BigTv News
September 15, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ನಿವಾಸಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ನಿನ್ನೆ(ಗುರುವಾರ) ಸಂಜೆ ಭೇಟಿ ನೀಡಿ ಮಾತುಕತೆ ನಡೆಸಿದರು. ಸಿಎಂ ವಿರುದ್ಧ ಬಹಿರಂಗ ಹೇಳಿಕೆ ನೀಡಿದ ಹಿನ್ನೆಲೆ ಎಐಸಿಸಿ, ಹಿರಿಯ ಮುಖಂಡ ಬಿ.ಕೆ ಹರಿಪ್ರಸಾದ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಇದರ ಬೆನ್ನಲ್ಲೇ ಸಚಿವರಾದ ಪರಮೇಶ್ವರ್ ಹಾಗೂ ಸತೀಶ್ ಜಾರಕಿಹೊಳಿ ಭೇಟಿ ಮಾಡಿ ಮನವೊಲಿಕೆ …
Read More »
BigTv News
September 13, 2023
ಉಡುಪಿ, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು/ಉಡುಪಿ: ಉದ್ಯಮಿಯೊಬ್ಬರಿಗೆ ವಂಚಿಸಿರುವ ಆರೋಪದ ಹಿನ್ನೆಲೆಯಲ್ಲಿ ಹಿಂದೂಪರ, ಹಾಗು ಸಾಮಾಜಿಕ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿ 6 ಮಂದಿ ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೋಹನ್ ಕುಮಾರ್ ಅಲಿಯಾಸ್ ಗಗನ್ ಕಡೂರು, ರಮೇಶ್ (ವಿಶ್ವನಾಥ್ ಪಾತ್ರಧಾರಿ), ಧನರಾಜ್, ಶ್ರೀಕಾಂತ್ ಹಾಗೂ ಪ್ರಜ್ವಲ್ ಇನ್ನುಳಿದ ಬಂಧಿತರು. ವಂಚನೆಗೊಳಗಾದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರು ಬಂಡೆಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗಿತ್ತು. 3 ಪ್ರತ್ಯೇಕ ತಂಡ …
Read More »
BigTv News
September 12, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರ ಖಚಿತವಾದ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ. ಇಂದು ರಾಜ್ಯ ಪದಾಧಿಕಾರಿಗಳ ಸಭೆ ಕರೆಯಲಾಗಿದೆ. ಪಕ್ಷದ ಮುಂದಿನ ಸಂಘಟನಾತ್ಮಕ ಚಟುವಟಿಕೆ, ಲೋಕಸಭಾ ಚುನಾವಣೆಗೆ ಸಿದ್ಧತೆ ಮತ್ತು ಜೆಡಿಎಸ್‌ನೊಂದಿಗಿನ ಹೊಂದಾಣಿಕೆಯ ನಂತರದ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಲಾಗುತ್ತದೆ. ಇಂದು ಬೆಳಿಗ್ಗೆ 10.30ಕ್ಕೆ ಸಭೆ ಆಯೋಜಿಸಲಾಗಿದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಬಿಜೆಪಿ ಹಿರಿಯ ನಾಯಕ ಹಾಗೂ …
Read More »
BigTv News
September 12, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ನೋಟು ಬ್ಯಾನ್ ಬಳಿಕ ಖೋಟಾನೋಟು ಜಾಲದಲ್ಲಿ ಬಂಧಿತೆಯಾಗಿದ್ದ ಮಹಿಳೆಗೆ ಎನ್ಐಎ ವಿಶೇಷ ನ್ಯಾಯಾಲಯವು ಅಪರಾಧಿ ಎಂದು ತೀರ್ಪು ನೀಡಿದೆ. 53 ವರ್ಷದ ಜೆ.ವನಿತಾ ಆಲಿಯಾಸ್ ತಂಗಂ ರಾಮಚಂದ್ರಪುರ ಎಂಬಾಕೆ ಸುದೀರ್ಘ ವಿಚಾರಣೆ ವೇಳೆ ನಕಲಿ ನೋಟು ಸರಬರಾಜು ಮಾಡಿರುವುದು ರುಜುವಾತಾದ ಹಿನ್ನೆಲೆಯಲ್ಲಿ ಅಪರಾಧಿ ಎಂದು ತೀರ್ಪು ನೀಡಿದ್ದು ನಾಳೆ ಶಿಕ್ಷೆ ಪ್ರಮಾಣ ಘೋಷಿಸಿದೆ. ನೋಟು ಅಮಾನ್ಯಿಕರಣ ವೇಳೆ 2 ಸಾವಿರ ಮುಖಬೆಲೆಯ 6.40 ಲಕ್ಷ ಹಣವನ್ನ ಸಾಗಾಟ ಹಿನ್ನೆಲೆಯಲ್ಲಿ …
Read More »
BigTv News
September 12, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಈ ಇಬ್ಬರು ಬಾಲ ಪ್ರತಿಭೆಗಳು ಹಂಪಿಯ ಬೀದಿಬದಿ ವ್ಯಾಪಾರಿಗಳ ಮಕ್ಕಳು. ಇಲ್ಲಿನ ರಂಜು ಆರ್ಟ್ಸ್ ಯೋಗ ಟ್ರಸ್ಟ್ನಲ್ಲಿ ಅಂದಾಜು 100 ಮಕ್ಕಳಿಗೆ ಉಚಿತವಾಗಿದ್ದ ಯೋಗಾಭ್ಯಾಸದಲ್ಲಿ ಭಾಗಿಯಾಗುತ್ತಿದ್ದರು. ಮಕ್ಕಳ ಪ್ರತಿಭೆ ಗುರುತಿಸಿ ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಯೋಗ ಸ್ಪರ್ಧೆಗೆ ಆಯ್ಕೆ ಮಾಡಲಾಗಿತ್ತು. ಇಲ್ಲಿ ವಿಜೇತರಾಗಿ ಥಾಯ್ಲೆಂಡ್‌ನಲ್ಲಿ ನಡೆಯುವ ಸ್ಪರ್ಧೆಗೆ ಆಯ್ಕೆಯಾಗಿದ್ದರು. ಈ ಇಬ್ಬರು ಬಾಲ ಪ್ರತಿಭೆಗಳು ಹಂಪಿಯ ಬೀದಿಬದಿ ವ್ಯಾಪಾರಿಗಳ ಮಕ್ಕಳು. ಇಲ್ಲಿನ ರಂಜು ಆರ್ಟ್ಸ್ ಯೋಗ ಟ್ರಸ್ಟ್ನಲ್ಲಿ ಅಂದಾಜು 100 …
Read More »
BigTv News
September 11, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ನೆದರ್ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆ ಇಂದು ಬೆಂಗಳೂರಿಗೆ ಭೇಟಿ ನೀಡಿದ್ದು, ಹೂಡಿಕೆಗಳ ಸಂಬಂಧ ರಾಜ್ಯ ಸರ್ಕಾರ, ಉದ್ಯಮಿಗಳ ಜೊತೆ ಸಭೆ ನಡೆಸಲಿದ್ದಾರೆ. ವಾರ್ಷಿಕ ಜಿ20 ಶೃಂಗಸಭೆಗೆ ಭಾರತಕ್ಕೆ ಆಗಮಿಸಿರುವ ನೆದರ್ಲ್ಯಾಂಡ್ಸ್ ಪ್ರಧಾನ ಮಂತ್ರಿ ಮಾರ್ಕ್ ರುಟ್ಟೆ ಇಂದು ದೇಶದ ಸಿಲಿಕಾನ್ ಸಿಟಿ ಬೆಂಗಳೂರಿಗೆ ಭೇಟಿ ನೀಡಿದ್ದಾರೆ. 120 ಮಂದಿ ಉದ್ಯಮಿಗಳ ದೊಡ್ಡ ನಿಯೋಗದೊಂದಿಗೆ ಅವರು ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಅವರಿಗೆ ನೆದರ್‌ಲ್ಯಾಂಡ್ಸ್ ನ ವಿದೇಶಿ ವ್ಯಾಪಾರ ಮತ್ತು ಅಭಿವೃದ್ಧಿ …
Read More »
BigTv News
September 11, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಖಾಸಗಿ ವಾಹನ ಚಾಲಕರ ಬೆಂಗಳೂರು ಬಂದ್ ರಾಜಕೀಯ ಪ್ರೇರಿತವಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ. ಸದಾಶಿವನಗರ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಖಾಸಗಿ ವಾಹನದವರು ಎಲ್ಲರೂ ಬಂದು ಹೋರಾಟ ಮಾಡುವ ಅವಶ್ಯಕತೆ ಇಲ್ಲ. ಖಾಸಗಿ ಬಸ್ನವರಿಗೆ ತೊಂದರೆಯಾಗಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ನಮ್ಮ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣ ಅವಕಾಶ ನೀಡುರುವುದರಿಂದ ಅವರಿಗೆ ಸಮಸ್ಯೆಯಾಗಿದೆ ಎಂದು ಹೇಳಿದರು. ಆದರೆ ಈ ಹೋರಾಟದಲ್ಲಿ ಓಲಾ, …
Read More »
BigTv News
September 11, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಈ ಸಂಬಂಧ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಡೆಂಗ್ಯೂ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು …
Read More »
BigTv News
September 9, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ದೇಶದ ಆಸ್ತಿ ಮತ್ತು ಉತ್ಪಾದನೆ ಕೆಲವೇ ವ್ಯಕ್ತಿಗಳ ಕೈಯಲ್ಲಿ ಸಂಗ್ರಹ ಆಗುತ್ತಿರುವುದರಿಂದ ಇನ್ನೂ ಸಾಮಾಜಿಕ, ಆರ್ಥಿಕ ಅಸಮಾನತೆ ಮುಂದುವರೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಮಲಾ ಹಂಪನಾ ಸಾಹಿತ್ಯ ವೇದಿಕೆ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ‘ಬೆಳಕು ಬಿತ್ತಿದವರು’, ‘ಪ್ರಾಕೃತಾ ಕಥಾ ಸಾಹಿತ್ಯ’ ಮತ್ತು ‘ದ ಜರ್ನಿ ಆಫ್ ಲೈಫ್’ ಕೃತಿಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಸಿಎಂ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ದೇಶಕ್ಕೆ …
Read More »
BigTv News
September 9, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನ ಸವಾರರಿಗೆ ಶೇ.50ರಷ್ಟು ರಿಯಾಯಿತಿ ದಂಡ ಪಾವತಿಗೆ ಇಂದು(ಶನಿವಾರ) ಕೊನೆ ದಿನವಾಗಿದ್ದು, ಫೆಬ್ರುವರಿ 11ರ ಮುನ್ನ ಟ್ರಾಫಿಕ್ ನಿಯಮ ಉಲ್ಲಂಘಿಸಿದ ಸವಾರರಿಗೆ ಈ ಆದೇಶ ಅನ್ವಯವಾಗಲಿದೆ. ಸವಾರರು ಸದ್ಬಳಕೆ ಮಾಡಿಕೊಳ್ಳುವಂತೆ ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ. ರಾಜ್ಯ ಕಾನೂನು ಸೇವೆ ಪ್ರಾಧಿಕಾರ ಶಿಫಾರಸು ಮೇರೆಗೆ ರಾಜ್ಯ ಸರ್ಕಾರ ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಶೇ.50 ರಷ್ಟು ದಂಡ ಪಾವತಿಸುವ ಬಗ್ಗೆ ಆದೇಶ ಹೊರಡಿಸಿತ್ತು. ಮೊದಲ …
Read More »