Breaking News

ಧಾರವಾಡ

ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರ ಸನ್ಮಾನ ಕಾರ್ಯಕ್ರಮ

ನವಲಗುಂದ: ಮಕ್ಕಳ ಕಲಿಕೆಯನ್ನು ಪ್ರೋತ್ಸಾಹಿಸಿ ವಿದ್ಯಾರ್ಥಿಗಳ ಕನಸನ್ನು ಸಾಕಾರಗೊಳಿಸುವ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದು ಮಾಡಲ್ ಹೈಸ್ಕೂಲ ಮುಖ್ಯೋಪಾಧ್ಯಾಯ ಎಸ್ ವಾಯ್ ಉಳ್ಳಿಕಾಶಿ ಹೇಳಿದರು. ಅವರು ಮಾಡೆಲ್ ಬಾಲಕಿಯರ ಪ್ರೌಢಶಾಲೆಯಲ್ಲಿ ಗಣೇಶ ಪ್ರತಿಷ್ಠಾಪನಾ ಕಾರ್ಯಕ್ರಮ ಅಂಗವಾಗಿ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಬಹುಮಾನ ವಿತರಣೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರ ಸನ್ಮಾನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾದುದು. …

Read More »

ಕೆಡಿಪಿ ಸಭೆ : ಗರಂ ಆದ ಸಂತೋಷ ಲಾಡ್

ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯ್ತಿ ಸಭಾಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಿತು. ಈ ಸಭೆಯಲ್ಲಿ ಸಚಿವ ಸಂತೋಷ ಲಾಡ್ ಅವರು ಕೆಲ ಅಧಿಕಾರಿಗಳ ಮೇಲೆ ಅಕ್ಷರಶಃ ಗರಂ ಆದರು. ತೋಟಗಾರಿಕಾ ಇಲಾಖೆಯಲ್ಲಿ ಸಿಬ್ಬಂದಿ ಬಗ್ಗೆ ದಿನಚರಿ ಬರೆದಿಡುವ ವಿಚಾರಕ್ಕೆ ಸಂಬಂಧಿಸಿದಂತೆ ತೋಟಗಾರಿಕಾ ಇಲಾಖೆ ಅಧಿಕಾರಿಗಳನ್ನು ಸಚಿವರು ಫುಲ್ ತರಾಟೆಗೆ ತೆಗೆದುಕೊಂಡರು. ಇಲಾಖೆಯಲ್ಲಿ ಸರಿಯಾಗಿ ದಿನಚರಿ ಬರೆದಿಡದ ಹಿನ್ನೆಲೆ ಅಧಿಕಾರಿಗಳು ಸಚಿವರಿಗೆ ಸಬೂಬು ಹೇಳಲು …

Read More »

ಇಡಿ ಹಾಕಿದ ಚಾರ್ಜ್‌ಶೀಟ್‌ನಲ್ಲಿ ಎಷ್ಟು ಜನರಿಗೆ ಶಿಕ್ಷೆಯಾಗಿದೆ ಹೇಳಿ : ಸಂತೋಷ ಲಾಡ್

ಧಾರವಾಡ : ಇಡಿಯನ್ನು ಕೇವಲ ರಾಜಕಾರಣಕ್ಕಾಗಿ ಮಾತ್ರ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಇಡಿ ಹಾಕಿದ ಚಾರ್ಜ್‌ಶೀಟ್‌ನಲ್ಲಿ ಎಷ್ಟು ಜನರಿಗೆ ಶಿಕ್ಷೆಯಾಗಿದೆ ಹೇಳಿ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರಶ್ನಿಸಿದರು. ಧಾರವಾಡದಲ್ಲಿ ಮಾತನಾಡಿದ ಅವರು, ನಮ್ಮದೂ ಸಹ ಎಸ್‌ಐಟಿ ತನಿಖೆ ನಡೆಯುತ್ತಿದೆ. ಅದರ ವರದಿ ಕೂಡ ಬಂದಿಲ್ಲ. ಇಡಿಯವರು ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್‌ಗೆ ಹೋಗುವುದೇ ಇಲ್ಲ. ಸಿಬಿಐನವರು ರೇಪ್ ಕೇಸ್ ಇದ್ದಾಗ ಕೋರ್ಟ್‌ಗೆ ಹೋಗುವುದೇ ಇಲ್ಲ. ಕೋರ್ಟಿಗೇನೇ …

Read More »

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಾಜಿ ಅಧ್ಯಕ್ಷ ನಿಧನ

ಧಾರವಾಡ: ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಪ್ರಗತಿಪರ ರೈತ ಹಾಗೂ ಧಾರವಾಡ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಾಜಿ ಅಧ್ಯಕ್ಷ ಚನ್ನಬಸಪ್ಪ ಮಸೂತಿ (67) ಅವರು ಹೃದಯಾಘಾತದಿಂದ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವಿದೆ. ಚನ್ನಬಸಪ್ಪ ಮಸೂತಿ ಅವರು ಸಾವಯವ ಕೃಷಿಯಲ್ಲಿ ಹೆಸರು ಮಾಡಿದವರು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಗಣನೀಯ ಸೇವೆ ಸಲ್ಲಿಸಿದ್ದರು.

Read More »

ಕೆಯುಡಿ ಸಿಂಡಿಕೇಟ್ ಸಭೆಯ ನಾಮನಿರ್ದೇಶನ ಸದಸ್ಯರಾಗಿ ಡಾ.ಬಾಗಡಿ ಆಯ್ಕೆ

ನವಲಗುಂದ: ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ 2000ರ ಪರಿಚ್ಛೇದ 28(1) (ಎಫ್) ರ ಅನ್ವಯ ಮತ್ತು ಮಾನ್ಯ ಕುಲಪತಿಗಳ ಆದೇಶದಂತೆ, ಕರ್ನಾಟಕ ವಿಶ್ವವಿದ್ಯಾಲಯದ ವ್ಯಾಪ್ತಿಯ ಸಂಯೋಜಿತ ಮಹಾವಿದ್ಯಾಲಯಗಳ ಪ್ರಾಚಾರ್ಯರನ್ನು ಸಿಂಡಿಕೇಟ್ ಸಭೆಗೆ ನಾಲ್ವರನ್ನು ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಅಧಿಚೂಚಿಸನೆ ಹೊರಡಿಸಿದೆ. ಅವರಲ್ಲಿ ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಮಹಾದೇವ ಬಾಗಡಿ ಅವರು ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ ಆಗಿದ್ದಾರೆ.

Read More »

ಜಿಲ್ಲಾ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

ಕುಂದಗೋಳ : ತಾಲೂಕಿನ ಗುಡೇನಕಟ್ಟಿ ಗ್ರಾಮದ ಮಾರುದ್ರಪ್ಪ ಬಸಟ್ಟೆಪ್ಪ ಮೂಲಿಮನಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ ಕೆ ಶಿವಕುಮಾರ ಅವರ ಆದೇಶದ ಮೇರೆಗೆ ಧಾರವಾಡ ಜಿಲ್ಲಾ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಅವರನ್ನು ಹುಬ್ಬಳ್ಳಿ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅನಿಲ್‌ ಕುಮಾ‌ರ್ ಪಾಟೀಲ್ ಆದೇಶ ಪಾತ್ರವನ್ನು ಅವರಿಗೆ ನೀಡಿ ಅವರನ್ನು ಗೌರವಿಸಿದರು.

Read More »

ಸೆ. 12 ರಂದು ಡಾ.ಮಲ್ಲಿಕಾರ್ಜುನ ಮಸಸೂರ ಅವರ 32 ನೇ ಪುಣ್ಯಸ್ಮರಣೆ

ಧಾರವಾಡ : ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಡಾ.ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‍ನ ಸಹಯೋಗದಲ್ಲಿ ಪದ್ಮವಿಭೂಷಣ ಡಾ.ಮಲ್ಲಿಕಾರ್ಜುನ ಮಸಸೂರ ಅವರ 32 ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 12, 2024 ರಂದು ಬೆಳಿಗ್ಗೆ 9.30 ಗಂಟೆಗೆ ಡಾ. ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‍ನ ಆವರಣದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಮತ್ತು ಡಾ. ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‍ನ ಸದಸ್ಯ ಹಾಗೂ ಖ್ಯಾತ …

Read More »

ವಕ್ಷ ಬೋರ್ಡ್ ಕಾಯ್ದೆ ತಿದ್ದುಪಡಿ ವಿಚಾರವಾಗಿ ಪರ-ವಿರೋಧ ಶುರುವಾಗಿದೆ: ಮುತಾಲಿಕ್

ಧಾರವಾಡ: ವಕ್ಷ ಬೋರ್ಡ್ ಕಾಯ್ದೆ ತಿದ್ದುಪಡಿ ವಿಚಾರವಾಗಿ ಪರ-ವಿರೋಧ ಎರಡೂ ಶುರುವಾಗಿದೆ. ಇದಕ್ಕೆ ಇಡೀ ದೇಶದಲ್ಲಿ ಮುಸ್ಲಿಂರು ದೊಡ್ಡ ಪ್ರಮಾಣದಲ್ಲಿ ವಿರೋಧ ಮಾಡುತ್ತಿದ್ದಾರೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಧಾರವಾಡದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ಸರ್ಕಾರದಿಂದ ವಕ್ಸ್ ಬೋರ್ಡ್ ಕಾಯ್ದೆ ತಿದ್ದುಪಡಿ ಮಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಸರ್ಕಾರ ತಿದ್ದುಪಡಿ ಸಂಬಂಧ ಸಂಸತ್ ಸಮಿತಿ ರಚಿಸಿದೆ, ಈ ಸಮಿತಿಗೆ ಮನೆ ಮನೆಯಿಂದ ಪತ್ರ ಕಳುಹಿಸಿ ಎಂದು ಮುಲ್ಲಾ, ಮೌಲ್ವಿಗಳು …

Read More »

ಜನರ ಸಮಸ್ಯೆಗಳನ್ನು ಆಲಿಸಿದ ಸಂತೋಷ ಲಾಡ್

ಧಾರವಾಡ: ನಗರದ ವಿವಿಐಪಿ ಸರ್ಕ್ಯೂಟ್ ಹೌಸ್ ನಲ್ಲಿ ಜನರ ಸಮಸ್ಯೆಗಳನ್ನು ಸಚಿವ ಸಂತೋಷ ಲಾಡ್ ಆಲಿಸಿದರು. ಅದರಂತೆ ಸ್ಥಳದಲ್ಲೇ ಅಧಿಕಾರಿಗಳಿಗೆ ಕರೆ ಮಾಡಿ, ಸಮಸ್ಯೆ ಕುರಿತು ಮಾಹಿತಿ ಪಡೆದುಕೊಂಡು ಕೂಡಲೇ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ಸಹ ನೀಡಿದರು. ಜನರಿಗೆ ಸಮಸ್ಯೆ ನಿವಾರಣೆಗೆ ಏನು ಪ್ರಯತ್ನ ಮಾಡಬೇಕು. ಅದನ್ನು ಕಾನೂನು ಅನ್ವಯ ಮಾಡಲಾಗುವುದು ಎಂದು ಧೈರ್ಯ ತುಂಬಿದರು.

Read More »

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನ

ಧಾರವಾಡ : ಸಮಾಜ ಕಲ್ಯಾಣ ಇಲಾಖೆಯು 2024-25 ನೇ ಸಾಲಿನ ಮೆಟ್ರಿಕ್ ಪೂರ್ವ 1 ರಿಂದ 10 ನೇ ತರಗತಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ವಿದ್ಯಾರ್ಥಿಗಳು http://ssp.postmatric.karnataka.gov.in/ssppre/ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2440194 ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More »