BigTv News
July 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯದಲ್ಲಿನ ಹವಾಮಾನ ಮತ್ತು ಮಳೆ, ಬೆಳೆ ಪರಿಸ್ಥಿತಿ ಬಗ್ಗೆ ಜಿಲ್ಲಾಡಳಿತದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಡಿಯೋ ಸಂವಾದ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒಗಳ ಜೊತೆಗೆ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸುವರು. ಬಳಿಕ ಮುಂದಿನ ಕ್ರಮಗಳ ಬಗ್ಗೆ ತಿಳಿಸಲಿದ್ದಾರೆ. ವಿಡಿಯೋ ಸಂವಾದದಲ್ಲಿ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಾಧಿಕಾರಿಗಳು, ಕಂದಾಯ ಸಚಿವರು ಹಾಗು ಕೃಷಿ ಸಚಿವರು ಸೇರಿದಂತೆ ಹಿರಿಯ ಸಚಿವರುಗಳು ಭಾಗಿಯಾಗಲಿದ್ದಾರೆ. …
Read More »
BigTv News
July 24, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಮಹಾತ್ಮ ಗಾಂಧಿ, ಅಂಬೇಡ್ಕರ್ ಅವರೂ ಪತ್ರಕರ್ತರಾಗಿ ಪತ್ರಿಕಾ ವೃತ್ತಿಗೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಧ್ವನಿ ಇಲ್ಲದವರಿಗೆ ಧ್ವನಿ ನೀಡುವುದೇ ಪತ್ರಿಕಾ ವೃತ್ತಿಯ ಉದ್ದೇಶ, ಆಶಯ ಮತ್ತು ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪ್ರೆಸ್ ಕ್ಲಬ್ ಆಫ್ ಬೆಂಗಳೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. ಬಹಳಷ್ಟು ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎನ್ನುವುದು ನನ್ನ ಭಾವನೆ. ಪತ್ರಿಕಾ …
Read More »
BigTv News
July 21, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೂರು: ಸಕ್ಕರೆ ಕಾರ್ಖಾನೆ ಮಾಲೀಕರು ಕಬ್ಬು ತೂಕ ಮಾಡುವಾಗ ರೈತರನ್ನು ವಂಚಿಸುತ್ತಿದ್ದಾರೆ ಎಂದು ಆಡಳಿತ ಪಕ್ಷದ ಶಾಸಕ ಲಕ್ಷ್ಮಣ ಸವದಿ ವಿಧಾನಸಭೆಯಲ್ಲಿ ಆರೋಪಿಸಿದ್ದಾರೆ. ನಿಯಮ 69ರರಡಿ ವಿಷಯ ಪ್ರಸ್ತಾಪಿಸಿದ ಅವರು, ಕಬ್ಬು ಬೆಳೆಗಾರರಿಗೆ, ಸಾಗಣೆದಾರರಿಗೆ, ಕಟಾವು ಮಾಡುವವರಿಗೆ ಕೆಲವು ಸಕ್ಕರೆ ಕಾರ್ಖಾನೆಗಳಿಂದ ವಂಚನೆಯಾಗುತ್ತಿದೆ. ಇದನ್ನು ತಪ್ಪಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು. ಹಿಂದಿನ ಸಕ್ಕರೆ ಸಚಿವರು ಏಕಕಾಲದಲ್ಲಿ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ಮಾಡಿದ್ದರು. ಆದರೆ, ಏನು ಪ್ರಯೋಜನ ಆಗಿಲ್ಲ. …
Read More »
BigTv News
July 21, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ರಾಜ್ಯ ರಾಜಧಾನಿಯಲ್ಲಿ ಸರಗಳ್ಳತನ, ಮೊಬೈಲ್ ಕಳ್ಳತನ, ದರೋಡೆ ಸೇರಿದಂತೆ 40ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಲ್ಲೇಶ್ವರಂ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೊಹಮ್ಮದ್ ರಫೀಕ್ ಹಾಗೂ ತೌಫೀಕ್ ಸಾಧಿಕ್ ಬಂಧಿತ ಆರೋಪಿಗಳು. ಮೇ 27ರಂದು ಬೈಕಿನಲ್ಲಿ ಬಂದ ಆರೋಪಿಗಳು ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಮ್ಮ ಎಂಬ 70 ವರ್ಷದ ವೃದ್ದೆಯ ಚಿನ್ನದ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿದ್ದರು. ಇನ್ನು ಈ ಬಗ್ಗೆ ಕುರಿತು ಮಾತನಾಡಿದ ಉತ್ತರ …
Read More »
BigTv News
July 19, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಸದನದಲ್ಲಿ ಅಸಭ್ಯ ವರ್ತನೆ ತೋರಿದ ಬಿಜೆಪಿಯ 10 ಶಾಸಕರನ್ನು ಸ್ಪೀಕರ್ ಯು.ಟಿ ಖಾದರ್ ಅಮಾನತು ಮಾಡಿದ್ದಾರೆ.ಅರವಿಂದ್ ಬೆಲ್ಲದ್, ಆರ್ ಅಶೋಕ್, ಸುನೀಲ್ ಕುಮಾರ್, ಯಶಪಾಲ್ ಸುವರ್ಣ, ಅಶ್ವತ್ಥ ನಾರಾಯಣ, ವೇದವ್ಯಾಸ್ ಕಾಮತ್, ಧೀರಜ್ ಮುನಿರಾಜ್, ಉಮಾನಾಥ್ ಕೋಟ್ಯಾನ್, ಭರತ್ ಶೆಟ್ಟಿ, ಆರಗ ಜ್ಞಾನೇಂದ್ರ ಅವರನ್ನು ಅಮಾನತು ಮಾಡಲಾಗಿದೆ.ಪ್ರಸ್ತುತ ಅಧಿವೇಶನ ಮುಗಿಯುವರೆಗೂ ಅಮಾನತು ಮಾಡಲಾಗಿದೆ.
Read More »
BigTv News
July 18, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು:ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಇಂದು ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನವಾಗಿದ್ದು, ಮೃತದೇಹವನ್ನು ಇಂದಿರಾ ನಗರದಲ್ಲಿರುವ ಅವರ ಸ್ನೇಹಿತ ಹಾಗು ಕೇರಳ ಕಾಂಗ್ರೆಸ್ ಮುಖಂಡರಾಗಿದ್ದ ದಿವಂಗತ ಟಿ.ಜಾನ್ ಮನೆಗೆ ಕೊಂಡೊಯ್ಯಲಾಗಿದೆ. ಇಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಪಕ್ಷದ ಹಿರಿಯ ನಾಯಕನ ಮೃತದೇಹವನ್ನು ಹುಟ್ಟೂರಿಗೆ ರವಾನಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ವಿಮಾನ ವ್ಯವಸ್ಥೆ ಮಾಡಿದ್ದಾರೆ. ಬೆಳಿಗ್ಗೆ 11 ಗಂಟೆಯ ನಂತರ ಹೆಚ್ಎಎಲ್ ಏರ್ಪೋರ್ಟ್ನಿಂದ ತಿರುವನಂತಪುರಂಗೆ ಮೃತದೇಹ ರವಾನೆಯಾಗಲಿದೆ.ಇಂದಿರಾನಗರದ …
Read More »
BigTv News
July 18, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಪತ್ನಿ ಮತ್ತು ಆಕೆಯ ಕುಟುಂಬಸ್ಥರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿ ಮಾನಸಿಕ ಕಿರುಕುಳ ನೀಡುತ್ತಿರುವ ಆರೋಪದಡಿ ಐಎಎಸ್ ಅಧಿಕಾರಿಯೊಬ್ಬರ ವಿರುದ್ದ ಕೊಡಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಸ್ತುತ ಕೊಡಗು ಜಿಲ್ಲಾ ಪಂಚಾಯತ್ನಲ್ಲಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಐಎಎಸ್ ಅಧಿಕಾರಿ ಆಕಾಶ್ ಶಂಕರ್ ವಿರುದ್ಧ ಅವರ ಪತ್ನಿ ಡಾ. ವಂದನಾ ಈ ಆರೋಪ ಮಾಡಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ ಟಿ ಆರ್ ಸುರೇಶ್ ಅವರ ಪುತ್ರಿ …
Read More »
BigTv News
July 17, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ಇದನ್ನು ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡಿರುವುದು ಅನ್ನಬೇಕೋ, ಅಥವಾ ಪೊಲೀಸ್ ಸಿಬ್ಬಂದಿಯ ಅಸಹಾಯಕತೆ ಅನ್ನಬೇಕೋ ಗೊತ್ತಿಲ್ಲ. ಸಂಕಷ್ಟದಲ್ಲಿರುವವರಿಗೆ ತಕ್ಷಣ ಪೊಲೀಸ್ ಇಲಾಖೆಯನ್ನು ಸಂಪರ್ಕಿಸಲು ಅನುಕೂಲವಾಗಲಿ ಎಂದು ಚಾಲ್ತಿಯಲ್ಲಿರುವ 112 ಸಹಾಯವಾಣಿಗೆ ಕರೆ ಮಾಡಿದ ವ್ಯಕ್ತಿಯೊಬ್ಬ ಚಪ್ಪಲಿ ಕಳೆದು ಹೋಗಿದೆ. ಹುಡುಕಿಕೊಡಿ ಎಂದು ದೂರು ನೀಡಿರುವ ವಿಚಿತ್ರ ಘಟನೆ ತಡರಾತ್ರಿ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭಾನುವಾರ ತಡರಾತ್ರಿ ಪೊಲೀಸ್ ನಿಯಂತ್ರಣ ಕೋಣೆಯ ಸಹಾಯವಾಣಿಗೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ …
Read More »
BigTv News
July 17, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಷ್ಟ್ರೀಯ ಮಟ್ಟದ ಮಹಾಘಟ್ ಬಂಧನ್ ನಾಯಕರು ಸೋಮವಾರದಿಂದ ಎರಡು ದಿನ ನಗರದಲ್ಲಿ ಮಹತ್ವದ ಸಭೆ ನಡೆಸಲಿದ್ದು, ಇದಕ್ಕಾಗಿ ಅಳವಡಿಸಿದ್ದ ಸ್ವಾಗತ ಕೋರುವ ಫ್ಲಾಗ್ ಹಾಗೂ ಬ್ಯಾನರ್ಗಳನ್ನ ಕನ್ನಡ ಪರ ಸಂಘಟನೆಗಳು ಹರಿದು ಹಾಕಿವೆ. ದೇಶದ ವಿವಿಧ ರಾಜ್ಯಗಳ ಬಿಜೆಪಿಯೇತರ ಪಕ್ಷಗಳು ನಾಳಿನ ಸಭೆಯಲ್ಲಿ ಭಾಗಿಯಾಗಲಿದ್ದು, ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಕರೆಗೆ ಬೆಂಬಲಿಸಿ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ವಿವಿದ ರಾಜ್ಯಗಳ ಹಾಲಿ ಹಾಗೂ ಮಾಜಿ …
Read More »
BigTv News
July 17, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಭಾರಿ ಸ್ಪಂದನೆ ದೊರೆಯುತ್ತಿದ್ದು, ಈ ನಿಟ್ಟಿನಲ್ಲಿ ನಾಲ್ಕು ನಿಗಮದ ಬಸ್ಗಳಲ್ಲಿ ಸಂಚರಿಸುವವರ ಸಂಖ್ಯೆ ಹೆಚ್ಚುತ್ತಿದೆ. ಮಹಿಳೆಯರ ಉಚಿತ ಪ್ರಯಾಣದ ವೇಳೆ ಪ್ರತಿ ಬಾರಿಯ ಕಿರಿಕಿರಿ ತಪ್ಪಿಸುವ ಸಲುವಾಗಿ ಟ್ಯಾಪ್ ಆ್ಯಂಡ್ ಟ್ರಾವೆಲ್ ತಂತ್ರಜ್ಞಾನದ ಸ್ಮಾರ್ಟ್ ಕಾರ್ಡ್ ನೀಡಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಿಂತಿಸಿದೆ. ಸದ್ಯ ಬಸ್ಗಳಲ್ಲಿ ಮಹಿಳೆಯರು ಆಧಾರ್ ಕಾರ್ಡ್ ಮತ್ತು ಇತರೆ ದಾಖಲೆಗಳನ್ನು ತೋರಿಸಿ ಉಚಿತವಾಗಿ ಸಂಚರಿಸುತ್ತಿದ್ದಾರೆ. …
Read More »