BigTv News
September 8, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ಯೂಟರ್ನ್ ಪಡೆಯುತ್ತಿದ್ದಾಗ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಶಾಲಾ ಮಕ್ಕಳಿದ್ದ ವ್ಯಾನ್ ಪಲ್ಟಿಯಾದ ಘಟನೆ ಬನಶಂಕರಿಯ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಇಂದು ನಡೆದಿದೆ. ಬೆಳಗ್ಗೆ ಕಾಮಾಕ್ಯ ಕಡೆಯಿಂದ ಪದ್ಮನಾಭ ನಗರದ ಖಾಸಗಿ ಶಾಲೆಗೆ ತೆರಳುತ್ತಿದ್ದ ವ್ಯಾನ್ ಚಾಲಕ ರಸ್ತೆ ಸಿಗ್ನಲ್ ಫ್ರೀ ಇದ್ದುದರಿಂದ ದಿಢೀರ್ ಯೂಟರ್ನ್ ಪಡೆದಿದ್ದಾರೆ. ಈ ವೇಳೆ ವ್ಯಾನ್ ಚಕ್ರ ರಸ್ತೆ ವಿಭಜಕದ ಮೇಲೆ ಹತ್ತಿ, ಪಲ್ಟಿಯಾಗಿದೆ. ವ್ಯಾನ್ನಲ್ಲಿ ಹತ್ತಕ್ಕೂ ಹೆಚ್ಚು ಮಕ್ಕಳಿದ್ದರು. …
Read More »
BigTv News
September 8, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಮತ್ತೊಮ್ಮೆ ಚುನಾವಣಾ ಪೂರ್ವ ಮೈತ್ರಿ ಘೋಷಣೆಯಾಗಿದೆ. ಹೈಕಮಾಂಡ್ ಮಟ್ಟದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಹೊಂದಾಣಿಕೆ ನಡೆದಿದ್ದು, ಈ ಮೈತ್ರಿಯನ್ನು ಉಭಯ ಪಕ್ಷಗಳ ನಾಯಕರು ಸ್ವಾಗತಿಸಿದ್ದಾರೆ. 24+4 ಸ್ಥಾನಗಳ ಹಂಚಿಕೆ ನಡೆದಿದ್ದು ಇದನ್ನು ರಾಜ್ಯ ಬಿಜೆಪಿ ನಾಯಕರು ಖಚಿತಪಡಿಸಿದ್ದಾರೆ. ಸ್ಥಾನ ಕಳೆದುಕೊಳ್ಳುವ ಭೀತಿಗೆ ಸಿಲುಕಿರುವ ಹಾಲಿ ಬಿಜೆಪಿ ಸಂಸದ ಮುನಿಸ್ವಾಮಿ ಕ್ಷೇತ್ರ ತ್ಯಾಗಕ್ಕೆ ಮುಂದಾಗಿದ್ದಾರೆ. ನಾನು ಪಕ್ಷದ ನಿರ್ಧಾರಕ್ಕೆ ಬದ್ದ …
Read More »
BigTv News
September 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಹೆಚ್ಚು ಡಿಸಿಎಂಗಳ ನೇಮಕ ವಿಚಾರ ಹೈಕಮಾಂಡ್ಗೆ ಬಿಟ್ಟಿದ್ದು, ಆ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಸದಾಶಿವನಗರದಲ್ಲಿ ಇಂದು ಮಾತನಾಡಿದ ಅವರು, ನಾವು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದರು.ಬಿಜೆಪಿ ನಾಯಕರ ರಿವರ್ಸ್ ಆಪರೇಷನ್ ವಿಚಾರವಾಗಿ ಪ್ರತಿಕ್ರಿಯಿಸಿ, ಎಲ್ಲವೂ ಗೊತ್ತಾಗುತ್ತದೆ, ಸ್ವಲ್ಪ ದಿನದಲ್ಲೇ ನೋಡಿ. ಯಾರ ಸಂಪರ್ಕದಲ್ಲಿ ಯಾರಿದ್ದಾರೆ ಅನ್ನೋದು ತಿಳಿಯಲಿದೆ ಎಂದು ಹೇಳಿದರು. ವಿರೋಧ ಪಕ್ಷದ ನಾಯಕನ ನೇಮಕ ವಿಳಂಬ ವಿಚಾರವಾಗಿ, ಸಂವಿಧಾನಾತ್ಮಕವಾಗಿ ವಿಪಕ್ಷ …
Read More »
BigTv News
September 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಸರ್ಕಾರಿ ಇಂಜಿನಿಯರ್ಗಳಿಗೆ ಫೋನ್ ಮಾಡಿ ದಾಳಿ ಮಾಡಿಸುವುದಾಗಿ ಬೆದರಿಸಿ, ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಪ್ರಮುಖ ಆರೋಪಿಯ ಸಹಚರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಮೂಲದ ಸಂತೋಷ್ ಕೊಪ್ಪದ್ ಬಂಧಿತ ಆರೋಪಿ. ಪ್ರಮುಖ ಆರೋಪಿ ವಿಶಾಲ್ ಪಾಟೀಲ್ ಎಂಬಾತ ಪರಾರಿಯಾಗಿದ್ದು ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಯನ್ನು 2020ರಲ್ಲಿ ವಂಚನೆ ಪ್ರಕರಣದಡಿ ಬೆಳಗಾವಿಯ ಬೈಲಹೊಂಗಲ ಪೊಲೀಸರು ಬಂಧಿಸಿದ್ದರು. ಜಾಮೀನು ಪಡೆದು ಹೊರಬಂದು ಮತ್ತೆ …
Read More »
BigTv News
September 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ನಾಳೆಯಿಂದ ಸೆಪ್ಟೆಂಬರ್ 7 ರವರೆಗೆ ರಾಜ್ಯದಲ್ಲಿ ಭಾರಿ ವರ್ಷಧಾರೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಖ್ಯವಾಗಿ, ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ. 6 ದಿನ ಭಾರಿ ಮಳೆ: ರಾಜ್ಯದಲ್ಲಿ ನೈರುತ್ಯ ಮುಂಗಾರು ಸಕ್ರಿಯಗೊಂಡಿದೆ. ಹೀಗಾಗಿ ಮುಂದಿನ 6 ದಿನಗಳ ಕಾಲ ಜೋರು …
Read More »
BigTv News
September 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಪ್ರಜ್ವಲ್ ರೇವಣ್ಣ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪ ಹಿನ್ನೆಲೆಯಲ್ಲಿ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಹೈಕೋರ್ಟ್ ಆದೇಶಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಎ. ಮಂಜು ಹಾಗೂ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಟರಾಜ್ ಅವರಿದ್ದ ಪೀಠ ಮಹತ್ವದ ಆದೇಶ ಹೊರಡಿಸಿತು. ಅರಕಲಗೂಡು ಕ್ಷೇತ್ರದ ಹಾಲಿ ಜೆಡಿಎಸ್ ಶಾಸಕರಾಗಿರುವ ಎ ಮಂಜು ಅವರು …
Read More »
BigTv News
August 31, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬಿಜೆಪಿ ಸರ್ಕಾರವೂ ನೀರು ಬಿಟ್ಟಿತ್ತು ಎಂದು ಆರೋಪ ಮಾಡುವ ಮುನ್ನ ನಮ್ಮ ಕಾಲದಲ್ಲಿ ತಮಿಳುನಾಡಿಗೆ ಬಿಟ್ಟ ನೀರಿನ ದಾಖಲೆ ಬಿಡುಗಡೆ ಮಾಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ಗೆ ಮಾಜಿ ನೀರಾವರಿ ಸಚಿವ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ. ಇನ್ನು ಮಾಜಿ ಸಿಎಂ ಬೊಮ್ಮಾಯಿ ಅವರೂ ಕಾಂಗ್ರೆಸ್ ಸರ್ಕಾರ ವಿರುದ್ಧ ಹರಿಹಾಯ್ದಿದ್ದಾರೆ. ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ನಾಯಕ ಗೋವಿಂದ ಕಾರಜೋಳ ಅವರು, ನಮ್ಮ …
Read More »
BigTv News
August 31, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಜಯನಗರದಲ್ಲಿರುವ ಅಪೊಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಸ್ತು ಹಾಗೂ ತೀವ್ರ ಜ್ವರದಿಂದಾಗಿ ಇಂದು ಬೆಳಗಿನಜಾವ 3.40ರ ಸುಮಾರಿಗೆ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ತಕ್ಷಣ ಅವರನ್ನು ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗಿದೆ. ಕುಮಾರಸ್ವಾಮಿ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಪ್ರಕಟಣೆಯಲ್ಲಿ …
Read More »
BigTv News
August 28, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಭಾರತೀಯ ಬ್ಯಾಟರ್ ಕರುಣ್ ನಾಯರ್ ಎರಡು ದಶಕಗಳ ಕಾಲ ರಾಜ್ಯವನ್ನು ಪ್ರತಿನಿಧಿಸಿದ ನಂತರ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ದಿಂದ ಬೇರ್ಪಟ್ಟಿದ್ದಾರೆ. ಬಲಗೈ ಬ್ಯಾಟರ್ ಮುಂಬರುವ ದೇಶೀಯ ಋತುವಿನಲ್ಲಿ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ (ವಿಸಿಎ) ನೊಂದಿಗೆ ಹೊಸ ಇನ್ನಿಂಗ್ಸ್ ಪ್ರಾರಂಭಿಸುತ್ತಾರೆ, ಅವರು ಭಾರತೀಯ ಡ್ರೆಸ್ಸಿಂಗ್ ಕೋಣೆಗೆ ಹಿಂದಿರುಗುವ ಮಾರ್ಗವನ್ನು ಹುಡುಕುತ್ತಿದ್ದಾರೆ.
Read More »
BigTv News
August 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಚಂದ್ರಯಾನ 3 ಯಶಸ್ಸಿಗಾಗಿ ಶ್ರಮಿಸಿದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮುಂಜಾನೆ ನಗರಕ್ಕೆ ಆಗಮಿಸಿದ್ದಾರೆ. ಇನ್ನು ಇಸ್ರೋ ವಿಜ್ಞಾನಿಗಳ ಭೇಟಿಗೂ ಮುನ್ನ ಪ್ರಧಾನಿ ಮೋದಿ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದ ಹೊರಗೆ ಜನರನ್ನುದ್ದೇಶಿ ಮಾತನಾಡಿದರು. ಇಸ್ರೋ ವಿಜ್ಞಾನಿಗಳ ತಂಡಕ್ಕೆ ಅಭಿನಂದನೆ ಸಲ್ಲಿಸಲು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ಹೆಚ್.ಎ.ಎಲ್ ವಿಮಾನ ನಿಲ್ದಾಣದ ಮುಂದೆ ಸೇರಿದ್ದ ಜನತೆ ಉದ್ದೇಶಿಸಿ ಚುಟುಕು ಭಾಷಣ ಮಾಡಿದರು. ಇದು ಸೂರ್ಯೋದಯದ …
Read More »