Breaking News

ದೇಶ-ವಿದೇಶ

ಹೆಲಿಕಾಪ್ಟರ್ ಪತನವಾದ ಸ್ಥಳದಲ್ಲಿ ಶಂಕಿತ ವ್ಯಕ್ತಿ ಅರೆಸ್ಟ್

ಚೆನ್ನೈ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿಯ ಕೂನೂರಿನಲ್ಲಿ ಪತನಗೊಂಡಿದ್ದು, ರಾವತ್ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನಾ ಸ್ಥಳದಲ್ಲಿ ಅನುಮಾನಾಸ್ಪದ ವ್ಯಕ್ತಿಯೊಬ್ಬನ್ನು  CRPF ಬಂಧಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆ ನಡೆದ ಸ್ಥಳ ವೆಲ್ಲಿಂಗ್‍ಟನ್‍ನಿಂದ ಏಳು ಕಿಮೀ ಪರ್ವತ ಪ್ರದೇಶದಲ್ಲಿದೆ ಎಂದು ತಿಳಿದು ಬಂದಿದೆ. ಹೆಲಿಕಾಪ್ಟರ್ ಕೂನೂರಿನಿಂದ ಕೊಯಮತ್ತೂರು ಸೇನಾ ಕಾರ್ಯಕ್ರಮಕ್ಕೆ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಮತ್ತು ಇತರ …

Read More »

ಮದುವೆಗೆ ಬರುವ ಅತಿಥಿಗಳಿಗೆ ಕತ್ರಿನಾ-ವಿಕ್ಕಿ ವೆಲ್​ಕಮ್ ನೋಟ್

ಮುಂಬೈ: ನಟಿ ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಾಲ್ ಮದುವೆ ಬಾಲಿವುಡ್‍ನಲ್ಲಿ ಸಖತ್ ಸುದ್ದಿಯಲ್ಲಿದೆ. ಈ ಜೋಡಿಯು ಅತಿಥಿಗಳನ್ನು ಸ್ವಾಗತಿಸಲು ಒಂದು ವೆಲ್‍ಕಮ್ ನೋಟ್ ನೀಡುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವೆಲ್‍ಕಮ್ ನೋಟ್  ಫೋಟೋ ವೈರಲ್ ಆಗುತ್ತಿದೆ. ಪತ್ರದಲ್ಲಿ ಏನಿದೆ?: ಈ ಮದುವೆಯನ್ನು ಬಹಳ ಸೀಕ್ರೆಟ್ ಆಗಿ ಮಾಡಲಾಗುತ್ತಿದೆ. ಮದುವೆಯ ಯಾವುದೇ ವಿವರಗಳೂ ಸೋಶಿಯಲ್ ಮೀಡಿಯಾದಲ್ಲಿ ಲೀಕ್ ಆಗಬಾರದು ಎಂದು ಎಚ್ಚರಿಕೆ ವಹಿಸಲಾಗುತ್ತಿದೆ. ಹಾಗಾಗಿ ಮದುವೆ ಬಂದ ಅತಿಥಿಗಳಿಗೆ ಈ ಬಗ್ಗೆ ಮೊದಲೇ ತಿಳಿಸಲಾಗಿದೆ. …

Read More »

ಸೇನಾ ಹೆಲಿಕಾಪ್ಟರ್​​ ಪತನ: ಘಟನಾ ಸ್ಥಳದಲ್ಲಿ 5 ಮೃತದೇಹ ಪತ್ತೆ: ರಾವತ್​​ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ಚೆನ್ನೈ(ತಮಿಳುನಾಡು): ಸೇನಾಪಡೆಗಳ ಮುಖ್ಯಸ್ಥ ಬಿಪಿನ್​​ ರಾವತ್​​ ಹಾಗೂ ಅವರ ಕುಟುಂಬದ ಸದಸ್ಯರು ಸೇರಿದಂತೆ ಅನೇಕರು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್​ ತಮಿಳುನಾಡಿನ ಕನೂರಿನಲ್ಲಿ ಪತನಗೊಂಡಿದೆ. ಇದರಲ್ಲಿ ಒಟ್ಟು 14 ಜನರು ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಈಗಾಗಲೇ ಲಭ್ಯವಾಗಿರುವ ಮಾಹಿತಿ ಪ್ರಕಾರ ಘಟನಾ ಸ್ಥಳದಲ್ಲಿ ಐವರ ಮೃತದೇಹ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಕೆಲವರನ್ನ ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್ ಕಂಟೋನ್ಮೆಂಟ್​ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರಲ್ಲಿ ಸೇನಾ ಮುಖ್ಯಸ್ಥ ಬಿಪಿನ್​ …

Read More »

ಇನ್ನೆರಡು ದಿನದಲ್ಲಿ ವಿರಾಟ್‌ ಕೊಹ್ಲಿ ODI ನಾಯಕತ್ವದ ಭವಿಷ್ಯ ನಿರ್ಧಾರ- ಎಲ್ಲರ ಚಿತ್ತ ಚೇತನ ಶರ್ಮಾ ಸಮಿತಿ ಮೇಲೆ

ಮುಂಬೈ: ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯಿಂದ ವಿರಾಟ್ ಕೊಹ್ಲಿಯ ಏಕದಿನ ನಾಯಕತ್ವದ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ರೂಪಾಂತರಿ ಕೋವಿಡ್​ 19 ಭಿತಿಯ ನಡುವೆಯೂ ಭಾರತ ತಂಡ ವೇಳಾಪಟ್ಟಿಯಂತೆ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ ಎಂದು ಬಿಸಿಸಿಐ ತಿಳಿಸಿದ್ದು, ದಕ್ಷಿಣ ಆಫ್ರಿಕಾ ಸರ್ಕಾರ ಕೂಡ ಅತ್ಯುತ್ತಮವಾದ ಬಯೋಬಬಲ್ ವ್ಯವಸ್ಥೆ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದೆ. 2022ರಲ್ಲಿ ಸಂಪೂರ್ಣ ಟಿ20 ಕ್ರಿಕೆಟ್​ ಪಂದ್ಯಗಳಿಗೆ ಹೆಚ್ಚು ಒತ್ತು …

Read More »

ರೂಪಾಂತರಿ ಕೊರೊನಾ ವೈರಸ್ ಭೀತಿ : ಐಸಿಸಿ ಮಹಿಳಾ ವಿಶ್ವಕಪ್​ ಕ್ವಾಲಿಫೈಯರ್ ಟೂರ್ನಿ ರದ್ದು

ನ್ಯೂಜಿಲ್ಯಾಂಡ್​ನಲ್ಲಿ 2022ಕ್ಕೆ ನಡೆಯಲಿರುವ ಏಕದಿನ ವಿಶ್ವಕಪ್​ಗೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ವೆಸ್ಟ್​ ಇಂಡೀಸ್ ತಂಡಗಳು ಅರ್ಹತೆ ಪಡೆದಿವೆ. ಈಗಾಗಲೇ ಭಾರತ, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್​, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್​ ತಂಡಗಳು ನೇರ ಅರ್ಹತೆ ಪಡೆದುಕೊಂಡಿವೆ.. ದುಬೈ : ಕೋವಿಡ್-19 ಕಾರಣದಿಂದ ಐಸಿಸಿ 2022ರ ಏಕದಿನ ವಿಶ್ವಕಪ್​ ಅರ್ಹತಾ ಟೂರ್ನಿಯನ್ನು ರದ್ದುಗೊಳಿಸಿದೆ. ಹಾಗಾಗಿ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ವೆಸ್ಟ್ ತಂಡಗಳು ಪ್ರಸ್ತುತ ಶ್ರೇಯಾಂಕದ ಆಧಾರದ ಮೇಲೆ ವಿಶ್ವಕಪ್​ಗೆ ಅರ್ಹತೆಗಿಟ್ಟಿಸಿಕೊಂಡಿವೆ. ದಕ್ಷಿಣ ಆಫ್ರಿಕಾದಲ್ಲಿ ರೂಪಾಂತರಿ ಕೊರೊನಾ …

Read More »

ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಇಬ್ಬರಿಗೆ ಕೊರೊನಾ ಸೋಂಕು ದೃಢ

ದೇವನಹಳ್ಳಿ(ಬೆಂಗಳೂರು ಗ್ರಾಮಾಂತರ): ದೇಶದಲ್ಲಿ ಒಮಿಕ್ರೋನ್ ಕೋವಿಡ್ ರೂಪಾಂತರಿ ವೈರಸ್ ಕಾಣಿಸಿಕೊಂಡಿದ್ದು, ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನ.01 ರಿಂದ ಇವತ್ತಿನವರೆಗೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಸುಮಾರು 94 ಪ್ರಯಾಣಿಕರು ಆಗಮಿಸಿದ್ದು, ಆ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕು ಕಂಡು ಬಂದ ಪ್ರಯಾಣಿಕರನ್ನು ಬಿಬಿಎಂಪಿ ವ್ಯಾಪ್ತಿಯ ಬೊಮ್ಮನಹಳ್ಳಿಯಲ್ಲಿ ಒಬ್ಬರನ್ನು ಕ್ವಾರಂಟೈನ್ ಮಾಡಲಾಗಿದ್ದು, ಮತ್ತೊಬ್ಬರನ್ನು ಖಾಸಗಿ ಹೋಟೆಲ್​​​ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಇವರಲ್ಲಿ ಹೊಸ ತಳಿಯ ವೈರಸ್ …

Read More »

ತಮ್ಮ 4ನೇ ಟೆಸ್ಟ್​ ಪಂದ್ಯದಲ್ಲಿ 5ನೇ ಬಾರಿ 5 ವಿಕೆಟ್ ಪಡೆದು ದಾಖಲೆ ಬರೆದ ಅಕ್ಷರ್ ಪಟೇಲ್!!

ಕಾನ್ಪುರ : ಭಾರತ ತಂಡದ ಎಡಗೈ ಸ್ಪಿನ್ನರ್​ ಅಕ್ಷರ್​ ಪಟೇಲ್ ಮೊದಲ ಟೆಸ್ಟ್​ನ ನ್ಯೂಜಿಲ್ಯಾಂಡ್​ ವಿರುದ್ಧ ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಪಡೆಯುವ ಮೂಲಕ ತಾವಾಡಿದ ವೃತ್ತಿ ಜೀವನದ ಮೊದಲ 4 ಪಂದ್ಯಗಳಲ್ಲೇ 5ನೇ ಬಾರಿ 5 ವಿಕೆಟ್ ಪಡೆದ ದಾಖಲೆ ಬರೆದಿದ್ದಾರೆ. ಇದೇ ವರ್ಷ ಇಂಗ್ಲೆಂಡ್​ ವಿರುದ್ಧ ತವರಿನಲ್ಲಿ ನಡೆದಿದ್ದ ಟೆಸ್ಟ್ ಸರಣಿಯಲ್ಲಿ ಪದಾರ್ಪಣೆ ಮಾಡಿದ್ದ ಅವರು, ಮೊದಲ ಪಂದ್ಯದಲ್ಲೇ 7 ವಿಕೆಟ್​ ಪಡೆದು ಮಿಂಚಿದ್ದರು. ನಂತರ ಉಳಿದ ಮೂರು …

Read More »

ದೆವ್ವ ಬಿಡಿಸ್ತಿನಿ ಅಂತಾ ಈ ಬಾಬಾ ಮಾಡಿದ್ದೇನು-5 ವರ್ಷಗಳಿಂದ ಈ ಫಕೀರ ಮಾಡಿದ್ದು ನೋಡಿ ನಿಮಗೆ ಗೊತ್ತಾಗುತ್ತೆ

ಹೈದರಾಬಾದ್‌: ದೆವ್ವ ಬಿಡಿಸುವ ನೆಪದಲ್ಲಿ ನಕಲಿ ಬಾಬ ಹಾಗೂ ಆತನ ಪುತ್ರ ಮಹಿಳೆ, ಆಕೆಯ ತಂಗಿಯ ಮೇಲೆ 5 ವರ್ಷಗಳಿಂದ ಅತ್ಯಾಚಾರ ಮಾಡಿರುವ ಆರೋಪ ಹೈದರಾಬಾದ್‌ನ ಪಾತ ಬಸ್ತಿಯಲ್ಲಿ ಕೇಳಿ ಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ತಮ್ಮ ಸಂಬಂಧಿಕರ ಸೂಚನೆ ಮೇರೆಗೆ ನಕಲಿ ಬಾಬ ಬಳಿಗೆ ಬಂದಿದ್ದಾಳೆ. ಈಕೆಗೆ ದೆವ್ವ ಹಿಡಿದಿದೆ ಎಂದು ನಂಬಿಸಿ ಅದನ್ನು ಹೋಗಲಾಡಿಸಬೇಕೆಂದು ಮನೆಯೊಳಗೆ ಕರೆದೊಯ್ದು ಕಿರಾತಕ, ಇದು ಭೂತದ ವೈದ್ಯಕೀಯ ಅಂತ ಹೇಳಿ ಅತ್ಯಾಚಾರ ಮಾಡಿದ್ದಾನೆ …

Read More »

ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ದಾಖಲೆಯ ಶತಕ ಸಿಡಿಸಿದ ಶ್ರೇಯಸ್ ಅಯ್ಯರ್

ಲಕ್ನೋ: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟೆಸ್ಟ್ ಪಂದ್ಯದಲ್ಲಿ ಭಾರತದ ಬ್ಯಾಟ್ಸ್‌ಮ್ಯಾನ್‌ ಶ್ರೇಯಸ್ ಅಯ್ಯರ್ ತನ್ನ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ್ದಾರೆ. ಶ್ರೇಯಸ್‌ ಅಯ್ಯರ್‌ ಶತಕ ಸಿಡಿಸಿ ಸಂಭ್ರಮಿಸಿದ ಪರಿ ಶ್ರೇಯಸ್ ಅಯ್ಯರ್ ಟೀಂ ಇಂಡಿಯಾ ಪರ ನಿಗದಿತ ಓವರ್‌ಗಳ ತಂಡದಲ್ಲಿ ಈಗಾಗಲೇ ಆಡಿದ್ದಾರೆ. ಇದೀಗ ಟೆಸ್ಟ್ ತಂಡಕ್ಕೂ ಪಾದಾರ್ಪಣೆ ಮಾಡಿ ಮೊದಲ ಪಂದ್ಯದಲ್ಲೇ ಶತಕ ಸಿಡಿಸಿ, ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸಿದ ಭಾರತದ 16ನೇ ಆಟಗಾರ …

Read More »

ಪೆನ್ಸಿಲ್​​ ಕದ್ದ ವಿಚಾರಕ್ಕೆ ಪೊಲೀಸ್​ ಠಾಣೆ ಮೆಟ್ಟಿಲೇರಿದ ಪುಟಾಣಿಗಳು: ಮಕ್ಕಳ ಮಾತು ಕೇಳಿದ್ರೆ ನೀವೂ ನಗ್ತೀರಾ!

ಕರ್ನೂಲ್​(ಆಂಧ್ರಪ್ರದೇಶ): ಪೊಲೀಸರೆಂದರೆ ಭಯ ಸಾಮಾನ್ಯ. ಅವರಿಂದ ಆದಷ್ಟು ದೂರ ಇರುವುದಕ್ಕೆ ಜನರು ಇಷ್ಟಪಡುತ್ತಾರೆ. ಏನಾದ್ರು ಸಣ್ಣಪುಟ್ಟ ಕಳ್ಳತನ ಪ್ರಕರಣಗಳು ನಡೆದರೂ ಕೂಡ ಕೆಲವರು ಪೊಲೀಸ್ ಠಾಣೆ ಮೆಟ್ಟಿಲೇರದೆ ಸುಮ್ಮನಾಗಿ ಬಿಡುತ್ತಾರೆ. ಆದರೆ, ಕೆಲವೊಬ್ಬರು ವಿಚಿತ್ರ ಕಾರಣಕ್ಕಾಗಿ ಪೊಲೀಸ್​ ಠಾಣೆ ಮೆಟ್ಟಿಲೇರಿ ದೂರು ನೀಡಿರುವ ಉದಾಹರಣೆಗಳಿವೆ. ಆಂಧ್ರದ ಕರ್ನೂಲ್‌ನಲ್ಲಿ ಇದೇ ರೀತಿಯ ಕುತೂಹಲಕಾರಿ ಘಟನೆ ನಡೆದಿದೆ. ಇಲ್ಲಿ ಪೆನ್ಸಿಲ್​ ಕದ್ದಿದ್ದಕ್ಕಾಗಿ 3ನೇ ತರಗತಿ ಬಾಲಕನೋರ್ವ ಶಿಕ್ಷಕರಿಗೆ ಹೇಳದೆ, ತನ್ನ ಸ್ನೇಹಿತನ ವಿರುದ್ಧವೇ ಪೊಲೀಸ್ …

Read More »