Breaking News

ಧಾರವಾಡ

ಬಾಲಕರ ಹಾಸ್ಟೆಲ್ ವಿದ್ಯಾರ್ಥಿಗಳು ಪ್ರತಿಭಟನೆ

ಧಾರವಾಡ : ಇಲ್ಲಿಯ ಕರ್ನಾಟಕ ವಿಶ್ವವಿದ್ಯಾಲಯ ಆವರಣದಲ್ಲಿನ ಸರ್ಕಾರಿ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕರ ಹಾಸ್ಟೆಲ್ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕೊಳೆತು ಹೋದ ತರಕಾರಿ ಬುಟ್ಟಿ ಪ್ರದರ್ಶನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಕೊಳೆತ ಆಲೂಗಡ್ಡೆ, ಬತ್ತಿದ ಬದನೆಕಾಯಿ, ಹೂಕೋಸು, ಒಣಗಿದ ಕ್ಯಾರೆಟ್, ಪರಂಗಿಕಾಯಿ, ಬೀಗ್ರೂಟ್, ಸೊಪ್ಪು ಬಳಸಿ ಆಹಾರ ತಯಾರಿಸುತ್ತಾರೆ. ಅಕ್ಕಿಯಲ್ಲಿ ನುಸಿ ಇರುತ್ತವೆ’ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆರೋಪಿಸಿದರು.

Read More »

ಆಗಸ್ಟ್ 20 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

ಧಾರವಾಡ; ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಆಗಸ್ಟ್ 20 ರಂದು ಸಂಜೆ 4 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಕಾರ್ಯಕ್ರಮವನ್ನು …

Read More »

ವೈದ್ಯಕೀಯ ಸಿಬ್ಬಂದಿ ಮೇಲಿನ ಅತ್ಯಾಚಾರ : ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

ನವಲಗುಂದ: ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಹೊರ ರೋಗಿಗಳ ಚಿಕಿತ್ಸೆ ಬಂದ್ ಮಾಡಿ ಕೈಗೆ ಕಪ್ಪು ಪಟ್ಟಿ ಧರಿಸಿ ಕೋಲ್ಕತ್ತದಲ್ಲಿ ನಡೆದ ವೈದ್ಯಕೀಯ ಸಿಬ್ಬಂದಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ಪಟ್ಟಣದಲ್ಲಿ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು. 25ಕ್ಕೂ ಹೆಚ್ಚು ತುರ್ತು ಚಿಕಿತ್ಸೆ ರೋಗಿಗಳಿಗೆ ಆಸ್ಪತ್ರೆಯಲ್ಲಿ ಶನಿವಾರ ಚಿಕಿತ್ಸೆ ಪಡೆದಿದ್ದಾರೆ ಇನ್ನೂ ಆಸ್ಪತ್ರೆ ಔಷದ ಅಂಗಡಿಯಲ್ಲಿ ಬಿಪಿ ಹಾಗೂ ಶುಗರ್ ಮಾತ್ರೆ ಪೂರೈಸುತ್ತಿದ್ದು ಖಂಡು ಬಂತು. ಇದಲ್ಲದೆ …

Read More »

ಮಿಷನ್ ವಿದ್ಯಾಕಾಶಿ ಪರೀಕ್ಷಾ ಫಲಿತಾಂಶ ಸುಧಾರಣೆಯಲ್ಲಿ ಮುಖ್ಯಶಿಕ್ಷಕರ ಮತ್ತು ಪಾಲಕರ ಪಾತ್ರ ಮುಖ್ಯವಾಗಿದೆ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ : ಎಸ್.ಎಸ್.ಎಲ್.ಸಿ ಪರೀಕ್ಷೆಯು ಮಕ್ಕಳ ವಿದ್ಯಾರ್ಥಿ ಜೀವನದಲ್ಲಿ ಮುಖ್ಯ ಘಟ್ಟ. ಕಳೆದ ಸಾಲಿನ ಪರೀಕ್ಷಾ ಫಲಿತಾಂಶ ಕಡಿಮೆ ಆಗಿದ್ದು, ಶೇ 74.85 ರಷ್ಟು ಫಲಿತಾಂಶ ಬಂದಿದೆ. ಇದನ್ನು ಸುಧಾರಿಸಿ ಶೇ 100 ರಷ್ಟು ಮಾಡುವಲ್ಲಿ ವಿದ್ಯಾರ್ಥಿಗಳ ಪಾಲಕರ ಮತ್ತು ಶಾಲಾ ಮುಖ್ಯಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದು ಮಿಷನ್ ವಿದ್ಯಾಕಾಶಿ ಯೋಜನೆ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಜೆ.ಎಸ್.ಎಸ್. ಕಾಲೇಜು ಆವರಣದ …

Read More »

ಸಿಎಂ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ : ಸಂತೋಷ ಲಾಡ್

ಧಾರವಾಡ: ಮೂಡಾ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿ ಬಂದಿದೆ ಸಾಬೀತು ಆಗಿಲ್ಲ ಆದ್ದರಿಂದ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಎಂದು ಕಲಘಟಗಿ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿಂದು ಮಾತಾನಾಡಿದ ಅವರು, ಬಿಜೆಪಿ ನಾಯಕರು ಕೇವಲ ರಾಜೀನಾಮೆ ಕೇಳುತ್ತಿದ್ದಾರೆ ಅವರಿಗೆ ಯಾವುದೇ ನೈತಿಕತೆ ಇಲ್ಲ, ರಾಜಕೀಯ ಬಿಟ್ಟು ಬೇರೆ ನೋಡಿಕೊಳ್ಳುವಂತೆ ಒತ್ತಾಯ ಮಾಡಿದರು.

Read More »

ಡಾ. ಸತೀಶ ಅವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಪದಕ

ಧಾರವಾಡ : ಜಿಲ್ಲೆಯ ಗೃಹರಕ್ಷಕ ದಳದ ಸತೀಶ ಇರಕಲ್ ಅವರು ಧಾರವಾಡ ಜಿಲ್ಲೆಯ ಗೃಹರಕ್ಷಕ ದಳದಲ್ಲಿ ಸಲ್ಲಿಸಿದ ಉತ್ತಮ ಸೇವೆಗೆ 2024 ನೇ ಸಾಲಿನ ರಾಷ್ಟ್ರಪತಿಗಳ ಶ್ಲಾಘನೀಯ ಪದಕ ಲಭಿಸಿದೆ. ಮತ್ತು ಧಾರವಾಡ ಗೃಹರಕ್ಷಕಿ ದಳದ ಜಯಶ್ರೀ.ಬಿ.ಪಾಟಿಲ್ ಅವರು ಆಗಸ್ಟ್ 1 ರಿಂದ 13 ರವರೆಗೆ ಬಳ್ಳಾರಿ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ನಡೆದ ಪುನರ್ ಮನನ ತರಬೇತಿಯಲ್ಲಿ ಭಾಗವಹಿಸಿ, ಚಿನ್ನದ ಪದಕವನ್ನು ಪಡೆಕೊಂಡಿದ್ದಾರೆ. ಇವರನ್ನು ಧಾರವಾಡ ಜಿಲ್ಲೆಗೆ ಮತ್ತು ಗೃಹರಕ್ಷಕ …

Read More »

ಮುಗದ ಗ್ರಾಮದಲ್ಲಿ ಜಿಲ್ಲಾ ಪಂಚಾಯತ ಸಿಇಓ ಅವರಿಂದ ಜರುಗಿದ ಸಾರ್ವಜನಿಕ ಕುಂದುಕೊರತೆ ಸಭೆ

ಧಾರವಾಡ : ಧಾರವಾಡ ತಾಲೂಕಿನ ಮುಗದ ಗ್ರಾಮ ಪಂಚಾಯತಿಯಲ್ಲಿ ಧಾರವಾಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಕುಂದು ಕೊರತೆ ನಿವಾರಣಾ ಸಭೆ ಜರುಗಿತು. ಸಭೆಯಲ್ಲಿ ಅನೇಕ ಸಾರ್ವಜನಿಕರ ಅರ್ಜಿಗಳನ್ನು ಪರಿಶೀಲಿಸಿ, ಸ್ಥಳದಲ್ಲಿಯೇ ಪರಿಹಾರವನ್ನು ಸೂಚಿಸಿದರು.ನಂತರ ಅವರು ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳನ್ನು ಗ್ರಾಮಸ್ಥರಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ದೀಪಕ ಮಡಿವಾಳರ, ಸಹಾಯಕ ನಿರ್ದೇಶಕರಾದ ಚಂದ್ರು ಪೂಜಾರ, …

Read More »

ಗ್ಯಾರೆಂಟಿಗಳ ಬಗ್ಗೆ ಫಲನುಭವಿಗಳಿಂದ ಉತ್ತಮ ಸ್ಪಂದನೆ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್

ಧಾರವಾಡ: ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಸಹಕಾರ ನೀಡಬೇಕು. ಸರಕಾರದ ಎಲ್ಲ ಜನ ಕಲ್ಯಾಣ ಕಾರ್ಯಕ್ರಮಗಳು ಬಡವರಿಗೆ , ಅರ್ಹರಿಗೆ ತಲುಪಿಸುವಲ್ಲಿ ಎಲ್ಲರ ಪಾತ್ರ ಮುಖ್ಯವಾಗಿದೆ. ರಾಜ್ಯ ಸರಕಾರದ ಜನಪರ ಯೋಜನೆಗಳು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುμÁ್ಠನಗೊಂಡಿದ್ದು, ಫಲಾನುಭವಿಗಳಿಂದ ಉತ್ತಮ ಸ್ಪಂದನೆ ಸಿಕ್ಕಿದೆ ಎಂದು ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಅವರು ಹೇಳಿದರು. ಲಜನಸಾಮಾನ್ಯರ ಕಲ್ಯಾಣಕ್ಕಾಗಿ ಸರ್ಕಾರ ಹಲವು ಅಭಿವೃದ್ಧಿ ಕಾಮಗಾರಿಗಳು ಹಾಗೂ ಯೋಜನೆಗಳನ್ನು ಕೈಗೊಳ್ಳಲಿದೆ. ಅವುಗಳ …

Read More »

ಧಾರವಾಡದಲ್ಲಿ ಸ್ವಾತಂತ್ರೋತ್ಸವ ಆಚರಣೆ

ಧಾರವಾಡ: 78 ನೇ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ನೇರವೇರಿಸಿ, ವಿವಿಧ ಸೇನಾ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.ಧಾರವಾಡ ಜಿಲ್ಲಾಡಳಿತದಿಂದ ನಗರದ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಅದರಂತೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು, ಜಿಲ್ಲೆಯ ಜನರಿಗೆ ಸ್ವಾತಂತ್ರೋತ್ಸವದ ಸಂದೇಶ ರವಾನಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು, ಜಿಪಂ ಸಿಇಓ ಸ್ವರೂಪ ಟಿ. ಕೆ, ಭಾಗವಹಿಸಿದ್ದರು.

Read More »

ಮುಖ್ಯಮಂತ್ರಿ ಪದಕಕ್ಕೆ ಸಿಪಿಐ ಶ್ರೀಶೈಲ ಕೌಜಲಗಿ ಆಯ್ಕೆಧ

ಕಲಘಟಗಿ : 2023-2024 ರ ಮುಖ್ಯಮಂತ್ರಿ ಪದಕ್ಕೆ ರಾಜ್ಯದ 126 ಪೊಲೀಸ್ ಅಧಿಕಾರಿಗಳು ಆಯ್ಕೆ ಆಗಿದ್ದು, ಕಲಘಟಗಿ ಪೊಲೀಸ್ ಠಾಣೆಯ ಸಿಪಿಐ ಶ್ರೀಶೈಲ ಕೌಜಲಗಿ ಅವರಿಗೆ ಮುಖ್ಯಮಂತ್ರಿ ಪದಕಕ್ಕೆ ಅವರು ಸಹ ಆಯ್ಕೆ ಆಗಿದ್ದಾರೆ. ಈ ಒಂದು ಪದಕ ರಾಜ್ಯ ಸರ್ಕಾರ ನೀಡುತ್ತಿದ್ದಾರೆ. ಇಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು ಪದಕ ನೀಡುವ ದಿನಾಂಕವನ್ನು ನಿಗದಿ ಪಡಿಸಿಲ್ಲ ಈ ಒಂದು ಮುಖ್ಯಮಂತ್ರಿ ಪದಕ ಕಲಘಟಗಿ ಠಾಣೆಗೆ ಬಂದಿದ್ದು ತಾಲೂಕಿನ ಜನರು …

Read More »