಿದ್ದ ಯಶವಂತಪುರ ಸಂಚಾರಿ ಪೊಲೀಸರಿಗೆ ನೀಡಿದ ಬೆಳಗ್ಗಿನ ಉಪಹಾರದಲ್ಲಿ ಸತ್ತ ಇಲಿಯೊಂದು …

Read More »

ರೋಗಿಗಳಿಗೂ ತಟ್ಟಿದ ಬೆಂಗಳೂರು ಬಂದ್ ಎಫೆಕ್ಟ್: ಹೆಚ್ಚಿನ ಚಿಕಿತ್ಸೆಗೆ ಹೋಗಲು ಬಸ್ ಇಲ್ಲದೇ ಪರದಾಟ

ಬೆಂಗಳೂರು: ಬೆಂಗಳೂರು ಬಂದ್ ಎಫಕ್ಟ್ ರೋಗಿಗಳಿಗೂ ತಟ್ಟಿದೆ. ಶಿವಮೊಗ್ಗದ ಮಾನಸ ಆಸ್ಪತ್ರೆಗೆ ಹೋಗಲು ಆಂಧ್ರಪ್ರದೇಶದಿಂದ ಮೆಜೆಸ್ಟಿಕ್​ಗೆ ಪ್ರಯಾಣಿಕರು ಬಂದಿದ್ದಾರೆ. ಇಲ್ಲಿಂದ ಚಿಕಿತ್ಸೆಗಾಗಿ ಶಿವಮೊಗ್ಗ ಹೋಗಲು ನಿರ್ಧರಿಸಿದ್ದಾರೆ. ಆದರೆ ಪ್ರಯಾಣಿಕ ಸಂಖ್ಯೆ ಇಲ್ಲ ಅಂತ ಕೆಎಸ್​ಆರ್​ಟಿಸಿ ಶಿವಮೊಗ್ಗಕ್ಕೆ ಬಸ್ ಬಿಡುತ್ತಿಲ್ಲ. ಹೀಗಾಗಿ ರೋಗಿಗಳು ಪರದಾಡುತ್ತಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವುತ್ತಿರುವುದನ್ನು ವಿರೋಧಿಸಿ ಬೆಂಗಳೂರು ಬಂದ್​ಗೆ ಕರೆ ಕೊಟ್ಟಿದ್ದು, ಕೆ.ಆರ್​.ಮಾರ್ಕೆಟ್​​ ವ್ಯಾಪಾರಿಗಳು ಬಂದ್​ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಬಂದ್ ದಿಕ್ಕು ತಪ್ಪಿಸುವ ಕೆಲಸವಾಗಬಾರದು. ಜಲ್ಲಿಕಟ್ಟು …

Read More »

ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಲು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇಂದು ಬೆಳಗ್ಗೆ ದೆಹಲಿಗೆ ಪ್ರಯಾಣ….

ಬೆಂಗಳೂರು: ಬಹುದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಚರ್ಚೆ ಆಗುತ್ತಿರುವ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಇಂದು ಅಂತಿಮ ಮುದ್ರೆ ಬೀಳುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಲು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇಂದು ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಮೈತ್ರಿಗೆ ಸಂಬಂಧಿಸಿದಂತೆ ಈಗಾಗಲೇ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿ ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ. ಈಗ …

Read More »

ಪ್ರಧಾನಿ ನರೇಂದ್ರ ಮೋದಿ ವಿಶ್ವಕರ್ಮ ಯೋಜನೆ ಜಾರಿಗೊಳಿಸಿದರು….

ಬೆಂಗಳೂರು: ಆರ್ಥಿಕವಾಗಿ ಸಂಕಷ್ಟದಲ್ಲಿರುವ ವಿಶ್ವಕರ್ಮ ಸಮುದಾಯಕ್ಕೆ ಬಲ ನೀಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪಿಎಂ ವಿಶ್ವಕರ್ಮ ಯೋಜನೆ ಜಾರಿಗೊಳಿಸಿದ್ದು, ಕುಲಕಸುಬು ಮಾಡಿಕೊಂಡು ಬರುತ್ತಿರುವ ವಿಶ್ವಕರ್ಮ ಸಮುದಾಯದ ಜನರು ಯೋಜನೆಯ ಲಾಭ ಪಡೆದು ಆರ್ಥಿಕವಾಗಿ ಸದೃಢರಾಗುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಲಹೆ ನೀಡಿದರು. ನಗರದ ನಿಮ್ಹಾನ್ಸ್ ಕನ್ವೆನ್ಷನ್ ಸೆಂಟರ್ ನಲ್ಲಿ ಕೇಂದ್ರ ಸರ್ಕಾರದ ವತಿಯಿಂದ ಭಾನುವಾರ ಆಯೋಜನೆ ಮಾಡಲಾಗಿದ್ದ ಪಿಎಂ ವಿಶ್ವಕರ್ಮ ಯೋಜನೆಯ ಉದ್ಘಾಟನೆ ಸಮಾರಂಭದಲ್ಲಿ …

Read More »

ಅಕ್ರಮವಾಗಿ ಇ-ಸಿಗರೇಟ್​ ಸಾಗಿಸುತ್ತಿದ್ದ ಇಬ್ಬರು ಪ್ರಯಾಣಿಕರು ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ….

ದೇವನಹಳ್ಳಿ: ವಿದೇಶದಿಂದ ಅಕ್ರಮವಾಗಿ ಇ-ಸಿಗರೇಟ್​ ಸಾಗಿಸುತ್ತಿದ್ದ ಇಬ್ಬರು ಪ್ರಯಾಣಿಕರು ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎಎಲ್) ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಂದ 15.9 ಲಕ್ಷ ರೂಪಾಯಿ ಮೌಲ್ಯದ ಇ-ಸಿಗರೇಟ್ ವಶಕ್ಕೆ ಪಡೆಯಲಾಗಿದೆ. ಸೋಮವಾರ ಮಲೇಷ್ಯಾದ ಕೌಲಾಲಂಪುರ್​ನಿಂದ ಮಲೇಷ್ಯಾ ಏರ್‌ಲೈನ್ಸ್ ಎಮ್ ಹೆಚ್ 192 ವಿಮಾನದ ಮೂಲಕ ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರ ಲಗೇಜ್​ಗಳನ್ನು ಪರಿಶೀಲನೆ ಮಾಡುವಾಗ ಅಕ್ರಮ ಪತ್ತೆಯಾಗಿದೆ. 1,590 ಇ-ಸಿಗರೇಟ್​ಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳ …

Read More »