Breaking News

ದೇಶ-ವಿದೇಶ

ಇಡೀ ದೇಶಕ್ಕೆ ಮತ್ತೆ ಶುರುವಾಗಿದೆ ”ಓಮಿಕ್ರಾನ್” ಟೆನ್ಷನ್..! ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 49ಕ್ಕೆ ಏರಿಕೆ

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ 4 ಹೊಸ ಒಮಿಕ್ರಾನ್​ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ದೆಹಲಿಯಲ್ಲಿ ಒಮಿಕ್ರಾನ್​ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಹಾಗೇ, ರಾಜಸ್ಥಾನದಲ್ಲಿ ಕೂಡ 4 ಕೇಸ್​ ದಾಖಲಾಗಿದ್ದು, ಅಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 13ಕ್ಕೆ ಏರಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 49ಕ್ಕೆ ತಲುಪಿದೆ. ನಿನ್ನೆ ಗುಜರಾತ್​​ನಲ್ಲಿ ವ್ಯಕ್ತಿಯೊಬ್ಬರಲ್ಲಿ ಒಮಿಕ್ರಾನ್​ ದೃಢಪಟ್ಟಿತ್ತು. ಅವರು ದಕ್ಷಿಣ ಆಫ್ರಿಕಾದಿಂದ ಆಗಮಿಸಿದ್ದವರಾಗಿದ್ದು, ಕೊವಿಡ್​ 19 ಪಾಸಿಟಿವ್​ ಬಂದಿತ್ತು. ಮಾದರಿಯನ್ನು …

Read More »

‌ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ನಗರದ ಹೊರವಲಯದ ರಂಗ್ರೆತ್ ಪ್ರದೇಶದಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ. ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ರಂಗ್ರೆತ್ ಪ್ರದೇಶದಲ್ಲಿ ಭದ್ರತಾ ಪಡೆಗಳಿಂದ ಶೋಧಕಾರ್ಯ ನಡೆಯಿತು. ಕಾರ್ಯಾಚರಣೆ ಸಂದರ್ಭದಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದರು. ಇದಕ್ಕೆ ಭದ್ರತಾ ಪಡೆಗಳಿಂದ ಪ್ರತಿದಾಳಿ ನಡೆಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ …

Read More »

ಅಂಡರ್‌ 19 ವಿಶ್ವಕಪ್ ಗೆ ಭಾರತ ತಂಡ ಪ್ರಕಟ

ಅಂಡರ್ -19 ವಿಶ್ವಕಪ್ ಜನವರಿ ಹಾಗೂ ಫೆಬ್ರವರಿಯಲ್ಲಿ ನಡೆಯಲಿದ್ದು, ಅದಕ್ಕೂ ಮುನ್ನ ಏಷ್ಯಾಕಪ್ ಯುಎಇನಲ್ಲಿ ಡಿ. 23ರಿಂದ ಆರಂಭವಾಗಲಿದೆ. ಅದಕ್ಕಾಗಿ ಭಾರತೀಯ ಕಿರಿಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಈ ಏಷ್ಯಾಕಪ್ ನಲ್ಲಿ 8 ತಂಡಗಳು ಭಾಗವಹಿಸಲಿವೆ. 8 ತಂಡಗಳನ್ನು ಎರಡು ಗುಂಪುಗಳನ್ನಾಗಿ ವಿಂಗಡಿಸಲಾಗಿದೆ. ಎ ಗುಂಪಿನಲ್ಲಿ ಭಾರತ, ಪಾಕಿಸ್ತಾನ, ಯುಎಇ ಹಾಗೂ ಅಫ್ಘಾನಿಸ್ತಾನ ತಂಡಗಳಿವೆ. ಬಿ ಗುಂಪಿನಲ್ಲಿ ನೇಪಾಳ, ಬಾಂಗ್ಲಾದೇಶ, ಶ್ರೀಲಂಕಾ ಹಾಗೂ ಕುವೈತ್ ತಂಡಗಳು ಭಾಗವಹಿಸಲಿವೆ. ಪ್ರತಿ ಗುಂಪಿನಿಂದ …

Read More »

ಒಮಿಕ್ರಾನ್ ಆತಂಕ; ಮುಂಬೈನಲ್ಲಿ 48 ಗಂಟೆಗಳ ಕಾಲ 144 ನಿಷೇಧಾಜ್ಞೆ ಜಾರಿ

ಮುಂಬೈ: ಕರೋನವೈರಸ್‌ನ ಒಮಿಕ್ರಾನ್ ರೂಪಾಂತರ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಮುಂಬೈನಲ್ಲಿ 48 ಗಂಟೆಗಳ ಕಾಲ ನಿಷೇಧಾಜ್ಞೆ ಸೆಕ್ಷನ್‌ 144 ಜಾರಿಗೊಳಿಸಲಾಗಿದೆ. ವೀಕೆಂಡ್​ನಲ್ಲಿ ದೊಡ್ಡ ಸಮಾರಂಭಗಳನ್ನು ಆಯೋಜಿಸುವುದನ್ನೂ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಮುಂಬೈ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಆದೇಶ ಹೊರಡಿಸಲಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಜನರು ಮತ್ತು ವಾಹನಗಳನ್ನು ಒಳಗೊಂಡ ರ್ಯಾಲಿಗಳು ಮತ್ತು ಪ್ರತಿಭಟನಾ ಮೆರವಣಿಗೆಗಳನ್ನು ನಿರ್ಬಂಧಿಸಲಾಗಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ …

Read More »

ಅರಿಶಿನ ಶಾಸ್ತ್ರ ಸಂಭ್ರಮದ ಫೋಟೋ ಹಂಚಿಕೊಂಡ ಕತ್ರಿನಾ ಕೈಫ್

ಮುಂಬೈ: ಬಾಲಿವುಡ್ ಸೆಲೆಬ್ರೆಟಿ ಜೋಡಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಶುಕ್ರವಾರ ಹೊಸ ಜೀವನಕ್ಕೆ ಕಾಲಿಟ್ಟಿದ್ದು, ಇಂದು ಕತ್ರಿನಾ ತಮ್ಮ ಅರಿಶಿನ ಶಾಸ್ತ್ರದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕತ್ರಿನಾ-ವಿಕ್ಕಿ ಶುಕ್ರವಾರ ರಾಜಸ್ಥಾನದ ಸವಾಯಿ ಮಾಧೋಪುರದ ಫೋರ್ಟ್ ಬರ್ವಾರಾದಲ್ಲಿರುವ ಸಿಕ್ಸ್ ಸೆನ್ಸಸ್ ರೆಸಾರ್ಟ್‍ನಲ್ಲಿ ಅದ್ಧೂರಿಯಾಗಿ ವಿವಾಹವಾದರು. ನೆಚ್ಚಿನ ನಟಿಯ ಮದುವೆ ಫೋಟೋಗಳನ್ನು ನೋಡಲು ಅಭಿಮಾನಿಗಳು ಸಹ ಕಾತುರರಾಗಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ ತಮ್ಮ ಮದುವೆ ಫೋಟೊವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದ ಕತ್ರಿನಾ, …

Read More »

ವಿನೋದ್ ಕಾಂಬ್ಳಿಗೆ ಸೈಬರ್ ಕಳ್ಳರಿಂದ ವಂಚನೆ-ಕೆವೈಸಿ ಅಪಡಟ್‌ ನೆಪ ಹೇಳಿ 1 ಲಕ್ಷ ಎಗರಸಿದ ಭೂಪರು

ಮುಂಬೈ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರಿಗೆ ಸೈಬರ್ ವಂಚಕರು 1 ಲಕ್ಷ ರೂ. ವಂಚಿಸಿರುವ ಘಟನೆ ಬಾಂದ್ರಾದಲ್ಲಿ ನಡೆದಿದೆ.ಪ್ರಸಿದ್ಧ ಬ್ಯಾಂಕ್‌ನ ಪ್ರತಿನಿಧಿಯೆಂದು ಕಾಂಬ್ಳಿಗೆ ಕರೆ ಮಾಡಿದ್ದಾರೆ. ನಂತರ ಕೆವೈಸಿ ಅಪ್ಡೇಟ್ ಮಾಡಲು ತಿಳಿಸಿದ್ದಾರೆ. ಬಳಿಕ ಅವರ ಬ್ಯಾಂಕ್ ವಿವರಗಳನ್ನೆಲ್ಲಾ ತೆಗೆದುಕೊಂಡು ಅಪ್‌ಲೊಡ್ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.ಸ್ವಲ್ಪ ಸಮಯದ ನಂತರ ಅವರ ಖಾತೆಯಿಂದ ಒಂದು ಲಕ್ಷ ರೂ.ವನ್ನು ವಂಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆ ಸಂಬಂಧಿಸಿದಂತೆ ಕಾಂಬ್ಳಿ ಅಪರಿಚಿತ ವ್ಯಕ್ತಿಯ …

Read More »

ಹೆಲಿಕಾಪ್ಟರ್ ದುರಂತದಲ್ಲಿ ಒಬ್ಬ ಅಪ್ರತಿಮ ಯೋಧನನ್ನ ದೇಶ ಕಳೆದುಕೊಂಡಿದೆ. -ಪ್ರಲ್ಹಾದ ಜೋಶಿ

ಹುಬ್ಬಳ್ಳಿ– ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.ಬಿಪಿನ್ ರಾವತ್ ಘಟನೆ ಅಂತ್ಯಂತ ದುರಂತ.ನಮೆಗಲ್ಲಾ ತುಂಬಾ ದುಖಃ ಆಗಿದೆ. ಖಂಡಿತ ಆ ಬಗ್ಗೆ ತನೀಖೆಯಂತು ಆಗೇ ಆಗುತ್ತೆ.ಈ ಘಟನೆಯ ತನೀಖೆ ಮಾಡೋಕೆ ನಿರ್ಧಾರ ಆಗಿದೆ.ಮುಂದಿನ ದಿನಗಳಲ್ಲಿ ಈ ರೀತಿ ಘಟನೆಯಾಗದಂತೆ ನೋಡಿಕೊಳ್ಳುತ್ತವೆ.ಹುಬ್ಬಳ್ಳಿ ವಿಮಾನ ನಿಲ್ದಾಣ ದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ‌.

Read More »

ಹೆಲಿಕಾಪ್ಟರ್‌ ದುರಂತ-ಬಿಪಿನ್‌ ರಾವತ್‌ ನಿಧನಕ್ಕೆ ಸಂತಾಪ ಸೂಚಿಸಿದ ಟಿಬೇಟ್‌ ಗುರು ದಲೈಲಾಮಾ

ಟಿಬೆಟ್: ಮಾರಣಾಂತಿಕ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಇತರರ ನಿಧನಕ್ಕೆ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಗುರುವಾರ ಸಂತಾಪ ಸೂಚಿಸಿದ್ದಾರೆ. ‘ನಾನು ಜನರಲ್ ಬಿಪಿನ್ ರಾವತ್ ಮತ್ತು ಅವರ ಸಹಚರರಿಗಾಗಿ ಪ್ರಾರ್ಥಿಸುತ್ತೇನೆ ಮತ್ತು ಈ ದುರದೃಷ್ಟಕರ ಅಪಘಾತದಲ್ಲಿ ಸಾವನ್ನಪ್ಪಿದ ಎಲ್ಲ ಕುಟುಂಬಗಳ ಸದಸ್ಯರಿಗೆ ನನ್ನ ಹೃತ್ಪೂರ್ವಕ ಸಂತಾಪವನ್ನು ಅರ್ಪಿಸುತ್ತೇನೆ. ರಾಷ್ಟ್ರದ ಸೇವೆಯಲ್ಲಿ ಜನರಲ್ ರಾವತ್ ಅವರ ದೀರ್ಘಕಾಲದ ಕೊಡುಗೆಯನ್ನು ನಾನು ವಂದಿಸುತ್ತೇನೆ’ …

Read More »

ದೆಹಲಿಯ ರೋಹಿಣಿ ಕೋರ್ಟ್ ನಲ್ಲಿ ಸ್ಪೋಟ : ಓರ್ವ ವ್ಯಕ್ತಿಗೆ ಗಾಯ

ನವದೆಹಲಿ: ದೆಹಲಿಯ ರೋಹಿಣಿ ನ್ಯಾಯಾಲಯದಲ್ಲಿ ಇಂದು ಬೆಳಿಗ್ಗೆ ನಿಗೂಢ ಸ್ಫೋಟ ಸಂಭವಿಸಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ರಾಷ್ಟ್ರರಾಜಧಾನಿ ದೆಹಲಿಯ ನ್ಯಾಯಾಲಯದಲ್ಲಿ ನಿಗೂಢ ಸ್ಪೋಟ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನ್ಯಾಯಾಲಯದಲ್ಲಿ ಲ್ಯಾಪ್ ಟಾಪ್ ಸ್ಫೋಟಗೊಂಡಿರಬಹುದು ಎಂದು ಶಂಕಿಸಲಾಗಿದ್ದು, ಸದ್ಯಕ್ಕೆ ಘಟನಾ ಸ್ಥಳಕ್ಕೆ ಏಳು ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ ಎಂದು ವರದಿಯಾಗಿದೆ.

Read More »

2015ರ ಹೆಲಿಕಾಪ್ಟರ್ ಪತನದಲ್ಲಿ ಪಾರಾಗಿದ್ದರು ಬಿಪಿನ್ ರಾವತ್

ನವದೆಹಲಿ: ತಮಿಳುನಾಡಿನ ನೀಲಗಿರಿ ಅರಣ್ಯ ವ್ಯಾಪ್ತಿಯ (ಕನೂರು ಬಳಿ) ಪ್ರದೇಶದಲ್ಲಿ ಭಾರತೀಯ ವಾಯುಪಡೆ ಹೆಲಿಕಾಪ್ಟರ್ ಪತನಗೊಂಡಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರ ಸ್ಥಿತಿ ಗಂಭೀರವಾಗಿದೆ. ಇದು ಅವರಿಗೆ ಎರಡನೇ ಅಪಘಾತವಾಗಿದೆ. ಕೆಲ ವರ್ಷಗಳ ಹಿಂದೆಯೂ ರಾವತ್ ಇದ್ದ ಹೆಲಿಕಾಪ್ಟರ್ ಪತನಗೊಂಡಿತ್ತು. ಆಗ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಹೌದು, 2015ರಲ್ಲಿ ನಾಗಾಲ್ಯಾಂಡ್‍ನ ದಿಮಾಪುರ್‍ನಲ್ಲಿ ಚೀತಾ ಹೆಲಿಕಾಪ್ಟರ್ ಪತನಗೊಂಡಿತ್ತು. ಆ ಹೆಲಿಕಾಪ್ಟರ್‍ನಲ್ಲಿ ಪ್ರಯಾಣಿಸುತ್ತಿದ್ದ ಬಿಪಿನ್ ರಾವತ್ ಪ್ರಾಣಾಪಾಯದಿಂದ ಪಾರಾಗಿದ್ದರು. …

Read More »