Breaking News

ದೇಶ-ವಿದೇಶ

ಕ್ವೀನ್ ಎಲಿಜಬೆತ್ ರಾಣಿ ನಿಧನಕ್ಕೆ ಮೋದಿ ‌ಸಂತಾಪ

ಕ್ವೀನ್ ಎಲಿಜಬೆತ್.. ಬ್ರಿಟಿಷರ ನಾಡನ್ನು ಸುದೀರ್ಘ ಅವಧಿಗೆ ಆಳಿದ ರಾಣಿ. 96 ವರ್ಷ ವಯಸ್ಸಿನ 2ನೇ ಎಲಿಜಬೆತ್, ಬ್ರಿಟನ್​​ನ ಬಲ್​ಮೋರಾಲ್​ನಲ್ಲಿ ಕಳೆದ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲ್ತಿದ್ದ ರಾಣಿ 2ನೇ ಎಲಿಜಬೆತ್ ನಿಧನಕ್ಕೆ ಜಗತ್ತಿನ ಎಲ್ಲಾ ದೇಶಗಳು ಸಂತಾಪ ಸೂಚಿಸಿವೆ.ಅನಾರೋಗ್ಯದಿಂದ ಬ್ರಿಟನ್ ರಾಣಿ ಎಲಿಜಬೆತ್-2 ಕೊನೆಯುಸಿರು.. 1926ರಲ್ಲಿ ಲಂಡನ್​​ನ ಮೇಫೇರ್​​ನಲ್ಲಿ ಜನಿಸಿದ್ದ ರಾಣಿ ಎಲಿಜಬೆತ್ ಪೂರ್ಣ ಹೆಸರು ಎಲಿಜಬೆತ್ ಅಲೆಕ್ಸಾಂಡ್ರಾ ಮೇರಿ. 1952ರಿಂದ ಬ್ರಿಟನ್ ರಾಣಿಯಾಗಿ …

Read More »

ಬ್ರಿಟನ್ ನೂತನ ಪ್ರಧಾ‌ನಿಯಾಗಿ ಲಿಜ್ ಟ್ರಸ್ ಆಯ್ಕೆ

ಬ್ರಿಟನ್:  ಪ್ರಧಾನಿ ಚುನಾವಣೆಗೆ ನಡೆದಂತ ಫಲಿತಾಂಶ ಹೊರ ಬಿದ್ದಿದೆ. ಲಿಜ್ ಟ್ರಸ್ ಅವರು ರಿಷಿ ಸುನಕ್  ಅವರನ್ನು ಸೋಲಿಸಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷದ ಹೊಸ ನಾಯಕ ಮತ್ತು ಬ್ರಿಟನ್ ನ ಮುಂದಿನ ಪ್ರಧಾನಿಯಾಗಿದ್ದಾರೆ. ಕನ್ಸರ್ವೇಟಿವ್ ಪಕ್ಷದ ಸದಸ್ಯರು ಸೋಮವಾರ, ಸೆಪ್ಟೆಂಬರ್ 5 ರಂದು, ಲಿಜ್ ಟ್ರಸ್ ಅವರನ್ನು ತಮ್ಮ ಮುಂದಿನ ನಾಯಕನನ್ನಾಗಿ ಆಯ್ಕೆ ಮಾಡಿದರು, ಇದು ಅವರನ್ನು ಯುನೈಟೆಡ್ ಕಿಂಗ್ ಡಮ್ ನ …

Read More »

ಇಂದು ಮತ ಏಣಿಕೆ ಪ್ರಾರಂಭ : ಬ್ರಿಟಿನ್ ಪ್ರಧಾನಿ ಪಟ್ಟ ಯಾರಿಗೆ

ಬ್ರಿಟನ್ : ಭಾರತೀಯ ಮೂಲದ ರಿಷಿ ಸುನಕ್ ಮತ್ತು ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ ಇವರಲ್ಲಿ ಯಾರು ಬ್ರಿಟನ್ ಪ್ರಧಾನಿ ಪಟ್ಟಕ್ಕೇರಲಿದ್ದಾರೆ ಎಂದು ಇಂದು ನಿರ್ಧಾರವಾಗಲಿದೆ. ಪ್ರಧಾನಿ ಪಟ್ಟಕ್ಕೆ ಅಂತಿಮವಾಗಿ ಕಣದಲ್ಲಿರುವ ಇವರು ಭಾನುವಾರ ತಮ್ಮದೇ ಆದ ಪ್ರತಿಜ್ಞೆಯನ್ನು ನೀಡಿದ್ದಾರೆ.ರಿಷಿ ಸುನಕ್ ಕಡಿಮೆ ಆದಾಯದ ಜನರನ್ನು ಗುರಿಯಾಗಿಸಿಕೊಂಡು ಪ್ರಚಾರ ಮಾಡಿದರೆ, ಇತ್ತ ಲಿಜ್ ಟ್ರಸ್ ನಾನು ಪ್ರಾಧಾನಿಯಾಗಿ ಆಯ್ಕೆಯಾದರೆ, ‘ತಕ್ಷಣವೇ ಕ್ರಮ ಕೈಗೊಂಡು ಕಾರ್ಯನಿರ್ವಹಿಸುತ್ತೇನೆ’ ಎಂದಿದ್ದಾರೆ. ಆದ್ರೆ, ಯಾವ ವಿಷಯದ …

Read More »

ದೇವಸ್ಥಾನಕ್ಕೆ ಹೊರಟ ಭಕ್ತರು ಸ್ಮಶಾನ ಸೇರಿದರು

ಅರಾವಳಿ(ಗುಜರಾತ್​): ಬೆಳ್ಳಂಬೆಳಗ್ಗೆ ವಿಧಿಯಾಟಕ್ಕೆ ಆರು ಮಂದಿ ಭಕ್ತರು ದುರ್ಮರಣ ಹೊಂದಿದ ಘಟನೆ ಗುಜರಾತ್​​ನಲ್ಲಿ ನಡೆದಿದೆ. ಅರಾವಳಿ ಜಿಲ್ಲೆಯ ಮಾಲ್ಪುರ್​ ಎಂಬಲ್ಲಿನ ಕೃಷ್ಣನಗರದ ಅಂಬಾಜಿ ದೇವಸ್ಥಾನಕ್ಕೆ ನಡೆದುಕೊಂಡು ಹೋಗ್ತಿದ್ದ ಭಕ್ತರ ಮೇಲೆ ವೇಗವಾಗಿ ಬಂದ ಇನ್ನೋವಾ ಕಾರು ಹರಿದಿದೆ. ಪರಿಣಾಮ, ಆರು ಮಂದಿ ಸಾವಿಗೀಡಗಿದ್ದಾರೆ. ಅಲ್ಲದೇ ಇತರೆ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತರೆಲ್ಲರೂ …

Read More »

ಲಂಕಾ ಅಧ್ಯಕ್ಷ ರಿಗೆ ಪತ್ರ ಬರೆದ ನಿತ್ಯಾನಂದ ಸ್ವಾಮಿ

ಕೊಲಂಬೊ : ನನ್ನ ಆರೋಗ್ಯದಲ್ಲಿ ಏರುಪೇರಾಗಿದೆ ನನಗೆ ತುರ್ತು ವೈದ್ಯಕೀಯ ನೆರವಿನ ಅವಶ್ಯಕತೆ ಇದೆ ಹೀಗೆಂದು ಸ್ವಯಂ ಘೋಷಿತ ದೇವಮಾನವ ಹಾಗೂ ಅತ್ಯಾಚಾರ ಆರೋಪ ಹೊತ್ತಿರುವ ನಿತ್ಯಾನಂದ ಶ್ರೀಲಂಕಾ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ದೇಶವನ್ನೇ ತೊರೆದು ಈಕ್ವೆಡಾರ್ ದ್ವೀಪದಲ್ಲಿ ನೆಲೆಸಿರುವ ಬಿಡದಿ ಧ್ಯಾನಪೀಠದ ಸ್ವಾಮಿ ನಿತ್ಯಾನಂದನ ಆರೋಗ್ಯ ಕ್ಷೀಣಿಸುತ್ತಿದೆಯಂತೆ ಅಲ್ಲದೆ ಆ ದ್ವೀಪ ರಾಷ್ಟ್ರದಲ್ಲಿ ವೈದ್ಯಕೀಯ ಸೌಲಭ್ಯಗಳ ಕೊರತೆಯು ಇದೆಯಂತೆ ಹಾಗಾಗಿ ನನ್ನ ಜೀವಕ್ಕೆ ಅಪಾಯವಿದೆ, ತುರ್ತು ಚಿಕಿತ್ಸೆಗಾಗಿ ಕೂಡಲೇ …

Read More »

ಪಾಕಿಸ್ತಾನದಲ್ಲಿ ಭೀಕರ ಪ್ರವಾಹ : 1000ಕ್ಕೂ ಅಧಿಕ ಜನರು ಸಾವು

ಪಾಕಿಸ್ತಾನದಲ್ಲಿ ಭೀಕರ ಪ್ರವಾಹ ಪರಿಸ್ಥಿತಿಯಿಂದ 1000ಕ್ಕೂ ಅಧಿಕ ಜನರು ಮೃತಪಟ್ಟಿದ್ದು, ರಕ್ಷಣಾ ಕಾರ್ಯ ನಡೆಸಲು ಹೆಲಿಕಾಫ್ಟರ್‌ ಇಳಿಯಲೂ ಜಾಗವಿಲ್ಲದಷ್ಟು ಪ್ರವಾಹದ ನೀರು ದೇಶವನ್ನು ಆವರಿಸಿಕೊಂಡಿದೆ. ಮೂರು ದಶಕಗಳಲ್ಲೇ ಕಂಡು ಕೇಳರಿಯದ ಭಾರೀ ಮಳೆಯಿಂದ ಪಾಕಿಸ್ತಾನದಲ್ಲಿ ಪ್ರವಾಹ ಉಂಟಾಗಿದ್ದು, ಸುಮಾರು ೧ ಸಾವಿರಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.30 ಲಕ್ಷಕ್ಕೂ ಅಧಿಕ ಜನರು ಸ್ಥಳಾಂತರಗೊಂಡಿದ್ದಾರೆ. ಪಾಕಿಸ್ತಾನದ ಬಹುತೇಕ ಜಿಲ್ಲೆಗಳು ದ್ವೀಪದಂತಾಗಿವೆ. ರಕ್ಷಣೆಗೆ ಹೊರಟ ಹೆಲಿಕಾಫ್ಟರ್‌ ಗಳು ಇಳಿಯಲು ಒಣ ಪ್ರದೇಶ ಇಲ್ಲದೇ ಪರದಾಡುತ್ತಿವೆ …

Read More »

ಸಾಮಾಜಿಕ ಮಾಧ್ಯಮ ಪೋಸ್ಟ್‌ : 45 ವರ್ಷ ಜೈಲು ಪಾಲು

ಸೌದಿ ಮಹಿಳೆಯೊಬ್ಬರು ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗಾಗಿ 45 ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ ಎಂದು ನ್ಯಾಯಾಲಯದ ದಾಖಲೆಗಳನ್ನು ಉಲ್ಲೇಖಿಸಿ ಮಾನವ ಹಕ್ಕುಗಳ ಗುಂಪೊಂದು ಹೇಳಿಕೆ ನೀಡಿದೆ. ಅಲ್ಲದೆ, ಒಂದೇ ವಾರದಲ್ಲಿ ಈ ರೀತಿಯ ಎರಡು ಪ್ರಕರಣಗಳು ನಡೆದಿರುವ ಬಗ್ಗೆಯೂ ವರದಿಯಾಗಿದೆ. ನೌರಾ ಅಲ್-ಕಹ್ತಾನಿ ಅವರು ಸಾಮಾಜಿಕ ಮಾಧ್ಯಮದ ಮೂಲಕ “(ದೇಶದ) ಸಾಮಾಜಿಕ ರಚನೆಯನ್ನು ಹರಿಯಲು ಅಂತರ್ಜಾಲವನ್ನು ಬಳಸಿದ್ದಾರೆ” ಮತ್ತು “ಸಾರ್ವಜನಿಕ ಸುವ್ಯವಸ್ಥೆಯನ್ನು ಉಲ್ಲಂಘಿಸಿದ್ದಾರೆ” ಎಂದು ತಪ್ಪಿತಸ್ಥರೆಂದು ಸಾಬೀತಾದ …

Read More »

ಪಾಕಿಸ್ತಾನದಲ್ಲಿ ಭೀಕರ ಮಳೆಗೆ 937 ಜನರು ಸಾವು

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಸುರಿದ ಭೀಕರ ಮಳೆ ಹಾಗೂ ಪ್ರವಾಹದಿಂದ ಇದುವರೆಗೆ 343 ಮಕ್ಕಳು ಸೇರಿದಂತೆ 937 ಜನರು ಸಾವನ್ನಪ್ಪಿದ್ದಾರೆ. ಸದ್ಯ ಪಾಕಿಸ್ತಾನ ಸರ್ಕಾರ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಜೂನ್ 14 ರಿಂದ ಸುರಿಯುತ್ತಿರುವ ಮಳೆಯಿಂದ ಪ್ರವಾಹದ ಪರಿಸ್ಥಿತಿ ಉಂಟಾಗಿದ್ದು, ಇಲ್ಲಿಯವರೆಗೆ ಸಿಂಧ್ ಪ್ರಾಂತ್ಯದಲ್ಲಿ 306 ಜನರು ಪ್ರಾಣ ಕಳೆದುಕೊಂಡಿದ್ದಾರೆ.ಬಲೂಚಿಸ್ತಾನದಲ್ಲಿ 234, ಖೈಬರ್ ಪಂಖ್ತುಂಖ್ವಾದಲ್ಲಿ 185 ಹಾಗೂ ಪಂಜಾಬ್ ಪ್ರಾಂತ್ಯದಲ್ಲಿ 165 ಜನರು ಸಾವನ್ನಪ್ಪಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ 37 …

Read More »

ಬಿಜೆಪಿ ಅಧಿಕಾರಕ್ಕೆ ಬರಲು ವಾಜಪೇಯಿ, ಅಡ್ವಾಣಿ ಕಾರಣ : ನಿತಿನ್ ಗಡ್ಕರಿ

ನಾಗ್ಪುರ: ಬಿಜೆಪಿ ಅಧಿಕಾರಕ್ಕೆ ಬರಲು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಬಿಜೆಪಿ ನಾಯಕರಾದ ಎಲ್‌.ಕೆ. ಅಡ್ವಾಣಿ ಹಾಗೂ ದೀನದಯಾಳ್ ಉಪಾಧ್ಯಾಯ ಅವರ ಶ್ರಮವೇ ಕಾರಣ ಎಂದು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. 11,000 ಶಿಕ್ಷಕರು ಮತ್ತು ಬುಡಕಟ್ಟು ಪ್ರದೇಶಗಳ ಶಾಲೆಗಳನ್ನೊಳಗೊಂಡ ‘ಲಕ್ಷ್ಮಣ ರಾವ್ ಮಕರ್ ಸ್ಮೃತಿ ಸಂಸ್ಥೆ’ಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 1980ರಲ್ಲಿ ಮುಂಬೈಯಲ್ಲಿ ನಡೆದ ಸಮಾವೇಶವೊಂದರಲ್ಲಿ ವಾಜಪೇಯಿ ಮಾಡಿದ್ದ ಭಾಷಣವನ್ನು ನೆನಪಿಸಿಕೊಂಡಿದ್ದಾರೆ. …

Read More »

ವೈಷ್ಣೋದೇವಿ ದರ್ಶನಕ್ಕೆ ಇಂದಿನಿಂದ ಅವಕಾಶ

ಜಮ್ಮುಕಾಶ್ಮೀರ: ರಿಯಾಸಿ ಜಿಲ್ಲೆಯ ಕತ್ರಾ ಪಟ್ಟಣದಲ್ಲಿರುವ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಸತತ ಎರಡನೇ ದಿನವೂ ಯಾತ್ರಾರ್ಥಿಗಳ ಸಂಚಾರವನ್ನು ಭಾರಿ ಮಳೆಯಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಇಂದು ಬೆಳಿಗ್ಗೆ ಯಾತ್ರೆ ಪುನರಾರಂಭಗೊಳ್ಳಲಿದೆ ಎಂದು ವರದಿಯಾಗಿದೆ. ‘ಪ್ರತಿಕೂಲ ಹವಾಮಾನದಿಂದಾಗಿ, ಯಾತ್ರೆಯನ್ನು ಭಾನುವಾರ ಬೆಳಿಗ್ಗೆಯವರೆಗೆ ಸ್ಥಗಿತಗೊಳಿಸಲಾಗಿದೆ’ ಎಂದು ಮಾತಾ ವೈಷ್ಣೋದೇವಿ ದೇವಾಲಯ ಮಂಡಳಿ ತಿಳಿಸಿದೆ.ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಅನ್ನು ಈಗಾಗಲೇ ನಿಯೋಜಿಸಲಾಗಿದೆ. ಮಾತಾ ವೈಷ್ಣೋದೇವಿ ದೇವಾಲಯ ಮಂಡಳಿ ಪರಿಸ್ಥಿತಿಯನ್ನು …

Read More »