Breaking News

ಧಾರವಾಡ

ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರಿಂದ ದಿವ್ಯ ಪ್ರಭು ಜಿ.ಆರ್.ಜೆ ಅವರಿಗೆ ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ಪ್ರದಾನ

ಧಾರವಾಡ : ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ರಾಜ್ಯ ಸರಕಾರದ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮ ರೀತಿಯಲ್ಲಿ ತಲುಪಿಸಿರುವ ಧಾರವಾಡ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಜಿ.ಆರ್.ಜೆ ಅವರಿಗೆ ವರ್ಷದ ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ನೀಡಿ ಗೌರವಿಸಿದರು. ಚಿತ್ರದುರ್ಗ ಮತ್ತು ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿರುವ ಅವರು, ತಮ್ಮ ಅಧಿಕಾರಾವಧಿಯಲ್ಲಿ ಉತ್ತಮವಾದ ಜನಸ್ನೇಹಿ ಹಾಗೂ ನಾಗರಿಕ ಸ್ನೇಹಿ ಸೇವೆಗಳನ್ನು ಸಲ್ಲಿಸಿದ್ದಾರೆ. ರಾಜ್ಯ ಸರಕಾರದ ಯೋಜನೆಗಳನ್ನು ಎಲ್ಲಾ …

Read More »

ಪ್ರವಾಸೋಧ್ಯಮ ಅಭಿವೃದ್ಧಿಗೆ ಪೂರಕವಾಗಿದೆ: ರಾಘವೇಂದ್ರ ಆನೇಗುಂದಿ

ಧಾರವಾಡ : ವಿಶ್ವ ಪರ್ಯಟನೆ ಮಾಡುವುದರಿಂದ ಜೀವನಾನುಭವ ಹೆಚ್ಚುತ್ತದೆ ಮತ್ತು ಪ್ರವಾಸೋಧ್ಯಮವು ರಾಷ್ಟ್ರದ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಪ್ರೆಸ್ಟೀಜ್ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ ನಿರ್ದೇಶಕ ರಾಘವೇಂದ್ರ ಆನೆಗುಂದಿ ಅವರು ಹೇಳಿದರು. ಅವರು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಧಾರವಾಡ ಪ್ರೆಸ್ಟೀಜ್ ಇನ್ಸ್ಟೀಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ ಸಹಯೋಗದಲ್ಲಿ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. ರಾಜ್ಯ ಮತ್ತು …

Read More »

ಊಟದ ಜೊತೆಗೆ ವಾರದಲ್ಲಿ 6 ದಿನ ಮೊಟ್ಟೆ ವಿತರಣೆ: ಎನ್‌.ಹೆಚ್‌. ಕೋನರಡ್ಡಿ

ನವಲಗುಂದ: ವಿದ್ಯಾರ್ಥಿಗಳಿಗೆ ಬಿಸಿ ಊಟದ ಜೊತೆಗೆ ವಾರದಲ್ಲಿ 6 ದಿನ ಮೊಟ್ಟೆ ವಿತರಿಸುವ ರಾಜ್ಯ ಸರ್ಕಾರದ ಯೋಜನೆಯನ್ನು ಜಾರಿಗೊಳಿಸಲಾಗಿದೆ ಶಾಸಕ ಎನ್‌.ಹೆಚ್‌. ಕೋನರಡ್ಡಿ ಹೇಳಿದರು. ಪಟ್ಟಣದ ಬಸವೇಶ್ವರ ನಗರದ ಪ್ರಾಥಮಿಕ ಶಾಲೆಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಣ ಸಚಿವ ಮುಧು ಬಂಗಾರಪ್ಪ ಅವರ ನಿರ್ಧಾರದ ಮೇಲೆ ಮೊದಲು ವಿದ್ಯಾರ್ಥಿಗಳಿಗೆ ಬಿಸಿ ಊಟದ ಜೊತೆ ವಾರದಲ್ಲಿ …

Read More »

ಡಿಸಿ ಕಚೇರಿ ಮುಂದೆ ಗ್ರಾಮ ಆಡಳಿತಾಧಿಕಾರಿಗಳ ಧರಣಿ

ಧಾರವಾಡ : ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಿನ್ನೆಯಷ್ಟೇ ಧಾರವಾಡ ತಹಶೀಲ್ದಾರ ಕಚೇರಿ ಎದುರು ಧರಣಿ ನಡೆಸಿದ್ದರು. ಇಂದು ಎಲ್ಲಾ ನೌಕರರು ತಮ್ಮ ಧರಣಿಯನ್ನು ಧಾರವಾಡ ಡಿಸಿ ಕಚೇರಿ ಎದುರಿಗೆ ಶಿಫ್ಟ್ ಮಾಡಿದ್ದಾರೆ. ಗ್ರಾಮ ಆಡಳಿತಾಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಗುಣಮಟ್ಟದ ಟ್ಯಾಬ್ ನೀಡಬೇಕು, ಕಚೇರಿಯಲ್ಲಿ ಪ್ರಿಂಟರ್ ಹಾಗೂ ಸ್ಕ್ಯಾನ‌ರ್ ನೀಡಬೇಕು ಹಾಗೂ ಕಚೇರಿ ಸಿಬ್ಬಂದಿಗೆ ಸುಸಜ್ಜಿತ ಟೇಬಲ್, ಖುರ್ಚಿ ಪೂರೈಕೆ ಮಾಡಬೇಕು ಹಾಗೂ ಕರ್ತವ್ಯ ನಿರತ ಸಿಬ್ಬಂದಿ ಸಾವಿಗೀಡಾದಾಗ ಆತನ …

Read More »

ಪೂರ್ವಭಾವಿ ಸಭೆಗೆ ಆಗಮಿಸಿದ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಂದ ಎಚ್ಚರಿಕೆಯ ಸೂಚನೆ

ಕುಂದಗೋಳ: ಅಕ್ಟೋಬರ್ 17 ರಂದು ನಡೆಯಲಿರುವ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆಗೆ ಆಗಮಿಸಿದ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರು ಸಭೆಯನ್ನು ಬಹಿಷ್ಕರಿಸಿ, ಪ್ರತಿಭಟನೆ ಎಚ್ಚರಿಕೆ ನೀಡಿದ ಘಟನೆ ಕುಂದಗೋಳದಲ್ಲಿ ನಡೆದಿದೆ. ಸಮಾಜ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ತಹಶೀಲ್ದಾರ್ ರಾಜು ಮಾವರಕರ ನೇತೃತ್ವದಲ್ಲಿ ಆಯೋಜನೆಗೊಂಡ ಸಭೆಗೆ ಕುಂದಗೋಳ ತಾಲೂಕಿನ ವಿವಿಧ ಇಲಾಖೆಗಳ ಮುಖ್ಯ ಅಧಿಕಾರಿಗಳು ಬಾರದೇ ಸಹ ಸಿಬ್ಬಂದಿ ಸಭೆಗೆ ಕಳುಹಿಸಿದ್ದಕ್ಕೆ ಪರಿಶಿಷ್ಟ ಜಾತಿ ಸಮುದಾಯದ ಮುಖಂಡರು ಗರಂ …

Read More »

ಕವಿವಿ ಪ್ರಭಾರ ಕುಲಪತಿಯಾಗಿ ಡಾ.ಮಂಜುಳಾ ಅವರು ಅಧಿಕಾರ ಸ್ವೀಕಾರ

ಧಾರವಾಡ : ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಕುಲಪತಿಯಾಗಿದ್ದ ಪ್ರೊ.ಕೆ.ಬಿ.ಗುಡಸಿ ಅವರು ಅಧಿಕಾರಾವಧಿ ಪೂರ್ಣಗೊಂಡಿದ್ದು, ಇದೀಗ ಕವಿವಿ ಪ್ರಭಾರ ಕುಲಪತಿಯಾಗಿ ಡಾ.ಮಂಜುಳಾ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.ಡಾ.ಮಂಜುಳಾ ಅವರಿಗೆ ಪ್ರೊ.ಕೆ.ಬಿ.ಗುಡಸಿ ಅವರು ಅಧಿಕಾರ ಹಸ್ತಾಂತರಿಸಿದರು.

Read More »

ಉತ್ತಮವಾದ ಆರೋಗ್ಯ ಪದ್ಧತಿ: ಜೀವನಶೈಲಿ ಪಾಲಿಸಿ; ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ಎಫ್. ದೊಡ್ಡಮನಿ

ಧಾರವಾಡ : ಆರೋಗ್ಯದಲ್ಲಿ ದುಷ್ಪರಿಣಾಮ ಬೀರುವಂತಹ ಆಹಾರ ಪದಾರ್ಥಗಳ ಮೇಲೆ ನಿಯಂತ್ರಣವಿರಬೇಕು. ಪ್ರತಿಯೊಬ್ಬರು ಉತ್ತಮವಾದ ಆರೋಗ್ಯ ಪದ್ಧತಿ ಮತ್ತು ಜೀವನಶೈಲಿಯನ್ನು ಪಾಲಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ಎಫ್. ದೊಡ್ಡಮನಿ ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಕರ್ನಾಟಕ …

Read More »

ಕಾನೂನು ನೆರವು ರಕ್ಷಕರ ಕಛೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನ

ಧಾರವಾಡ : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಡಿಯಲ್ಲಿ ರಚಿಸಲಾಗಿರುವ 2 ಉಪ ಕಾನೂನು ನೆರವು ರಕ್ಷಕರಿಂದ ಕಾನೂನು ನೆರವು ರಕ್ಷಕರ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು, 4 ಸಹಾಯಕ ಕಾನೂನು ನೆರವು ರಕ್ಷಕರ ಹುದ್ದೆಗಳಿಗೆ ವಕೀಲರು ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2 ಸಹಾಯಕ ಮತ್ತು 2 ಆಫೀಸ್ ಜವಾನ್ ಹುದ್ದೆಗಳು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 03, 2024 ಕ್ಕೆ ಸಲ್ಲಿಸಿದ ಅರ್ಜಿಗಳನ್ನು ಧಾರವಾಡ ಎಡಿಆರ್ …

Read More »

ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರ ಕಾಯಕ ಶ್ಲಾಘನೀಯ

ನವಲಗುಂದ: ತಮ್ಮ ಆರೋಗ್ಯಕ್ಕೆ ಗಮನ ನೀಡದೆ ನಗರಕ್ಕೆ ಅಂದಚಂದ, ಆರೋಗ್ಯಕರ ಹಾಗೂ ಸೌಂದರ್ಯಿಕರಣಕ್ಕೆ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರ ಕಾಯಕ ಶ್ಲಾಘನೀಯ ಎಂದು ಪುರಸಭಾ ಅಧ್ಯಕ್ಷ ಶಿವಾನಂದ ತಡಸಿ ಹೇಳಿದರು. ಅವರು ಪಟ್ಟಣದ ಪುರಸಭೆಯಲ್ಲಿ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರತಿಭಾವಂತ ಮಕ್ಕಳಿಗೆ ಸರಕಾರ ಹಾಗೂ ನನ್ನ ವಯಕ್ತಿಕ ಸಹಾಯ ಸಹಕಾರ ಇದ್ದೆ ಇರುತ್ತದೆ ಎಂದರು. ಈ ವೇಳೆ ಉಪಾಧ್ಯಕ್ಷೆ ಫರೀದಾ ಬಬರ್ಚಿ, ಸದಸ್ಯರಾದ ಮಹಾಂತೇಶ ಭೋವಿ, ಮಂಜು …

Read More »

ಲಾರಿಗೆ ಹಿಂಬದಿಯಿಂದ ಟಿಟಿ ಬಸ್ ಡಿಕ್ಕಿ: ಇಬ್ಬರಿಗೆ ಗಂಭೀರವಾಗಿ ಗಾಯ

ಧಾರವಾಡ: ರಸ್ತೆ ಪಕ್ಕ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ತೇಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ದಾವಣಗೆರೆ ಕಡೆಗೆ ಹೊರಟಿದ್ದ ಟಿಟಿ ಬಸ್‌ನಲ್ಲಿ ಒಟ್ಟು 12 ಜನ ಪ್ರಯಾಣಿಸುತ್ತಿದ್ದರು. ಈ ವೇಳೆ ರಸ್ತೆ ಪಕ್ಕ ಕೆಟ್ಟು ನಿಂತಿದ್ದ ಲಾರಿಗೆ ಟಿಟಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಟಿಟಿ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಇದರಿಂದ …

Read More »