ಮುಂಬೈ: ಸರ್ಕಾರಿ ಆಸ್ಪತ್ರೆಯಲ್ಲಿ ನಿನ್ನೆ ಬೆಂಕಿ ಅವಘಡ ಸಂಭವಿಸಿ 6 ತಿಂಗಳ ಮಗು ಸೇರಿದಂತೆ 8 ರೋಗಿಗಳು ಮೃತಪಟ್ಟಿರುವ ಘಟನೆ ಮುಂಬೈ ಹೊರವಲಯದ ಅಂಧೇರಿಯಲ್ಲಿ ನಡೆದಿದೆ.ಆಸ್ಪತ್ರೆಯಲ್ಲಿದ್ದ 140ಕ್ಕೂ ಹೆಚ್ಚು ಜನರನ್ನ ರಕ್ಷಿಸಲಾಗಿದೆ. ನಿನ್ನೆ ಸಂಜೆ 4.20ರ ಸಮಯದಲ್ಲಿ ಇಎಸ್ಐಸಿ ಕಾಮ್ಗರ್ ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಕಟ್ಟಡವನ್ನು ಆವರಿಸಿ, ಹೊಗೆಯ ತೀವ್ರತೆ ಹೆಚ್ಚಾಯಿತು ಎಂದು ತಿಳಿದುಬಂದಿದೆ. ಬೆಂಕಿ ಅವಘಡದಿಂದ ನಿನ್ನೆ 6 …
Read More »ರೈತರ ಸಾಲ ಮನ್ನಾ ಮಾಡೋವರೆಗೂ ಮೋದಿಗೆ ನಿದ್ದೆ ಮಾಡಲು ಬಿಡಲ್ಲ’
ನವದೆಹಲಿ: ರೈತರ ಸಾಲ ಮನ್ನ ಮಾಡುವವರೆಗೂ ಪ್ರಧಾನಿ ನರೇಂದ್ರ ಮೋದಿಗೆ ನಿದ್ದೆ ಮಾಡಲು ಬಿಡುವುದಿಲ್ಲ ಅಂತ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಇಂದು ವರದಿಗಾರರೊಂದಿಗೆ ಮಾತನಾಡಿದ ಅವರು, ಮಧ್ಯಪ್ರದೇಶ ಹಾಗೂ ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ 6 ಗಂಟೆಗಳಲ್ಲಿ ಸಾಲ ಮನ್ನಾ ಘೋಷಣೆ ಮಾಡಿದೆ. ರಾಜಸ್ಥಾನದಲ್ಲೂ ಶೀಘ್ರದಲ್ಲೇ ಮಾಡಲಿದ್ದೇವೆ ಎಂದು ಹೇಳಿದ್ರು.ನೋಡಿದ್ರಾ, ಆಗಲೇ ಕೆಲಸ ಶುರುವಾಗಿದೆ ಎಂದು ಸಂಸತ್ ತಲುಪುತ್ತಿದ್ದಂತೆ ರಾಹುಲ್ ಗಾಂಧಿ ಹೇಳಿದ್ರು. ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ …
Read More »ಏಳನೇ ವೇತನ ಆಯೋಗ: ಕೇಂದ್ರ ಸರ್ಕಾರದ ಈ ನೌಕರರಿಗೆ ಹೆಚ್ಚಾಗಲಿದೆ ವೇತನ.
ನವದೆಹಲಿ: ವೇತನ ಮತ್ತು ಪಿಂಚಣಿ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿ ಬಿಎಸ್ಎನ್ಎಲ್ ನೌಕರರು ಇತ್ತೀಚೆಗೆ ದೇಶಾದ್ಯಂತ ನಡೆಸಿದ ಪ್ರತಿಭಟನೆಗೆ ಕೊನೆಗೂ ಫಲ ಸಿಕ್ಕಂತಾಗಿದೆ. ಕೇಂದ್ರ ಸರ್ಕಾರವು ತನ್ನ ಎಲ್ಲಾ ಬಿಎಸ್ಎನ್ಎಲ್ ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಹಲವು ನಿರ್ಧಾರಗಳನ್ನು ಕೈಗೊಂಡಿದ್ದು, ಡಿಸೆಂಬರ್ 13ರಂದು ಈ ಸಂಬಂಧ ಅಧಿಸೂಚನೆ ಹೊರಡಿಸಿದೆ.ಅಧಿಸೂಚನೆಯ ಪ್ರಮುಖ ಅಂಶಗಳು1. ಮೂಲ ವೇತನದ ಆಧಾರದ ಮೇಲೆ ಪಿಂಚಣಿ ಪಾಲು ಪಾವತಿಮೂಲ ವೇತನದ ಆಧಾರದ …
Read More »HONDA ಕಾರ್ ಶೋ ರೂಂನಲ್ಲಿ ಬೆಂಕಿ ಅವಘಡ, 15ಕ್ಕೂ ಹೆಚ್ಚು ಕಾರುಗಳು ಬೆಂಕಿಗೆ ಆಹುತಿ
ನವದೆಹಲಿ: ಪೂರ್ವ ದೆಹಲಿಯ ಪಟ್ಪಂಗಂಜ್ ಪ್ರದೇಶದಲ್ಲಿ ಹೋಂಡಾ ಕಾರ್ ಶೋ ರೂಂನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 15 ಕ್ಕಿಂತ ಹೆಚ್ಚು ದುಬಾರಿ ಕಾರುಗಳು ಬೆಂಕಿಗಾಹುತಿ ಆಗಿರುವ ಘಟನೆ ನಡೆದಿದೆ.ಈ ದುರಂತದಲ್ಲಿ ಲಕ್ಷಾಂತರ ರೂ. ಮೌಲ್ಯದ ನಷ್ಟ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.ಮಂಗಳವಾರ ಬೆಳಿಗ್ಗೆ 4 ಗಂಟೆಗೆ ದೆಹಲಿಯ ಪಟ್ಪಂಗಂಜ್ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ. ಪ್ರಾಥಮಿಕ ವರದಿ ಪ್ರಕಾರ, ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭಸಿದೆ ಎಂದು …
Read More »ರಫೇಲ್ ಡೀಲ್ ವಿವಾದ: ನಾಳೆ ಸುಪ್ರೀಂ ತೀರ್ಪು ಪ್ರಕಟ..
ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಬಗ್ಗೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಶುಕ್ರವಾರ(ಡಿ.14) ಮಹತ್ವದ ತೀರ್ಪು ಪ್ರಕಟಿಸಲಿದೆ.ನವೆಂಬರ್ 14ರಂದು ಈ ಅರ್ಜಿಗಳ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠ ಡಿಸೆಂಬರ್ 14ಕ್ಕೆ ತೀರ್ಪನ್ನು ಕಾಯ್ದಿರಿಸಿತ್ತು.ವಕೀಲರಾದ ಪ್ರಶಾಂತ್ ಭೂಷಣ್, ಎಂಎಲ್ ಶರ್ಮಾ, ಮಾಜಿ ಸಚಿವರಾದ ಯಶವಂತ ಸಿನ್ಹಾ ಮತ್ತು ಅರುಣ್ ಶೌರಿ ಅವರು ರಫೇಲ್ ವಿಮಾನ ಖರೀದಿ ಪ್ರಕ್ರಿಯೆ ಕುರಿತು …
Read More »ಗೌರಿ ಲಂಕೇಶ್, ಕಲಬುರ್ಗಿ ಹತ್ಯೆ ನಡುವೆ ನಂಟಿದೆ- ರಾಜ್ಯ ಪೋಲಿಸರಿಂದ ಸುಪ್ರೀಂಗೆ ಮಾಹಿತಿ
ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಮತ್ತು ವಿದ್ವಾಂಸ ಎಂ ಎಂ ಕಲ್ಬುರ್ಗಿ ಹತ್ಯೆ ಪ್ರಕರಣಗಳ ನಡುವೆ ನಂಟು ಇದೆ ಎಂದು ಕರ್ನಾಟಕ ಪೊಲೀಸರು ಸುಪ್ರೀಂ ಕೋರ್ಟ್ಗೆ ತಿಳಿಸಿದ್ದಾರೆ.ಇದೇ ವೇಳೆ ಕಲಬುರ್ಗಿ ಹತ್ಯೆ ವಿಚಾರವಾಗಿ ಮೂರು ತಿಂಗಳಲ್ಲಿ ಆರೋಪ ಪಟ್ಟಿಯನ್ನು ಸಲ್ಲಿಸಲಾಗುವುದು ಎಂದು ರಾಜ್ಯ ಪೊಲೀಸರು ಸುಪ್ರಿಂಕೋರ್ಟ್ ಗೆ ತಿಳಿಸಿದ್ದಾರೆ.2015 ರಲ್ಲಿ ಧಾರವಾಡದಲ್ಲಿ ಹತ್ಯೆಯಾಗಿದ್ದ ಕಲಬುರ್ಗಿ ಪ್ರಕರಣವನ್ನು ನ್ಯಾಯಮೂರ್ತಿಗಳಾದ ಯು.ಯು.ಲಲಿತ್ ಮತ್ತು ನವೀನ್ ಸಿನ್ಹಾ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುತ್ತಿದೆ.ನವೆಂಬರ್ 26 …
Read More »ಪಂಚ ತೀರ್ಪು: ಸೋನಿಯಾ ಭೇಟಿಗೆ ತೆರಳಿದ ರಾಹುಲ್ ಗಾಂಧಿ!
ನವದೆಹಲಿ: ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನ ವಿಧಾನಸಭಾ ಚುನಾವಣೆಯ ಈವರೆಗಿನ ಟ್ರೆಂಡಿಂಗ್ ನಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತವಾಗಿದೆ. ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲೂ ಕಾಂಗ್ರೆಸ್ ಸರಳ ಬಹುಮತದತ್ತ ಸಾಗುತ್ತಿದೆ. ಏತನ್ಮಧ್ಯೆ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ನಿವಾಸಕ್ಕೆ ತೆರಳಿದ್ದಾರೆ. ಮಧ್ಯಾಹ್ನ 02:50ಕ್ಕೆ ಇಬ್ಬರೂ ಜಂಟಿ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಈವರೆಗಿನ ಟ್ರೆಂಡಿಂಗ್ ನೋಡುವುದಾದರೆ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ 109, ಬಿಜೆಪಿ 110, ಬಿಎಸ್ಪಿ …
Read More »ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ 2018: ಬಿಜೆಪಿ-ಕಾಂಗ್ರೆಸ್ ನಡುವೆ ತೀವ್ರ ಹಣಾಹಣಿ, ಹಾವು-ಏಣಿ ಆಟದಲ್ಲಿ ಗೆಲ್ಲೋದ್ಯಾರು?
ನವದೆಹಲಿ: ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಮತಎಣಿಕೆ ಕ್ಷಣ ಕ್ಷಣಕ್ಕೂ ಭಾರೀ ಕುತೂಹಲ ಮೂಡಿಸಿದ್ದು, ಕಾಂಗ್ರೆಸ್-ಬಿಜೆಪಿ ನಡುವಿನ ಹಾವು ಏಣಿ ಆಟ ಮುಂದುವರೆದಿದೆ. ಒಮ್ಮೆ ಬಿಜೆಪಿ 110 ಸ್ಥಾನಗಳನ್ನು ಪಡೆದು ಮುನ್ನಡೆ ಸಾಧಿಸಿದರೆ ಮತ್ತೊಮ್ಮೆ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದೆ.ಇತರ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಹೋಲಿಸಿದರೆ, ಆಡಳಿತಾರೂಢ ಬಿಜೆಪಿ-ಕಾಂಗ್ರೆಸ್ ಮಧ್ಯೆ ಮಧ್ಯಪ್ರದೇಶದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದೆ. ಕಳೆದ 13 ವರ್ಷಗಳಿಂದ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಮತ್ತೆ ಮುಖ್ಯಮಂತ್ರಿ ಆಗುವ ವಿಶ್ವಾಸದಲ್ಲಿದ್ದರೆ, …
Read More »ಇಂದು ಬಿಜೆಪಿಯೇತರ ಪಕ್ಷಗಳ ಮಹತ್ವದ ಸಭೆ: ಮಹಾಘಟಬಂಧನಕ್ಕೆ ಮುಹೂರ್ತ
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾರ್ಯತಂತ್ರ ರೂಪಿಸಲು ಸಂಭಾವ್ಯ ಮಹಾಘಟಬಂಧನಕ್ಕೆ ಮುಹೂರ್ತ ಸಿದ್ಧವಾಗಿದೆ. ಮಹಾಘಟಬಂಧನದ ಮೊದಲ ಸಭೆ ಇಂದು ನಡೆಯಲಿದ್ದು, ತೆಲುಗು ದೇಶಂ ಪಕ್ಷ (ಟಿಡಿಪಿ) ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಸಭೆಯ ನೇತೃತ್ವ ವಹಿಸಿದ್ದಾರೆ.ಮಧ್ಯಪ್ರದೇಶ, ಛತ್ತೀಸ್ಗಢ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭಾ ಚುನಾವಣೆಗಳ ಫಲಿತಾಂಶಗಳನ್ನು ಘೋಷಿಸುವ ಮತ್ತು ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭದ ಒಂದು ದಿನ ಮುಂಚಿತವಾಗಿ ನಡೆಯುತ್ತಿರುವ ಈ ಸಭೆ …
Read More »ಬ್ರಿಟನ್ ನ್ಯಾಯಾಲಯದಲ್ಲಿಂದು ಮಲ್ಯ ರವಾನೆ ಪ್ರಕರಣ, ಭಾರತಕ್ಕೆ ಜಯ ಸಿಗುವ ಸಾಧ್ಯತೆ
ಲಂಡನ್: ವಿಜಯ್ ಮಲ್ಯ ಬ್ಯಾಂಕುಗಳಿಗೆ ಸುಮಾರು 9 ಸಾವಿರ ಕೋಟಿ ರೂಪಾಯಿ ವಂಚಿಸಿ 2016 ಮಾರ್ಚ್ ತಿಂಗಳಿಂದ ಲಂಡನ್ ನಲ್ಲಿದ್ದಾರೆ. ಆತನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ತನಿಖಾ ಸಂಸ್ಥೆಗಳು ಲಂಡನ್ ಸರ್ಕಾರದಲ್ಲಿ ಮನವಿ ಮಾಡಿಕೊಂಡಿವೆ. ಈ ಸಂಬಂಧ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಲಿದೆ.ಸಿಬಿಐ ಮತ್ತು ಜಂಟಿ ನಿರ್ದೇಶಕ ಎ. ಸಾಯಿ ಮನೋಹರ್ ನೇತೃತ್ವದಲ್ಲಿ ಸಿಬಿಐ ಮತ್ತು ಇಡಿ ಜಂಟಿ ತಂಡ ಯುಕೆಗೆ ತೆರಳಿದೆ. ಮಲ್ಯ ರವಾನೆಗೆ ಸಂಬಂಧಿಸಿದಂತೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





