Breaking News

ಬೆಂಗಳೂರು

ಇಂದು ಅಮಿಶ್ ಷಾ ರಾಜ್ಯಕ್ಕೆ ಆಗಮನ

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಭರದ ಸಿದ್ಧತೆ ಕೈಗೊಂಡಿದೆ. ಮುಖ್ಯವಾಗಿ ಹಳೇ ಮೈಸೂರು ಭಾಗದಲ್ಲಿ ಪಕ್ಷದ ಬಲವರ್ಧನೆಗೆ ರಣತಂತ್ರ ಹೆಣೆಯತೊಡಗಿದೆ. ಮುಂಬರುವ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುವ ಗುರಿ ಹೊಂದಲಾಗಿದೆ. ಈ ಹಿನ್ನೆಲೆಯಲ್ಲೇ ಮೂರು ದಿನಗಳ ರಾಜ್ಯ ಭೇಟಿಗೆ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಲಿರುವ ಅಮಿತ್‌ ಶಾ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದು, ಮಂಡ್ಯ, ಬೆಂಗಳೂರು ಹಾಗೂ ಗ್ರಾಮಾಂತರ ಜಿಲ್ಲೆಗಳ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. ಶುಕ್ರವಾರ ಬೆಳಗ್ಗೆ ರಾಜ್ಯ ನಾಯಕರ …

Read More »

ಕೊರೊನಾ ಪಾಸಿಟಿವ್ ಕಂಡುಬಂದಲ್ಲಿ ಕೂಡಲೇ ಕ್ವಾರಂಟೈನ್ನ

ಬೆಂಗಳೂರು : ಅಂತಾರಾಷ್ಟ್ರೀಯ ಪ್ರಯಾಣಿಕರು ಕೊರೊನಾ ಪಾಸಿಟಿವ್ ಕಂಡುಬಂದಲ್ಲಿ ಕೂಡಲೇ ಅವರನ್ನು ಕ್ವಾರಂಟೈನ್ನಲ್ಲಿಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯವಸ್ಥೆ ಮಾಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋವಿಡ್ 19 ಜಾಗೃತಿ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರಲ್ಲಿ ಕೊರೊನಾ ಸೋಂಕಿತರಿಗಾಗಿ ಬೆಂಗಳೂರಿನಲ್ಲಿ ಬೋರಿಂಗ್ ಹಾಸ್ಪಿಟಲ್ ಮತ್ತು ಮಂಗಳೂರಿನಲ್ಲಿ ವೆನ್ಲಕ್ ಹಾಸ್ಪಿಟಲ್ನಲ್ಲಿ ಕ್ವಾರಂಟೈನ್ಗೆ ವ್ಯವಸ್ಥೆ ಮಾಡಿದ್ದು, ಸೋಂಕಿನ ಲಕ್ಷಣಗಳು ಕಂಡುಬಂದ ಪ್ರಯಾಣಿಕರು ಸ್ಥಳೀಯ ಖಾಸಗಿ ಹೋಟೆಲ್ಗಳಲ್ಲಿ ಪ್ರತ್ಯೇಕವಾಗಿ …

Read More »

ಇಂದಿನಿಂದ ಡಿ. 29ರವರೆಗೆ ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಸಿಂಚನವಾಗುತ್ತಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ಇಂದು ಕೂಡ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಇಂದಿನಿಂದ ಡಿ. 29ರವರೆಗೆ ಕರ್ನಾಟಕದ ಹಲವೆಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದು (ಡಿ. 27) ಮತ್ತು ಡಿ. 28ರಂದು ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. …

Read More »

ದ್ವಿಚಕ್ರ ವಾಹನಗಳನ್ನು ಟಾರ್ಗೆಟ್ : ಕಳ್ಳ ಅರೆಸ್ಟ್

ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. 22 ವರ್ಷದ ಸೂರ್ಯ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯು, ಮನೆ ಮುಂದೆ ನಿಲ್ಲಿಸಿದ ದ್ವಿಚಕ್ರ ವಾಹನಗಳನ್ನೇ ಟಾರ್ಗೆಟ್ ಮಾಡಿ ಕದ್ದು ಎಸ್ಕೇಪ್ ಆಗುತ್ತಿದ್ದ. ಈ ಸಂಬಂಧ ಗಾಡಿ ಕಳೆದುಕೊಂಡ ಸಂತ್ರಸ್ತರೊಬ್ಬರು ಸ್ಥಳೀಯ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದರು. ದೂರಿನ ಅನ್ವಯ ತನಿಖೆ …

Read More »

ಬಿಎಂಟಿಸಿ ,ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಇಂದಿನಿಂದ ಮಾಸ್ಕ್ ಕಡ್ಡಾಯ

ಬೆಂಗಳೂರು: ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚಾಗಿದ್ದು, ಬೆಂಗಳೂರಿನಲ್ಲಿ ಕೊರೊನಾ ಆತಂಕ ಶುರುವಾಗಿದೆ.ಹೀಗಾಗಿ ಬಿಎಂಟಿಸಿ ,ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಇಂದಿನಿಂದ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮತ್ತೆ ಕೊರೊನಾ ಭೀತಿ ಹೆಚ್ಚಳವಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬಿಎಂಟಿಸಿ ಮತ್ತು ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಪ್ರಯಾಣಿಕರು, ಚಾಲಕ, ಕಂಡಾಕ್ಟರ್ ಮಾಸ್ಕ್ ಬಳಸುವುದು ಕಡ್ಡಾಯ ಮಾಡಿ ಇಲಾಖೆ ಆದೇಶ ಹೊರಡಿಸಿದೆ. ಬಿಎಂಟಿಸಿ …

Read More »

ಡಿ.27ರಂದು ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಅಣಕು ಕಾರ್ಯಾಚರಣೆ : ಡಾ.ಕೆ.ಸುಧಾಕರ್‌

ಬೆಂಗಳೂರು : ಕೊರೋನಾ ಸೋಂಕು ಚಿಕಿತ್ಸಾ ವ್ಯವಸ್ಥೆಗಳ ಸುಸ್ಥಿತಿಯನ್ನು ಪರಿಶೀಲನೆ ನಡೆಸಲು ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದ್ದು, ಡಿ.27ರಂದು ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಅಣಕು (ಮಾಕ್‌ಡ್ರಿಲ್‌) ಕಾರ್ಯಾಚರಣೆ ನಡೆಸಲಾಗುವುದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಕೇಂದ್ರ ಆರೋಗ್ಯ ಸಚಿವರ ವಿಡಿಯೋ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ‘ಒಂದು ವೇಳೆ ಸೋಂಕು ಹೆಚ್ಚಳವಾದರೆ ಚಿಕಿತ್ಸೆಗೆ ಎಲ್ಲಾ ತಯಾರಿ ಹೊಂದಿರಬೇಕು ಎಂದು ಕೇಂದ್ರ …

Read More »

ರಾಜ್ಯದಲ್ಲಿ 18 ಜನರಲ್ಲಿ ಸೋಂಕು ಪತ್ತೆ : ಮಾರ್ಗ ಸೂಚಿ ಜಾರಿ

ಬೆಂಗಳೂರು: ಕೋವಿಡ್‌ ಸೋಂಕಿನಿಂದ ಮುಕ್ತವಾಗಿ ಸಹಜ ಸ್ಥಿತಿಗೆ ಮರುಳುತ್ತಿರುವ ಹೊತ್ತಿನಲ್ಲಿ ಮತ್ತೆ ಕೊರೊನಾ ಗುಮ್ಮ ವಾಪಸ್‌ ಆಗುತ್ತಿದೆ. ಚೀನಾ ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈಗ ರಾಜ್ಯದ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಟೆನ್ಷನ್‌ ಶುರುವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್‌ ಸಂಬಂಧ ಮಹತ್ವದ ಸಭೆ ನಡೆಯಲಿದೆ. ಸಭೆ ಬಳಿಕ ಮತ್ತೆ ಫೇಸ್‌ ಮಾಸ್ಕ್ ಕಡ್ಡಾಯ ಮಾಡುವ ಸಾಧ್ಯತೆ ಇದೆ. ಕೊರೊನಾ ಸಂಬಂಧ ಈಗಾಗಲೇ ಆರೋಗ್ಯ ಇಲಾಖೆ ನಿಗಾ ವಹಿಸಿದ್ದು, …

Read More »

ನಟನ ಮೇಲೆ ಚಪ್ಪಲಿ ಎಸೆತ : ಮೌನ ಮುರಿದ ಕಿಚ್ಚ

ಬೆಂಗಳೂರು . ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಘಟನೆ ಕುರಿತು ಸ್ಯಾಂಡಲ್ ವುಡ್ ಆಕ್ರೋಶ ವ್ಯಕ್ತಪಡಿಸುತ್ತಿದೆ. ಶಿವಣ್ಣ,ಜಗ್ಗೇಶ್ ಸುದೀಪ್ ನಂತಹ ನಟರು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಅಂತ ಒತ್ತಾಯಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಘಟನೆ ಕುರಿತು ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಕಿಚ್ಚ ಸುದೀಪ್ ಸಹ ಟ್ವೀಟ್ ಮಾಡುವ ಮುಖಾಂತರ ದರ್ಶನ್ ಪರ ನಿಂತಿದ್ದಾರೆ. ಕಿಚ್ಚ ಸುದೀಪ್ ಈ ರೀತಿ ಟ್ವೀಟ್ ಮಾಡಿದ್ದಾರೆ. ನಮ್ಮ ನೆಲ, ಭಾಷೆ ಮತ್ತು ಸಂಸ್ಕೃತಿ …

Read More »

ಪೊಲೀಸ್ ಅಧಿಕಾರಿಗಳ ವಿರುದ್ಧ ಗರಂವಾದ ಗೃಹ ಸಚಿವ

ಬೆಂಗಳೂರು: ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಗೃಹ ಸಚಿವರು ಇಂದು ರಿವ್ಯೂ ಮೀಟಿಂಗ್ ನಡೆಸಿದ್ದಾರೆ.ಸಭೆಯಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಗರಂ ಆಗಿರುವ ಸಚಿವರು ಫುಲ್ ಕ್ಲಾಸ್ ತೆಗದುಕೊಂಡಿದ್ದಾರೆ. ನಗರದಲ್ಲಿ ಪಬ್, ಕ್ಯಾಸಿನೋ, ಲೇಡಿಸ್ ಬಾರ್, ಡ್ರಗ್ಸ್ ಹಾವಳಿ ಹೆಚ್ಚಾಗಿದೆ ಎಂದು ಗರಂ ಆಗಿದ್ದಾರೆ. ಪಬ್, ಕ್ಯಾಸಿನೋ ಮತ್ತು ಲೇಡಿಸ್ ಬಾರ್ ಗಳ ಬಗ್ಗೆ ಮಾಹಿತಿ ಮತ್ತು ದಾಖಲೆ ಸಮೇತ ಸಭೆಗೆ ಬಂದಿದ್ದ ಗೃಹ ಸಚಿವರು, ಕೆಲ ರೌಡಿಶೀಟರ್ ಗಳ ಚಟುವಟಿಕೆ …

Read More »

ಹೈಕೋರ್ಟ್‌ ಮೆಟ್ಟಿಲೇರಿದ
ಜಗದ್ಗುರು ಮುರುಘಾ ರಾಜೇಂದ್ರ ಮಠದ ಆಡಳಿತಾಧಿಕಾರಿ ವಿಚಾರ

ಬೆಂಗಳೂರು: ಪೋಕ್ಸೋ ಕಾಯ್ದೆಯಡಿ ಮರುಘಾ ಶರಣರು ನ್ಯಾಯಾಂಗ ಬಂಧನದಲ್ಲಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗದ ಜಗದ್ಗುರು ಮುರುಘಾ ರಾಜೇಂದ್ರ ಬೃಹನ್ಮಠಕ್ಕೆ ಆಡಳಿತಾಧಿಕಾರಿ ನೇಮಿಸಿರುವ ವಿಚಾರ ಇದೀಗ ಹೈಕೋರ್ಟ್‌ ಮೆಟ್ಟಿಲೇರಿದೆ. ಮಠಕ್ಕೆ ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್‌. ವಸ್ತ್ರದ್‌ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮ ಮಾಡಿ ರಾಜ್ಯ ಸರ್ಕಾರ ಡಿ.13ರಂದು ಹೊರಡಿಸಿರುವ ಆದೇಶ ಪ್ರಶ್ನಿಸಿ ಚಿತ್ರದುರ್ಗದ ಡಿ.ಎಸ್‌. ಮಲ್ಲಿಕಾರ್ಜುನ ಹಾಗೂ ಇತರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಅರ್ಜಿಯಲ್ಲಿ ರಾಜ್ಯ ಸರ್ಕಾರದ …

Read More »