Breaking News

ಧಾರವಾಡ

ನ. 21ರಂದು ಸಾರ್ವಜನಿಕ ಕುಂದು ಕೊರತೆಗಳ ಸಭೆ

ಕುಂದಗೋಳ: ಕರ್ನಾಟಕ ಲೋಕಾಯುಕ್ತ ಬೆಂಗಳೂರು ಗೌರವಾನ್ವಿತ ನ್ಯಾಯಮೂರ್ತಿಗಳಾದ ಕೆ.ಎಸ್‌.ಫಣಿಂದ್ರ ಗೌರವಾನ್ವಿತ ಉಪ ಲೋಕಾಯುಕ್ತರು ಕರ್ನಾಟಕ ರಾಜ್ಯ ಇವರಿಂದ ಸಾರ್ವಜನಿಕರಿಂದ ಕುಂದು ಕೊರತೆಗಳ ಬಗ್ಗೆ ದೂರುಗಳ ಸ್ವೀಕಾರ, ವಿಚಾರಣೆ ವಿಲೇವಾರಿ ಸಭೆ ನವೆಂಬ‌ರ್ 21 ಗುರುವಾರ ಸಮಯ ಬೆಳಿಗ್ಗೆ 10-00 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಕುಂದಗೋಳ ತಾಲೂಕಿನ ಹಳ್ಳಿಗರು ತಮ್ಮ ಸಾರ್ವಜನಿಕ ಸಮಸ್ಯೆ ಇದ್ದಲ್ಲಿ ಭಾಗವಹಿಸುವಂತೆ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ್ …

Read More »

ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಶ್ರೀ ಭಕ್ತ ಕನಕದಾಸರ ಜಯಂತಿ ಆಚರಣೆ

ನವಲಗುಂದ: ಕುಲ ಕುಲವೆಂದು ಹೊಡೆದಾಡದಿರಿ ಎಂದು ತಮ್ಮ ಕೀರ್ತನೆಗಳ ಮೂಲಕ ಜನರಲ್ಲಿದ್ದ ಸ್ಥಾಪಿತ ಮೌಡ್ಯಗಳನ್ನು ಕಳೆಯಲು ಶ್ರಮಿಸಿದವರು ಶ್ರೀ ಭಕ್ತ ಕನಕದಾಸರು ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಶ್ರೀ ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು ಕನಕದಾಸರು ತಮ್ಮ ಕವಿತೆಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ಎತ್ತಿ ಹಿಡಿದು ಸಾಮಾಜಿಕ ಸುಧಾರಣೆಯ ಮೂಲಕ ಕ್ರಾಂತಿಯನ್ನು ಮೊಳಗಿಸಿದವರು ಎಂದರು. ತಹಶೀಲ್ದಾರ ಸುಧೀರ …

Read More »

ಮಾಲತಿ ಮಾಧವ ನಾಟಕ ಪ್ರರ್ದಶನ

ಧಾರವಾಡ: ರಂಗಾಯಣದ ಪಂ.ಬಸವರಾಜ ರಾಜುಗುರು ಬಯಲು ರಂಗಮಂದಿರದಲ್ಲಿ ಧಾರವಾಡ ರಂಗಾಯಣ ಹಾಗೂ ಸಕ್ಕರಿ ಬಾಳಾಚಾರ್ (ಶಾಂತಕವಿ) ಟ್ರಸ್ಟ್ ಸಹಯೋಗದೊಂದಿಗೆ ಆಧುನಿಕ ಕನ್ನಡ ರಂಗಭೂಮಿ ದಿನದ ಅಂಗವಾಗಿ ಆಯೋಜಿಸಿದ್ದ 02 ನೇ ದಿನದ ನಾಟಕೋತ್ಸವದಲ್ಲಿ ಭವಭೂತಿ ರಚನೆ, ವಿದ್ಯಾ ಹೆಗಡೆ ಭಾರ್ಗವ ಕೆ.ಎನ್ ಮತ್ತು ಎಂ.ಎಚ್ ಗಣೇಶ ಸಂಗೀತ ವಿನ್ಯಾಸ, ಅಕ್ಷರ ಕೆ.ವಿ ಕನ್ನಡ ರೂಪ ನಿರ್ದೇಶನ ಮಾಡಿರುವ ಮಾಲತಿ ಮಾಧವ ನಾಟಕವನ್ನು ನೀನಾಸಂ ತಂಡದವರು ಪ್ರಸ್ತುತಪಡಿಸಿದರು. ಈ ಸಂದರ್ಭದಲ್ಲಿ ರಂಗಾಯಣದ …

Read More »

ರಂಗಭೂಮಿಗೆ ಬಾಳಾಚಾರ್ ಅವರ ಕೊಡುಗೆ ಅಪಾರ

ಧಾರವಾಡ: ರಂಗಾಯಣದ ಪಂ. ಬಸವರಾಜ ರಾಜುಗುರು ಬಯಲು ರಂಗಮಂದಿರದಲ್ಲಿ ಧಾರವಾಡ ರಂಗಾಯಣ ಹಾಗೂ ಸಕ್ಕರಿ ಬಾಳಾಚಾರ್ (ಶಾಂತಕವಿ) ಟ್ರಸ್ಟ್ ಸಹಯೋಗದೊಂದಿಗೆ ಆಧುನಿಕ ಕನ್ನಡ ರಂಗಭೂಮಿ ದಿನದ ಅಂಗವಾಗಿ ಆಯೋಜಿಸಿದ್ದ 3 ದಿನಗಳ ನಾಟಕೋತ್ಸವವನ್ನು ಸಕ್ಕರಿ ಬಾಳಾಚಾರ್ (ಶಾಂತಕವಿ) ಟ್ರಸ್ಟ್‍ನ ಅಧ್ಯಕ್ಷ ಬಾಬುರಾವ್ ಸಕ್ಕರಿ ಅವರು ಉದ್ಘಾಟಿಸಿ, ಸಕ್ಕರಿ ಬಾಳಾಚಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಿದರು. ಉತ್ತರ ಕರ್ನಾಟಕದಲ್ಲಿ ಮರಾಠಿ ನಾಟಕಗಳು ಹೆಚ್ಚು ಪ್ರಚಲಿತವಾಗಿದ್ದನ್ನು ಕಂಡು ಕನ್ನಡಿಗರಲ್ಲಿ ಕನ್ನಡ ಪ್ರಜ್ಞೆಯನ್ನು ಜಾಗೃತಗೊಳಿಸುವ …

Read More »

ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲ್ಲುವ ಭರವಸೆ ಇದೆ : ಲಾಡ್

ಹುಬ್ಬಳ್ಳಿ: ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲ್ಲುವ ಭರವಸೆ ಇದೆ. ಅಲ್ಲದೇ ಗೆಲುವಿನ ಚಿತ್ರಣ ನಮಗೆ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಮಗೆ ಜನರ ಆಶೀರ್ವಾದದ ಮೇಲೆ ವಿಶ್ವಾಸವಿದೆ. ನಮ್ಮ ಕಾಂಗ್ರೆಸ್ಸಿನ ಜನಪರ ಕಾಳಜಿಯನ್ನು ನೋಡಿ ಜನರು ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾಂವಿ ಚುನಾವಣೆಯಲ್ಲಿ ಆಶೀರ್ವಾದ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಗೆಲ್ಲುವ ಚಿತ್ರಣ ಮೇಲ್ನೋಟಕ್ಕೆ ಕಂಡು …

Read More »

ಐಐಐಟಿ ಧಾರವಾಡ ಸಮಾವೇಶ 2024 ನವೆಂಬರ 10 ರಂದು ಪ್ರಥಮ ಆವೃತ್ತಿಯ ಚರ್ಚಾಕೂಟ (ಕಾನ್ಕ್ಲೇವ್) ಆಯೋಜನೆ: ನಿರ್ದೇಶಕ ಪ್ರೊ. ಎಸ್.ಆರ್. ಮಹಾದೇವ ಪ್ರಸನ್ನ

ಧಾರವಾಡ: ಐಐಐಟಿ ಧಾರವಾಡ ಸಮಾವೇಶ 2024 ರ ಮೊದಲ ಆವೃತ್ತಿ: ಅಡೆತಡೆಗಳನ್ನು ಮುರಿಯುವುದು ಮತ್ತು ಹೊಸ ಮಾನದಂಡಗಳನ್ನು ಹೊಂದಿಸುವುದು; ಅನ್ವೇಷಿಸಿ. ಅನುಭವ. ಉತ್ಕøಷ್ಟ ಕುರಿತು ನವೆಂಬರ 10, ರಂದು ಐಐಐಟಿ ಧಾರವಾಡದಲ್ಲಿ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಧಾರವಾಡ ಐಐಐಟಿಯ ನಿರ್ದೇಶಕ ಪ್ರೊ. ಎಸ್.ಆರ್. ಮಹಾದೇವ ಪ್ರಸನ್ನ ಅವರು ತಿಳಿಸಿದರು. ಅವರು ಧಾರವಾಡ ಐಐಐಟಿಯಲ್ಲಿ ಸುದ್ದಿಗೋಷ್ಠಿ ಜರುಗಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಮತ್ತು …

Read More »

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಮಕ್ಕಳ ಪೆÇ್ರೀತ್ಸಾಹ ಧನ 1 ರಿಂದ 2 ಲಕ್ಷಕ್ಕೆ ಹೆಚ್ಚಳ : ಸಚಿವ ಡಾ ಹೆಚ್ ಸಿ ಮಹದೇವಪ್ಪ

ಧಾರವಾಡ: ಐಐಟಿ,ಐಐಎಂ,ಐಐಎಸ್‍ಸಿ,ಎನ್‍ಐಟಿ (IIT/IIM/IISC /NIT) ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ ಎಸ್‍ಸಿ ಮತ್ತು ಎಸ್‍ಟಿ ವಿದ್ಯಾರ್ಥಿಗಳ ಪೆÇ್ರೀತ್ಸಾಹ ಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದ್ದು ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಕಾರಣವಾಗಲಿದೆ ಎಂದು ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪನವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇನ್ನು ಪಿಯುಸಿ ಪರೀಕ್ಷೆಯಲ್ಲಿ 95 ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, …

Read More »

ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ ಅಧ್ಯಕ್ಷತೆಯಲ್ಲಿ ಜರುಗಿದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ

ಧಾರವಾಡ : ಧಾರವಾಡ ಜಿಲ್ಲಾ ಪಂಚಾಯತ ಆಡಳಿತಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಹಿರಿಯ ಐಎಎಸ್ ಅಧಿಕಾರಿ ದೀಪಾ ಚೋಳನ ಅವರು ಡಿಸಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಯೋಜನೆ, ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆ ಜರುಗಿಸಿದರು. ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪಂಚಾಯತ ಸಿಇಓ ಸ್ವರೂಪ ಟಿ.ಕೆ., ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ವೇದಿಕೆಯಲ್ಲಿ ಇದ್ದರು.ಸಭೆಯಲ್ಲಿ ವಿವಿಧ ಇಲಾಖೆಗಳ …

Read More »

ಬೈಕ್ ಸವಾರನಿಗೆ ಗುದಿದ್ದ ಚಿಗರಿ ಬಸ್

ಧಾರವಾಡ: ನಗರದ ಟೋಲನಾಕಾ ಬಳಿ ಬೈಕ್ ಸವಾರನಿಗೆ ಚಿಗರಿ ಬಸ್ ಗುದ್ದಿದ ಪರಿಣಾಮ ಬೈಕ್‌ ಸವಾರನ ಕಾಲಿಗೆ ಗಂಭೀರ ಸ್ವರೂಪದ ಗಾಯವಾದ ಘಟನೆ ಸಂಭವಿಸಿದೆ. ಬೈಕ್‌ ಸವಾರನ ಹೆಸರು ವಿಳಾಸ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಧಾರವಾಡ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.

Read More »

ಕೈಮಗ್ಗ ಮತ್ತು ಜವಳಿ ಇಲಾಖೆ ಹೊಸ ಜವಳಿ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

ಧಾರವಾಡ : 2024-25ನೇ ಸಾಲಿನ ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯಡಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ, ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದ ಸಣ್ಣ ಮತ್ತು ಅತಿ ಸಣ್ಣ (ಎಸ್‍ಎಮ್‍ಇ) ಘಟಕಗಳ ಸ್ಥಾಪನೆಗೆ ಸಹಾಯಧನ ಯೋಜನೆಯಡಿ ಹೊಸ ಜವಳಿ ಘಟಕ ಸ್ಥಾಪನೆಗೆ ಅರ್ಹ ಆಸಕ್ತಿವುಳ್ಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸ್ತಕರು ನವೆಂಬರ 21, 2024 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ …

Read More »